ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಈ ಗೆಲುವಿನ ಹೆಚ್ಚಿನ ಶ್ರೇಯಸ್ಸು ಬೌಲರ್‌ಗಳಿಗೆ ಸಲ್ಲಬೇಕು: ವಾಸಿಂ ಜಾಫರ್ ಹೇಳಿಕೆ

India vs New Zealad 2nd ODI: Wasim Jaffer said give a lot of credit to Indian bowlers

ನ್ಯೂಜಿಲೆಂಡ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಗೆಲುವು ಸಾಧಿಸಿ ಸರಣಿಯನ್ನು ವಶಕ್ಕೆ ಪಡೆದುಕೊಂಡಿದೆ. ಈ ಪಂದ್ಯದ ಗೆಲುವಿನ ಬಳಿಕ ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ವಾಸಿಂ ಜಾಫರ್ ಪ್ರತಿಕ್ರಿಯೆ ನೀಡಿದ್ದು ಭಾರತದ ಬೌಲರ್‌ಗಳ ಬಗ್ಗೆ ಪ್ರಶಂಸೆಯ ಮಾತುಗಳನ್ನಾಡಿದ್ದಾರೆ. ಈ ಪಂದ್ಯದ ಗೆಲುವಿನ ಹೆಚ್ಚಿನ ಶ್ರೇಯಸ್ಸು ಬೌಲರ್‌ಗಳಿಗೆ ಸಲ್ಲಬೇಕು ಎಂದಿದ್ದಾರೆ ಜಾಫರ್.

ಪಂದ್ಯದ ಬಳಿಕ ಇಎಸ್‌ಪಿಎನ್ ಕ್ರಿಕ್‌ಇನ್ಫೋ ಜೊತೆಗೆ ವಾಸಿಂ ಜಾಫರ್ ಮಾತನಾಡಿದ್ದಾರೆ. ಈ ಸಂದರ್ಭದಲ್ಲಿ ಅವರು ಟೀಮ್ ಇಂಡಿಯಾದ ಬೌಲರ್‌ಗಳು ಕಿವೀಸ್ ವಿರುದ್ಧ ಸ್ಥಿರವಾದ ಲೆಂತ್ ಕಾಯ್ದುಕೊಂಡಿದ್ದರು ಎಂದಿದ್ದಾರೆ.

"ಟೆಸ್ಟ್ ಪಂದ್ಯಗಳಲ್ಲಿ ನೀವು ಬೌಲ್ ಮಾಡುವ ಲೆಂತ್‌ನಲ್ಲಿಯೇ ಸ್ಥಿರವಾಗಿ ಬೌಲಿಂಗ್ ದಾಳಿ ನಡೆಸಿದ್ದಾರೆ. ಇನ್ನು ಶಮಿ ಅವರು ಸಾಮಾನ್ಯವಾಗಿ ಬೌಲ್ ಮಾಡುವ ಲೆಂತ್‌ಗಳಲ್ಲೇ ಬೌಲಿಂಗ್ ಮಾಡಿದ್ದಾರೆ. ಆದರೆ ಕಳೆದ ಕೆಲವು ಪಂದ್ಯಗಳಲ್ಲಿ ಅದೃಷ್ಟ ಅವರ ಪಾಲಿಗೆ ಇರಲಿಲ್ಲ ಎಂದು ನಾನು ಭಾವಿಸುತ್ತೇನೆ. ಆದರೆ ಇವತ್ತು ಅವರು ಬಹಳ ಸಂದರ್ಭಗಳಲ್ಲಿ ಬ್ಯಾಟ್ಸ್‌ಮನ್‌ಗಳ ವಿರುದ್ಧ ಮೇಲುಗೈ ಸಾಧಿಸಿದ್ದಾರೆ. ಇಂದಿನ ಈ ಯಶಸ್ಸಿಗೆ ಅವರು ಅರ್ಹವಾಗಿದ್ದಾರೆ" ಎಂದು ಮೊಹಮ್ಮದ್ ಶಮಿ ಬಗ್ಗೆ ವಿಶೇಷ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ ವಾಸಿಂ ಜಾಫರ್.

ಮೊದಲಿಗೆ ಬೌಲಿಂಗ್ ಮಾಡಿ ನ್ಯೂಜಿಲೆಂಡ್ ತಂಡವನ್ನು ಕೇವಲ 108 ರನ್‌ಗಳಿಗೆ ಆಲೌಟ್ ಮಾಡಿದ್ದ ಟೀಮ್ ಇಂಡಿಯಾ ಬಳಿಕ ಬ್ಯಾಟಿಂಗ್‌ನಲ್ಲಿಯೂ ಮಿಂಚಿದೆ. ನಾಯಕ ರೋಹಿತ್ ಶರ್ಮಾ ಹಾಗೂ ಶುಬ್ಮನ್ ಗಿಲ್ ಭರ್ಜರಿ ಪ್ರದರ್ಶನದ ಕಾರಣದಿಂದಾಗಿ ಕೇವಲ 2 ವಿಕೆಟ್ ಕಳೆದುಕೊಂಡು ಗುರಿ ತಲುಪುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ಟೀಮ್ ಇಂಡಿಯಾ ಅದ್ಭುತ ಪ್ರದರ್ಶನದೊಂದಿಗೆ ಸರಣಿಯನ್ನು ವಶಕ್ಕೆ ಪಡೆದುಕೊಂಡಿದೆ.

ಇನ್ನು ಟಾಸ್ ಗೆದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿದ ಟೀಮ್ ಇಂಡಿಯಾ ನಾಯಕನ ನಿರ್ಧಾರವನ್ನು ಸಮರ್ಥಿಸಿಕೊಳ್ಳುವಂತೆ ಟೀಮ್ ಇಂಡಿಯಾ ವೇಗಿಗಳು ಪ್ರದರ್ಶನ ನೀಡಿದರು. ಅನುಭವಿ ಮೊಹಮ್ಮದ್ ಶಮಿ ಮೊದಲ ಓವರ್‌ನಿಂದಲೇ ಕಿವೀಸ್ ಪಡೆಗೆ ಆಘಾತ ನೀಡಲು ಆರಂಭಿಸಿದರು. ಟೀಮ್ ಇಂಡಿಯಾದ ಇತರ ವೇಗಿಗಳಾದ ಮೊಹಮ್ಮದ್ ಸಿರಾಜ್, ಹಾರ್ದಿಕ್ ಪಾಂಡ್ಯ ಶಾರ್ದೂಲ್ ಠಾಕೂರ್ ಕೂಡ ನ್ಯೂಜಿಲೆಂಡ್‌ನ ಅಗ್ರ ಕ್ರಮಾಂಕ್ಕೆ ಆಘಾತ ನೀಡಿದರು. ಇದರ ಪರಿಣಾಮವಾಗಿ ನ್ಯೂಜಿಲೆಂಡ್ ಕೇವಲ 15 ರನ್‌ಗಳಿಸುವಷ್ಟರಲ್ಲಿ 5 ವಿಕೆಟ್ ಕಳೆದುಕೊಂಡು ಹೀನಾಯ ಸ್ಥಿತಿಯಲ್ಲಿತ್ತು.

ಆದರೆ ನ್ಯೂಜಿಲೆಂಡ್‌ಗೆ ಮಧ್ಯಮ ಕ್ರಮಾಂಕದ ಆಟಗಾರರಾದ ಗ್ಲೆನ್ ಫಿಲಿಪ್ಸ್, ಮಿಚೆಲ್ ಬ್ರೇಸ್‌ವೆಲ್, ಹಾಗೂ ಸ್ಯಾಂಟ್ನರ್ ಚೇತರಿಕೆಯ ಪ್ರಯತ್ನ ನಡೆಸಿದರೂ ಅದರಿಂದ ಹೆಚ್ಚಿನ ಉಪಯೋಗವಾಗಲಿಲ್ಲ. ಆದರೆ ಈ ಮೂವರ ಬ್ಯಾಟಿಂಗ್‌ನ ಕಾರಣದಿಂದಾಗಿ ನ್ಯೂಜಿಲೆಂಡ್ 100ರ ಗಡಿದಾಟುವಲ್ಲಿ ಯಶಸ್ವಿಯಾಯಿತು. ಅಂತಿವಾಗಿ 108 ರನ್‌ಗಳಿಗೆ ನ್ಯೂಜಿಲೆಂಡ್ ತನ್ನ ಎಲ್ಲಾ ವಿಕೆಟ್ ಕಳೆದುಕೊಂಡು ಭಾರತಕ್ಕೆ ಸುಲಭ ಗುರಿ ನಿಗದಿಪಡಿಸಿತು.

ಇತ್ತಂಡಗಳ ಆಡುವ ಬಳಗ
ಟೀಮ್ ಇಂಡಿಯಾ ಆಡುವ ಬಳಗ: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್
ಬೆಂಚ್: ಯುಜ್ವೇಂದ್ರ ಚಹಾಲ್, ಶ್ರೀಕರ್ ಭರತ್, ರಜತ್ ಪಾಟಿದಾರ್, ಶಹಬಾಜ್ ಅಹ್ಮದ್, ಉಮ್ರಾನ್ ಮಲಿಕ್

ನ್ಯೂಜಿಲೆಂಡ್ ಆಡುವ ಬಳಗ: ಫಿನ್ ಅಲೆನ್, ಡೆವೊನ್ ಕಾನ್ವೇ, ಹೆನ್ರಿ ನಿಕೋಲ್ಸ್, ಡೇರಿಲ್ ಮಿಚೆಲ್, ಟಾಮ್ ಲ್ಯಾಥಮ್ (ನಾಯಕ & ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಮೈಕೆಲ್ ಬ್ರೇಸ್ವೆಲ್, ಮಿಚೆಲ್ ಸ್ಯಾಂಟ್ನರ್, ಹೆನ್ರಿ ಶಿಪ್ಲಿ, ಲಾಕಿ ಫರ್ಗುಸನ್, ಬ್ಲೇರ್ ಟಿಕ್ನರ್
ಬೆಂಚ್: ಮಾರ್ಕ್ ಚಾಪ್ಮನ್, ಡೌಗ್ ಬ್ರೇಸ್ವೆಲ್, ಜಾಕೋಬ್ ಡಫಿ, ಇಶ್ ಸೋಧಿ

Story first published: Saturday, January 21, 2023, 23:36 [IST]
Other articles published on Jan 21, 2023
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X