ಭಾರತ vs ಕೀವಿಸ್: ಗೆಲ್ಲಲೇಬೇಕಾದ ಪಂದ್ಯದಲ್ಲಿ ಯಾರೆಲ್ಲಾ ಕಣಕ್ಕಿಳಿಯಲಿದ್ದಾರೆ?

ಟೀಮ್ ಇಂಡಿಯಾ ಮೊದಲ ಏಕದಿನ ಪಂದ್ಯದಲ್ಲಿ ನ್ಯೂಜಿಲೆಂಡ್‌ಗೆ ಶರಣಾಗಿದೆ. ಹೀಗಾಗಿ ಸರಣಿಯಲ್ಲಿ ಮುಂದಿನ ಎರಡೂ ಪಂದ್ಯಗಳನ್ನು ಗೆಲ್ಲಲೇ ಬೇಕಾಗಿದೆ. ಹೀಗಾಗಿ ಒತ್ತಡದಲ್ಲಿರುವ ಟೀಮ್ ಇಂಡಿಯಾ ಸರಣಿಯನ್ನು ಉಳಿಸಿಕೊಳ್ಳಲು ಹರಸಾಹಸ ಪಡುತ್ತಿದೆ.
ಟಿ20 ಸರಣಿಯಲ್ಲಿ ಕ್ಲೀನ್ ಸ್ವೀಪ್ ಮಾಡಿರುವ ಟೀಮ್ ಇಂಡಿಯಾ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ 347ರನ್‌ಗಳಿಸಿದರೂ ಆ ಮೊತ್ತವನ್ನು ರಕ್ಷಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಹೀಗಾಗಿ ಟೀಮ್ ಇಂಡಿಯಾ ಯಾವ ರೀತಿಯ ರಣತಂತ್ರ ಹೂಡಲಿದೆ ಎಂಬುದು ಕುತೂಹಲ ಮೂಡಿಸಿದೆ.
ಎರಡನೇ ಪಂದ್ಯದ ಆತಿಥ್ಯವನ್ನು ಆಕ್ಲಂಡ್ ಅಂಗಳ ವಹಿಸಿಕೊಳ್ಳಲಿದೆ. ಟೀಮ್ ಇಂಡಿಯಾ ಪಾಲಿಗೆ ನಿರ್ಣಾಯಕವಾಗಿರುವ ಈ ಪಂದ್ಯದಲ್ಲಿ ಯಾರೆಲ್ಲಾ ಕಣಕ್ಕಿಳಿಯಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ. ಹಾಗಿದ್ದರೆ ನಾಳಿನ ಪಂದ್ಯದಲ್ಲಿ ಯಾರೆಲ್ಲಾ ಕಣದಲ್ಲಿರಬಹುದು ಬನ್ನಿ ನೋಡೋಣ.

ಆರಂಭಿಕ ಆಟಗಾರರು:
ಮೊದಲ ಪಂದ್ಯದಲ್ಲಿ ಪದಾರ್ಪಣಾ ಪಂದ್ಯವನ್ನಾಡಿದ ಇಬ್ಬರು ಆಟಗಾರರಾದ ಮಯಾಂಕ್ ಅಗರ್ವಾಲ್ ಮತ್ತು ಪೃಥ್ವಿ ಶಾ ನಾಳಿನ ಪಂದ್ಯದಲ್ಲೂ ಮುಂದುವರಿಯಲಿದ್ದಾರೆ. ಮೊದಲ ಪಂದ್ಯದಲ್ಲಿ ಅರ್ಧ ಶತಕದ ಜೊತೆಯಾಟವನ್ನು ನೀಡಿದ್ದ ಈ ಆಟಗಾರರಿಗೆ ಮತ್ತೆ ಮಿಂಚಲು ಅವಕಾಶ ದೊರೆಯುವುದು ಬಹುತೇಕ ಖಚಿತ.

ಮಧ್ಯಮ ಕ್ರಮಾಂಕ:
ನಾಯಕ ವಿರಾಟ್ ಕೊಹ್ಲಿ ಎಂದಿನಂತೆಯೇ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗಿಳಿಯಲಿದ್ದಾರೆ. ನಾಲ್ಕನೇ ಕ್ರಮಾಂಕದಲ್ಲಿ ಶ್ರೇಯಸ್ ಐಯ್ಯರ್ ಫಿಕ್ಸ್ ಆಗಿದ್ದಾರೆ. ಐದನೇ ಸ್ಥಾನದಲ್ಲಿ ಕೆ.ಎಲ್ ರಾಹುಲ್ ಆಡುವುದು ಪಕ್ಕಾ. ಆರನೇ ಕ್ರಮಾಂಕದಲ್ಲಿ ಕೇದಾರ್ ಜಾಧನ್ ಆಡುವ ಸಾಧ್ಯತೆ ಹೆಚ್ಚಿದೆ. ಮನೀಶ್ ಪಾಂಡೆಗೆ ಅವಕಾಶ ನೀಡುವ ಸಾಧ್ಯತೆಯೂ ಇದೆ.

ಆಲ್‌ರೌಂಡರ್:
ಆಲ್‌ರೌಂಡರ್ ಆಗಿ ರವೀಂದ್ರ ಜಡೇಜಾ ಅವರೇ ಕಣಕ್ಕಿಳಿಯಲಿದ್ದಾರೆ. ಟಿ20 ಪಂದ್ಯದಲ್ಲಿ ಆಡುವ ಅವಕಾಶ ಪಡೆದುಕೊಳ್ಳದ ರವೀಂದ್ರ ಜಡೇಜಾ ಏಕದಿನ ಸರಣಿಯಲ್ಲಿ ಅವಕಾಶವನ್ನು ಪಡೆದುಕೊಂಡಿದ್ದಾರೆ.

ಬೌಲಿಂಗ್ ವಿಭಾಗ:
ಸ್ಪಿನ್ನರ್‌ಗಳಲ್ಲಿ ನಾಳಿನ ಪಂದ್ಯದಲ್ಲಿ ಕುಲ್ದೀಪ್ ಯಾದವ್ ಆಡುವ ಅವಕಾಶವನ್ನು ಪಡೆದುಕೊಳ್ಳುವ ಸಾಧ್ಯತೆ ಹೆಚ್ಚಿದೆ. ವೇಗಿಗಳಾಗಿ ಶಾರ್ದೂಲ್ ಠಾಕೂರ್ ಅನುಭವಿ ಬೌಲರ್‌ಗಳಾದ ಜಸ್ಪ್ರೀತ್ ಬೂಮ್ರಾ ಮತ್ತು ಮೊಹಮ್ಮದ್ ಶಮಿ ನಾಳಿನ ಪಂದ್ಯದಲ್ಲೂ ಕಣಕ್ಕಿಳಿಯುವುದು ಪಕ್ಕಾ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications