ಭಾರತ-ನ್ಯೂಜಿಲೆಂಡ್ ಮೊದಲ ಟಿ20 ಪಂದ್ಯ: ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ LIVE SCORE

ಟಿ20 ವಿಶ್ವಕಪ್ ಬಳಿಕ ಬಹುನಿರೀಕ್ಷಿತ ಟಿ20 ಸರಣಿಯಾಗಿರುವ ಭಾರತ-ನ್ಯೂಜಿಲೆಂಡ್ ನಡುವಿನ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ಫೀಲ್ಡಿಂಗ್ ಆಯ್ದುಕೊಂಡಿದೆ. ಹೊಸ ನಾಯಕ ರೋಹಿತ್ ಶರ್ಮಾ ಹಾಗೂ ಹೊಸ ಕೋಚ್ ರಾಹುಲ್ ದ್ರಾವಿಡ್ ಮಾರ್ಗದರ್ಶನದಲ್ಲಿ ಮುನ್ನಡೆಯುತ್ತಿರುವ ಭಾರತ ತಂಡದಲ್ಲಿ ಆಲ್‌ರೌಂಡರ್ ವೆಂಕಟೇಶ್ ಅಯ್ಯರ್ ಚೊಚ್ಚಲ ಪಂದ್ಯವನ್ನಾಡಲಿದ್ದಾರೆ.
ಉಭಯ ತಂಡಗಳಲ್ಲಿ ಹೊಸ ನಾಯಕನ ನೇತೃತ್ವದಲ್ಲಿ ತಂಡ ಮುನ್ನೆಡೆಯಲಿದೆ. ಟೀಂ ಇಂಡಿಯಾ ಪರ ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್ ನಾಯಕತ್ವ ತ್ಯಜಿಸಿದ ಬಳಿಕ ರೋಹಿತ್ ಶರ್ಮಾ ಹೊಸ ನಾಯಕನಾಗಿ ಮಿಂಚಲಿದ್ದಾರೆ. ಜೊತೆಗೆ ಹೊಸ ಕೋಚ್ ಆಗಿ ರಾಹುಲ್ ದ್ರಾವಿಡ್ ಮಾರ್ಗದರ್ಶನ ಇರಲಿದೆ.
ಅತ್ತ ನ್ಯೂಜಿಲೆಂಡ್ ತಂಡದಲ್ಲಿ ನಾಯಕ ಕೇನ್ ವಿಲಿಯಮ್ಸನ್ ಟಿ20 ಸರಣಿಯಿಂದ ಹೊರಗುಳಿದಿದ್ದಾರೆ. ಮುಂಬರುವ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ಗಮನ ವಹಿಸುವ ಸಲುವಾಗಿ ಕೇನ್ ವಿಲಿಯಮ್ಸನ್ ಟಿ20 ಪಂದ್ಯಗಳಲ್ಲಿ ಭಾಗವಹಿಸುತ್ತಿಲ್ಲ. ಕೇನ್ ಬದಲಿಗೆ ಅನುಭವಿ ವೇಗದ ಬೌಲರ್ ಟಿಮ್ ಸೌಥಿ ಕಿವೀಸ್ ತಂಡವನ್ನ ಮುನ್ನೆಡೆಸಲಿದ್ದಾರೆ.
ಟೀಂ ಇಂಡಿಯಾ ಪರ ಆಲ್‌ರೌಂಡರ್ ಸ್ಥಾನದಲ್ಲಿ ವೆಂಕಟೇಶ್ ಅಯ್ಯರ್ ಪದಾರ್ಪಣೆ ಪಂದ್ಯವನ್ನಾಡಲಿದ್ದಾರೆ. ಐಪಿಎಲ್ 2021ರ ಸೀಸನ್‌ನಲ್ಲಿ ಕೆಕೆಆರ್ ಪರ ಓಪನರ್ ಆಗಿ ಮಿಂಚಿದ ವೆಂಕಟೇಶ್ ಅಯ್ಯರ್ ಚೊಚ್ಚಲ ಟಿ20 ಅಂತರರಾಷ್ಟ್ರೀಯ ಪಂದ್ಯವನ್ನಾಡಲಿದ್ದಾರೆ. ಇನ್ನು ಭುವನೇಶ್ವರ್ ಕುಮಾರ್, ಯುಜವೇಂದ್ರ ಚಹಾಲ್, ಮೊಹಮ್ಮದ್ ಸಿರಾಜ್ ತಂಡಕ್ಕೆ ಮರಳಿದ್ದಾರೆ.
ನ್ಯೂಜಿಲೆಂಡ್ ತಂಡದಲ್ಲಿ ವಿಶ್ವಕಪ್ ಫೈನಲ್‌ನಲ್ಲಿ ಆಡಿದ ನಾಲ್ಕು ಆಟಗಾರರನ್ನು ಬದಲಿಸಿದ್ದು, ನೀಶಮ್, ಕೇನ್ ವಿಲಿಯಮ್ಸನ್, ಇಶ್ ಸೋಧಿ ಮತ್ತು ಆ್ಯಡಮ್ ಮಿಲ್ನೆ ಹೊರಗುಳಿದಿದ್ದು, ಮಾರ್ಕ್ ಚಾಪ್ಮನ್, ಟಾಡ್ ಆಸ್ಟಲ್, ರಚಿನ್ ರವೀಂದ್ರ ಮತ್ತು ಲ್ಯುಕಿ ಫರ್ಗುಸನ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಪರ ಹಾಗೂ ನ್ಯೂಜಿಲೆಂಡ್ ತಂಡದಲ್ಲಿ ಪ್ಲೇಯಿಂಗ್ 11ನಲ್ಲಿ ಯಾರೆಲ್ಲಾ ಸ್ಥಾನ ಪಡೆದಿದ್ದಾರೆ ಎಂಬುದನ್ನ ಈ ಕೆಳಗೆ ತಿಳಿಯಿರಿ.
ಟೀಂ ಇಂಡಿಯಾ ಪ್ಲೇಯಿಂಗ್ 11:
ರೋಹಿತ್ ಶರ್ಮಾ(ನಾಯಕ), ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್(ವಿಕೆಟ್ ಕೀಪರ್), ವೆಂಕಟೇಶ್ ಅಯ್ಯರ್, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಭುವನೇಶ್ವರ್ ಕುಮಾರ್, ದೀಪಕ್ ಚಾಹರ್, ಮೊಹಮ್ಮದ್ ಸಿರಾಜ್
ನ್ಯೂಜಿಲೆಂಡ್ ಪ್ಲೇಯಿಂಗ್ 11:
ಮಾರ್ಟಿನ್ ಗಪ್ಟಿಲ್, ಡೇರಿಲ್ ಮಿಚೆಲ್, ಮಾರ್ಕ್ ಚಾಪ್ಮನ್, ಗ್ಲೆನ್ ಫಿಲಿಪ್ಸ್, ಟಿಮ್ ಸೀಫರ್ಟ್ (ವಿಕೆಟ್ ಕೀಪರ್), ರಚಿನ್ ರವೀಂದ್ರ, ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ (ನಾಯಕ), ಟಾಡ್ ಆಸ್ಟಲ್, ಲ್ಯುಕಿ ಫರ್ಗುಸನ್, ಟ್ರೆಂಟ್ ಬೌಲ್ಟ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications