IND vs NZ T20: ಗೆಲುವಿನ ವಿಶ್ವಾಸದಲ್ಲಿ ಸೂರ್ಯ ಪಡೆ: ಟೀಮ್ ಇಂಡಿಯಾಕ್ಕೆ ಮೂರನೇ ಕ್ರಮಾಂಕವೇ ಚಿಂತೆ
ರಾಯ್‌ಪೂರ್: ನ್ಯೂಜಿಲೆಂಡ್ ವಿರುದ್ಧ ಆಡಿದ ಮೊದಲ ಪಂದ್ಯದಲ್ಲಿ 48 ರನ್ ಜಯ ಸಾಧಿಸಿರುವ ಭಾರತ, ಎರಡನೇ ಪಂದ್ಯದಲ್ಲಿ ಆತ್ಮವಿಶ್ವಾಸದಿಂದ ಕಣಕ್ಕೆ ಇಳಿಯಲಿದೆ. ಶುಕ್ರವಾರ ನಡೆಯಲಿರುವ ಎರಡನೇ ಟಿ20 ಪಂದ್ಯದ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಈ ಪಂದ್ಯದಲ್ಲಿ ಜಯ ಸಾಧಿಸಿ ಸರಣಿಯಲ್ಲಿ ಭಾರೀ ಮುನ್ನಡೆ ಸಾಧಿಸುವ ಕನಸು ಟೀಮ್ ಇಂಡಿಯಾದ್ದಾಗಿದೆ. ಇನ್ನು ನ್ಯೂಜಿಲೆಂಡ್ ಈ ಪಂದ್ಯದಲ್ಲಿ ಸೊಗಸಾದ ಪ್ರದರ್ಶನ ನೀಡಿ ಪುಟಿದೇಳುವ ವಿಶ್ವಾಸವನ್ನು ಹೊಂದಿದೆ.
ನಾಗ್ಪುರದಲ್ಲಿ ನಡೆದ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಸಂಘಟಿತ ಆಟದ ಪ್ರದರ್ಶನ ನೀಡಿತ್ತು. ಎರಡನೇ ಟಿ20 ಪಂದ್ಯದಲ್ಲಿ ಸ್ಥಿರ ಪ್ರದರ್ಶನ ನೀಡುವ ಇರಾದೆ ಭಾರತ ತಂಡದ್ದಾಗಿದೆ. ಟಿ20 ಕ್ರಿಕೆಟ್‌ನ ಅಂಕಿ ಅಂಶಗಳ ಲೆಕ್ಕಾಚಾರದಲ್ಲಿ ಭಾರತ ಬಲಾಢ್ಯವಾಗಿದೆ. ಈ ಪಂದ್ಯದಲ್ಲೂ ಜಯ ಸಾಧಿಸುವ ಕನಸು ಭಾರತ ತಂಡದ್ದಾಗಿದೆ.

ಟೀಮ್ ಇಂಡಿಯಾದಲ್ಲಿ ಸ್ಟಾರ್ ಆಟಗಾರರು ಇದ್ದಾರೆ. ಕಳೆದ ಹಲವು ಪಂದ್ಯಗಳಲ್ಲಿ ಟೀಮ್ ಇಂಡಿಯಾದ ಪರ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಮಾಡುತ್ತಿದ್ದ ಸಂಜು ಸ್ಯಾಮ್ಸನ್ ಈಗ ಆರಂಭಿಕರಾಗಿ ಕಣಕ್ಕೆ ಇಳಿಯುತ್ತಿದ್ದಾರೆ. ಇವರು ಮೊದಲ ಪಂದ್ಯದಲ್ಲಿ ರನ್ ಕಲೆ ಹಾಕುವಲ್ಲಿ ವಿಫಲರಾಗಿದ್ದರು. ಹೀಗಾಗಿ ಎರಡನೇ ಪಂದ್ಯದಲ್ಲಿ ಇವರ ಮೇಲೆ ಒತ್ತಡವಿದೆ. ಇವರು ಈ ಪಂದ್ಯದಲ್ಲಿ ಬಿಗ್ ಇನಿಂಗ್ಸ್ ಕಟ್ಟುವ ಇರಾದೆಯನ್ನು ಹೊಂದಿದ್ದಾರೆ. ಇನ್ನು ಆರಂಭಿಕ ಅಭಿಷೇಕ್ ಶರ್ಮಾ ಬಿರುಸಿನ ಬ್ಯಾಟಿಂಗ್ ಆಡುತ್ತಿದ್ದು, ಇದೇ ಲಯವನ್ನು ಮುಂದುವರೆಸುವ ವಿಶ್ವಾಸವನ್ನು ಇವರು ಹೊಂದಿದ್ದಾರೆ.
ಜವಾಬ್ದಾರಿ ಮರೆತರೆ ಗೇಟ್ ಪಾಸ್
ಮೊದಲ ಪಂದ್ಯದಲ್ಲಿ ಮಧ್ಯಮ ಕ್ರಮಾಂಕದಲ್ಲಿ ಆಡುವ ಅವಕಾಶವನ್ನು ಪಡೆದ ಇಶಾನ್ ಕಿಶನ್, ಎರಡನೇ ಪಂದ್ಯದಲ್ಲಿ ಅಬ್ಬರಿಸುವ ಅನಿವಾರ್ಯತೆ ಇದೆ. ಅಂದಾಗ ಮಾತ್ರ ಮುಂದಿನ ಪಂದ್ಯಗಳಲ್ಲಿ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆಯಬಹುದು. ಇನ್ನು ಸೂರ್ಯಕುಮಾರ್ ಯಾದವ್ ಮೊದಲ ಪಂದ್ಯದಲ್ಲಿ ಸ್ಥಿರ ಬ್ಯಾಟಿಂಗ್ ನಡೆಸಿದ್ದರು. ಹೀಗಾಗಿ ಇವರ ಬ್ಯಾಟ್‌ನಿಂದ ಶುಕ್ರವಾರ ದೊಡ್ಡ ಇನಿಂಗ್ಸ್ ಬರುವ ಅನಿವಾರ್ಯತೆ ಇದೆ. ಆಲ್‌ರೌಂಡರ್ ರೂಪದಲ್ಲಿ ಕಾಣಿಸಿಕೊಳ್ಳುವ ಶಿವಂ ದುಬೆ, ಅಕ್ಷರ್ ಪಟೇಲ್ ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ತಂಡಕ್ಕೆ ಆಧಾರವಾಗಬೇಕಿದೆ.

ಸಿಕ್ಕ ಅವಕಾಶವನ್ನು ಎರಡೂ ಕೈಗಳಿಂದ ಬಳಸಿಕೊಂಡಿರುವ ರಿಂಕು ಸಿಂಗ್, ಅಬ್ಬರಿಸಿದ್ದಾರೆ. ಅಲ್ಲದೆ ಫಿನಿಷರ್ ಪಾತ್ರದಲ್ಲಿ ಕಾಣಿಸಿಕೊಳ್ಳಲು ತಾವು ಸಿದ್ಧರಾಗಿರುವುದಾಗಿ ಬ್ಯಾಟಿಂಗ್‌ನಿಂದ ತೋರಿಸಿದ್ದಾರೆ.
ವೇಗದ ಬೌಲಿಂಗ್ ನೊಗುವನ್ನು ಅರ್ಷದೀಪ್ ಸಿಂಗ್ ಹಾಗೂ ಹಾರ್ದಿಕ್ ಪಾಂಡ್ಯ ಆರಂಭದಲ್ಲಿ ಹೊರಲಿದ್ದಾರೆ. ಅರ್ಷದೀಪ್ ಪವರ್ ಪ್ಲೇನಲ್ಲಿ ಬಿಗುವಿನ ದಾಳಿಯನ್ನು ನಡೆಸುವ ಸಾಮರ್ಥ್ಯವನ್ನು ಹೊಂದಿದ್ದಾರೆ. ಇನ್ನು ಹಾರ್ದಿಕ್ ಇವರಿಗೆ ಉತ್ತಮ ಸಾಥ್ ನೀಡಬಲ್ಲರು. ಮಧ್ಯದ ಓವರ್ ಹಾಗೂ ಡೆತ್ ಓವರ್‌ಗಳಲ್ಲಿ ಜಸ್ಪ್ರೀತ್ ಬುಮ್ರಾ ಬಿಗುವಿನ ದಾಳಿ ನಡೆಸಬಲ್ಲರು. ಸ್ಪಿನ್ ಬೌಲರ್ ವರುಣ್ ಚಕ್ರವರ್ತಿ ಪಿರ್ಕಿ ಜಾದು ನಡೆಸಲು ಸಿದ್ಧರಾಗಿದ್ದಾರೆ.
ಒತ್ತಡದಲ್ಲಿ ನ್ಯೂಜಿಲೆಂಡ್
ನ್ಯೂಜಿಲೆಂಡ್ ತಂಡ ಮೊದಲ ಪಂದ್ಯದಲ್ಲಿ ಮಾಡಿದ ತಪ್ಪುಗಳನ್ನು ಮೆಟ್ಟಿನಿಲ್ಲುವ ಕನಸು ಕಾಣುತ್ತಿದೆ. ತಂಡದ ಬೌಲರ್‌ಗಳು ಲಯ ಬದ್ಧ ಬೌಲಿಂಗ್ ದಾಳಿ ನಡೆಸಿ ಭಾರತೀಯ ಬೌಲರ್‌ಗಳನ್ನು ಕಾಡಬೇಕಿದೆ. ಇನ್ನು ಬ್ಯಾಟರ್‌ಗಳು ತಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಆಡಬೇಕಿದೆ. ಗ್ಲೆನ್ ಫಿಲಿಪ್ಸ್, ಡ್ಯಾರಿಲ್ ಮಿಚಲ್ ಮೊದಲ ಪಂದ್ಯದಲ್ಲಿ ಸ್ಥಿರ ಪ್ರದರ್ಶನ ನೀಡಿದ್ದರು. ಉಳಿದ ಆಟಗಾರರು ಅಬ್ಬರಿಸಿದರೆ ಮೊದಲ ಗೆಲುವಿನ ನಗೆ ಬೀರಬಹುದಾಗಿದೆ. ತಂಡದ ಆರಂಭಿಕ ಆಟಗಾರರು ಸಹ ತಂಡದ ಅಗತ್ಯಕ್ಕೆ ತಕ್ಕಂತೆ ಬ್ಯಾಟ್ ಮಾಡುವ ಅನಿವಾರ್ಯತೆ ಇದೆ. ಅಂದಾಗ ದೊಡ್ಡ ಮೊತ್ತದ ಕನಸು ನನಸಾಗುತ್ತದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications