Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಭಾರತ vs ಐರ್ಲೆಂಡ್: 1st ಟಿ20, ಟೀಮ್ ಇಂಡಿಯಾ ಪರ ಇಬ್ಬರು ಪದಾರ್ಪಣೆ: ಆಡುವ ಬಳಗ, Live ಸ್ಕೋರ್

ಭಾರತ ಹಾಗೂ ಐರ್ಲೆಂಡ್ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯ ಆರಂಭವಾಗಿದೆ. ಜಸ್ಸಪ್ರೀತ್ ಬೂಮ್ರಾ ನೇತೃತ್ವದಲ್ಲಿ ಟೀಮ್ ಇಂಡಿಯಾ ಕಣಕ್ಕಿಳಿಯುತ್ತಿರುವುದು ಕುತೂಹಲಕ ಮೂಡಿಸಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಟಾಸ್ ಗೆದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಆತಿಥೆಯ ಐರ್ಲೆಂಡ್ ತಂಡ ಆರಂಭದಲ್ಲಿ ಬ್ಯಾಟಿಂಗ್ ನಡೆಸುವ ಸವಾಲು ಪಡೆದುಕೊಂಡಿದೆ.

ಇನ್ನು ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರವಾಗಿ ಇಬ್ಬರು ಆಟಗಾರರು ಟಿ20 ಮಾದರಿಗೆ ಪದಾರ್ಪಣೆ ಮಾಡಿದ್ದಾರೆ. ಮಧ್ಯಮ ಕ್ರಮಾಂಕದ ಭರವಸೆಯ ಆಟಗಾರ ರಿಂಕು ಸಿಂಗ್ ಈ ಪಂದ್ಯದ ಮೂಲಕ ಇದೇ ಮೊದಲ ಭಾರಿಗೆ ಭಾರತ ತಂಡದ ಜರ್ಸಿ ತೊಡುವ ಅವಕಾಶ ಪಡೆದುಕೊಂಡಿದ್ದಾರೆ. ಮತ್ತೊಂದೆಡೆ ಪ್ರಸಿದ್ಧ್ ಕೃಷ್ಣ ಕೂಡ ಟಿ20 ಮಾದರಿಯಲ್ಲಿ ಭಾರತ ತಂಡಕ್ಕೆ ಪದಾರ್ಪಣೆ ಮಾಡಿದ್ದಾರೆ.

India vs Ireland t20I series 1st match, Rinku Singh and Prasidh Krishna Debut Live score

Live ಸ್ಕೋರ್ ಹೀಗಿದೆ

1
57813

ಭಾರತ ತಂಡದ ಆರಂಭಿಕರಾಗಿ ಋತುರಾಜ್ ಗಾಯಕ್ವಾಡ್ ಹಾಗೂ ಯಶಸ್ವಿ ಜೈಸ್ವಾಲ್ ಜವಾಬ್ಧಾರಿವಹಿಸಿಕೊಂಡಿದ್ದರು ಸಂಜು ಸ್ಯಾಮ್ಸನ್ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿಯಲಿದ್ದಾರೆ. ಪ್ರಸಿದ್ಧ್ ಕೃಷ್ಣ, ಅರ್ಶ್‌ದೀಪ್ ಸಿಂಗ್ ಹಾಗೂ ಜಸ್ಪ್ರೀತ್ ಬೂಮ್ರಾ ಈ ಮೂವರು ವೇಗಿಗಳಿಗೆ ರವಿ ಬಿಷ್ಣೋಯ್ ಸ್ಪಿನ್ನರ್ ಆಗಿ ಸಾಥ್ ನೀಡಲಿದ್ದಾರೆ. ಇನ್ನು ವಾಶಿಂಗ್ಟನ್ ಸುಂದರ್ ಕೂಡ ಆಲ್‌ರೌಂಡರ್ ಆಗಿ ಜವಾಬ್ಧಾರಿ ವಹಿಸಿಕೊಳ್ಳಲಿದ್ದಾರೆ.

ವೆಸ್ಟ್ ಇಂಡೀಸ್ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯಲ್ಲಿ 2-3 ಅಂತರದಿಂದ ಸೋಲು ಅನುಭವಿಸಿದ ಟೀಮ್ ಇಂಡಿಯಾ ಈಗ ಮತ್ತೊಂದು ಚುಟುಕು ಮಾದರಿಯ ಸರಣಿಗೆ ಸಜ್ಜಾಗಿದೆ. ಈ ಸರಣಿಯಲ್ಲಿ ಮೊದಲ ಆದ್ಯತೆಯ ಕ್ರಿಕೆಟಿಗರ ಬದಲಿಗೆ ಬಹುತೇಕ ಯುವ ಆಟಗಾರರಿಗೆ ಅವಕಾಶ ನೀಡಲಾಗಿದ್ದು ಅಂತಾರಾಷ್ಟ್ರೂಈಯ ಮಟ್ಟದಲ್ಲಿ ತಮ್ಮ ಸಾಮರ್ಥ್ಯ ಪ್ರದರ್ಶನಕ್ಕೆ ಹಲವು ಪ್ರತಿಭೆಗಳು ಎದುರುನೋಡುತ್ತಿದ್ದಾರೆ. ಹೀಗಾಗಿ ಈ ದೃಷ್ಟಿಯಿಂದ ಈ ಸರಣಿಯ ಸಾಕಷ್ಟು ಕುತೂಹಲ ಮೂಡಿಸಿದೆ. ಇನ್ನು ನಾಯಕನಾಗಿ ಬೂಮ್ರಾಗೆ ಇದು ಅಗ್ನಿಪರೀಕ್ಷೆ

ಟೀಮ್ ಇಂಡಿಯಾ ಆಡುವ ಬಳಗ: ಋತುರಾಜ್ ಗಾಯಕ್ವಾಡ್, ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್(ವಿಕೆಟ್ ಕೀಪರ್), ತಿಲಕ್ ವರ್ಮಾ, ರಿಂಕು ಸಿಂಗ್, ಶಿವಂ ದುಬೆ, ವಾಷಿಂಗ್ಟನ್ ಸುಂದರ್, ಪ್ರಸಿದ್ಧ್ ಕೃಷ್ಣ, ಅರ್ಶ್‌ದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ(ನಾಯಕ), ರವಿ ಬಿಷ್ಣೋಯ್

Story first published: Friday, August 18, 2023, 19:18 [IST]
Other articles published on Aug 18, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+