ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ನ್ಯೂಜಿಲೆಂಡ್‌ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಕಣಕ್ಕಿಳಿಯಲಿರುವ ಭಾರತ ತಂಡದಲ್ಲಿ 3 ಬದಲಾವಣೆ

India vs New Zealand: 3 changes Team India might make for 3rd t20

ನವೆಂಬರ್‌ 14ರಂದು ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್‌ ತಂಡಗಳ ನಡುವೆ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಈ ಬಾರಿಯ ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯದ ವಿರುದ್ಧ ಸೋತ ನ್ಯೂಜಿಲೆಂಡ್ ರನ್ನರ್ ಅಪ್ ಆಗಿ ಟೂರ್ನಿಯಲ್ಲಿನ ತನ್ನ ಪಯಣವನ್ನು ಅಂತ್ಯಗೊಳಿಸಿತ್ತು. ಹೀಗೆ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಮುಗಿದ ಬಳಿಕ ರನ್ನರ್ ಅಪ್ ಆಗಿ ಹೊರಹೊಮ್ಮಿದ ನ್ಯೂಜಿಲೆಂಡ್ ತಂಡ ಭಾರತ ಪ್ರವಾಸವನ್ನು ಕೈಗೊಂಡಿದ್ದು 3 ಪಂದ್ಯಗಳ ಟಿ ಟ್ವೆಂಟಿ ಮತ್ತು 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ ವಿರುದ್ಧ ಸೆಣಸಾಟ ನಡೆಸುತ್ತಿದೆ.

ಮೊದಲಿಗೆ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ 3 ಪಂದ್ಯಗಳ ಟಿ ಟ್ವೆಂಟಿ ಸರಣಿ ಆರಂಭವಾಗಿದ್ದು, ಈಗಾಗಲೇ ತಂಡಗಳ ನಡುವಿನ ಮೊದಲೆರಡು ಟಿ ಟ್ವೆಂಟಿ ಪಂದ್ಯಗಳು ಮುಗಿದಿವೆ. ಈ ಎರಡೂ ಪಂದ್ಯಗಳಲ್ಲಿಯೂ ರೋಹಿತ್ ಶರ್ಮಾ ನಾಯಕತ್ವದ ಟೀಮ್ ಇಂಡಿಯಾ ಟಿಮ್ ಸೌಥಿ ನಾಯಕತ್ವದ ನ್ಯೂಜಿಲೆಂಡ್ ವಿರುದ್ಧ ಗೆದ್ದು ಬೀಗಿದೆ. ಈ ಮೂಲಕ 3 ಪಂದ್ಯಗಳ ಟಿ ಟ್ವೆಂಟಿ ಸರಣಿಯಲ್ಲಿ ಈಗಾಗಲೇ ಟೀಮ್ ಇಂಡಿಯಾ ನ್ಯೂಜಿಲೆಂಡ್ ವಿರುದ್ಧ 2-0 ಅಂತರದಲ್ಲಿ ಮುನ್ನಡೆಯನ್ನು ಸಾಧಿಸುವುದರ ಮೂಲಕ ಸರಣಿಯನ್ನು ವಶಪಡಿಸಿಕೊಂಡಿದೆ.

ಶ್ರೇಷ್ಠ ಟಿ20 ಆಟಗಾರ ಈತನೇ: ಐಪಿಎಲ್ ಮೆಗಾ ಆಕ್ಷನ್‌ನಲ್ಲಿ ದುಬಾರಿ ಆಟಗಾರನನ್ನು ಹೆಸರಿಸಿದ ಚೋಪ್ರಶ್ರೇಷ್ಠ ಟಿ20 ಆಟಗಾರ ಈತನೇ: ಐಪಿಎಲ್ ಮೆಗಾ ಆಕ್ಷನ್‌ನಲ್ಲಿ ದುಬಾರಿ ಆಟಗಾರನನ್ನು ಹೆಸರಿಸಿದ ಚೋಪ್ರ

ಹೀಗೆ ನ್ಯೂಜಿಲೆಂಡ್ ವಿರುದ್ಧದ ಟಿ ಟ್ವೆಂಟಿ ಸರಣಿಯನ್ನು ಈಗಾಗಲೇ ಕೈವಶ ಮಾಡಿಕೊಂಡಿರುವ ಟೀಮ್ ಇಂಡಿಯಾ ಮೂರನೇ ಟಿ ಟ್ವೆಂಟಿ ಪಂದ್ಯದಲ್ಲಿ ತಂಡದಲ್ಲಿ ಕೆಲವು ಬದಲಾವಣೆಗಳನ್ನು ಮಾಡಿಕೊಳ್ಳುವ ಸಾಧ್ಯತೆಗಳು ಹೆಚ್ಚಿವೆ. ಹೌದು, ಈ ಟಿ ಟ್ವೆಂಟಿ ಸರಣಿ ಮುಗಿದ ಬಳಿಕ ನವೆಂಬರ್ 25ರಿಂದ ಆರಂಭವಾಗಲಿರುವ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 2 ಪಂದ್ಯಗಳ ಟೆಸ್ಟ್ ಸರಣಿ ಸಲುವಾಗಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ಕೋಲ್ಕತಾದ ಈಡನ್ ಗಾರ್ಡನ್ಸ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿರುವ ತೃತೀಯ ಟಿ ಟ್ವೆಂಟಿ ಪಂದ್ಯದಲ್ಲಿ ಟೀಮ್ ಇಂಡಿಯಾ ತನ್ನ ಆಡುವ ಬಳಗದಲ್ಲಿ ಕೆಲ ಬದಲಾವಣೆಗಳನ್ನು ಮಾಡಿಕೊಳ್ಳುವ ಸಾಧ್ಯತೆಗಳಿವೆ. 5 ದಿನಗಳ ಕಾಲ ಸತತವಾಗಿ ಟೆಸ್ಟ್ ಪಂದ್ಯ ನಡೆಯುವುದರಿಂದ ಪಂದ್ಯದಲ್ಲಿ ಕಣಕ್ಕಿಳಿಯಬೇಕಾದ ಆಟಗಾರರಿಗೆ ಹೆಚ್ಚುವರಿ ವಿಶ್ರಾಂತಿಯ ಅಗತ್ಯವಿರುವ ಕಾರಣದಿಂದ ಹಾಗೂ ಈಗಾಗಲೇ ಟೀಮ್ ಇಂಡಿಯಾ ಸರಣಿಯನ್ನು ಕೈವಶ ಮಾಡಿಕೊಂಡಿರುವುದರಿಂದ ತಂಡದ ಆಯ್ದ ಆಟಗಾರರನ್ನು ನ್ಯೂಜಿಲೆಂಡ್ ವಿರುದ್ಧದ ತೃತೀಯ ಟಿ ಟ್ವೆಂಟಿ ಪಂದ್ಯದಿಂದ ಕೈಬಿಟ್ಟು ವಿಶ್ರಾಂತಿ ನೀಡಲಾಗುವುದು ಎನ್ನಲಾಗುತ್ತಿದೆ.

ನವೆಂಬರ್‌ 25ರಿಂದ ಕಾನ್ಪುರದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ಪ್ರಥಮ ಟೆಸ್ಟ್ ಪಂದ್ಯ ಆರಂಭವಾಗಲಿದೆ. ಟೀಮ್ ಇಂಡಿಯಾ ಪರ ಟೆಸ್ಟ್ ಪಂದ್ಯಗಳಲ್ಲಿ ಕೆಎಲ್ ರಾಹುಲ್ ಆರಂಭಿಕ ಆಟಗಾರನಾಗಿ ಕಣಕ್ಕಿಳಿಯುವ ವಿಷಯ ಎಲ್ಲರಿಗೂ ತಿಳಿದಿರುವುದೇ. ಹೀಗಾಗಿ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಆರಂಭಿಕ ಆಟಗಾರನಾಗಿ ಕಣಕ್ಕಿಳಿಯುವ ಕೆಎಲ್ ರಾಹುಲ್ ಅವರಿಗೆ ನ್ಯೂಜಿಲೆಂಡ್ ವಿರುದ್ಧದ ತೃತೀಯ ಟಿ ಟ್ವೆಂಟಿ ಪಂದ್ಯದಲ್ಲಿ ವಿಶ್ರಾಂತಿ ನೀಡುವ ಸಾಧ್ಯತೆಗಳಿವೆ. ಈ ಉದ್ದೇಶದಿಂದ ಕೆ ಎಲ್ ರಾಹುಲ್ ಅವರಿಗೆ ನ್ಯೂಜಿಲೆಂಡ್ ವಿರುದ್ಧದ ತೃತೀಯ ಟಿ ಟ್ವೆಂಟಿ ಪಂದ್ಯದಲ್ಲಿ ವಿಶ್ರಾಂತಿ ನೀಡಿದರೆ ರೋಹಿತ್ ಶರ್ಮಾ ಜೊತೆ ಆರಂಭಿಕ ಆಟಗಾರನಾಗಿ ಇಶಾನ್ ಕಿಶನ್ ಅಥವಾ ರುತುರಾಜ್ ಗಾಯಕ್ವಾಡ್ ಕಣಕ್ಕಿಳಿಯುವ ಸಾಧ್ಯತೆಗಳಿವೆ.

ಮುಂಬರುವ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಪಂದ್ಯಗಳನ್ನು ಗಮನದಲ್ಲಿಟ್ಟುಕೊಂಡು ಭಾರತದ ವಿಕೆಟ್ ಕೀಪರ್ ರಿಷಭ್ ಪಂತ್ ಅವರಿಗೆ ನ್ಯೂಜಿಲೆಂಡ್ ವಿರುದ್ಧದ ತೃತೀಯ ಟಿ ಟ್ವೆಂಟಿ ಪಂದ್ಯದಿಂದ ವಿಶ್ರಾಂತಿ ನೀಡುವ ಸಾಧ್ಯತೆಗಳಿವೆ. ಈಗಾಗಲೇ ಹಲವಾರು ತಿಂಗಳುಗಳಿಂದ ಸತತವಾಗಿ ಮೈದಾನದಲ್ಲಿ ಕಾಲಕಳೆದಿರುವ ರಿಷಭ್ ಪಂತ್ ಅವರಿಗೆ ವಿಶ್ರಾಂತಿಯ ಅಗತ್ಯ ಖಂಡಿತ ಇದೆ. ಅಷ್ಟೇ ಅಲ್ಲದೆ ಮುಂಬರುವ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಪಂದ್ಯಗಳಲ್ಲಿ ಬ್ಯಾಟಿಂಗ್ ಮತ್ತು ವಿಕೆಟ್ ಕೀಪಿಂಗ್ ವಿಭಾಗಗಳಲ್ಲಿ ರಿಷಭ್ ಪಂತ್ ಹೆಚ್ಚು ನಿರತರಾಗಬೇಕಾದ ಅನಿವಾರ್ಯತೆ ಇರುವ ಕಾರಣ ವಿಶ್ರಾಂತಿಯ ಅಗತ್ಯತೆ ಹೆಚ್ಚಿದೆ. ಹೀಗೆ ನ್ಯೂಜಿಲೆಂಡ್ ವಿರುದ್ಧದ ತೃತೀಯ ಟಿ ಟ್ವೆಂಟಿ ಪಂದ್ಯದಲ್ಲಿ ರಿಷಭ್ ಪಂತ್ ವಿಶ್ರಾಂತಿ ಪಡೆಯುವ ಸಾಧ್ಯತೆಗಳಿವೆ.

ಭಾರತ-ನ್ಯೂಜಿಲೆಂಡ್ 2ನೇ ಟಿ20: ರೋಹಿತ್ ಹೆಸರಲ್ಲಿ ದಾಖಲಾಯ್ತು ಈ 3 ದಾಖಲೆಭಾರತ-ನ್ಯೂಜಿಲೆಂಡ್ 2ನೇ ಟಿ20: ರೋಹಿತ್ ಹೆಸರಲ್ಲಿ ದಾಖಲಾಯ್ತು ಈ 3 ದಾಖಲೆ

ದೀಪಕ್ ಚಹರ್ ಬದಲು ಅವೇಶ್ ಖಾನ್

ಭಾರತದ ಸ್ಪಿನ್ ಬೌಲರ್‌ಗಳಾದ ರವಿಚಂದ್ರನ್ ಅಶ್ವಿನ್ ಮತ್ತು ಅಕ್ಷರ್ ಪಟೇಲ್ ನ್ಯೂಜಿಲೆಂಡ್ ವಿರುದ್ಧದ ಮೊದಲೆರಡು ಟಿ ಟ್ವೆಂಟಿ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ. ಹೀಗಾಗಿ ನ್ಯೂಜಿಲೆಂಡ್ ವಿರುದ್ಧದ ತೃತೀಯ ಟಿ ಟ್ವೆಂಟಿ ಪಂದ್ಯದಲ್ಲಿ ಯಜುವೇಂದ್ರ ಚಾಹಲ್ ಅವರಿಗೆ ಅವಕಾಶ ಸಿಗುವುದು ಬಹುತೇಕ ಕಷ್ಟ ಎನ್ನಬಹುದು. ಇನ್ನುಳಿದಂತೆ ವೆಂಕಟೇಶ್ ಅಯ್ಯರ್ ಕೂಡ ಒಂದೆರಡು ಓವರ್‌ ಬೌಲಿಂಗ್ ಮಾಡಬಲ್ಲ ಆಟಗಾರನಾಗಿರುವ ಕಾರಣ ವೇಗಿಗಳ ಸ್ಥಾನದಲ್ಲಿ ಟೀಮ್ ಇಂಡಿಯಾ ನ್ಯೂಜಿಲೆಂಡ್ ವಿರುದ್ಧದ ತೃತೀಯ ಟಿ ಟ್ವೆಂಟಿ ಪಂದ್ಯದಲ್ಲಿ ಬದಲಾವಣೆ ತರಬಹುದು ಎನ್ನಲಾಗುತ್ತಿದೆ. ಸದ್ಯ ಟೀಮ್ ಇಂಡಿಯಾ ದೀಪಕ್ ಚಹರ್ ಮತ್ತು ಭುವನೇಶ್ವರ್ ಕುಮಾರ್ ಇಬ್ಬರು ವೇಗಿಗಳೊಂದಿಗೆ ಮೊದಲೆರೆಡು ಟಿ ಟ್ವೆಂಟಿ ಪಂದ್ಯದಲ್ಲಿ ಕಣಕ್ಕಿಳಿದಿತ್ತು. ಈ ಇಬ್ಬರಲ್ಲಿ ದೀಪಕ್ ಚಹರ್ ಪ್ರದರ್ಶನ ಹೆಚ್ಚೇನೂ ಬಲಿಷ್ಠವಾಗಿರದ ಕಾರಣದಿಂದ ನ್ಯೂಜಿಲೆಂಡ್ ವಿರುದ್ಧದ ತೃತೀಯ ಟಿ ಟ್ವೆಂಟಿ ಪಂದ್ಯದಲ್ಲಿ ದೀಪಕ್ ಚಹರ್ ಅವರನ್ನು ತಂಡದಿಂದ ಕೈಬಿಟ್ಟು ಅವೇಶ್ ಖಾನ್ ಅವರಿಗೆ ಆಡುವ ಅವಕಾಶ ನೀಡುವ ಸಾಧ್ಯತೆಗಳಿವೆ. ಹೀಗೆ ದೀಪಕ್ ಚಹರ್ ಬದಲು ಆವೇಶ್ ಖಾನ್ ಅವರಿಗೆ ಅವಕಾಶ ಸಿಕ್ಕರೆ ಅವೇಶ್ ಖಾನ್ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಲಿದ್ದಾರೆ.

ಸಂಭಾವ್ಯ ತಂಡಗಳು

ಭಾರತ ಸಂಭಾವ್ಯ ತಂಡ: ರೋಹಿತ್ ಶರ್ಮಾ (ನಾಯಕ), ರುತುರಾಜ್ ಗಾಯಕ್ವಾಡ್, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ವೆಂಕಟೇಶ್ ಅಯ್ಯರ್, ಅಕ್ಸರ್ ಪಟೇಲ್, ಭುವನೇಶ್ವರ್ ಕುಮಾರ್, ರವಿಚಂದ್ರನ್ ಅಶ್ವಿನ್, ಹರ್ಷಲ್ ಪಟೇಲ್ ಮತ್ತು ಅವೇಶ್ ಖಾನ್.

ನ್ಯೂಜಿಲೆಂಡ್‌ ಸಂಭಾವ್ಯ ತಂಡ: ಮಾರ್ಟಿನ್ ಗಪ್ಟಿಲ್, ಡೇರಿಲ್ ಮಿಚೆಲ್, ಮಾರ್ಕ್ ಚಾಪ್ಮನ್, ಗ್ಲೆನ್ ಫಿಲಿಪ್ಸ್, ಟಿಮ್ ಸೀಫರ್ಟ್ (ವಿಕೆಟ್ ಕೀಪರ್), ಜೇಮ್ಸ್ ನೀಶಮ್, ಇಶ್ ಸೋಧಿ, ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ (ನಾಯಕ), ಆಡಮ್ ಮಿಲ್ನೆ, ಟ್ರೆಂಟ್ ಬೌಲ್ಟ್

Story first published: Sunday, November 21, 2021, 16:20 [IST]
Other articles published on Nov 21, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X