ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ vs ಕೀವಿಸ್ : ಟೀಮ್ ಇಂಡಿಯಾ ನೀಡಿದ ಬೃಹತ್ ಮೊತ್ತವನ್ನು ಬೆನ್ನಟ್ಟಿ ಗೆದ್ದ ನ್ಯೂಜಿಲೆಂಡ್

India vs New Zealand 1st ODI, Live Score Hamilton

ಟೀಮ್ ಇಂಡಿಯಾ ನೀಡಿದ ಬೃಹತ್ ಟಾರ್ಗೆಟನ್ನು ನ್ಯೂಜಿಲೆಂಡ್ ತಂಡ ಬೆನ್ನಟ್ಟುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ಟಿ20 ಸರಣಿಯಲ್ಲಾದ ಅವಮಾನಕ್ಕೆ ಪ್ರತಿಕಾರವನ್ನು ತೀರಿಸಿದೆ. ನ್ಯೂಜಿಲೆಂಡ್ ತಂಡ ಟೀಮ್ ಇಂಡಿಯಾ ನೀಡಿದ 348 ರನ್‌ಗಳ ಗುರಿಯನ್ನು ಯಶಸ್ವಿಯಾಗಿ ತಲುಪಿದೆ.

ಈ ಗೆಲುವಿನೊಂದಿಗೆ ನ್ಯೂಜಿಲೆಂಡ್ ತಂಡ ಮೂರು ಪಂದ್ಯಗಳ ಸರಣಿಯಲ್ಲಿ 1-0 ಯಿಂದ ಮುನ್ನಡೆಯನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ನ್ಯೂಜಿಲೆಂಡ್ ಪರವಾಗಿ ಅನುಭವಿ ಆಟಗಾರ ರಾಸ್ ಟೇಯ್ಲರ್ ಶತಕವನ್ನು ಸಿಡಿಸಿ ಗೆಲುವನ್ನು ನ್ಯೂಜಿಲೆಂಡ್‌ಗೆ ಖಚಿತ ಪಡಿಸಿದರು.

ಅದಕ್ಕೂ ಮೊದಲು ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿತ್ತು. ಟಾಸ್ ಸೋತು ಮೊದಲು ಬ್ಯಾಟಿಂಗ್‌ಗಿಳಿಸಲ್ಪಟ್ಟ ಭಾರತ ಬರೊಬ್ಬರಿ 347 ರನ್‌ಗಳನ್ನು ಗಳಿಸಿ ಆತಿಥೇಯರಿಗೆ ದೊಡ್ಡ ಮೊತ್ತದ ಸವಾಲನ್ನು ನೀಡಿತು.

ಟೀಮ್ ಇಂಡಿಯಾ ಪರವಾಗಿ ಶ್ರೇಯಸ್ ಅಯ್ಯರ್ ಶತಕ ಸಿಡಿಸಿ ಮಿಂಚಿದರೆ ಕನ್ನಡಿಗ ರಾಹುಲ್ ಸ್ಪೋಟಕ ಅರ್ಧ ಶತಕ ಸಿಡಿಸಿ ಏಕದಿನದಲ್ಲೂ ಮಿಂಚಿದ್ದಾರೆ. ಶ್ರೇಯಸ್ ಅಯ್ಯರ್ 107 ಎಸೆತಗಳಲ್ಲಿ 103 ರನ್‌ಗಳಿಸಿದರೆ ರಾಹುಲ್ 64 ಎಸೆತಗಳಲ್ಲಿ 88 ರನ್‌ ಸಿಡಿಸಿದರು. ಇದರಲ್ಲಿ ಭರ್ಜರಿ ಆರು ಸಿಕ್ಸ್ ಮತ್ತು 3 ಬೌಂಡರಿ ಸೇರಿದೆ.

ನಾಯಕ ವಿರಾಟ್ ಕೊಹ್ಲಿ ಅರ್ಧ ಶತಕ(51 ರನ್) ಸಿಡಿಸಿ ತಂಡಕ್ಕೆ ಕೊಡುಗೆ ನೀಡಿದ್ದಾರೆ. ಅಂತಿಮವಾಗಿ ಕೇದಾರ್ ಜಾಧವ್ 15 ಎಸೆತಗಳಲ್ಲಿ 26 ರನ್ ಬಾರಿಸಿ ಬೃಹತ್‌ ಮೊತ್ತಕ್ಕೆ ಕೊಡುಗೆ ನೀಡಿದರು.

ಟೀಮ್ ಇಂಡಿಯಾ ಪರವಾಗಿ ಪದಾರ್ಪಣಾ ಪಂದ್ಯವನ್ನಾಡಿದ ಮಯಾಂಕ್ ಅಗರ್ವಾಲ್ ಮತ್ತು ಪೃಥ್ವಿ ಶಾ ಆರಂಭಿಕರಾಗಿ ಕಣಕ್ಕಿಳಿದರು. ಇಬ್ಬರೂ ಅರ್ಧ ಶತಕದ ಜೊತೆಯಾಟವನ್ನು ನೀಡಿ ಭರವಸೆ ಮೂಡಿಸಿದರು.

ಭಾರತ ಪ್ಲೇಯಿಂಗ್ XI: ಪೃಥ್ವಿ ಶಾ, ಮಾಯಾಂಕ್ ಅಗರ್ವಾಲ್, ವಿರಾಟ್ ಕೊಹ್ಲಿ (ನಾಯಕ), ಶ್ರೇಯಸ್ ಅಯ್ಯರ್, ಲೋಕೇಶ್ ರಾಹುಲ್ (ವಿಕೆಟ್ ಕೀಪರ್), ಕೇದಾರ್ ಜಾಧವ್, ರವೀಂದ್ರ ಜಡೇಜಾ, ಶಾರ್ದುಲ್ ಠಾಕೂರ್, ಮೊಹಮ್ಮದ್ ಶಮಿ, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ

ನ್ಯೂಜಿಲೆಂಡ್ ಪ್ಲೇಯಿಂಗ್ XI: ಮಾರ್ಟಿನ್ ಗುಪ್ಟಿಲ್, ಹೆನ್ರಿ ನಿಕೋಲ್ಸ್, ಟಾಮ್ ಲಾಥಮ್ (ನಾಯಕ ಮತ್ತು ವಿಕೆಟ್ ಕೀಪರ್), ಟಾಮ್ ಬ್ಲುಂಡೆಲ್, ರಾಸ್ ಟೇಲರ್, ಜೇಮ್ಸ್ ನೀಶಮ್, ಕಾಲಿನ್ ಡಿ ಗ್ರ್ಯಾಂಡ್‌ಹೋಮ್, ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ, ಇಶ್ ಸೋಧಿ, ಹಮೀಶ್ ಬೆನೆಟ್

Story first published: Wednesday, February 5, 2020, 16:33 [IST]
Other articles published on Feb 5, 2020
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X