ಮೊದಲನೇ ಟೆಸ್ಟ್: ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾರತ-ನ್ಯೂಜಿಲೆಂಡ್ ಜಿದ್ದಾಜಿದ್ದಿ; ಪಂದ್ಯ ಎಷ್ಟು ಗಂಟೆಗೆ, ಯಾವ ಚಾನೆಲ್‌ನಲ್
ಟಾಮ್ ಲಾಥಮ್ ನಾಯಕತ್ವದಲ್ಲಿ ನ್ಯೂಜಿಲೆಂಡ್ ತಂಡ ಮೂರು ಪಂದ್ಯಗಳ ಟೆಸ್ಟ್ ಸರಣಿ ಆಡಲು ಭಾರತಕ್ಕೆ ಪ್ರವಾಸ ಕೈಗೊಂಡಿದೆ. ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 3 ಪಂದ್ಯಗಳ ಟೆಸ್ಟ್ ಸರಣಿಯು ಅಕ್ಟೋಬರ್ 16 ರಿಂದ ನವೆಂಬರ್ 5 ರವರೆಗೆ ನಡೆಯಲಿದೆ.
ಉಭಯ ತಂಡಗಳ ದ್ವಿಪಕ್ಷೀಯ ಟೆಸ್ಟ್ ಸರಣಿ ಆರಂಭಕ್ಕೂ ಮುನ್ನ ಭಾರೀ ಕುತೂಹಲ ಮೂಡಿಸಿದೆ. ಭಾರತೀಯ ಕ್ರಿಕೆಟ್ ಅಭಿಮಾನಿಗಳು ಕೂಡ ಟೆಸ್ಟ್ ಸರಣಿ ನೋಡಿ ಕಣ್ತುಂಬಿಕೊಳ್ಳಲು ಕಾಯುತ್ತಿದ್ದಾರೆ. ಟೆಸ್ಟ್ ಸರಣಿ ಗೆಲುವಿಗಾಗಿ ಉಭಯ ತಂಡಗಳ ನಡುವೆ ಕಠಿಣ ಹೋರಾಟ ನಡೆಯಲಿದೆ.

ಇತ್ತೀಚೆಗೆ ರೋಹಿತ್ ಶರ್ಮಾ ನೇತೃತ್ವದಲ್ಲಿ ಭಾರತ ತಂಡ ಬಾಂಗ್ಲಾದೇಶ ವಿರುದ್ಧ ಟೆಸ್ಟ್ ಸರಣಿ ಗೆದ್ದಿದೆ. ಇತ್ತ ಮಾಜಿ ನಾಯಕ ಟಿಮ್ ಸೌಥಿ ಮುನ್ನಡೆಸಿದ ಕಿವೀಸ್ ಪಡೆಯೂ ಶ್ರೀಲಂಕಾ ವಿರುದ್ಧ ಸರಣಿ ಸೋತು ಮುಖಭಂಗ ಅನುಭವಿಸಿದೆ. ಹೀಗಾಗಿ ಉಭಯ ತಂಡಗಳ ನಡುವೆ ಟೆಸ್ಟ್ ಸರಣಿ ರೋಮಾಂಚನಕಾರಿಯಾಗಲಿದೆ.
ಲೈವ್ ಸ್ಟೀಮಿಂಗ್
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಅಕ್ಟೋಬರ್ 16 ರಿಂದ 20 ರವರೆಗೆ ನಡೆಯಲಿದ್ದು, ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂ ಆತಿಥ್ಯ ವಹಿಸಲಿದೆ. ಪ್ರತಿದಿನ ಬೆಳಗ್ಗೆ 9:30 ಗಂಟೆಗೆ ಶುರುವಾಗುವ ಉಭಯ ತಂಡಗಳ ಮೊದಲ ಟೆಸ್ಟ್ ಪಂದ್ಯದ ನೇರ ಪ್ರಸಾರವನ್ನು ಭಾರತೀಯ ಕ್ರಿಕೆಟ್ ಅಭಿಮಾನಿಗಳು ಸ್ಪೋರ್ಟ್ಸ್18 ನೆಟ್‌ವರ್ಕ್ ಚಾನೆಲ್‌ಗಳಲ್ಲಿ ವೀಕ್ಷಿಸಬಹುದು. ಇದಲ್ಲದೆ, ಜಿಯೋ ಸಿನಿಮಾದಲ್ಲಿಯೂ ಉಚಿತವಾಗಿ ಪಂದ್ಯವನ್ನು ನೋಡಬಹುದು.
ಭಾರತ vs ನ್ಯೂಜಿಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ
1ನೇ ಟೆಸ್ಟ್ ಪಂದ್ಯ: ಅಕ್ಟೋಬರ್ 16 ರಿಂದ 20 ರವರಗೆ- ಬೆಳಿಗ್ಗೆ 9:30 ಗಂಟೆಗೆ- ಬೆಂಗಳೂರು
2ನೇ ಟೆಸ್ಟ್ ಪಂದ್ಯ: ಅಕ್ಟೋಬರ್ 24 ರಿಂದ 28 ರವರಗೆ- ಬೆಳಿಗ್ಗೆ 9:30 ಗಂಟೆಗೆ- ಪುಣೆ
3ನೇ ಟೆಸ್ಟ್ ಪಂದ್ಯ: ನವೆಂಬರ್ 1 ರಿಂದ 5 ರವರಗೆ- ಬೆಳಿಗ್ಗೆ 9:30 ಗಂಟೆಗೆ- ಮುಂಬೈ
ಮುಂದಿನ ವರ್ಷ ನಡೆಯಲಿರುವ 2025ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯವನ್ನು ಆಡಲು ಭಾರತ ತಂಡ ಮುಂಬರುವ 8 ಟೆಸ್ಟ್ ಪಂದ್ಯಗಳಲ್ಲಿ 5 ರಲ್ಲಿ ಗೆಲ್ಲಬೇಕಾಗಿದೆ. ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯನ್ನು ಭಾರತ 3-0 ಅಂತರದಲ್ಲಿ ಗೆದ್ದರೆ, ಇದಾದ ಬಳಿಕ ಕೈಗೊಳ್ಳುವ ಆಸ್ಟ್ರೇಲಿಯ ಪ್ರವಾಸದಲ್ಲಿ ಕಾಂಗರೂ ಪಡೆ ವಿರುದ್ಧ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ ಕನಿಷ್ಠ ಎರಡು ಪಂದ್ಯಗಳನ್ನಾದರೂ ಗೆಲ್ಲಬೇಕಿದೆ.
ಈ ಮೂಲಕ ಟೀಮ್ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ಗೆ ಅರ್ಹತೆ ಪಡೆಯಲಿದೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯವು 2025ರ ಜೂನ್ 11 ರಿಂದ ಜೂನ್ 15 ರವರೆಗೆ ಇಂಗ್ಲೆಂಡ್‌ನ ಲಾರ್ಡ್ಸ್ ಸ್ಟೇಡಿಯಂನಲ್ಲಿ ನಡೆಯಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications