For Quick Alerts
ALLOW NOTIFICATIONS  
For Daily Alerts
 

ಭಾರತ vs ನ್ಯೂಜಿಲೆಂಡ್: 4ನೇ ದಿನದಾಟ, Live ಸ್ಕೋರ್: ಗೆಲುವಿನ ಹೊಸ್ತಿಲಲ್ಲಿ ಟೀಮ್ ಇಂಡಿಯಾ

India vs New Zealand, 2nd Test, day 4, Mumbai, Live score

ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ ಪಂದ್ಯವನ್ನು ಸಂಪೂರ್ಣವಾಗಿ ಹಿಡಿತಕ್ಕೆ ತೆಗೆದುಕೊಂಡಿದೆ. ಮೂರನೇ ದಿನ ಎರಡನೇ ಇನ್ನಿಂಗ್ಸ್‌ನ ಬ್ಯಾಟಿಂಗ್ ಮುಂದುವರಿಸಿದ ಟೀಮ್ ಇಂಡಿಯಾ ಉತ್ತಮ ಮೊತ್ತವನ್ನು ಗಳಿಸಿದೆ. ಹೀಗಾಗಿ ಮುಂಬೈನ ಸವಾಲಿನ ಪಿಚ್‌ನಲ್ಲಿ ಭಾರೀ ಗುರಿಯನ್ನು ನಿಗದುಪಡಿಸಿದೆ. ಇದನ್ನು ಬೆನ್ನಟ್ಟಿರುವ ಕಿವೀಸ್ ಪಡೆ ಮೂರನೇ ದಿನದಲ್ಲಿಯೇ ತನ್ನ ಐದು ವಿಕೆಟ್ ಕಳೆದುಕೊಂಡಿದೆ. ಈ ಮೂಲಕ ಭಾರತದ ಗೆಲುವಿಗೆ ಕೇವಲ ಐದು ವಿಕೆಟ್‌ಗಳ ಅಗತ್ಯವಿದೆ. ಹೀಗಾಗಿ ನಾಲ್ಕನೇ ದಿನದಲ್ಲಿಯೇ ಪಂದ್ಯ ಮುಕ್ತಾಯವಾಗುವುದು ಬಹುತೇಕ ನಿಶ್ಚಿತ.

ಎರಡೂ ಇನ್ನಿಂಗ್ಸ್‌ನಲ್ಲಿಯೂ ಮಿಂಚಿದ ಮಯಾಂಕ್ ಅಗರ್ವಾಲ್: ಇನ್ನು ಟೀಮ್ ಇಂಡಿಯಾ ಪರವಾಗಿ ಆರಂಭಿಕ ಆಟಗಾರ ಮಯಾಂಕ್ ಅಗರ್ವಾಲ್ ಎರಡೂ ಇನ್ನಿಂಗ್ಸ್‌ನಲ್ಲಿಯೂ ಅದ್ಭುತ ಪ್ರದರ್ಶನ ನೀಡಿದ್ದಾರೆ. ಮೊದಲ ಇನ್ನಿಂಗ್ಸ್‌ನಲ್ಲಿ ಬರೊಬ್ಬರಿ 150 ರನ್‌ಗಳಿಸಿದ್ದ ಮಯಾಂಕ್ ಅಗರ್ವಾಲ್ ಸುದೀರ್ಘ ಕಾಲದಿಂದ ಕಾದಿದ್ದ ಶತಕವನ್ನು ಪೂರ್ಣಗೊಳಿಸಿದ್ದಾರೆ. ಅದಾದ ಬಳಿಕ ಎರಡನೇ ಇನ್ನಿಂಗ್ಸ್‌ನಲ್ಲಿಯೇ ಈ ಪ್ರದರ್ಶನ ಮುಂದುವರಿಸಿದ ಮಯಾಂಕ್ ಅಗರ್ವಾಲ್ ಅರ್ಧ ಶತಕದ ಕೊಡುಗೆ ನೀಡಿದ್ದಾರೆ. ಎರಡನೇ ಇನ್ನಿಂಗ್ಸ್‌ಬಲ್ಲಿ 63 ರನ್ ಬಾರಿಸಿ ಮಯಾಂಕ್ ವಿಕೆಟ್ ಕಳೆದುಕೊಂಡರು.

ಭಾರತಕ್ಕೆ ಅಜಾಜ್ ಆಘಾತ: ಮೊದಲ ಇನ್ನಿಂಗ್ಸ್‌ನಲ್ಲಿ ನ್ಯೂಜಿಲೆಂಡ್‌ನ ಸ್ಪಿನ್ನರ ಅಜಾಜ್ ಪಟೇಲ್ ಭಾರತದ ಎಲಲಾ ಹತ್ತೂ ವಿಕಟ್‌ಗಳನ್ನು ಪಡೆದು ಐತಿಹಾಸಿಕ ಸಾಧನೆ ಮಾಡಿದ್ದು. ಈ ಮೂಲಕ ವಿಶ್ವ ಕ್ರಿಕೆಟ್‌ನಲ್ಲಿ ಈ ಸಾಧನೆ ಮಾಡಿದ ಕೇವಲ ಮೂರನೇ ಆಟಗಾರ ಎನಿಸಿದ್ದರು. ಎರಡನೇ ಇನ್ನಿಂಗ್ಸ್‌ನಲ್ಲಿಯೂ ಈ ಉತ್ತಮ ಪ್ರದರ್ಶನ ಮುಂದುವರಿಸಿದ ಅಜಾಜ್ ಪಟೇಲ್ ನಾಲ್ಕು ವಿಕೆಟ್‌ಗಳನ್ನು ಕೆಡವಿದ್ದರು. ಈ ಮೂಲಕ ಟೀಮ್ ಇಂಡಿಯಾಗೆ ಮತ್ತೊಮ್ಮೆ ಅಡ್ಡಿಯಾದರು ಈ ಭಾರತೀಯ ಸಂಜಾತ ನ್ಯೂಜಿಲೆಂಡ್ ಆಟಗಾರ.

ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಎರಡನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಗೆಲುವು ಸಾಧಿಸಿದೆ. 372 ರನ್‌ಗಳ ಬೃಹತ್ ಅಂತರದಿಂದ ವಿರಾಟ್ ಕೊಹ್ಲಿ ಪಡೆ ಗೆದ್ದು ಬೀಗುವ ಮೂಲಕ ಟೆಸ್ಟ್ ಸರಣಿಯನ್ನು 1-0 ಅಂತರದಿಂದ ವಶಕ್ಕೆ ಪಡೆದುಕೊಂಡಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ನಾಲ್ಕನೇ ದಿನದಲ್ಲಿಯೇ ಪಂದ್ಯ ಮುಕ್ತಾಯವಾಗಿದ್ದು ಟೀಮ್ ಇಂಡಿಯಾ ರನ್‌ಗಳ ಭಾರೀ ಅಂತರದಿಂದ ವಿಜಯ ಸಾಧಿಸಿದೆ.

ಮೂರನೇ ದಿನದಾಟದ ಅಂತ್ಯಕ್ಕೆ ಐದು ವಿಕೆಟ್ ಕಳೆದುಕೊಂಡು ಉಳಿದ ಐದು ವಿಕೆಟ್‌ಗಳಲ್ಲಿ 400 ರನ್‌ಗಳಿಸುವ ಅಸಾಧ್ಯ ಸವಾಲನ್ನು ಮುಂದಿಟ್ಟುಕೊಂಡು ನ್ಯೂಜಿಲೆಂಡ್ ನಾಲ್ಕನೇ ದಿನದಾಟವನ್ನು ಆರಂಭಿಸಿತ್ತು. ಆದರೆ ನಾಲ್ಕನೇ ದಿನ ಜಯಂತ್ ಯಾದವ್ ಸ್ಪಿನ್ ಸುಳಿಗೆ ಸಿಲುಕಿದ ನ್ಯೂಜಿಲೆಂಡ್ ಪಡೆ ಭಾರತಕ್ಕೆ ಸುಲಭ ತುತ್ತಾಯಿತು. 28 ರನ್‌ಗಳ ಅಂತರದಲ್ಲಿ ಕೊನೆಯ 5 ವಿಕೆಟ್ ಕಳೆದುಕೊಳ್ಳುವ ಮೂಲಕ ನ್ಯೂಜಿಲೆಂಡ್ ಭಾರತದ ವಿರುದ್ಧ ಭಾರೀ ಅಂತರದಿಂದ ಸೋಲು ಅನುಭವಿಸಿದೆ. ಈ ಮೂಲಕ ಭಾರತ ತವರಿನಲ್ಲಿ ನಡೆದ ಟಿ20 ಹಾಗೂ ಟೆಸ್ಟ್ ಸರಣಿಯಲ್ಲಿ ಒಂದೂ ಸೋಲು ಕಾಣದೆ ಗೆದ್ದು ಬೀಗಿದೆ.

ಟೀಮ್ ಇಂಡಿಯಾ ಆಡುವ ಬಳಗ: ಮಯಾಂಕ್ ಅಗರ್ವಾಲ್, ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ನಾಯಕ), ಶ್ರೇಯಸ್ ಅಯ್ಯರ್, ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಜಯಂತ್ ಯಾದವ್, ಉಮೇಶ್ ಯಾದವ್, ಮೊಹಮ್ಮದ್ ಸಿರಾಜ್
ಬೆಂಚ್: ಸೂರ್ಯಕುಮಾರ್ ಯಾದವ್, ಶ್ರೀಕರ್ ಭರತ್, ಪ್ರಸಿದ್ಧ್ ಕೃಷ್ಣ

ನ್ಯೂಜಿಲೆಂಡ್ ಆಡುವ ಬಳಗ: ಟಾಮ್ ಲ್ಯಾಥಮ್ (ನಾಯಕ), ವಿಲ್ ಯಂಗ್, ಡೇರಿಲ್ ಮಿಚೆಲ್, ರಾಸ್ ಟೇಲರ್, ಹೆನ್ರಿ ನಿಕೋಲ್ಸ್, ಟಾಮ್ ಬ್ಲಂಡೆಲ್ (ವಿಕೆಟ್ ಕೀಪರ್), ರಚಿನ್ ರವೀಂದ್ರ, ಕೈಲ್ ಜೇಮಿಸನ್, ಟಿಮ್ ಸೌಥಿ, ವಿಲಿಯಂ ಸೋಮರ್ವಿಲ್ಲೆ, ಅಜಾಜ್ ಪಟೇಲ್
ಬೆಂಚ್: ಕೇನ್ ವಿಲಿಯಮ್ಸನ್, ಮಿಚೆಲ್ ಸ್ಯಾಂಟ್ನರ್, ನೀಲ್ ವ್ಯಾಗ್ನರ್, ಗ್ಲೆನ್ ಫಿಲಿಪ್ಸ್

Story first published: Monday, December 6, 2021, 16:48 [IST]
Other articles published on Dec 6, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+