Ind vs NZ1st T20: ವಾಶಿಂಗ್ಟನ್ 'ಸುಂದರ' ಆಟ ವ್ಯರ್ಥ: ಭಾರತಕ್ಕೆ ಮೊದಲ ಪಂದ್ಯದಲ್ಲೇ ಸೋಲಿನ ಆಘಾತ

ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವಿನ ಟಿ20 ಸರಣಿಯ ಮೊದಲ ಪಂದ್ಯದಲ್ಲೇ ಭಾರತಕ್ಕೆ ಆಘಾತ ಉಂಟಾಗಿದೆ. ರಾಂಚಿಯ ಕ್ರೀಡಾಂಗಣದ ಸ್ಪಿನ್ ಸ್ನೇಹಿ ಪಿಚ್‌ನಲ್ಲಿ ಭಾರತೀಯ ಬ್ಯಾಟರ್‌ಗಳ ವಿರುದ್ಧ ನ್ಯೂಜಿಲೆಂಡ್ ಬೌಲರ್‌ಗಳು ಭರ್ಜರಿ ಮೇಲುಗೈ ಸಾಧಿಸಿದರು. ಅಗ್ರ ಕ್ರಮಾಂಕದ ಆಟಗಾರರು ಕ್ರೀಸ್‌ನಲ್ಲಿ ಹೆಚ್ಚು ಹೊತ್ತು ನೆಲೆಯೂರಲು ಕೂಡ ವಿಫಲವಾದ ಹಿನ್ನೆಲೆಯಲ್ಲಿ ಭಾರತೀಯ ಮಧ್ಯಮ ಕ್ರಮಾಂಕದ ಮೇಲೆ ಸಾಕಷ್ಟು ಒತ್ತಡ ಬಿತ್ತು. ಇದು ತಂಡದ ಹಿನ್ನಡೆಗೆ ಕಾರಣವಾಯಿತು.
ನ್ಯೂಜಿಲೆಂಡ್ ನೀಡಿದ 177 ರನ್‌ಗಳ ಸವಾಲಿನ ಗುರಿ ಬೆನ್ನಟ್ಟಿದ ಟೀಮ್ ಇಂಡಿಯಾ ತನ್ನ ಮೊದಲ ಮೂರು ವಿಕೆಟ್‌ಗಳನ್ನು ಕೇವಲ 15 ರನ್‌ಗಳಿಸುವಷ್ಟರಲ್ಲಿ ಕಳೆದುಕೊಂಡಿತು. ನಂತರ ಸೂರ್ಯಕುಮಾರ್ ಯಾದವ್ ಹಾಗೂ ಹಾರ್ದಿಕ್ ಪಾಂಡ್ಯ ಉತ್ತಮ ಜೊತೆಯಾಟ ನೀಡುವ ಪ್ರಯತ್ನ ನಡೆಸಿದರು. ನಂತರ ಈ ಜೋಡಿ ಬೇರ್ಪಟ್ಟ ಬಳಿಕ ವಾಶಿಂಗ್ಟನ್ ಸುಂದರ್ ಅದ್ಭುತ ಬ್ಯಾಟಿಂಗ್ ನಡೆಸಿ ಹೋರಾಟ ನಡೆಸಿದರಾದರೂ ಅದು ಭಾರತಕ್ಕೆ ಸಾಕಾಗಲಿಲ್ಲ. ಅಂತಿಮವಾಗಿ ಟೀಮ್ ಇಂಡಿಯಾ ರನ್‌ಗಳ ಸೋಲು ಅನುಭವಿಸಿದೆ.

ಮಿಂಚಿದ ಕಿವೀಸ್ ಪಡೆ
ಈ ಪಂದ್ಯದಲ್ಲಿ ಟಾಸ್ ಸೋತು ಮೊದಲಿಗೆ ಬ್ಯಾಟಿಂಗ್ ನಡೆಸಿದ ನ್ಯೂಜಿಲೆಂಡ್ ತಂಡದ ಪರವಾಗಿ ಡೆವೋನ್ ಕಾನ್ವೆ ಹಾಗೂ ಡೆರೆಲ್ ಮಿಚೆಲ್ ಭರ್ಜರಿ ಅರ್ಧ ಶತಕ ಸಿಡಿಸಿ ಮಿಂಚಿದ್ದಾರೆ. ಹೀಗಾಗಿ ನಿಗದಿತ 20 ಓವರ್‌ಗಳಲ್ಲಿ ನ್ಯೂಜಿಲೆಂಡ್ ತಂಡ 6 ವಿಕೆಟ ಕಳೆದುಕೊಂಡು 176 ರನ್‌ಗಳನ್ನು ಗಳಿಸಲು ಶಕ್ತವಾಯಿತು. ಬಳಿಕ ಬೌಲಿಂಗ್‌ನಲ್ಲಿ ಕಿವೀಸ್ ತಂಡದ ಪರವಾಗಿ ಮಿಚೆಲ್ ಸ್ಯಾಂಟ್ನರ್, ಮಿಚೆಲ್ ಬ್ರೇಸ್‌ವೆಲ್ ಮತ್ತು ಲೂಕಿ ಫರ್ಗ್ಯೂಸನ್ ತಲಾ 2 ವಿಕೆಟ್ ಪಡೆಯುವ ಮೂಲಕ ಮಿಂಚಿದ್ದಾರೆ.

ಭಾರತಕ್ಕೆ ಸರಣಿಯಲ್ಲಿ ಹಿನ್ನಡೆ
ಈ ಮೂಲಕ ಏಕದಿನ ಸರಣಿಯಲ್ಲಿ ಅನುಭವಿಸಿದ 3-0 ಅಂತರದ ಸೋಲಿನ ಬಳಿಕ ಚುಟುಕು ಮಾದರಿಯಲ್ಲಿ ಕಿವಿಸ್ ಪಡೆ ಭರ್ಜರಿಯಾಗಿ ತಿರುಗಿ ಬೀಳುವಲ್ಲಿ ಯಶಸ್ವಿಯಾಗಿದೆ. ಮೂರು ಪಂದ್ಯಗಳ ಸರಣಿಯಲ್ಲಿ ನ್ಯೂಜಿಲೆಂಡ್ ಸದ್ಯ 1-0 ಅಂತರದಿಂದ ಮುನ್ನಡೆ ಸಾಧಿಸಿದೆ. ಈ ಸರಣಿಯ ಎರಡನೇ ಪಂದ್ಯ ಭಾನುವಾರ ನಡೆಯಲಿದ್ದು ಲಕ್ನೋದಲ್ಲಿ ಈ ಪಂದ್ಯ ಆಯೋಜನೆಯಾಗಲಿದೆ

ಇತ್ತಂಡಗಳ ಆಡುವ ಬಳಗ
ನ್ಯೂಜಿಲೆಂಡ್ ಆಡುವ ಬಳಗ: ಫಿನ್ ಅಲೆನ್, ಡೆವೊನ್ ಕಾನ್ವೇ(ವಿಕೆಟ್ ಕೀಪರ್), ಮಾರ್ಕ್ ಚಾಪ್ಮನ್, ಡೇರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್ (ನಾಯಕ), ಮೈಕೆಲ್ ಬ್ರೇಸ್ವೆಲ್, ಜಾಕೋಬ್ ಡಫಿ, ಇಶ್ ಸೋಧಿ, ಲಾಕಿ ಫರ್ಗುಸನ್, ಬ್ಲೇರ್ ಟಿಕ್ನರ್
ಭಾರತ ಆಡುವ ಬಳಗ: ಇಶಾನ್ ಕಿಶನ್(ವಿಕೆಟ್ ಕೀಪರ್), ಶುಬ್ಮನ್ ಗಿಲ್, ರಾಹುಲ್ ತ್ರಿಪಾಠಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ(ನಾಯಕ), ದೀಪಕ್ ಹೂಡಾ, ವಾಷಿಂಗ್ಟನ್ ಸುಂದರ್, ಶಿವಂ ಮಾವಿ, ಕುಲದೀಪ್ ಯಾದವ್, ಉಮ್ರಾನ್ ಮಲಿಕ್, ಅರ್ಷದೀಪ್ ಸಿಂಗ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications