ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ vs ನ್ಯೂಜಿಲೆಂಡ್ 2ನೇ ಏಕದಿನ ಪಂದ್ಯ: ಪಿಚ್ ರಿಪೋರ್ಟ್, ಸಂಭಾವ್ಯ ಆಡುವ ಬಳಗ, ನೇರಪ್ರಸಾರದ ಮಾಹಿತಿ

India vs New Zealand 2ndt ODI Match probable xi, match time, pitch report, Raipur weather forecast

ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವಿನ ಏಕದಿನ ಸರಣಿಯ ಎರಡನೇ ಪಂದ್ಯ ಜನವರಿ 21 ಶನಿವಾರದಂದು ನಡೆಯಲಿದೆ. ಮೊದಲ ಪಂದ್ಯದಲ್ಲಿ ಬೃಹತ್ ಮೊತ್ತಗಳಿಸಿದ ಹೊರತಾಗಿಯೂ ನ್ಯೂಜಿಲೆಂಡ್ ನೀಡಿದ ಅದ್ಭುತ ಪೈಪೋಟಿಯ ಕಾರಣದಿಂದಾಗಿ ಪಂದ್ಯ ಕೊನೆಯ ಕ್ಷಣದವರೆಗೂ ರೋಚಕತೆ ಸೃಷ್ಟಿಸಿಕೊಂಡಿತ್ತು. ಆದರೆ ಅಂತಿಮವಾಗಿ ರೋಹಿತ್ ಪಡೆ ಗೆಲುವು ಸಾಧಿಸಿದ್ದು ಸರಣಿಯಲ್ಲಿ ಮುನ್ನಡೆ ಸಾಧಿಸಿದೆ. ಇದೀಗ ಎರಡನೇ ಪಂದ್ಯ ರಾಯ್‌ಪುರದಲ್ಲಿ ನಡೆಯಲಿದ್ದು ಶಾಹೀದ್ ವೀರ್‌ನಾರಾಯಣ್ ಸಿಂಗ್ ಅಂತಾರಾಷ್ಟ್ರೀಯ ಸ್ಟೇಡಿಯಂ ಪಂದ್ಯಕ್ಕೆ ಸಜ್ಜಾಗಿದೆ.

ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಪರವಾಗಿ ಶುಬ್ಮನ್ ಗಿಲ್ ಅಮೋಘ ಪ್ರದರ್ಶನ ನೀಡಿದ್ದು ದ್ವಿಶತಕದ ಸಾಧನೆ ಮಾಡಿದ್ದಾರೆ. ಹೀಗಾಗಿ ಟೀಮ್ ಇಂಡಿಯಾ ಈ ಪಂದ್ಯದಲ್ಲಿ 359 ರನ್‌ಗಳ ಬೃಹತ್ ಗುರಿ ನೀಡಿತ್ತು. ಇದನ್ನು ಬೆನ್ನಟ್ಟಿದ ಕಿವೀಸ್ ಪಡೆಗೆ ಕೆಳ ಕ್ರಮಾಂಕದ ಆಟಗಾರರಾದ ಬ್ರೆಸ್‌ವೆಲ್ ಹಾಗೂ ಸ್ಯಾಂಟ್ನರ್ ಅದ್ಭುತ ತಿರುಗೇಟು ನೀಡುವ ಮೂಲಕ ಭಾರತಕ್ಕೆ ಸೋಲಿನ ಭೀತಿಯನ್ನುಂಟು ಮಾಡಿದ್ದರು. ಆದರೆ ಅಂತಿಮವಾಗಿ ಭಾರತ ತಂಡ 12 ರನ್‌ಗಳ ಅಂತರದಿಂದ ಗೆಲುವಿನ ನಗೆ ಬೀರುವಲ್ಲಿ ಯಶಸ್ವಿಯಾಗಿತ್ತು.

Ranji Trophy: 43 ವರ್ಷಗಳ ನಂತರ ಮೊದಲ ಬಾರಿಗೆ ಮುಂಬೈ ಸೋಲಿಸಿ ಇತಿಹಾಸ ನಿರ್ಮಿಸಿದ ದೆಹಲಿ!Ranji Trophy: 43 ವರ್ಷಗಳ ನಂತರ ಮೊದಲ ಬಾರಿಗೆ ಮುಂಬೈ ಸೋಲಿಸಿ ಇತಿಹಾಸ ನಿರ್ಮಿಸಿದ ದೆಹಲಿ!

ಇದೀಗ ಟೀಮ್ ಇಂಡಿಯಾ ಹಾಗೂ ನ್ಯೂಜಿಲೆಂಡ್ ತಂಡಗಳು ಈ ಸರಣಿಯ ಎರಡನೇ ಪಂದ್ಯದಲ್ಲಿ ಕಣಕ್ಕಿಳಿಯಲು ಸಿದ್ಧವಾಗಿದೆ. ಈ ಪಂದ್ಯದ ಕೆಲ ಪ್ರಮುಖ ಮಾಹಿತಿಗಳಿ ಇಲ್ಲಿದೆ. ಮುಂದೆ ಓದಿ..

ಪಂದ್ಯದ ದಿನಾಂಕ ಸಮಯ ಹಾಗೂ ನೇರಪ್ರಸಾರದ ಮಾಹಿತಿ

ಪಂದ್ಯದ ದಿನಾಂಕ ಸಮಯ ಹಾಗೂ ನೇರಪ್ರಸಾರದ ಮಾಹಿತಿ

ಭಾರತ ಹಾಗೂ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯ ಎರಡನೇ ಪಂದ್ಯ ಜನವರಿ 21 ಶನಿವಾರ ನಡೆಯಲಿದೆ. ಮಧ್ಯಾಹ್ನ 1:30ಕ್ಕೆ ಪಂದ್ಯ ಆರಂಭವಾಗಲಿದ್ದು 1 ಗಂಟೆಗೆ ಪಂದ್ಯದ ಟಾಸ್ ಪ್ರಕ್ರಿಯೆ ನಡೆಯಲಿದೆ. ಸ್ಟಾರ್‌ ಸ್ಪೋರ್ಟ್ಸ್ ವಾಹಿನಿಯಲ್ಲಿ ಪಂದ್ಯದ ನೇರಪ್ರಸಾರವಿರಲಿದ್ದು ಹಾಟ್‌ಸ್ಟಾರ್ ಲೈವ್‌ಸ್ಟ್ರೀಮಿಂಗ್ ಮಾಡಲಿದೆ.

ಪಿಚ್ ರಿಪೋರ್ಟ್ ಹಾಗೂ ಹವಾಮಾನ ವರದಿ

ಪಿಚ್ ರಿಪೋರ್ಟ್ ಹಾಗೂ ಹವಾಮಾನ ವರದಿ

ಪಿಚ್ ರಿಪೋರ್ಟ್: ಭಾರತದ ಬಹುತೇಕ ಪಿಚ್‌ಗಳಂತೆಯೇ ರಾಯ್‌ಪುರದ ಪಿಚ್‌ ಕೂಡ ಬ್ಯಾಟ್ಸ್‌ಮನ್‌ಗಳ ಪಾಲಿಗೆ ಸ್ವರ್ಗ ಎನಿಸಿಕೊಂಡಿದೆ. ಹೀಗಾಗಿ ಈ ಪಂದ್ಯದಲ್ಲಿ ಕೂಡ ರನ್ ಮಳೆ ಹರಿಯುವ ನಿರೀಕ್ಷೆಯಿದೆ. ಇನ್ನು ಬೌಲಿಂಗ್ ವಿಚಾರವಾಗಿ ಈ ಪಿಚ್ ವೇಗಿಗಳಿಗಿಂತ ಹೆಚ್ಚಾಗಿ ಇಲ್ಲಿ ಸ್ಪಿನ್ನರ್‌ಗಳು ಯಶಸ್ಸು ಗಳಿಸುವ ಸಾಧ್ಯತೆಯಿದೆ. ಇನ್ನು ಟಾಸ್ ಗೆದ್ದ ನಾಯಕ ಇಲ್ಲಿ ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಳ್ಳುವ ಸಾರ್ಧಯತೆ ಹೆಚ್ಚಿದೆ.

ಹವಾಮಾನ ವರದಿ: ಇನ್ನು ರಾಯ್‌ಪುರದಲ್ಲಿ ಪಂದ್ಯದ ದಿನವಾದ ಶನಿವಾರವಾರದ ಹವಾಮಾನ ಮಧ್ಯಾಹ್ನದ ವೇಳೆಗೆ ಬಿಸಿಯಾಗಿರಲಿದೆ. ಆದರೆ ಸಂಜೆಯಾಗುತ್ತಿದ್ದಂತೆ ತಂಪಿನಿಂದ ಕೂಡಿರಲಿದ್ದು ಮಳೆಯ ಆತಂಕವಿಲ್ಲ. ಹೀಗಾಗಿ ಯಾವುದೇ ಅಡ್ಡಿಯಿಲ್ಲದೆ ಪಂದ್ಯ ನಡೆಯುವುದನ್ನು ನಿರೀಕ್ಷಿಸಬಹುದು.

WFI Controversy: ಬ್ರಿಜ್ ಭೂಷಣ್ ಶರಣ್ ಸಿಂಗ್ ರಾಜೀನಾಮೆಗೆ 24 ಗಂಟೆಗಳ ಗಡುವು ನೀಡಿದ ಕ್ರೀಡಾ ಸಚಿವಾಲಯ

ಸಂಭಾವ್ಯ ಆಡುವ ಬಳಗ

ಸಂಭಾವ್ಯ ಆಡುವ ಬಳಗ

ಟೀಮ್ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್.

ನ್ಯೂಜಿಲೆಂಡ್: ಫಿನ್ ಅಲೆನ್, ಡೆವೊನ್ ಕಾನ್ವೇ, ಹೆನ್ರಿ ನಿಕೋಲ್ಸ್, ಡೇರಿಲ್ ಮಿಚೆಲ್, ಟಾಮ್ ಲ್ಯಾಥಮ್ (ನಾಯಕ & ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಮೈಕೆಲ್ ಬ್ರೇಸ್‌ವೆಲ್, ಮಿಚೆಲ್ ಸ್ಯಾಂಟ್ನರ್, ಹೆನ್ರಿ ಶಿಪ್ಲಿ, ಲಾಕಿ ಫರ್ಗುಸನ್, ಬ್ಲೇರ್ ಟಿಕ್ನರ್.

Story first published: Friday, January 20, 2023, 15:32 [IST]
Other articles published on Jan 20, 2023
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X