Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಭಾರತ vs ಐರ್ಲೆಂಡ್ ಟಿ20 ಸರಣಿ ಯಾವಾಗ? ವೈಭವ್ ಸೂರ್ಯವಂಶಿ ಬ್ಯಾಟಿಂಗ್ ಲೈವ್ ವೀಕ್ಷಣೆ ಎಲ್ಲಿ?

ಭಾರತ ತಂಡ ಅಫ್ಘಾನಿಸ್ತಾನ ವಿರುದ್ಧ ತವರಿನಲ್ಲಿ ನಡೆದ ಏಕದಿನ ಸರಣಿಯನ್ನು ಗೆದ್ದು ಬೀಗಿದೆ. ಇನ್ನು ಭಾರತ 'ಎ' ತಂಡ ಸಹ ಶ್ರೀಲಂಕಾ ಪ್ರವಾಸದಲ್ಲಿ ತ್ರಿಕೋನ ಸರಣಿಯಲ್ಲಿ ಭರ್ಜರಿ ಪ್ರದರ್ಶನ ನೀಡಿ ಜಯ ಸಾಧಿಸಿದೆ. ಈಗ ಭಾರತ ತಂಡದ ಐರ್ಲೆಂಡ್‌ ಪ್ರವಾಸಕ್ಕೆ ಸಿದ್ಧತೆ ನಡೆಸಿದೆ. ಈ ಸರಣಿ ಯಾವಾಗ ಆರಂಭವಾಗುತ್ತದೆ ? ಎಲ್ಲಿ ಪ್ರಸಾರವಾಗುತ್ತದೆ ಎಂಬ ಬಗ್ಗೆ ಕಂಪ್ಲೀಟ್‌ ರಿಪೋರ್ಟ್‌ ಇಲ್ಲಿದೆ.

ಭಾರತ ರಾಷ್ಟ್ರೀಯ ತಂಡ ಇನ್ನೇನು ಕೆಲವೇ ದಿನಗಳಲ್ಲಿ ಐರ್ಲೆಂಡ್‌ ಪ್ರವಾಸವನ್ನು ಕೈಗೊಳ್ಳಲಿದೆ. ಈ ಸರಣಿ ಜೂನ್‌ 26 ರಿಂದ ಆರಂಭವಾಗಿ ಜೂನ್‌ 28 ರಿಂದ ಎರಡನೇ ಟಿ20 ಪಂದ್ಯ ನಡೆಯಲಿದೆ. ಐರ್ಲೆಂಡ್ ಪ್ರವಾಸದಲ್ಲಿ ಟೀಮ್ ಇಂಡಿಯಾ 2 ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾವನ್ನು ಭರವಸೆಯ ಬ್ಯಾಟರ್ ಶ್ರೇಯಸ್ ಅಯ್ಯರ್‌ ತಂಡವನ್ನು ಮುನ್ನಡೆಸಲಿದ್ದಾರೆ.

India vs Ireland

ಈ ಸರಣಿಯಲ್ಲಿ ಇದೇ ಮೊದಲ ಬಾರಿಗೆ ಭಾರತ ತಂಡದಲ್ಲಿ 15 ವರ್ಷದ ವೈಭವ್ ಸೂರ್ಯವಂಶಿ ಅವರಿಗೆ ಸ್ಥಾನ ನೀಡಲಾಗಿದೆ. ಇವರು ಭಾರತ 'ಎ' ತಂಡದ ಪರ ಶ್ರೀಲಂಕಾದಲ್ಲಿ ನಡೆದ ತ್ರಿಕೋನ ಸರಣಿಯ ಫೈನಲ್‌ನಲ್ಲಿ ಅಬ್ಬರಿಸಿದ್ದರು. ಇವರು ಶ್ರೀಲಂಕಾ 'ಎ' ವಿರುದ್ಧದ ಫೈನಲ್‌ ಪಂದ್ಯದಲ್ಲಿ 11 ಎಸೆತಗಳಲ್ಲಿ ಅರ್ಧಶತಕ ಬಾರಿಸಿ ಅಬ್ಬರಿಸಿದ್ದರು. ಇವರು ತ್ರಿಕೋನ ಸರಣಿಯಲ್ಲಿ ರನ್‌ ಕಲೆ ಹಾಕುವಲ್ಲಿ ವಿಫಲರಾಗಿದ್ದರು. ಹೀಗಾಗಿ ಎಲ್ಲರೂ ಇವರ ಬ್ಯಾಟಿಂಗ್ ಮೇಲೆ ಪ್ರಶ್ನೆಗಳನ್ನು ಎತ್ತಿದ್ದರು. ಇವರು ಫೈನಲ್‌ ಪಂದ್ಯದಲ್ಲಿ 29 ಎಸೆತಗಳಲ್ಲಿ 10 ಬೌಂಡರಿ, 8 ಸಿಕ್ಸರ್ ಬಾರಿಸಿ ಆರ್ಭಟಿಸಿದ್ದರು.

ರಾಷ್ಟ್ರೀಯ ತಂಡದ ಪರ ಚೊಚ್ಚಲ ಪಂದ್ಯವನ್ನು ಆಡಲು ವೈಭವ್ ಸೂರ್ಯವಂಶಿ ಆಡಲು ಸಿದ್ಧರಾಗಿದ್ದಾರೆ. ಇವರ ಆಟವನ್ನು ಕಣ್ಣು ತುಂಬಿಕೊಳ್ಳಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

ಶ್ರೇಯಸ್‌ ಅಯ್ಯರ್‌ ನಾಯಕ

ಟಿ20 ವಿಶ್ವಕಪ್‌ ಗೆದ್ದ ನಾಯಕ ಸೂರ್ಯಕುಮಾರ್ ಯಾದವ್ ಅವರನ್ನು ನಾಯಕತ್ವದಿಂದ ಕೆಳಗಿಳಿಸಿದ್ದು ಅಲ್ಲದೆ ಭಾರತ ತಂಡದಿಂದ ಕೈ ಬಿಡಲಾಗಿದೆ. ಇವರ ಸ್ಥಾನದಲ್ಲಿ ನಾಯಕ ಶ್ರೇಯಸ್ ಅಯ್ಯರ್ ತಂಡವನ್ನು ಮುನ್ನಡೆಸಲಿದ್ದು, ಎಲ್ಲರ ಚಿತ್ತ ಕದ್ದಿದೆ.

ಐರ್ಲೆಂಡ್‌ ಪ್ರವಾಸವನ್ನು ಎಲ್ಲಿ ವೀಕ್ಷಿಸಬಹುದು?

ಐರ್ಲೆಂಡ್‌ ವಿರುದ್ಧದ ಟಿ20 ಪಂದ್ಯಗಳನ್ನು ಸೋನಿ ನೆಟ್‌ವರ್ಕ್‌ನಲ್ಲಿ ವೀಕ್ಷಿಸಬಹುದಾಗಿದೆ.

ಐರ್ಲೆಂಡ್‌ ಪ್ರವಾಸಕ್ಕೆ ಭಾರತ ತಂಡ: ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ (ಉಪನಾಯಕ), ವೈಭವ್ ಸೂರ್ಯವಂಶಿ, ಅಭಿಷೇಕ್ ಶರ್ಮಾ, ನಿತೀಶ್ ಕುಮಾರ್ ರೆಡ್ಡಿ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಸಂಜು ಸ್ಯಾಮ್ಸನ್, ಇಶಾನ್ ಕಿಶನ್, ಹರ್ಷಿತ್ ರಾಣಾ, ರವಿ ಬಿಷ್ಣೋಯ್, ಪ್ರಸಿದ್ಧ್ ಕೃಷ್ಣ, ಅರ್ಷದೀಪ್ ಸಿಂಗ್, ಶಿವಂ ದುಬೆ, ಪ್ರಿನ್ಸ್ ಯಾದವ್ .

Story first published: Monday, June 22, 2026, 20:05 [IST]
Other articles published on Jun 22, 2026
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+