ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ vs ನ್ಯೂಜಿಲೆಂಡ್: ಪ್ರಮುಖ ದಾಖಲೆಗಳ ಮೇಲೆ ಕಣ್ಣಿಟ್ಟ ಇತ್ತಂಡಗಳ ಆಟಗಾರರು!

India vs New Zealand: 1st ODI match, both team Players record and approaching milestones

ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವಿನ ಏಕದಿನ ಸರಣಿ ಶುಕ್ರವಾರದಿಂದ ಆರಂಭವಾಗಲಿದೆ. ಮೂರು ಪಂದ್ಯಗಳ ಟಿ20 ಸರಣಿಯನ್ನು ಟೀಮ್ ಇಂಡಿಯಾ 1-0 ಅಂತರದಿಂದ ತನ್ನ ವಶಕ್ಕೆ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದು ಇದೀಗ ಏಕದಿನ ಸರಣಿಯಲ್ಲಿಯೂ ಉತ್ತಮ ಪ್ರದರ್ಶನ ನೀಡುವ ಆತ್ಮವಿಶ್ವಾಸದಲ್ಲಿದೆ ಟೀಮ್ ಇಂಡಿಯಾ.

ಈ ಸರಣಿಗೆ ಟೀಮ್ ಇಂಡಿಯಾ ಶಿಖರ್ ಧವನ್ ನೇತೃತ್ವದಲ್ಲಿ ಕಣಕ್ಕಿಳಿಯಲಿದೆ. ಟೀಮ್ ಇಂಡಿಯಾ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ ಅವರಂತಾ ಅನುಭವಿ ಆಟಗಾರರಿಲ್ಲದೆ ಯುವ ಆಟಗಾರರೊಂದಿಗೆ ಕಣಕ್ಕಿಳಿಯುತ್ತಿದ್ದರೂ ತಂಡ ಸಾಕಷ್ಟು ಬಲಿಷ್ಠವಾಗಿಯೇ ಇದೆ. ಇತ್ತ ನ್ಯೂಜಿಲೆಂಡ್ ತಂಡವನ್ನು ಕೇನ್ ವಿಲಿಯಮ್ಸನ್ ಮುನ್ನಡೆಸಲಿದ್ದು ಪೂರ್ಣ ಸಾಮರ್ಥ್ಯದ ತಂಡದೊಂದಿಗೆ ಕಣಕ್ಕಿಳಿಯುತ್ತಿದೆ.

ಜಿಂಬಾಬ್ವೆ ವಿರುದ್ಧ ನಾಯಕತ್ವ ಕಿತ್ತುಕೊಂಡು ಕೆಎಲ್ ರಾಹುಲ್‌ಗೆ ನೀಡಿದ್ದಕ್ಕೆ ಶಿಖರ್ ಧವನ್ ಏನೆಂದರು?ಜಿಂಬಾಬ್ವೆ ವಿರುದ್ಧ ನಾಯಕತ್ವ ಕಿತ್ತುಕೊಂಡು ಕೆಎಲ್ ರಾಹುಲ್‌ಗೆ ನೀಡಿದ್ದಕ್ಕೆ ಶಿಖರ್ ಧವನ್ ಏನೆಂದರು?

ನ್ಯೂಜಿಲೆಂಡ್ ಮತ್ತು ಭಾರತ ಇದುವರೆಗೆ 110 ಏಕದಿನ ಪಂದ್ಯಗಳಲ್ಲಿ ಮುಖಾಮುಖಿಯಾಗಿದೆ. ಈ ಪೈಕಿ ಕಿವೀಸ್ ಪಡೆ 49 ಪಂದ್ಯಗಳಲ್ಲಿ ಗೆದ್ದಿದ್ದರೆ ಮತ್ತು ಭಾರತ 55ರಲ್ಲಿ ಗೆಲುವು ಸಾಧಿಸಿದೆ. ಒಂದು ಪಂದ್ಯ ಟೈನಲ್ಲಿ ಕೊನೆಗೊಂಡಿದ್ದು ಐದು ಯಾವುದೇ ಫಲಿತಾಂಶವಿಲ್ಲದೆ ಅಂತ್ಯಕಂಡಿದೆ. ನ್ಯೂಜಿಲೆಂಡ್ ನೆಲದಲ್ಲಿ ಈ ಎರಡು ತಂಡಗಳು ಒಟ್ಟಾರೆಯಾಗಿ 42 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು ಆತಿಥೇಯ ಪಡೆ 25 ಬಾರಿ ಮತ್ತು ಭಾರತ 14 ಬಾರಿ ಜಯಗಳಿಸಿದೆ. ಎರಡು ಪಂದ್ಯಗಳು ಯಾವುದೇ ಫಲಿತಾಂಶವಿಲ್ಲದೆ ಕೊನೆಗೊಂಡಿದೆ. ಇನ್ನು ಈ ಎರಡು ತಂಡಗಳ ನಡುವಿನ ಏಕೈಕ ಟೈ ಪಂದ್ಯವು 2014 ರಲ್ಲಿ ಅದೇ ಆಕ್ಲೆಂಡ್‌ನಲ್ಲಿಯೇ ನಡೆದಿರುವುದು ಕುತೂಹಲಕಾರಿ ಮಾಹಿತಿ.

ಆಟಗಾರರ ಪ್ರಮುಖ ಮೈಲಿಗಲ್ಲುಗಳು ಹಾಗೂ ದಾಖಲೆಗಳು

* ರಿಷಬ್ ಪಂತ್ ಏಕದಿನ ಮಾದರಿಯಲ್ಲಿ ಈವರೆಗೆ 3950 ರನ್‌ಗಳನ್ನು ಗಳಿಸಿದ್ದು 4000 ರನ್‌ಗಳ ಗಡಿ ತಲುಪಲು 50 ರನ್‌ಗಳ ಅಗತ್ಯವಿದೆ.
* ಕಿವೀಸ್ ವೇಗಿ ಟಿಮ್ ಸೌಥಿ ಏಕದಿನ ಕ್ರಿಕೆಟ್‌ನಲ್ಲಿ ಈವರೆಗೆ 199 ವಿಕೆಟ್ ಸಂಪಾದಿಸಿದ್ದು ದ್ವಿಶತಕದ ಸಾಧನೆಗೆ ಇನ್ನು ಕೇವಲ ಒಂದು ವಿಕೆಟ್‌ನ ಅಗತ್ಯವಿದೆ.
* ಟೀಮ್ ಇಂಡಿಯಾದ ವೇಗದ ಬೌಲರ್ ಶಾರ್ದೂಲ್ ಠಾಕೂರ್ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 100 ವಿಕೆಟ್‌ಗಳ ಮೈಲಿಗಲ್ಲಿ ದಾಟಲು ಇನ್ನು ಕೇವಲ ಒಂದು ವಿಕೆಟ್‌ನ ಅಗತ್ಯವಿದೆ.
* ಡೆವೊನ್ ಕಾನ್ವೇ ಏಕದಿನ ಮಾದರಿಯಲ್ಲಿ 50 ಬೌಂಡರಿಗಳನ್ನು ಪೂರ್ಣಗೊಳಿಸಲು ಒಂಬತ್ತು ಬೌಂಡರಿಗಳ ಅಗತ್ಯವಿದೆ.
* ನ್ಯೂಜಿಲಂಡ್ ನಾಯಕ ಕೇನ್ ವಿಲಿಯಮ್ಸನ್ ತವರಿನಲ್ಲಿ ಏಕದಿನ ಮಾದರಿಯಲ್ಲಿ 3000 ರನ್‌ಗಳನ್ನು ಗಳಿಸಲು 46 ರನ್‌ಗಳ ಅಗತ್ಯವಿದೆ.

ಚಾಮಿಕಾ ಕರುಣಾರತ್ನೆಗೆ ಒಂದು ವರ್ಷ ಅಮಾನತು ಶಿಕ್ಷೆ ನೀಡಿದ ಶ್ರೀಲಂಕಾ ಕ್ರಿಕೆಟ್ ಮಂಡಳಿಚಾಮಿಕಾ ಕರುಣಾರತ್ನೆಗೆ ಒಂದು ವರ್ಷ ಅಮಾನತು ಶಿಕ್ಷೆ ನೀಡಿದ ಶ್ರೀಲಂಕಾ ಕ್ರಿಕೆಟ್ ಮಂಡಳಿ

ನೇರಪ್ರಸಾರದ ಮಾಹಿತಿ: ನ್ಯೂಜಿಲೆಂಡ್ ವಿರುದ್ಧದ ಏಕದಿನ ಪಂದ್ಯಗಳ ನೇರಪ್ರಸಾರ ಭಾರತದಲ್ಲಿ ಅಮೆಜಾನ್ ಪ್ರೈಮ್‌ ವಿಡಿಯೋದಲ್ಲಿ ನೇರಪ್ರಸಾರವಾಗಲಿದೆ. ಇನ್ನು ಡಿಡಿ ಸ್ಪೋರ್ಟ್ಸ್ 1.0 ವಾಹಿನಿಯಲ್ಲಿಯೂ ಈ ಪಂದ್ಯವನ್ನು ವೀಕ್ಷಿಸಬಹುದಾಗಿದೆ.

ಭಾರತ: ಶಿಖರ್ ಧವನ್ (ನಾಯಕ), ರಿಷಬ್ ಪಂತ್ (ಉಪ ನಾಯಕ & ವಿಕೆಟ್ ಕೀಪರ್), ಶುಬ್ಮನ್ ಗಿಲ್, ದೀಪಕ್ ಹೂಡಾ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ವಾಶಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಶಹಬಾಜ್ ಅಹ್ಮದ್, ಯುಜ್ವೇಂದ್ರ ಚಹಾಲ್, ಕುಲದೀಪ್ ಯಾದವ್, ಅರ್ಶ್‌ದೀಪ್ ಸಿಂಗ್, ದೀಪಕ್ ಚಹಾರ್, ಕುಲದೀಪ್ ಸೇನ್, ಉಮ್ರಾನ್ ಮಲಿಕ್.
ನ್ಯೂಜಿಲೆಂಡ್: ಕೇನ್ ವಿಲಿಯಮ್ಸನ್ (ನಾಯಕ), ಫಿನ್ ಅಲೆನ್, ಮೈಕೆಲ್ ಬ್ರೇಸ್ವೆಲ್, ಡೆವೊನ್ ಕಾನ್ವೇ, ಲಾಕಿ ಫರ್ಗುಸನ್, ಡ್ಯಾರಿಲ್ ಮಿಚೆಲ್, ಆಡಮ್ ಮಿಲ್ನೆ, ಜಿಮ್ಮಿ ನೀಶಮ್, ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ, ಟಾಮ್ ಲ್ಯಾಥಮ್ (ವಿಕೆಟ್ ಕೀಪರ್), ಮ್ಯಾಟ್ ಹೆನ್ರಿ.

Story first published: Thursday, November 24, 2022, 23:41 [IST]
Other articles published on Nov 24, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X