'ನಾಯಕನಾಗಿ ತಂಡವನ್ನು ಮುನ್ನಡೆಸುವೆ'; 9 ವರ್ಷಗಳ ಹಿಂದೆ ನಾಯಕತ್ವದ ಬಗ್ಗೆ ರೋಹಿತ್ ಮಾಡಿದ್ದ ಟ್ವೀಟ್ ವೈರಲ್!

ಇತ್ತೀಚೆಗಷ್ಟೇ ಮುಕ್ತಾಯಗೊಂಡ ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ವಿರಾಟ್ ಕೊಹ್ಲಿ ನಾಯಕತ್ವದ ಟೀಂ ಇಂಡಿಯಾ ಹೇಳಿಕೊಳ್ಳುವಂತಹ ಉತ್ತಮ ಪ್ರದರ್ಶನವನ್ನು ನೀಡುವಲ್ಲಿ ವಿಫಲವಾಗಿ ಸೆಮಿಫೈನಲ್ ಪ್ರವೇಶಿಸಲಾಗದೇ ಲೀಗ್ ಹಂತದಲ್ಲಿಯೇ ಟೂರ್ನಿಯಿಂದ ಹೊರಬಿತ್ತು. ಹೌದು, ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಸೂಪರ್ 12 ಹಂತದಲ್ಲಿಯೇ ತನ್ನ ಮೊದಲೆರಡು ಪಂದ್ಯಗಳಲ್ಲಿ ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ವಿರುದ್ಧ ಸೋತ ಟೀಂ ಇಂಡಿಯಾ ಸೆಮಿಫೈನಲ್ ಪ್ರವೇಶಿಸುವ ಅರ್ಹತೆಯನ್ನು ಕಳೆದುಕೊಂಡು ಲೀಗ್ ಹಂತದಲ್ಲಿಯೇ ಹೊರಬಿತ್ತು.

ಹೀಗೆ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಕಳಪೆ ಪ್ರದರ್ಶನ ನೀಡಿದ ಟೀಮ್ ಇಂಡಿಯಾ ವಿರಾಟ್ ಕೊಹ್ಲಿ ನಾಯಕತ್ವದಡಿ ಆಡಿದ ಅಂತಿಮ ಟಿ ಟ್ವೆಂಟಿ ಟೂರ್ನಿ ಕೂಡ ಇದಾಗಿತ್ತು. ಹೌದು, ವಿರಾಟ್ ಕೊಹ್ಲಿ ಈ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಆರಂಭವಾಗುವ ಮುನ್ನವೇ ಘೋಷಣೆಯೊಂದನ್ನು ಹೊರಡಿಸುವುದರ ಮೂಲಕ ತಾನು ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಮುಗಿದ ಬಳಿಕ ಭಾರತ ಟಿ ಟ್ವೆಂಟಿ ತಂಡದ ನಾಯಕತ್ವದಿಂದ ಕೆಳಗಿಳಿಯಲಿದ್ದೇನೆ ಎಂಬ ಮಾಹಿತಿಯನ್ನು ಹಂಚಿಕೊಂಡಿದ್ದರು. ಅದರಂತೆಯೇ ಇದೀಗ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಮುಗಿದಿದ್ದು ಭಾರತ ಟಿ ಟ್ವೆಂಟಿ ತಂಡದ ನಾಯಕತ್ವದಿಂದ ವಿರಾಟ್ ಕೊಹ್ಲಿ ಕೆಳಗಿಳಿದಿದ್ದಾರೆ ಮತ್ತು ಆ ಜಾಗಕ್ಕೆ ನೂತನ ನಾಯಕನಾಗಿ ಈ ಹಿಂದೆ ಉಪನಾಯಕನಾಗಿ ಕಾರ್ಯನಿರ್ವಹಿಸುತ್ತಿದ್ದ ರೋಹಿತ್ ಶರ್ಮಾ ಆಯ್ಕೆಯಾಗಿದ್ದಾರೆ.

ಐಸಿಸಿ ಸರಣಿಶ್ರೇಷ್ಠ ಪ್ರಶಸ್ತಿಯನ್ನು ಬಾಬರ್ ಅಜಮ್ ಬದಲು ವಾರ್ನರ್‌ಗೆ ನೀಡಿದ್ದು ಈ ಬಲವಾದ ಕಾರಣಕ್ಕೆ!ಐಸಿಸಿ ಸರಣಿಶ್ರೇಷ್ಠ ಪ್ರಶಸ್ತಿಯನ್ನು ಬಾಬರ್ ಅಜಮ್ ಬದಲು ವಾರ್ನರ್‌ಗೆ ನೀಡಿದ್ದು ಈ ಬಲವಾದ ಕಾರಣಕ್ಕೆ!

ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಮುಕ್ತಾಯದ ಬೆನ್ನಲ್ಲೇ ಆರಂಭವಾಗುತ್ತಿರುವ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ 3 ಪಂದ್ಯಗಳ ಟಿ ಟ್ವೆಂಟಿ ಸರಣಿಯಲ್ಲಿ ರೋಹಿತ್ ಶರ್ಮಾ ಟೀಮ್ ಇಂಡಿಯಾವನ್ನು ಮುನ್ನಡೆಸಲಿದ್ದಾರೆ. ಈ ಸರಣಿಯ ಮೊದಲನೇ ಪಂದ್ಯ ನವೆಂಬರ್‌ 17ರ ಬುಧವಾರದಂದು ಜೈಪುರದ ಸವಾಯ್ ಮಾನ್ ಸಿಂಗ್ ಸ್ಟೇಡಿಯಂನಲ್ಲಿ ನಡೆಯಲಿದೆ. ಅತ್ತ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನವನ್ನು ನೀಡುವುದರ ಮೂಲಕ ಫೈನಲ್ ಹಂತದವರೆಗೂ ತಲುಪಿದ್ದ ಕೇನ್ ವಿಲಿಯಮ್ಸನ್ ನಾಯಕತ್ವದ ನ್ಯೂಜಿಲೆಂಡ್ ತಂಡ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋಲುವುದರ ಮೂಲಕ ತನ್ನ ಚೊಚ್ಚಲ ವಿಶ್ವಕಪ್ ಟ್ರೋಫಿಯನ್ನು ಎತ್ತಿ ಹಿಡಿಯುವ ಕನಸನ್ನು ನನಸು ಮಾಡಿಕೊಳ್ಳಲಾಗದೆ ವಿಫಲವಾಗಿದೆ. ಹೀಗೆ ಟಿ ಟ್ವೆಂಟಿ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಎಡವಿದ ನ್ಯೂಜಿಲೆಂಡ್ ಭಾರತ ಪ್ರವಾಸವನ್ನು ಕೈಗೊಂಡಿದ್ದು ಟೀಮ್ ಇಂಡಿಯಾ ವಿರುದ್ಧ 3 ಪಂದ್ಯಗಳ ಟಿ ಟ್ವೆಂಟಿ ಸರಣಿ ಮತ್ತು 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಸೆಣಸಾಟ ನಡೆಸಲಿದೆ.

ಇನ್ನು ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ಜೈಪುರದಲ್ಲಿ ನಡೆಯಲಿರುವ ಮೊದಲನೇ ಟಿ ಟ್ವೆಂಟಿ ಪಂದ್ಯ ರೋಹಿತ್ ಶರ್ಮಾ ಅಧಿಕೃತ ನಾಯಕನಾಗಿ ಭಾರತ ಟಿ ಟ್ವೆಂಟಿ ತಂಡವನ್ನು ಮುನ್ನಡೆಸಲಿರುವ ಮೊದಲನೇ ಪಂದ್ಯವಾಗಿದೆ. ಹೀಗೆ ರೋಹಿತ್ ಶರ್ಮಾ ಈ ಪಂದ್ಯದಲ್ಲಿ ಭಾರತ ಟಿ ಟ್ವೆಂಟಿ ತಂಡದ ನಾಯಕತ್ವವನ್ನು ವಹಿಸಿಕೊಳ್ಳುವ ಮುನ್ನ 9 ವರ್ಷಗಳ ಹಿಂದೆ ರೋಹಿತ್ ಶರ್ಮಾ ಮಾಡಿದ್ದ ಟ್ವೀಟ್ ವೈರಲ್ ಆಗಿದೆ. ರೋಹಿತ್ ಶರ್ಮಾ ಅಂದು ಮಾಡಿದ್ದ ಟ್ವೀಟ್ ಮತ್ತು ಇಂದು ನಡೆಯುತ್ತಿರುವ ವಿದ್ಯಮಾನಗಳಿಗೆ ಸಾಕಷ್ಟು ಹೋಲಿಕೆಗಳಿದ್ದು ವೈರಲ್ ಆಗುವುದಕ್ಕೆ ಕಾರಣವಾಗಿದೆ.

2012ರ ನವೆಂಬರ್‌ 7ರಂದು ನಾಯಕತ್ವದ ಕುರಿತಾಗಿ ಟ್ವೀಟ್ ಮಾಡಿದ್ದ ರೋಹಿತ್ ಶರ್ಮಾ "ಜೈಪುರಕ್ಕೆ ಬಂದು ಇಳಿದಿದ್ದೇನೆ ಹಾಗೂ ಈ ಬಾರಿ ನಾಯಕತ್ವವನ್ನು ನಿಭಾಯಿಸಲಿದ್ದೇನೆ. ಹೆಚ್ಚಿನ ಜವಾಬ್ದಾರಿಯನ್ನು ನಿಭಾಯಿಸಲು ಸಿದ್ಧನಿದ್ದೇನೆ" ಎಂದು ಬರೆದುಕೊಂಡಿದ್ದರು. ಹೀಗೆ ರೋಹಿತ್ ಶರ್ಮಾ ಅಂದು ಟ್ವೀಟ್ ಮಾಡಲು ಕಾರಣ ಆ ದಿನದಂದು ರೋಹಿತ್ ಶರ್ಮಾ ರಣಜಿ ಟ್ರೋಫಿಯಲ್ಲಿ ಮುಂಬೈ ತಂಡವನ್ನು ನಾಯಕನಾಗಿ ಮುನ್ನಡೆಸುತ್ತಿದ್ದರು. ಮುಂಬೈ ರಣಜಿ ತಂಡದ ನಾಯಕನಾಗಿ ನೇಮಕಗೊಂಡ ನಂತರ ತಮ್ಮ ಮೊದಲನೇ ಪಂದ್ಯವನ್ನು ಇದೇ ಜೈಪುರದಲ್ಲಿ ರೋಹಿತ್ ಶರ್ಮಾ ಆಡಿದ್ದರು.

ಭಾರತ vs ನ್ಯೂಜಿಲೆಂಡ್‌ ಟಿ20: 2-1 ಅಂತರದಲ್ಲಿ ಸರಣಿ ಗೆಲ್ಲಲಿರುವ ತಂಡವನ್ನು ಊಹಿಸಿದ ಹರ್ಭಜನ್ ಸಿಂಗ್ಭಾರತ vs ನ್ಯೂಜಿಲೆಂಡ್‌ ಟಿ20: 2-1 ಅಂತರದಲ್ಲಿ ಸರಣಿ ಗೆಲ್ಲಲಿರುವ ತಂಡವನ್ನು ಊಹಿಸಿದ ಹರ್ಭಜನ್ ಸಿಂಗ್

ಅಂದು ಮುಂಬೈ ರಣಜಿ ತಂಡದ ನಾಯಕನಾಗಿ ಜೈಪುರದಲ್ಲಿ ಮೊದಲ ಪಂದ್ಯವನ್ನು ಆಡಿದ್ದ ರೋಹಿತ್ ಶರ್ಮಾ ಇದೀಗ ಭಾರತ ಟಿ ಟ್ವೆಂಟಿ ತಂಡದ ನಾಯಕನಾಗಿ ಆಯ್ಕೆಯಾದ ನಂತರ ತಮ್ಮ ಮೊದಲ ಪಂದ್ಯವನ್ನು ಕೂಡ ಇದೆ ಜೈಪುರದಲ್ಲಿಯೇ ಆಡುತ್ತಿದ್ದಾರೆ. ಹೀಗಾಗಿಯೇ ನಾಯಕತ್ವಕ್ಕೆ ಸಂಬಂಧಿಸಿದಂತೆ ಜೈಪುರವನ್ನು ಉಲ್ಲೇಖಿಸಿ ರೋಹಿತ್ ಶರ್ಮಾ ಅಂದು ಮಾಡಿದ್ದ ಟ್ವೀಟ್ ಈಗ ವೈರಲ್ ಆಗಿದೆ.

Rohit Sharma 9 ವರ್ಷಗಳ ಮುಂಚೆಯೇ ಈ ಬಗ್ಗೆ ಹೇಳಿದ್ದರು | Oneindia Kannada

For Quick Alerts
ALLOW NOTIFICATIONS
For Daily Alerts
Story first published: Wednesday, November 17, 2021, 12:18 [IST]
Other articles published on Nov 17, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X