For Quick Alerts
ALLOW NOTIFICATIONS  
For Daily Alerts
 

ಭಾರತ vs ನ್ಯೂಜಿಲೆಂಡ್, ಕಾನ್ಪುರ ಟೆಸ್ಟ್: 4ನೇ ದಿನದಾಟ, Live score

India vs New Zealand, 1st test Kanpur, day 4 Live score

ಭಾರತ ಹಾಗೂ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯ ಕುತೂಹಲಕಾರಿ ಘಟ್ಟ ತಲುಪಿದೆ. ಮೂರನೇ ದಿನದಾಟದಲ್ಲಿ ಭಾರತ ಮತ್ತೆ ಪಂದ್ಯದ ಮೇಲೆ ಹಿಡಿತ ಸಾಧಿಸುವಲ್ಲಿ ಯಶಸ್ವಿಯಾಗಿದೆ. ಅದರಲ್ಲೂ ಮೂರನೇ ದಿನ ಟೀಮ್ ಇಂಡಿಯಾದ ಬೌಲರ್‌ಗಳು ಕಿವೀಸ್ ದಾಂಡಿಗರ ವಿರುದ್ಧ ನಿಯಂತ್ರಣ ಸಾಧಿಸಿದ್ದು ಟೀಮ್ ಇಂಡಿಯಾ ಮೇಲುಗೈಗೆ ಕಾರಣವಾಗಿದೆ. ಆದರೆ ಮೂರನೇ ದಿನದ ಅಂತ್ಯದಲ್ಲಿ ಟೀಮ್ ಇಂಡಿಯಾ ಬ್ಯಾಟಿಂಗ್ ಆರಂಭಿಸಿದ್ದು ಆರಂಭಿಕ ಆಘಾತ ಅನುಭವಿಸಿದೆ. ಶುಬ್ಮನ್ ಗಿಲ್ ಆರಂಭದಲ್ಲಿಯೇ ವಿಕೆಟ್ ಕಳೆದುಕೊಂಡಿರುವುದು ನಾಲ್ಕನೇ ದಿನದಾಟದ ಮೇಲೆ ಕುತೂಹಲ ಹೆಚ್ಚಿಸಿದೆ.

ಟೀಮ್ ಇಂಡಿಯಾ ಮೊದಲ ಇನ್ನಿಂಗ್ಸ್‌ನಲ್ಲಿ ಶ್ರೇಯಸ್ ಐಯ್ಯರ್ ಶತಕದ ನೆರವಿನಿಂದ 345 ರನ್‌ಗಳನ್ನು ಪೇರಿಸಿತ್ತು. ದಿನಕ್ಕೆ ಪ್ರತಿಯಾಗಿ ಬ್ಯಾಟಿಂಗ್ ನಡೆಸಿದ ನ್ಯೂಜಿಲೆಂಡ್ ಎರಡನೇ ದಿನ ಯಾವುದೇ ಬ್ಯಾಟಿಂಗ್ ಕಳೆದುಕೊಳ್ಳದೆ ಭರ್ಜರಿ ಬ್ಯಾಟಿಂಗ್ ನಡೆಸಿತ್ತು. ನ್ಯೂಜಿಲೆಂಡ್ ತಂಡದ ಆರಂಭಿಕ ಆಟಗಾರರು ತಂಡಕ್ಕೆ 151 ರನ್‌ಗಳ ಜೊತೆಯಾಟವನ್ನು ನೀಡಿದರು. ಕಿವೀಸ್ ಪಡೆಯ ಆರಂಭಿಕ ಆಟಗಾರರಾದ ವಿಲ್ ಯಂಗ್ 89 ರನ್‌ಗಳಿಸಿದರೆ ಟಾಮ್ ಲ್ಯಾಥಮ್ 95 ರನ್‌ಗಳನ್ನು ಗಳಿಸಿ ಶತಕದಂಚಿನಲ್ಲಿ ಎಡವಿ ವಿಕೆಟ್ ಕಳೆದುಕೊಂಡರು.

Live ಸ್ಕೋರ್‌ಕಾರ್ಡ್ ಹೀಗಿದೆ:

1
51919

ಕಿವೀಸ್ ಪಡೆಯ ಆರಂಭಿಕ ಜೋಡಿ ವಿಕೆಟ್ ಕಳೆದುಕೊಂಡ ನಂತರ ಉಳಿದ ಯಾವ ಆಟಗಾರನಿಂದಲೂ ಕೂಡ ದೊಡ್ಡ ಇನ್ನಿಂಗ್ಸ್ ಬಾರಲಿಲ್ಲ. ಇದು ಪ್ರವಾಸಿ ತಂಡಕ್ಕೆ ಹಿನ್ನಡಯುಂಟು ಮಾಡಿತು. ಹೀಗಾಗಿ ನ್ಯೂಜಿಲೆಂಡ್ ತಂಡ ಅಂತಿಮವಾಗಿ 296 ರನ್‌ಗಳಿಗೆ ಆಲೌಟ್ ಆಗುವ ಮೂಲಕ ಮೊದಲ ಇನ್ನಿಂಗ್ಸ್‌ನಲ್ಲಿ 49 ರನ್‌ಗಳ ಹಿನ್ನಡೆ ಅನುಭವಿಸಿತು.

ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಟೆಸ್ಟ್ ಸರಣಿಯ ಮೊದಲ ಪಂದ್ಯದ ನಾಲ್ಕನೇ ದಿನದಾಟ ಅಂತ್ಯವಾಗಿದೆ. ಈ ಹಂತದಲ್ಲಿ ಟೀಮ್ ಇಂಡಿಯಾ ಸುಸ್ಥಿತಿಯಲ್ಲಿದ್ದು ಅಂತಿಮ ದಿನ ಗೆಲುವಿನ ನಿರೀಕ್ಷೆಯಲ್ಲಿದೆ. ಟೀಮ್ ಇಂಡಿಯಾ ಪರವಾಗಿ ಬ್ಯಾಟಿಂಗ್‌ನಲ್ಲಿ ಮತ್ತೊಮ್ಮೆ ಶ್ರೇಯಸ್ ಐಯ್ಯರ್ ಮಿಂಚಿದ್ದಾರೆ. ಜೊತೆಗೆ ವೃದ್ಧಿಮಾನ್ ಸಾಹಾ ಕೂಡ ಅಂತಿಮ ಹಂತದಲ್ಲಿ ನೀಡಿದ ಅಮೋಘ ಪ್ರದರ್ಶನ ತಂಡದ ಮೇಲುಗೈಗೆ ಪ್ರಮುಖ ಕಾರಣವಾಗಿದೆ. ಆರ್ ಅಶ್ವಿನ್ ಕೂಡ ಮಹತ್ವದ ಕೊಡುಗೆ ನೀಡಿದ್ದಾರೆ.

14 ರನ್‌ಗಳಿಗೆ 1 ವಿಕೆಟ್ ಕಳೆದುಕೊಂಡಲ್ಲಿಂದ ನಾಲ್ಕನೇ ದಿನದಾಟವನ್ನು ಆರಂಭಿಸಿದ ಟೀಮ್ ಇಂಡಿಯಾಗೆ ನ್ಯೂಜಿಲೆಂಡ್ ಬೌಲರ್‌ಗಳು ಇಂದು ಕೂಡ ಆಘಾತ ನೀಡುತ್ತಾ ಸಾಗಿದರು. ಭಾರತದ ದಾಂಡಿಗರ ವಿರುದ್ಧ ಕೇನ್ ವಿಲಿಯಮ್ಸನ್ ಪಡೆ ಸಂಪೂರ್ಣ ಮೇಲುಗೈ ಸಾಧಿಸುತ್ತಾ ಸಾಗಿದರು.

ನ್ಯೂಜಿಲೆಂಡ್ ಪರವಾಗಿ ಎರಡನೇ ಇನ್ನಿಂಗ್ಸ್‌ನಲ್ಲಿಯೂ ಅನುಭವಿ ಟಿಮ್ ಸೌಥಿ ಹಾಗೂ ಕೇನ್ ಜೇಮಿಸನ್ ಅಬ್ಬರಿಸಿದರು. ಟೀಮ್ ಇಂಡಿಯಾದ ಪ್ರಮುಖ ಆಟಗಾರರು ಈ ಇಬ್ಬರು ವೇಗಿಗಳ ದಾಳಿಗೆ ನಲುಗಿ ಆಘಾತ ಅನುಭವಿಸಿದರು. ಹೀಗಾಗಿ ಭಾರತ 51 ರನ್‌ಗಳಿಗೆ 5 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿತ್ತು. ಈ ಸಂದರ್ಭದಲ್ಲಿ ಭಾರತ ಕನಿಷ್ಠ ಮೊತ್ತಕ್ಕೆ ಆಲೌಟ್ ಆಗುವ ಭೀತಿಯನ್ನು ಎದುರಿಸಿತ್ತು. ಆದರೆ ಶ್ರೇಯಸ್ ಅಯ್ಯರ್ ಹಾಗೂ ಆರ್ ಅಶ್ವಿನ್ ಜೋಡಿ ಟೀಮ್ ಇಂಡಿಯಾವನ್ನು ಕುಸಿತದಿಂದ ಪಾರು ಮಾಡಿತು

ಟೀಮ್ ಇಂಡಿಯಾ ಆಡುವ ಬಳಗ: ಶುಬ್ಮನ್ ಗಿಲ್, ಮಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ (ನಾಯಕ), ಶ್ರೇಯಸ್ ಅಯ್ಯರ್, ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ರವಿಚಂದ್ರನ್ ಅಶ್ವಿನ್, ಇಶಾಂತ್ ಶರ್ಮಾ, ಉಮೇಶ್ ಯಾದವ್

ಬೆಂಚ್: ಪ್ರಸಿದ್ಧ್ ಕೃಷ್ಣ, ಸೂರ್ಯಕುಮಾರ್ ಯಾದವ್, ಜಯಂತ್ ಯಾದವ್, ಮೊಹಮ್ಮದ್ ಸಿರಾಜ್, ಶ್ರೀಕರ್ ಭರತ್

ನ್ಯೂಜಿಲೆಂಡ್ ಆಡುವ ಬಳಗ: ಟಾಮ್ ಲ್ಯಾಥಮ್, ವಿಲ್ ಯಂಗ್, ಕೇನ್ ವಿಲಿಯಮ್ಸನ್ (ನಾಯಕ), ರಾಸ್ ಟೇಲರ್, ಹೆನ್ರಿ ನಿಕೋಲ್ಸ್, ಟಾಮ್ ಬ್ಲಂಡೆಲ್ (ವಿಕೆಟ್ ಕೀಪರ್), ರಚಿನ್ ರವೀಂದ್ರ, ಕೈಲ್ ಜೇಮಿಸನ್, ಟಿಮ್ ಸೌಥಿ, ಅಜಾಜ್ ಪಟೇಲ್, ವಿಲಿಯಂ ಸೊಮರ್ವಿಲ್ಲೆ
ಬೆಂಚ್: ಮಿಚೆಲ್ ಸ್ಯಾಂಟ್ನರ್, ನೀಲ್ ವ್ಯಾಗ್ನರ್, ಗ್ಲೆನ್ ಫಿಲಿಪ್ಸ್, ಡೇರಿಲ್ ಮಿಚೆಲ್

Story first published: Sunday, November 28, 2021, 17:29 [IST]
Other articles published on Nov 28, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+