ಭಾರತ vs ನ್ಯೂಜಿಲೆಂಡ್ ಮೊದಲ ಏಕದಿನ ಪಂದ್ಯ: ಪಿಚ್ ರಿಪೋರ್ಟ್, ಸಂಭಾವ್ಯ ಆಡುವ ಬಳಗ, ನೇರಪ್ರಸಾರದ ಮಾಹಿತಿ

ಟೀಮ್ ಇಂಡಿಯಾ ತವರಿನಲ್ಲಿ ನಡೆಯಲಿರುವ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಕಣಕ್ಕಿಳಿಯಲು ಸಜ್ಜಾಗಿದೆ. ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡ ಶ್ರೀಲಂಕಾ ವಿರುದ್ಧ ವೈಟ್‌ವಾಶ್ ಗೆಲುವು ಸಾಧಿಸಿ ಆತ್ಮವಿಶ್ವಾಸದಲ್ಲಿದ್ದು ಇದೀಗ ಕಿವೀಸ್ ವಿರುದ್ಧದ ಸರಣಿಯಲ್ಲಿ ಮುಖಾಮುಖಿಯಾಗಲು ಸಿದ್ಧವಾಗಿದೆ.
ನ್ಯೂಜಿಲೆಂಡ್ ತಂಡ ಕೂಡ ಅದ್ಭುತ ಪ್ರದರ್ಶನ ನೀಡುತ್ತಿದ್ದು ಪಾಕಿಸ್ತಾನ ಪ್ರವಾಸದಲ್ಲಿ ಅದ್ಭುತ ಯಶಸ್ಸು ಸಾಧಿಸಿ ಆತ್ಮವಿಶ್ವಾಸದಲ್ಲಿದೆ. ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಪಾಕಿಸ್ತಾನವನ್ನು 2-1 ಅಂತರದಿಂದ ನ್ಯೂಜಿಲಂಡ್ ಮಣಿಸಿದ್ದು ಭಾರತದ ವಿರುದ್ಧವೂ ಅಂಥಾದ್ದೇ ಪ್ರದರ್ಶನ ನೀಡುವ ಹುಮ್ಮಸ್ಸಿಲ್ಲಿದೆ. ಆದರೆ ಭಾರತದ ವಿರುದ್ಧದ ಸರಣಿಗೆ ನ್ಯೂಜಿಲೆಂಡ್ ತಂಡದಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡಿಕೊಂಡಿದೆ. ಟಿಮ್ ಸೌಥಿ ಹಾಗೂ ಕೇನ್ ವಿಲಿಯಮ್ಸನ್ ಈ ಪ್ರವಾಸದಿಂದ ವಿಶ್ರಾಂತಿ ಪಡೆದುಕೊಂಡಿದ್ದು ಟಾಮ್ ಲ್ಯಾಥಮ್ ಕಿವೀಸ್ ಪಡೆಯನ್ನು ಮುನ್ನಡೆಸಲಿದ್ದಾರೆ.

ಪಂದ್ಯದ ದಿನಾಂಕ ಸಮಯ ಹಾಗೂ ನೇರಪ್ರಸಾರದ ಮಾಹಿತಿ
ಭಾರತ ಹಾಗೂ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯ ಜನವರಿ 18 ಬುಧವಾರ ನಡೆಯಲಿದೆ. ಮಧ್ಯಾಹ್ನ 1:30ಕ್ಕೆ ಪಂದ್ಯ ಆರಂಭವಾಗಲಿದ್ದು 1 ಗಂಟೆಗೆ ಪಂದ್ಯದ ಟಾಸ್ ಪ್ರಕ್ರಿಯೆ ನಡೆಯಲಿದೆ. ಸ್ಟಾರ್ ಸ್ಪೋರ್ಟ್ಸ್ ವಾಹಿನಿಯಲ್ಲಿ ಪಂದ್ಯದ ನೇರಪ್ರಸಾರವಿರಲಿದ್ದು ಹಾಟ್‌ಸ್ಟಾರ್ ಲೈವ್‌ಸ್ಟ್ರೀಮಿಂಗ್ ಮಾಡಲಿದೆ.

ಹೈದರಾಬಾದ್ ಪಿಚ್ ರಿಪೋರ್ಟ್ ಹಾಗೂ ಹವಾಮಾನ ವರದಿ
ಪಿಚ್ ರಿಪೋರ್ಟ್:
ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವಿನ ಏಕದಿನ ಸರಣಿಯ ಮೊದಲ ಪಂದ್ಯ ಹೈದರಾಬಾದ್‌ನ ರಾಜೀವ್‌ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ. ಇಲ್ಲಿನ ಪಿಚ್ ವೇಗಿಗಳಿಗಿಂತ ಸ್ಪಿನ್ನರ್‌ಗಳಿಗೆ ಹೆಚ್ಚಿನ ನೆರವು ನೀಡಲಿದೆ. ಆದರೆ ಇಲ್ಲಿ ನಡೆದ ಕೊನೆಯ ಅಂತಾರಾಷ್ಟ್ರೀಯ ಪಂದ್ಯದಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಟಿ20 ಪಂದ್ಯದಲ್ಲಿ ಮುಖಾಮಿಖುಯಾಗಿದ್ದಾಗ ಇಲ್ಲಿ ಒಟ್ಟು 350ಕ್ಕೂ ಅಧಿಕ ರನ್ ದಾಖಲಾಗಿತ್ತು. ಇನ್ನು ಇಲ್ಲಿ ಆಡಿರುವ 6 ಅಂತಾರಾಷ್ಟ್ರೀಯ ಏಕದಿನ ಪಂದ್ಯಗಳಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಹಾಗೂ ಚೇಸಿಂಗ್ ಮಾಡಿದ ತಂಡಗಳು ತಲಾ ಮೂರು ಬಾರಿ ಗೆಲುವು ಸಾಧಿಸಿದೆ.
ಹವಾಮಾನ ವರದಿ:
ಇನ್ನು ಹೈದರಾಬಾದ್‌ನಲ್ಲಿ ಬುಧವಾರದ ಹವಾಮಾನ ಮಧ್ಯಾಹ್ನದ ವೇಳೆಗೆ ಬಿಸಿಯಾಗಿರಲಿದೆ. ಆದರೆ ಸಂಜೆಯಾಗುತ್ತಿದ್ದಂತೆ ತಂಪಿನಿಂದ ಕೂಡಿರಲಿದ್ದು ಮಳೆಯ ಆತಂಕವಿಲ್ಲ. ಹೀಗಾಗಿ ಯಾವುದೇ ಅಡ್ಡಿಯಿಲ್ಲದೆ ಪಂದ್ಯ ನಡೆಯುವುದನ್ನು ನಿರೀಕ್ಷಿಸಬಹುದು.

ಸಂಭಾವ್ಯ ಆಡುವ ಬಳಗ
ನ್ಯೂಜಿಲೆಂಡ್: ಡೆವೊನ್ ಕಾನ್ವೇ, ಫಿನ್ ಅಲೆನ್, ಹೆನ್ರಿ ನಿಕೋಲ್ಸ್, ಟಾಮ್ ಲ್ಯಾಥಮ್, ಗ್ಲೆನ್ ಫಿಲಿಪ್ಸ್ (ವಿಕೆಟ್ ಕೀಪರ್), ಡ್ಯಾರಿಲ್ ಮಿಚೆಲ್, ಮಿಚೆಲ್ ಸ್ಯಾಂಟ್ನರ್, ಮೈಕೆಲ್ ಬ್ರೇಸ್ವೆಲ್, ಇಶ್ ಸೋಧಿ, ಲಾಕ್ ಫರ್ಗುಸನ್, ಬ್ಲೇರ್ ಟಿಕ್ನರ್ / ಜಾಕೋಬ್ ಡಫಿ
ಟೀಮ್ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್/ಉಮ್ರಾನ್ ಮಲಿಕ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications