For Quick Alerts
ALLOW NOTIFICATIONS  
For Daily Alerts
 

ಇಬ್ಬರು ಯುವ ಆಟಗಾರರ ಪೈಕಿ ಯಾರಿಗೆ ಪದಾರ್ಪಣೆ: ಒಂದು ಸ್ಥಾನಕ್ಕೆ ವೇಗಿಗಳ ಪೈಪೋಟಿ!

India vs New Zealand 1st ODI: Umran Malik and Arshdeep Singh fight for ODI debut

ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವಿನ ಏಕದಿನ ಸರಣಿಯ ಮೊದಲ ಪಂದ್ಯ ಶುಕ್ರವಾರ ನಡೆಯಲಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾದಲ್ಲಿ ಯಾರೆಲ್ಲಾ ಆಟಗಾರರು ಸ್ಥಾನವನ್ನು ಪಡೆದುಕೊಳ್ಳಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ. ಶಿಖರ್ ಧವನ್ ನೇತೃತ್ವದಲ್ಲಿ ಕಣಕ್ಕಿಳಿಯಲಿರುವ ತಂಡ ಯುವ ಆಟಗಾರರ ಪಡೆಯನ್ನೇ ಹೊಂದಿದ್ದು ಸಾಕಷ್ಟು ಕುತೂಹಲ ಮೂಡಿಸಿದೆ.

ಇನ್ನು ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾದ ಇಬ್ಬರು ಯುವ ಆಟಗಾರರ ಏಕದಿನ ಮಾದರಿಗೆ ಪದಾರ್ಪಣೆಗೆ ತುದಿಗಾಲಲ್ಲಿ ಕಾದು ನಿಂತಿದ್ದಾರೆ. ಈ ಪೈಕಿ ಯಾವ ಆಟಗಾರನಿಗೆ ಅವಕಾಶ ದೊರೆಯಲಿದೆ ಎಂಬುದು ಕುತೂಹಲ ಮೂಡಿಸಿದೆ. ಟೀಮ್ ಇಂಡಿಯಾದ ಯುವ ಆಟಗಾರರಾದ ಅರ್ಶ್‌ದೀಪ್ ಸಿಂಗ್ ಹಾಗೂ ಉಮ್ರಾನ್ ಮಲಿಕ್ ಮಧ್ಯೆ ಸಾಕಷ್ಟು ಪೈಪೋಟಿ ಏರ್ಪಟ್ಟಿದ್ದು ಮೊದಲ ಪಂದ್ಯದಲ್ಲಿ ಪದಾರ್ಪಣೆ ಮಾಡುವ ಅವಕಾಶ ಯಾರಿಗೆ ದೊರೆಯಲಿದೆ ಎಂಬುದು ಪಂದ್ಯದ ಟಾಸ್ ಸಂದರ್ಭದಲ್ಲಿ ತಿಳಿಯಲಿದೆ.

ಚುಟುಕು ಮಾದರಿಯಲ್ಲಿ ಅರ್ಶದೀಪ್ ಅದ್ಭುತ ಪ್ರದರ್ಶನ: ಟೀಮ್ ಇಂಡಿಯಾ ಪರವಾಗಿ ಟಿ20 ಮಾದರಿಯಲ್ಲಿ ಯುವ ಬೌಲರ್ ಅರ್ಶ್‌ದೀಪ್ ಸಿಂಗ್ ಅದ್ಭುತ ಪ್ರದರ್ಶನ ನೀಡಿ ಮಿಂಚುತ್ತಿದ್ದಾರೆ. ಟಿ20 ವಿಶ್ವಕಪ್‌ನಲ್ಲಿಯೂ ಭಾರತ ತಂಡದ ಪರವಾಗಿ ಕಣಕ್ಕಿಳಿದಿದ್ದ ಅರ್ಶ್‌ದೀಪ್ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿ ಭಾರತದ ಪರವಾಗಿ ಅತೀ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದರು. ಇದೀಗ ಏಕದಿನ ಮಾದರಿಯಲ್ಲಿಯೂ ಮೊದಲ ಬಾರಿಗೆ ಅವಕಾಶ ಪಡೆಯಲು ಉತ್ಸುಕರಾಗಿದ್ದಾರೆ.

ಇನ್ನು ನ್ಯೂಜಿಲೆಂಡ್ ಪ್ರವಾಸದಲ್ಲಿ ಟಿ20 ಸರಣಿಯಲ್ಲಿ ತಂಡದಲ್ಲಿದ್ದರೂ ಉಮ್ರಾನ್ ಮಲಿಕ್ ಆಡುವ ಅವಕಾಶ ಪಡೆದುಕೊಂಡಿರಲಿಲ್ಲ. ಇದೀಗ ಏಕದಿನ ಸರಣಿಯಲ್ಲಿ ಅವಕಾಶ ಗಿಟ್ಟಿಸಿಕೊಳ್ಳುವ ನಿರೀಕ್ಷೆಯಿದೆ. ಏಕದಿನ ಮಾದರಿಯಲ್ಲಿ ಉಮ್ರಾನ್ ಮಲಿಕ್ ಅವರನ್ನು ಕಣಕ್ಕಿಳಿಸಿ ಅವರನ್ನು ಸಾಮರ್ಥ್ಯವನ್ನು ಪರೀಕ್ಷಿಸಲು ಕೋಚ್ ವಿವಿಎಸ್ ಲಕ್ಷ್ಮಣ್ ಮುಂದಾದರೂ ಅಚ್ಚರಿಯಿಲ್ಲ.

ಭಾರತ: ಶಿಖರ್ ಧವನ್ (ನಾಯಕ), ರಿಷಬ್ ಪಂತ್ (ಉಪ ನಾಯಕ & ವಿಕೆಟ್ ಕೀಪರ್), ಶುಬ್ಮನ್ ಗಿಲ್, ದೀಪಕ್ ಹೂಡಾ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ವಾಶಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಶಹಬಾಜ್ ಅಹ್ಮದ್, ಯುಜ್ವೇಂದ್ರ ಚಹಾಲ್, ಕುಲದೀಪ್ ಯಾದವ್, ಅರ್ಶ್‌ದೀಪ್ ಸಿಂಗ್, ದೀಪಕ್ ಚಹಾರ್, ಕುಲದೀಪ್ ಸೇನ್, ಉಮ್ರಾನ್ ಮಲಿಕ್.

ನ್ಯೂಜಿಲೆಂಡ್: ಡೆವೊನ್ ಕಾನ್ವೇ (ವಿಕೆಟ್ ಕೀಪರ್), ಕೇನ್ ವಿಲಿಯಮ್ಸನ್ (ನಾಯಕ), ಫಿನ್ ಅಲೆನ್, ಗ್ಲೆನ್ ಫಿಲಿಪ್ಸ್, ಡೇರಿಲ್ ಮಿಚೆಲ್, ಮೈಕೆಲ್ ಬ್ರೇಸ್ವೆಲ್, ಜೇಮ್ಸ್ ನೀಶಮ್, ಮಿಚೆಲ್ ಸ್ಯಾಂಟ್ನರ್, ಲಾಕಿ ಫರ್ಗುಸನ್, ಟಿಮ್ ಸೌಥಿ, ಆಡಮ್ ಮಿಲ್ನೆ, ಮ್ಯಾಟ್ ಹೆನ್ರಿ, ಟಾಮ್ ಲ್ಯಾಥಮ್

Story first published: Thursday, November 24, 2022, 19:12 [IST]
Other articles published on Nov 24, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+