India vs Netherlands: ನೇರಪ್ರಸಾರ, ಸಮಯ, ಪಿಚ್ ವರದಿ, ಪ್ಲೆಯಿಂಗ್ ಇಲೆವೆನ್ ಸಂಪೂರ್ಣ ಮಾಹಿತಿ
ಅಹಮದಾಬಾದ್: ಟಿ20 ವಿಶ್ವಕಪ್‌ನಲ್ಲಿ ಭಾರತ ಹಾಗೂ ನೆದರ್‌ಲ್ಯಾಂಡ್ ತಂಡಗಳ ನಡುವಣ ಲೀಗ್ ಹಂತದ ಪಂದ್ಯ ಬುಧವಾರ (ಫೆಬ್ರವಾರಿ 18) ನಡೆಯಲಿದೆ. ಈ ಪಂದ್ಯದಲ್ಲಿ ಸಂಘಟಿತ ಆಟದ ಪ್ರದರ್ಶನ ನೀಡಿ ಜಯ ಸಾಧಿಸುವ ಇರಾದೆಯನ್ನು ಭಾರತ ಹೊಂದಿದೆ. ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಅಬ್ಬರದ ಪ್ರದರ್ಶನ ನೀಡಿ ಜಯ ಸಾಧಿಸಿತ್ತು. ಅಲ್ಲದೆ ಪ್ರಸಕ್ತ ಟಿ20 ವಿಶ್ವಕಪ್‌ನಲ್ಲಿ ಹ್ಯಾಟ್ರಿಕ್ ಗೆಲುವಿನ ನಗೆ ಬೀರಿದೆ.
ಬುಧವಾರ ನಡೆಯಲಿರುವ ಪಂದ್ಯದಲ್ಲಿ ಟೀಮ್ ಇಂಡಿಯಾದ ಸ್ಟಾರ್ ಆಟಗಾರರ ಮೇಲೆ ಎಲ್ಲರ ಕಣ್ಣು ನೆಟ್ಟಿರಲಿವೆ. ಟೀಮ್ ಇಂಡಿಯಾದ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಈ ಟೂರ್ನಿಯಲ್ಲಿ ಒಂದೇ ಒಂದು ರನ್ ಬಾರಿಸದೇ ಇರುವುದು ತಂಡದ ಚಿಂತೆಯನ್ನು ಹೆಚ್ಚಿಸಿದೆ. ಸೂಪರ್ 8 ಹಂತಕ್ಕೂ ಮುನ್ನ ಅಭಿಷೇಕ್ ಶರ್ಮಾ ಲಯಕ್ಕೆ ಮರಳುವ ಅನಿವಾರ್ಯತೆ ಇದೆ. ಅಂದಾಗ ಬಿಗ್ ಮ್ಯಾಚ್‌ಗಳಿಗೂ ಮುನ್ನ ರನ್ ಕಲೆ ಹಾಕಿದರೆ, ಎದುರಾಳಿ ತಂಡಗಳಿಗೂ ನಡುಕ ಆರಂಭವಾಗುತ್ತದೆ. ಈ ನಿಟ್ಟಿನಲ್ಲಿ ಅಭಿಷೇಕ್ ಶರ್ಮಾ ಅವರ ಮೇಲೆ ಎಲ್ಲರ ಚಿತ್ತ ನೆಟ್ಟಿದೆ.

ಭಾರತ, ನೆದರ್‌ಲ್ಯಾಂಡ್ ನಡುವಣ ಪಂದ್ಯವನ್ನು ನೋಡುವುದು ಎಲ್ಲಿ, ಪಿಚ್ ವರದಿ, ಸಮಯದ ಬಗ್ಗೆ ಮಾಹಿತಿ ಇಲ್ಲಿದೆ.
ಭಾರತ ಹಾಗೂ ನೆದರ್‌ಲ್ಯಾಂಡ್ ತಂಡಗಳು ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಎಷ್ಟು ಬಾರಿ ಮುಖಾಮುಖಿಯಾಗಿವೆ?
ಉಭಯ ತಂಡಗಳು ಟಿ20 ಕ್ರಿಕೆಟ್‌ನಲ್ಲಿ ನಾಲ್ಕು ಬಾರಿ ಮುಖಾಮುಖಿಯಾಗಿದ್ದು, ಭಾರತ ಆಡಿದ 4 ಪಂದ್ಯ ಗೆದ್ದಿದೆ.
ಅಹಮದಾಬಾದ್ ಪಿಚ್ ಯಾರಿಗೆ ನೆರವು ನೀಡಲಿದೆ?
ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂ ಬ್ಯಾಟರ್‌ಗಳಿಗೆ ನೆರವು ನೀಡಲಿದೆ. ಅಲ್ಲದೆ ಈ ಪಿಚ್‌ನಲ್ಲಿ ಟೂರ್ನಿಯಲ್ಲಿ ಒಟ್ಟು ಮೂರು ಪಂದ್ಯಗಳು ನಡೆದಿದ್ದು ಮೊದಲು ಬ್ಯಾಟ್ ಮಾಡಿದ ತಂಡ 2 ಬಾರಿ, ಒಂದು ಬಾರಿ ಚೇಸ್ ಮಾಡಿದ ತಂಡ ಗೆಲುವು ದಾಖಲಿಸಿತ್ತು. ಹೀಗಾಗಿ ಈ ಪಿಚ್‌ನಲ್ಲಿ ಟಾಸ್ ಮಹತ್ವದ ಪಾತ್ರವನ್ನು ವಹಿಸಲಿದೆ. ಅಲ್ಲದೆ ಎರಡನೇ ಇನಿಂಗ್ಸ್ ವೇಳೆ ಮಂಜು ಬೀಳುವ ಸಾಧ್ಯತೆ ಇದೆ.
ಒಟ್ಟಾರೆ ಈ ಪಿಚ್‌ನಲ್ಲಿ ಒಟ್ಟು 13 ಟಿ20 ಪಂದ್ಯಗಳನ್ನು ಆಡಲಾಗಿದ್ದು, ಮೊದಲ ಬ್ಯಾಟ್ ಮಾಡಿದ ತಂಡ 9 ಗೆಲುವು ದಾಖಲಿಸಿದರೆ, ಎರಡನೇ ಬಾರಿ ಬ್ಯಾಟ್ ಮಾಡಿದ ತಂಡ 4 ಪಂದ್ಯದಲ್ಲಿ ಜಯ ಸಾಧಿಸಿದೆ.
ನೆದರ್‌ಲ್ಯಾಂಡ್ ವಿರುದ್ಧ ಭಾರತದ ಪರ ಆಡುವ ಬಳಗ ಹೇಗಿರಲಿದೆ?
ಅಭಿಷೇಕ್ ಶರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್, ಶಿವಂ ದುಬೆ, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ, ವರುಣ್ ಚಕ್ರವರ್ತಿ.
ನೆದರ್‌ಲ್ಯಾಂಡ್ ತಂಡದ ಪ್ಲೇಯಿಂಗ್ ಇಲೆವೆನ್ ಹೇಗಿರಲಿದೆ?
ಮೈಕೆಲ್ ಲೆವಿಟ್, ಮ್ಯಾಕ್ಸ್ ಓ'ಡೌಡ್, ಬಾಸ್ ಡಿ ಲೀಡೆ, ಕಾಲಿನ್ ಅಕರ್ಮನ್, ಸ್ಕಾಟ್ ಎಡ್ವರ್ಡ್ಸ್ (ನಾಯಕ, ವಿಕೆಟ್ ಕೀಪರ್), ಜಾಕ್ ಲಯನ್-ಕಾಚೆಟ್, ಲೋಗನ್ ವ್ಯಾನ್ ಬೀಕ್, ಆರ್ಯನ್ ದತ್, ರೋಲೋಫ್ ವ್ಯಾನ್ ಡೆರ್ ಮೆರ್ವೆ, ಕೈಲ್ ಕ್ಲೈನ್, ಫ್ರೆಡ್ ಕ್ಲಾಸೆನ್ ಮತ್ತು ಪಾಲ್ ವ್ಯಾನ್ ಮೀಕೆರೆನ್.
ಭಾರತ, ನೆದರ್‌ಲ್ಯಾಂಡ್ ಪಂದ್ಯ ನೋಡುವುದು ಎಲ್ಲಿ?
ಭಾರತ ಹಾಗೂ ನೆದರ್‌ಲ್ಯಾಂಡ್ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ವೀಕ್ಷಿಸಬಹುದಾಗಿದೆ. ಇನ್ನು ಆನ್‌ಲೈನ್‌ನಲ್ಲಿ ಜಿಯೋಹಾಟ್‌ಸ್ಟಾರ್‌ನಲ್ಲಿ ನೋಡಬಹುದಾಗಿದೆ.
ಐಸಿಸಿ ಟಿ20 ವಿಶ್ವಕಪ್‌ನ 36ನೇ ಪಂದ್ಯ ನಡೆಯುವುದು ಯಾವಾಗ?
ಭಾರತ, ನೆದರ್‌ಲ್ಯಾಂಡ್ ನಡುವಣ ಲೀಗ್ ಹಂತದ ಪಂದ್ಯ ಸಂಜೆ 7ಕ್ಕೆ ಆರಂಭವಾಗಲಿದ್ದು, ಪಂದ್ಯಕ್ಕೂ ಅರ್ಧಗಂಟೆ ಮುನ್ನ ಟಾಸ್ ನಡೆಯಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications