India vs New Zealand 2nd T20I: ನೇರಪ್ರಸಾರ, ಸಮಯ, ಪಿಚ್, ಪ್ಲೇಯಿಂಗ್ ಇಲೆವೆನ್ ಮಾಹಿತಿ
ರಾಯ್‌ಪುರ್: ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಐದು ಟಿ20 ಪಂದ್ಯಗಳ ಎರಡನೇ ಪಂದ್ಯ ಶುಕ್ರವಾರ ನಡೆಯಲಿದೆ. ಈ ಪಂದ್ಯದಲ್ಲಿ ಗೆಲುವು ದಾಖಲಿಸುವ ಆಸೆ ಸೂರ್ಯ ಪಡೆಯದ್ದಾಗಿದೆ. ಮೊದಲ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡಿರುವ ಭಾರತ, ಎರಡನೇ ಪಂದ್ಯದಲ್ಲಿ ಅದೇ ರೀತಿಯ ಪ್ರದರ್ಶನ ನೀಡಿ ಮತ್ತೊಂದು ಗೆಲುವು ದಾಖಲಿಸುವ ಇರಾದೆ ಹೊಂದಿದೆ. ಇನ್ನು ಪ್ರವಾಸಿ ತಂಡ ಈ ಪಂದ್ಯದಲ್ಲಿ ಗೆಲುವು ದಾಖಲಿಸಿ ಪುಟಿದೇಳುವ ಲೆಕ್ಕಾಚಾರವನ್ನು ಹಾಕಿಕೊಂಡಿದೆ.
ಎರಡೂ ತಂಡಗಳಲ್ಲೂ ಸ್ಟಾರ್ ಆಟಗಾರರು ಇದ್ದಾರೆ. ಆದರೆ ಭಾರತ ಮೊದಲ ಪಂದ್ಯದಲ್ಲಿ ಗೆದ್ದಿದ್ದರಿಂದ ಆತ್ಮವಿಶ್ವಾಸದಿಂದ ಬೀಗುತ್ತಿದೆ. ತಂಡದ ಸ್ಟಾರ್ ಆಟಗಾರ ಅಭಿಷೇಕ್ ಶರ್ಮಾ ಭರ್ಜರಿ ಲಯಕ್ಕೆ ಮರಳಿದ್ದು, ತಂಡದ ಚಿಂತೆಯನ್ನು ದೂರ ಮಾಡಿದೆ. ಉಳಿದ ಬ್ಯಾಟರ್‌ಗಳು ತಂಡ ತಮ್ಮ ಮೇಲೆ ಇಟ್ಟ ನಂಬಿಕೆಗೆ ಪೂರಕವಾಗಿ ಬ್ಯಾಟ್ ಮಾಡುವ ಅನಿವಾರ್ಯತೆ ಇದೆ. ಇನ್ನು ಇಶಾನ್ ಕಿಶನ್ ಸಹ ಸಿಕ್ಕ ಅವಕಾಶವನ್ನು ಬಳಸಿಕೊಂಡು ತಂಡದಲ್ಲಿ ಸ್ಥಾನವನ್ನು ಉಳಿಸಿಕೊಳ್ಳುವ ಕನಸು ಕಾಣುತ್ತಿದ್ದಾರೆ. ಅಂಕಿ ಅಂಶಗಳ ಲೆಕ್ಕಾಚಾರದಲ್ಲಿ ಟೀಮ್ ಇಂಡಿಯಾ ಬಲಿಷ್ಠವಾಗಿದೆ. ಆದರೆ ಕಿವೀಸ್ ತಂಡ ಪುಟಿದೇಳುವ ಕಲೆಯನ್ನು ಕರಗತ ಮಾಡಿಕೊಂಡಿದೆ.

ನ್ಯೂಜಿಲೆಂಡ್ ತಂಡ ಮೊದಲ ಪಂದ್ಯದಲ್ಲಿ ಮಾಡಿದ ತಪ್ಪಿನಿಂದ ಪಾಠ ಕಲಿತು ಆಟವನ್ನು ಆಡುವ ಹಂಬಲದಲ್ಲಿದೆ. ಇನ್ನು ಪ್ರವಾಸಿ ತಂಡ ಸಂಘಟಿತ ಆಟವನ್ನು ಆಡಿ ಸೂರ್ಯ ಪಡೆಯ ಸವಾಲನ್ನು ಮೆಟ್ಟಿನಿಲ್ಲುವ ಆಶಯ ಹೊಂದಿದೆ. ಈ ಪಂದ್ಯ ಆರಂಭವಾಗುವುದು ಯಾವಾಗ? ನೇರ ಪ್ರಸಾರ ವೀಕ್ಷಿಸುವುದು ಎಲ್ಲಿ ಎಂಬ ಮಾಹಿತಿ ಇಲ್ಲಿದೆ.
ಹೇಗಿರಲಿದೆ ಭಾರತದ ಸಂಭಾವ್ಯ ತಂಡ?
ಮೊದಲ ಪಂದ್ಯದಲ್ಲಿ ಕಣಕ್ಕೆ ಇಳಿಸಿದ ಆಟಗಾರರನ್ನೇ ತಂಡ ಇಳಿಸುವ ಸಾಧ್ಯತೆ ಇದ್ದು, ಬದಲಾವಣೆಯನ್ನು ನೋಡುವುದು ಕಡಿಮೆಯಾಗಿದೆ.
ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್, ಶಿವಂ ದುಬೆ, ಹರ್ಷಿತ್ ರಾಣಾ, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ, ವರುಣ್ ಚಕ್ರವರ್ತಿ.
ನ್ಯೂಜಿಲೆಂಡ್ ಸಂಭಾವ್ಯ ತಂಡ ಹೇಗಿರಲಿದೆ?
ಟಾಮ್ ರಾಬಿನ್ಸನ್, ಡೆವೊನ್ ಕಾನ್ವೇ, ರಚಿನ್ ರವೀಂದ್ರ, ಡೇರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಮಾರ್ಕ್ ಚಾಪ್ಮನ್, ಮಿಚೆಲ್ ಸ್ಯಾಂಟ್ನರ್, ಕ್ರಿಸ್ಟಿಯನ್ ಕ್ಲಾರ್ಕ್, ಮೈಕಲ್ ಬ್ರೇಸ್‌ವೆಲ್, ಇಶ್ ಸೋಧಿ, ಕೈಲ್ ಜೇಮಿಸನ್, ಮ್ಯಾಟ್ ಹೆನ್ರಿ, ಜೇಕಬ್ ಡಫಿ.
ಪಿಚ್ ಹೇಗಿರಲಿದೆ?
ರಾಯ್‌ಪುರದಲ್ಲಿ ಇದುವರೆಗೆ ನಡೆದ ಏಕೈಕ ಟಿ20 ಪಂದ್ಯ ನಡೆದಿದ್ದು ಈ ಪಂದ್ಯದಲ್ಲಿ ಟೀಮ್ ಇಂಡಿಯಾ 20 ರನ್‌ಗಳಿಂದ ಆಸ್ಟ್ರೇಲಿಯಾವನ್ನು ಮಣಿಸಿದೆ. ಈ ಪಿಚ್‌ನಲ್ಲಿ ಮೊದಲು ಬ್ಯಾಟ್ ಮಾಡಿದ ತಂಡ 160 ರಿಂದ 175 ರನ್ ಕಲೆ ಹಾಕಿದರೆ ಉತ್ತಮ ಮೊತ್ತ ಎಂದು ಹೇಳಲಾಗುತ್ತದೆ. ಟಾಸ್ ಮಹತ್ವ ಪಡೆದಿದ್ದು ಗೆದ್ದವರು ಬೌಲಿಂಗ್ ಮಾಡಲಿದ್ದಾರೆ. ಇಬ್ಬನಿ ಎರಡನೇ ಇನಿಂಗ್ಸ್ ವೇಳೆ ಕಾಣಿಸಿಕೊಳ್ಳುವುದರಿಂದ, ಟಾಸ್ ಗೆದ್ದ ತಂಡ ಫೀಲ್ಡಿಂಗ್ ಮಾಡಲಿದೆ.
ಭಾರತ, ನ್ಯೂಜಿಲೆಂಡ್ ಎರಡನೇ ಟಿ20 ಪಂದ್ಯವನ್ನು ವೀಕ್ಷಿಸುವುದು ಎಲ್ಲಿ?
ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಎರಡನೇ ಟಿ20 ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರಪ್ರಸಾರದಲ್ಲಿ ವೀಕ್ಷಿಸಬಹುದು. ಅಲ್ಲದೆ ಆನ್‌ಲೈನ್‌ನಲ್ಲಿ ಜಿಯೋಹಾಟ್‌ಸ್ಟಾರ್ ನಲ್ಲಿ ನೋಡಬಹುದಾಗಿದೆ.
ಪಂದ್ಯ ನಡೆಯುವು ಸಮಯ ಯಾವಾಗ?
ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಎರಡನೇ ಟಿ20 ಪಂದ್ಯ ಸಂಜೆ 7ಕ್ಕೆ ಆರಂಭವಾಗಲಿದೆ. ಪಂದ್ಯ ಆರಂಭಕ್ಕೂ ಅರ್ಧಗಂಟೆ ಮೊದಲು ಟಾಸ್ ನಡೆಯಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications