ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ vs ನ್ಯೂಜಿಲೆಂಡ್ 2ನೇ ಟಿ20: ದಿನಾಂಕ, ಸಮಯ, ಸಂಭಾವ್ಯ ಆಡುವ ಬಳಗ, ಸಂಪೂರ್ಣ ಮಾಹಿತಿ

India vs New Zealand 2nd T20I: Date Venue, Playing 11 and Live Streaming details

ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಟಿ20 ಸರಣಿಯ ಮೊದಲ ಪಂದ್ಯ ಮುಕ್ತಾಯವಾಗಿದ್ದು ಭಾರತ ಭರ್ಜರಿಯಾಗಿ ಗೆದ್ದು ಸರಣಿಯಲ್ಲಿ ಮುನ್ನಡೆ ಸಾಧಿಸಿದೆ. ಈಗ ಎರಡು ತಮಡಗಳು ಕೂಡ ಎರಡನೇ ಪಂದ್ಯಕ್ಕೆ ಸಜ್ಜಾಗಿದೆ. ಈ ಸರಣಿಯ ಎರಡನೇ ಪಂದ್ಯ ಜಾರ್ಖಂಡ್‌ನ ರಾಂಚಿಯ ಜೆಎಸ್‌ಸಿಎ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆಯಲಿದೆ.

ಬುಧವಾರ ರಾತ್ರಿ ನಡೆದ ಸರಣಿಯ ಮೊದಲ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿದ ರೋಹಿತ್ ಪಡೆ 5 ವಿಕೆಟ್‌ಗಳ ಅಂತರದ ಗೆಲುವು ಸಾಧಿಸಿದೆ. ಈಗ ಎರಡನೇ ಪಂದ್ಯದಲ್ಲಿ ಮತ್ತಷ್ಟು ಉತ್ತಮ ಪ್ರದರ್ಶನ ನೀಡುವ ಮೂಲಕ ಅಧಿಕಾರಯುತವಾಗಿ ಗೆದ್ದು 2-0 ಅಂತರದಿಂದ ಸರಣಿಯನ್ನು ತನ್ನ ವಶಕ್ಕೆ ಪಡೆಯಲು ರೋಹಿತ್ ಶರ್ಮಾ ಪಡೆ ಕಾಯುತ್ತಿದೆ. ಟಿ20 ವಿಶ್ವಕಪ್‌ನಲ್ಲಿ ಮೊದಲ ಎರಡು ಪಂದ್ಯಗಳಲ್ಲಿ ಪಾಕಿಸ್ತಾನ ಹಾಗೂ ನ್ಯೂಜಿಲೆಂಡ್ ವಿರುದ್ಧ ಸೋಲು ಕಂಡ ಕಾರಣ ಸೆಮಿಫೈನಲ್ ಹಂತಕ್ಕೇರಲು ಭಾರತ ವಿಫಲವಾಗಿತ್ತು. ನಿರ್ಣಾಯಕ ಪಂದ್ಯದಲ್ಲಿ ನ್ಯೂಜಿಲೆಂಡ್ ಪಡೆ ಭಾರತದ ವಿರುದ್ಧ ಅಮೋಘ ಆಟವನ್ನು ಪ್ರದರ್ಶಿಸಿ ಭಾರತಕ್ಕೆ ಭಾರೀ ಹಿನ್ನಡೆಯುಂಟು ಮಾಡಿತ್ತು. ಇದರಿಂದಾಗಿ ಟೀಮ್ ಇಂಡಿಯಾ ಈ ಬಾರಿ ಟೂರ್ನಿಯ ಆರಂಭಕ್ಕೂ ಮುನ್ನ ಭಾರೀ ನಿರೀಕ್ಷೆ ಮೂಡಿಸಿದ್ದರೂ ಸೆಮಿಫೈನಲ್ ಹಂತಕ್ಕೇರುವಲ್ಲಿ ಕೂಡ ವಿಫಲವಾಯಿತು. ಹೀಗಾಗಿ ನ್ಯೂಜಿಲೆಂಡ್ ವಿರುದ್ಧದ ಆ ಸೋಲಿಗೆ ಈ ಸರಣಿಯಲ್ಲಿ ತಿರುಗೇಟು ನೀಡಲು ಅತ್ಯುತ್ತಮ ಅವಕಾಶ ದೊರೆತಿದೆ

ಟೀಂ ಇಂಡಿಯಾಗೆ ಗೆಲುವಿನ ಶುಭಾರಂಭ: ನ್ಯೂಜಿಲೆಂಡ್ ವಿರುದ್ಧ ಮೊದಲ ಟಿ20 ಪಂದ್ಯದಲ್ಲಿ ಗೆಲುವುಟೀಂ ಇಂಡಿಯಾಗೆ ಗೆಲುವಿನ ಶುಭಾರಂಭ: ನ್ಯೂಜಿಲೆಂಡ್ ವಿರುದ್ಧ ಮೊದಲ ಟಿ20 ಪಂದ್ಯದಲ್ಲಿ ಗೆಲುವು

ಸರಣಿಯ ಮೊದಲ ಟಿ20 ಕಿವೀಸ್ ಪಡೆ ದೊಡ್ಡ ಮೊತ್ತವನ್ನು ಗಳಿಸುವ ಭೀತಿ ಹುಟ್ಟಿಸಿತ್ತಾರೂ ಅನುಭವಿ ಸ್ಪಿನ್ನರ್ ಆರ್ ಅಶ್ವಿನ್ ಅವರ ಅದ್ಭುತ ಬೌಲಿಂಗ್ ದಾಳಿಯಿಂದಾಗಿ ರನ್ ವೇಗಕ್ಕೆ ಕಡಿವಾಣ ಬಿತ್ತು. ಮಾರ್ಕ್ ಚಾಂಪ್‌ಮನ್ ಹಾಘೂ ಗ್ಲೆನ್ ಫಿಲಿಪ್ಸ್ ವಿಕೆಟ್ ಪಡೆಯುವ ಮೂಲಕ ಅಶ್ವಿನ್ ಕಿವೀಸ್ ಪಡೆಗೆ ಕಡಿವಾಣ ಹಾಕಿದರು. ಹೀಗಾಗಿ 170ಕ್ಕೂ ಕಡಿಮೆ ಮೊತ್ತಕ್ಕೆ ನ್ಯೂಜಿಲೆಂಡ್ ತನ್ನ ಹೋರಾಟವನ್ನು ಅಂತ್ಯಗೊಳಿಸಿತು. ಬ್ಯಾಟಿಂಗ್‌ನಲ್ಲಿ ಸೂರ್ಯಕುಮಾರ್ ಯಾದವ್ ಪ್ರದರ್ಶನ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದೆ.

ಇದೀಗ ಎರಡನೇ ಪಂದ್ಯಕ್ಕೆ ಭಾರತ ಸಜ್ಜಾಗುತ್ತಿದ್ದು ಅದಕ್ಕೆ ಸಂಬಂಧಿಸಿದ ಕೆಲ ಪ್ರಮುಖ ಮಾಹಿತಿಗಳು ನಿಮಗಾಗಿ.

ಪಂದ್ಯದ ದಿನಾಂಕ, ಸಮಯ

ಪಂದ್ಯದ ದಿನಾಂಕ, ಸಮಯ

ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಟಿ20 ಸರಣಿಯ ಎರಡನೇ ಪಂದ್ಯ ಶುಕ್ರವಾರ ನವೆಂಬರ್ 19ರಂದು ನಡೆಯಲಿದೆ. ಜಾರ್ಖಂಡ್‌ನ ರಾಂಚಿಯಲ್ಲಿರುವ ಜೆಎಸ್‌ಸಿಎ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದೆ. ಸಮಯ ಸಂಜೆ 7 ಗಂಟೆಗೆ ಪಂದ್ಯ ಆರಂಭವಾಗಲಿದ್ದು ಟಾಸ್ ಪ್ರಕ್ರಿಯೆ 6:30ಕ್ಕೆ ನಡೆಯಲಿದೆ.

ನೇರಪ್ರಸಾರದ ಮಾಹಿತಿ

ನೇರಪ್ರಸಾರದ ಮಾಹಿತಿ

ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಈ ಟಿ20 ಸರಣಿಯ ಪಂದ್ಯದ ನೇರಪ್ರವಾಸ ಸ್ಟಾರ್‌ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ದೊರೆಯಲಿದೆ. ಡಿಸ್ನಿ+ ಹಾಟ್‌ಸ್ಟಾರ್ ಚಂದಾದಾರರು ಕೂಡ ಈ ವೇದಿಕೆಯಲ್ಲಿ ನೇರಪ್ರಸಾರದ ಮೂಲಕ ಪಂದ್ಯವನ್ನು ವೀಕ್ಷಿಸುವ ಅವಕಾಶವಿದೆ.

ಸಂಭಾವ್ಯ ಆಡುವ ಬಳಗ

ಸಂಭಾವ್ಯ ಆಡುವ ಬಳಗ

ಟೀಮ್ ಇಂಡಿಯಾ: ರೋಹಿತ್ ಶರ್ಮಾ, ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್, ಶ್ರೇಯಸ್ ಅಯ್ಯರ್, ವೆಂಕಟೇಶ್ ಅಯ್ಯರ್, ಅಕ್ಷರ್ ಪಟೇಲ್/ಯುಜುವೇಂದ್ರ ಚಾಹಲ್, ರವಿ ಚಂದ್ರನ್ ಅಶ್ವಿನ್, ಭುವನೇಶ್ವರ್ ಕುಮಾರ್, ದೀಪಕ್ ಚಹಾರ್/ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್.

ಸಂಭಾವ್ಯ ಆಡುವ ಬಳಗ

ಸಂಭಾವ್ಯ ಆಡುವ ಬಳಗ

ನ್ಯೂಜಿಲೆಂಡ್: ಮಾರ್ಟಿನ್ ಗಪ್ಟಿಲ್, ಡೇರಿಲ್ ಮಿಚೆಲ್, ಮಾರ್ಕ್ ಚಾಪ್ಮನ್, ಗ್ಲೆನ್ ಫಿಲಿಪ್ಸ್, ಟಿಮ್ ಸೀಫರ್ಟ್, ರಚಿನ್ ರವೀಂದ್ರ, ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ, ಟಾಡ್ ಆಸ್ಟಲ್, ಲಾಕಿ ಫರ್ಗ್ಯೂಸನ್, ಟ್ರೆಂಟ್ ಬೋಲ್ಟ್

ಸುಮ್ನೆ ಕೂತು ಪಂದ್ಯ ನೋಡ್ತಿದ್ದ ಸಿರಾಜ್ ತಲೆಗೆ ರೋಹಿತ್‌ ಹೊಡೆದ ವಿಡಿಯೋ ವೈರಲ್ | Oneindia Kannada

Story first published: Thursday, November 18, 2021, 14:27 [IST]
Other articles published on Nov 18, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X