ನ್ಯೂಜಿಲ್ಯಾಂಡ್ vs ಭಾರತ: ಪಂದ್ಯದ ಸಮಯ, ಪ್ರಸಾರ, ತಂಡದ ಮಾಹಿತಿ

ನಾಳೆಯಿಂದ ಟೀಮ್ ಇಂಡಿಯಾ ಮತ್ತು ನ್ಯೂಜಿಲ್ಯಾಂಡ್ ನಡುವೆ ಐದು ಪಂದ್ಯಗಳ ಟಿ20 ಸರಣಿ ಆರಂಭವಾಗುತ್ತಿದೆ. ನ್ಯೂಜಿಲ್ಯಾಂಡ್ ನೆಲದಲ್ಲಿ ಟೀಮ್ ಇಂಡಿಯಾ ಗೆಲುವಿನ ಪತಾಕೆ ಮುಂದುವರಿಸಲು ಕಾಯುತ್ತಿದೆ. ನ್ಯೂಜಿಲ್ಯಾಂಡ್ ನೆಲದಲ್ಲಿ ಈವರೆಗೂ ಟಿ20 ಸರಣಿ ಗೆಲ್ಲದ ಟೀಮ್ ಇಂಡಿಯಾ ಈ ಬಾರಿ ಗೆಲ್ಲಲೇ ಬೇಕೆಂಬ ಹಠತೊಟ್ಟಿದೆ.
ನ್ಯೂಜಿಲ್ಯಾಂಡ್‌ನಲ್ಲಿ ಟೀಮ್ ಇಂಡಿಯಾ ಸುದೀರ್ಘ ಸರಣಿಯಲ್ಲಿ ಪಾಲ್ಗೊಳ್ಳುತ್ತಿದೆ. ಐದು ಪಂದ್ಯಗಳ ಟಿ20 ಸರಣಿ ಮೂರು ಏಕದಿನ ಪಂದ್ಯಗಳ ಸರಣಿ ಮತ್ತು ಎರಡು ಟೆಸ್ಟ್ ಪಂದ್ಯಗಳ ಸರಣಿಯನ್ನಾಡಲು ಎರಡೂ ತಂಡಗಳು ಸಜ್ಜಾಗಿದೆ. ನಾಳಿನ ಟಿ20 ಪಂದ್ಯದ ಮೂಲಕ ಈ ಸರಣಿಗೆ ಚಾಲನೆ ದೊರೆಯಲಿದೆ.
ಐದು ಪಂದ್ಯಗಳ ಟಿ20 ಸರಣಿಯಲ್ಲಿ ಟೀಮ್ ಇಂಡಿಯಾ ಯಾವ ರೀತಿ ಪ್ರದರ್ಶನ ತೋರಲಿದೆ ಎಂಬುದು ಸದ್ಯದ ಕುತೂಹಲ. ಈ ವರೆಗೂ ನ್ಯೂಜಿಲ್ಯಾಂಡ್‌ನಲ್ಲಿ ಟಿ20 ಸರಣಿಯನ್ನು ಗೆಲ್ಲದ ಟೀಮ್ ಇಂಡಿಯಾ ಮತ್ತು ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯನ್ನು 3-0ಅಂತರದಿಂದ ಸೋತು ಒತ್ತಡದಲ್ಲಿರುವ ನ್ಯೂಜಿಲ್ಯಾಂಡ ತಂಡಗಳ ನಡುವಿನ ಮೊದಲ ಪಂದ್ಯದ ಪ್ರಮುಖ ಮಾಹಿತಿಗಳು ಇಲ್ಲಿದೆ ನೋಡಿ:

ಪಂದ್ಯ ನಡೆಯುವ ಸ್ಥಳ ಮತ್ತು ಸಮಯ
ನಾಳೆ ಅಂದರೆ 24 ಜನವರಿಯಂದು ಟೀಮ್ ಇಂಡಿಯಾ ನ್ಯೂಜಿಲ್ಯಾಂಡ್ ವಿರುದ್ಧ ಮೊದಲ ಟಿ20 ಪಂದ್ಯದಲ್ಲಿ ಕಣಕ್ಕಿಳಿಯಲಿದೆ. ಆಕ್ಲಂಡ್ ನಗರದ ಈಡನ್ ಪಾರ್ಕ್‌ನಲ್ಲಿ ಮೊದಲ ಪಂದ್ಯ ಆಯೋಜನೆಯಾಗಲಿದೆ. ಭಾರತೀಯ ಕಾಲಮಾನ ಮಧ್ಯಾಹ್ನ 12.30 ರಂದು ಪಂದ್ಯ ಆರಂಭವಾಗಲಿದೆ.

ನೇರ ಪ್ರಸಾರದ ಮಾಹಿತಿ
ನ್ಯೂಜಿಲ್ಯಾಡ್ ವಿರುದ್ಧದ ಟಿ20 ಸರಣಿಯ ನೇರ ಪ್ರಸಾರ ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್‌ನಲ್ಲಿ ಪ್ರಸಾರವಾಗಲಿದೆ. 7 ಎಸ್.ಡಿ ಮತ್ತು 3ಹೆಚ್.ಡಿ ಚಾನೆಲ್‌ನಲ್ಲಿ ಪ್ರಸಾರವಾಗಲಿದೆ. ಸ್ಟಾರ್ ಸ್ಪೋರ್ಟ್ಸ್ 1, ಸ್ಟಾರ್ ಸ್ಪೋರ್ಟ್ಸ್ ಹಿಂದಿ 1, ಸ್ಟಾರ್ ಸ್ಪೋರ್ಟ್ಸ್ ಕನ್ನಡದಲ್ಲೂ ಪಂದ್ಯ ಪ್ರಸಾರವಾಗಲಿದೆ.
ನ್ಯೂಜಿಲ್ಯಾಂಡ್ ನಾಯಕನ ಬೆನ್ನಿಗೆ ನಿಂತ ಟೀಮ್ ಇಂಡಿಯಾ ನಾಯಕ ಕೊಹ್ಲಿ

ಟೀಮ್ ಇಂಡಿಯಾ ಸ್ಕ್ವಾಡ್
ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪ ನಾಯಕ), ರಿಷಭ್ ಪಂತ್ (ವಿ.ಕೀ), ಜಸ್ಪ್ರೀತ್ ಬುಮ್ರಾ, ಯುಜ್ವೇಂದ್ರ ಚಾಹಲ್, ಶಿವಮ್ ಡ್ಯೂಬ್, ಶ್ರೇಯಸ್ ಅಯ್ಯರ್, ರವೀಂದ್ರ ಜಡೇಜಾ, ಮನೀಶ್ ಪಾಂಡೆ, ಕೆಎಲ್ ರಾಹುಲ್, ನವದೀಪ್ ಸೈನಿ, ವಾಷಿಂಗ್ಟನ್ ಸುಂದರ್ , ಶಾರ್ದುಲ್ ಠಾಕೂರ್, ಸಂಜು ಸ್ಯಾಮ್ಸನ್, ಮತ್ತು ಕುಲದೀಪ್ ಯಾದವ್

ನ್ಯೂಜಿಲ್ಯಾಂಡ್ ಸ್ಕ್ವಾಡ್
ಕೇನ್ ವಿಲಿಯಮ್ಸನ್ (ನಾಯಕ), ಟಿಮ್ ಸೀಫರ್ಟ್ (ವಿ.ಕೀ), ಹಮೀಶ್ ಬೆನೆಟ್, ಕಾಲಿನ್ ಡಿ ಗ್ರ್ಯಾಂಡ್‌ಹೋಮ್, ಮಾರ್ಟಿನ್ ಗುಪ್ಟಿಲ್, ಸ್ಕಾಟ್ ಕುಗ್ಗೆಲೀಜ್ನ್, ಡ್ಯಾರಿಲ್ ಮಿಚೆಲ್, ಕಾಲಿನ್ ಮುನ್ರೊ, ಮಿಚೆಲ್ ಸ್ಯಾಂಟ್ನರ್, ಇಶ್ ಸೋಧಿ, ಟಿಮ್ ಸೌಥಿ, ರಾಸ್ ಟೇಲರ್, ಮತ್ತು ಬ್ಲೇರ್ ಟಿಕ್ನರ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications