ಮತ್ತೊಂದು ಭರ್ಜರಿ ಬೌಲಿಂಗ್ ಪ್ರದರ್ಶನ ನೀಡಿದ ಅಶ್ವಿನ್; ನೆಟ್ಟಿಗರಿಂದ ಪ್ರಶಂಸೆ

ಭಾರತ ಹಾಗೂ ನ್ಯೂಜಿಲೆಂಡ್ ತಂಡದ ನಡುವಿನ ಟಿ20 ಸರಣಿಯಲ್ಲಿ ಭಾರತ ಸರಣಿಯನ್ನು ಗೆದ್ದುಕೊಂಡಿದೆ. ಎರಡನೇ ಟಿ20 ಪಂದ್ಯದಲ;್ಲಿಯೂ ಭಾರತ ಸರ್ವಾಂಗೀಣ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಗಿದ್ದು ಅರ್ಹ ಗೆಲುವು ಸಾಧಿಸಿದೆ. ಈ ಗೆಲುವಿನೊಂದಿಗೆ ರೋಹಿತ್ ಶರ್ಮಾ ಪಡೆ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಮೊದಲ ಎರಡು ಪಂದ್ಯಗಳನ್ನು ಗೆದ್ದುಕೊಂಡಿದ್ದು ಇನ್ನೂ ಒಂದು ಪಂದ್ಯ ಇರುವಂತೆಯೇ ಸರಣಿಯನ್ನು ತನ್ನ ತೆಕ್ಕೆಗೆ ಹಾಕಿಕೊಂಡಿದೆ.

ಇನ್ನು ನ್ಯೂಜಿಲೆಂಡ್ ವಿರುದ್ಧದ ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಬ್ಯಾಟಿಂಗ್ ಹಾಗೂ ಬೌಲಿಂಗ್ ಪ್ರದರ್ಶನ ಅದ್ಭುತವಾಗಿತ್ತು. ಬೌಲಿಂಗ್ ಚೊಚ್ಚಲ ಅಂತಾರಾಷ್ಟ್ರೀಯ ಪಂದ್ಯವನ್ನಾಡಿದ ಹರ್ಷಲ್ ಪಟೇಲ್ 2 ವಿಕೆಟ್ ಕೀಳುವ ಮೂಲಕ ಅಂತಾರಾಷ್ಟ್ರೀಯ ವೇದಿಕೆಯಲ್ಲಿಯೂ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ. ಇದರ ಜೊತೆಗೆ ಅನುಭವಿ ಆರ್ ಅಶ್ವಿನ್ ನಡೆಸಿದ ಬೌಲಿಂಗ್ ದಾಳಿಗೆ ಎದುರಾಳಿ ತಂಡದ ದಾಂಡಿಗರು ರನ್‌ಗಳಿಸಲು ಅಕ್ಷರಶಃ ಪರದಾಡಿದರು. ಆರ್ ಅಶ್ವಿನ್ ಬೌಲಿಂಗ್ ದಾಳಿಯ ಬಗ್ಗೆ ನೆಟ್ಟಿಗರಿಂದ ಸಾಕಷ್ಟು ಪ್ರಶಂಸೆಗಳು ವ್ಯಕ್ತವಾಗಿದೆ.

ಅಬುಧಾಬಿ ಟಿ10 ಲೀಗ್ 2021: ವೇಳಾಪಟ್ಟಿ, ತಂಡಗಳು, ಸ್ಟಾರ್‌ ಪ್ಲೇಯರ್ಸ್ಅಬುಧಾಬಿ ಟಿ10 ಲೀಗ್ 2021: ವೇಳಾಪಟ್ಟಿ, ತಂಡಗಳು, ಸ್ಟಾರ್‌ ಪ್ಲೇಯರ್ಸ್

ಸುದೀರ್ಘ ಕಾಲದಿಂದ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಿಂದ ದೂರವಿದ್ದ ಆರ್ ಅಶ್ವಿನ್ ಕಳೆದ ವಿಶ್ವಕಪ್‌ನ ತಂಡದಲ್ಲಿ ಅವಕಾಶವನ್ನು ಪಡೆದುಕೊಂಡಿದ್ದರು. ಅಫ್ಘಾನಿಸ್ತಾನದ ವಿರುದ್ಧದ ಪಂದ್ಯದ ನಂತರ ಆಡುವ ಬಳಗದಲ್ಲಿ ಕಾಣಿಸಿಕೊಂಡ ಆರ್ ಅಶ್ವಿನ್ ಸತತವಾಗಿ ಅದ್ಭುತ ಪ್ರದರ್ಶನ ನೀಡುತ್ತಾ ಬಂದಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯದಲ್ಲಿಯೂ ಮಿಂಚುಹರಿಸಿದ್ದ ಆರ್ ಅಶ್ವಿನ್ ಇದೀಗ ಎರಡನೇ ಪಂದ್ಯದಲ್ಲಿಯೂ ಅದೇ ಪ್ರದರ್ಶನ ನೀಡಿದ್ದಾರೆ.

ರಾಂಚಿಯಲ್ಲಿ ನಡೆದ ಈ ಪಂದ್ಯದಲ್ಲಿ ಆರ್ ಅಶ್ವಿನ್ ನಾಲ್ಕು ಓವರ್‌ಗಳ ಬೌಲಿಂಗ್‌ನಲ್ಲಿ ಕೇವಲ 19 ರನ್ ಮಾತ್ರವೇ ನೀಡಿದ್ದಾರೆ. ಒಂದು ವಿಕೆಟ್ ಕೂಡ ತಮ್ಮದಾಗಿಸಿಕೊಂಡಿದ್ದಾರೆ ಆರ್ ಅಶ್ವಿನ್. ಆರ್ ಅಶ್ವಿನ್ ಅವರ ಈ ಬೌಲಿಂಗ್ ದಾಳಿಗೆ ಅಭಿಮಾನಿಗಳಿಂದ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

ರಿಷಭ್ ಪಂತ್‌, ಧೋನಿ ತರಹ ಎಂದುಕೊಂಡಿದ್ದೆ, ನಿರೀಕ್ಷೆಗಳೆಲ್ಲಾ ಹುಸಿಯಾಯಿತು: ಇಂಜಮಾಮ್ ಉಲ್ ಹಕ್ರಿಷಭ್ ಪಂತ್‌, ಧೋನಿ ತರಹ ಎಂದುಕೊಂಡಿದ್ದೆ, ನಿರೀಕ್ಷೆಗಳೆಲ್ಲಾ ಹುಸಿಯಾಯಿತು: ಇಂಜಮಾಮ್ ಉಲ್ ಹಕ್

ಇನ್ನು ಈ ಪಂದ್ಯದಲ್ಲಿ ಟಾಸ್ ಸೋತು ಮೊದಲಿಗೆ ಬ್ಯಾಟಿಂಗ್ ನಡೆಸಿದ ನ್ಯೂಜಿಲೆಂಡ್ ತಂಡ ನಿಗದಿತ 20 ಓವರ್‌ಗಳಲ್ಲಿ 153 ರನ್ ಗಳಿಸಲಷ್ಟೇ ಶಕ್ತವಾಯಿತು. ಕಿವೀಸ್ ಬ್ಯಾಟಿಂಗ್ ಪಡೆಯ ವಿರುದ್ಧ ಭಾರತೀಯ ಬೌಲಿಂಗ್ ಪಡೆ ಉತ್ತಮ ಯಶಸ್ಸು ಸಾಧಿಸಿತು. ನ್ಯೂಜಿಲೆಂಡ್ ನೀಡಿದ ಈ ಮೊತ್ತವನ್ನು ಬೆನ್ನಟ್ಟಿದ ಭಾರತ ತಂಡಕ್ಕೆ ಮತ್ತೊಇಂದು ಅದ್ಭುತವಾದ ಆರಂಭ ದೊರೆತಿದೆ. ಕೆಎಲ್ ರಾಹುಲ್ ಹಾಗೂ ರೋಹಿತ್ ಶರ್ಮಾ ಮತ್ತೊಂದು ಶತಕದ ಜೊತೆಯಾಟ ನೀಡುವ ಮೂಲಕ ತಂಡದ ಗೆಲುವನ್ನು ಸುಲಭವಾಗಿಸಿದರು. ನಂತರ 17.2 ಓವರ್‌ಗಳಲ್ಲಿ ಕೇವಲ 3 ವಿಕೆಟ್ ಕಳೆದುಕೊಂಡು ಭಾರತ ಈ ಗುರಿಯನ್ನು ತಲುಪಿದೆ.

ಟೀಂ ಇಂಡಿಯಾ ಪ್ಲೇಯಿಂಗ್ XI:
ರೋಹಿತ್ ಶರ್ಮಾ(ನಾಯಕ), ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್(ವಿಕೆಟ್ ಕೀಪರ್), ವೆಂಕಟೇಶ್ ಅಯ್ಯರ್, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಭುವನೇಶ್ವರ್ ಕುಮಾರ್, ದೀಪಕ್ ಚಾಹರ್, ಹರ್ಷಲ್ ಪಟೇಲ್

ಸೆಮಿ ಫೈನಲ್ ಪ್ರವೇಶಿಸಿದ ಕರ್ನಾಟಕ , ಸೂಪರ್ ಓವರ್ ನಲ್ಲಿ ಗೆಲುವು | Oneindia Kannada

ನ್ಯೂಜಿಲೆಂಡ್ ಪ್ಲೇಯಿಂಗ್ XI:
ಮಾರ್ಟಿನ್ ಗಪ್ಟಿಲ್, ಡೇರಿಲ್ ಮಿಚೆಲ್, ಮಾರ್ಕ್ ಚಾಪ್ಮನ್, ಗ್ಲೆನ್ ಫಿಲಿಪ್ಸ್, ಟಿಮ್ ಸೀಫರ್ಟ್ (ವಿಕೆಟ್ ಕೀಪರ್), ಜೇಮ್ಸ್ ನೀಶಮ್, ಮಿಚೆಲ್ ಸ್ಯಾಂಟ್ನರ್, ಇಶ್ ಸೋಧಿ, ಟಿಮ್ ಸೌಥಿ (ನಾಯಕ), ಆಡಮ್ ಮಿಲ್ನೆ, ಟ್ರೆಂಟ್ ಬೌಲ್ಟ್

For Quick Alerts
ALLOW NOTIFICATIONS
For Daily Alerts
Story first published: Friday, November 19, 2021, 23:44 [IST]
Other articles published on Nov 19, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X