ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ vs ನ್ಯೂಜಿಲೆಂಡ್: ಅಂತಿಮ ಪಂದ್ಯದಲ್ಲಿಯೂ ಭಾರತಕ್ಕೆ ಭರ್ಜರಿ ಗೆಲುವು; ಮತ್ತೊಂದು ಸರಣಿ ವೈಟ್‌ವಾಶ್

India vs New Zealand, 3rd ODI, Team India won by 90 runs and won series by 3-0

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯ ಅಂತಿಮ ಪಂದ್ಯದಲ್ಲಿ ಟೀಮ್ ಇಂಡಿಯಾ ಅಮೋಘ ಗೆಲುವು ಸಾಧಿಸಿದೆ. ಮೊದಲಿಗೆ ಬ್ಯಾಟಿಂಗ್‌ನಲ್ಲಿ ಭರ್ಜರಿ ಪ್ರದರ್ಶನ ನೀಡಿದ ಟೀಮ್ ಇಂಡಿಯಾ ಬಳಿಕ ಬೌಲಿಂಗ್‌ನಲ್ಲಿಯೂ ಉತ್ತಮ ಪ್ರದರ್ಶನ ನೀಡಿತು. ಹೀಗಾಗಿ ಈ ಬೃಹತ್ ಮೊತ್ತದ ಪಂದ್ಯದಲ್ಲಿ ಟೀಮ್ ಇಂಡಿಯಾ 90 ರನ್‌ಗಳ ಅಂತರದ ಗೆಲುವು ಸಾಧಿಸಿದೆ. ಈ ಮೂಲಕ ಟೀಮ್ ಇಂಡಿಯಾ ಸತತ ಎರಡನೇ ಸರಣಿಯನ್ನು ತವರಿನಲ್ಲಿ ವೈಟ್‌ವಾಶ್ ಮೂಲಕ ವಶಕ್ಕೆ ಪಡೆದುಕೊಂಡಿದೆ. ಇದು ಟೀಮ್ ಇಂಡಿಯಾ ಭಾರತದಲ್ಲಿ ಸಾಧಿಸಿರುವ ಸತತ 7ನೇ ಏಕದಿನ ಸರಣಿ ಗೆಲುವು ಎಂಬುದು ಮತ್ತೊಂದು ವಿಶೇಷ ದಾಖಲೆ.

ಈ ಪಂದ್ಯದಲ್ಲಿ ಟಾಸ್ ಸೋತು ಮೊದಲಿಗೆ ಬ್ಯಾಟಿಂಗ್ ನಡೆಸುವ ಸವಾಲು ಸ್ವೀಕರಿಸಿದ ಭಾರತ ಅತ್ಯದ್ಭುತ ಆರಂಭವನ್ನು ಪಡೆಯಿತು. ರೋಹಿತ್ ಶರ್ಮಾ, ಶುಬ್ಮನ್ ಗಿಲ್ ಭರ್ಜರಿ ಶತಕದ ಕಾರಣದಿಂದಾಗಿ ಟೀಮ್ ಇಂಡಿಯಾ ಈ ಪಂದ್ಯದಲ್ಲಿ ಮೊದಲ ವಿಕೆಟ್‌ಗೆ ದ್ವಿಶತಕದ ಜೊತೆಯಾಟ ಬಂದಿತ್ತು. ಈ ಜೋಡಿ ಬೇರ್ಪಟ್ಟ ಬಳಿಕ ಮಧ್ಯಮ ಕ್ರಮಾಂಕದಿಂದ ಉತ್ತಮ ಪ್ರದರ್ಶನ ಬಾರದಿದ್ದರೂ ಕೆಳ ಕ್ರಮಾಂಕದಲ್ಲಿ ಹಾರ್ದಿಕ್ ಪಾಂಡ್ಯ ಮತ್ತೆ ಅಬ್ಬರದ ಪ್ರದರ್ಶನ ನೀಡಿದರು. ಇದರ ಪರಿಣಾಮವಾಗಿ ಟೀಮ್ ಇಂಡಿಯಾ 385 ರನ್‌ಗಳ ಬೃಹತ್ ಮೊತ್ತ ಗಳಿಸಲು ಸಾಧ್ಯವಾಯಿತು. ಈ ಮೊತ್ತವನ್ನು ಬೆನ್ನಟ್ಟಲು ಆರಂಬಿಸಿದ ನ್ಯೂಜಿಲೆಂಡ್ ತಂಡದ ಪರವಾಗಿ ಡೆವೋನ್ ಕಾನ್ವೆ ಏಕಾಂಗಿ ಹೋರಾಟ ನಡೆಸಿದರಾದರೂ 90 ರನ್‌ಗಳ ಅಂತರದಿಂದ ತಂಡ ಸೋಲು ಕಾಣುವಂತಾಯಿತು.

ಟಿ20 ಕ್ರಿಕೆಟ್‌ನಿಂದ ಕೊಹ್ಲಿ, ರೋಹಿತ್‌ಗೆ ವಿಶ್ರಾಂತಿ; ಸ್ಪಷ್ಟನೆ ನೀಡಿದ ಕೋಚ್ ರಾಹುಲ್ ದ್ರಾವಿಡ್ಟಿ20 ಕ್ರಿಕೆಟ್‌ನಿಂದ ಕೊಹ್ಲಿ, ರೋಹಿತ್‌ಗೆ ವಿಶ್ರಾಂತಿ; ಸ್ಪಷ್ಟನೆ ನೀಡಿದ ಕೋಚ್ ರಾಹುಲ್ ದ್ರಾವಿಡ್

ಶತಕ ಸಿಡಿಸಿ ಅಬ್ಬರಿಸಿದ ರೋಹಿತ್-ಗಿಲ್

ಶತಕ ಸಿಡಿಸಿ ಅಬ್ಬರಿಸಿದ ರೋಹಿತ್-ಗಿಲ್

ಈ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೂರು ವರ್ಷಗಳ ಬಳಿಕ ಏಕದಿನ ಮಾದರಿಯಲ್ಲಿ ಶತಕ ಸಿಡಿಸಿ ಸಂಭ್ರಮಿಸಿದ್ದಾರೆ. 85 ಎಸೆತ ಎದುರಿಸಿದ ರೋಹಿತ್ 6 ಸಿಕ್ಸರ್ ಹಾಗೂ 9 ಬೌಂಡರಿ ನೆರವಿನೊಂದಿಗೆ 101 ರನ್‌ಗಳಿಸಿ ವಿಕೆಟ್ ಕಳೆದುಕೊಂಡರು. ಶುಬ್ಮನ್ ಗಿಲ್ 78 ಎಸೆತಗಳಲ್ಲಿ 5 ಸಿಕ್ಸರ್ ಹಾಗೂ 13 ಬೌಂಡರಿ ನೆರವಿನೊಂದಿಗೆ 112 ರನ್‌ಗಳನ್ನು ಗಳಿಸಿ ಔಟಾದರು.

ಕೆಳ ಕ್ರಮಾಂಕದಲ್ಲಿ ಅಬ್ಬರಿಸಿದ ಹಾರ್ದಿಕ್

ಕೆಳ ಕ್ರಮಾಂಕದಲ್ಲಿ ಅಬ್ಬರಿಸಿದ ಹಾರ್ದಿಕ್

ರೋಹಿತ್- ಗಿಲ್ ಜೋಡಿ ಬೇರ್ಪಟ್ಟ ಬಳಿಕ ಟೀಮ್ ಇಂಡಿಯಾದ ಮಧ್ಯಮ ಕ್ರಮಾಂಕದ ಪ್ರಮುಖ ಆಟಗಾರರನ್ನು ಹೆಚ್ಚು ಹೊತ್ತು ಕ್ರೀನ್‌ನಲ್ಲಿ ನೆಲೆಯೂರದಂತೆ ಮಾಡುವಲ್ಲಿ ಕಿವೀಸ್ ಬೌಲರ್‌ಗಳು ಯಶಸ್ಸು ಸಾಧಿಸಿದರು. ಹೀಗಾಗಿ ಟೀಮ್ ಇಂಡಿಯಾ ನಿರೀಕ್ಷಿಸಿದ್ದ ಬೃಹತ್ ಮೊತ್ತವನ್ನು ಗಳಿಸಲು ಅಸಾಧ್ಯ ಎಂಬ ಪರಿಸ್ಥಿತಿಯಿತ್ತು. ವಿರಾಟ್ ಕೊಹ್ಲಿ, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್ ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ನೆಲೆಯೂರಲು ವಿಫಲವಾದರು. ಆದರೆ ಅಂತಿಮ ಹಂತದಲ್ಲಿ ಹಾರ್ದಿಕ್ ಪಾಂಡ್ಯ ಅಬ್ಬರದ ಬ್ಯಾಟಿಂಗ್ ಪ್ರದರ್ಶಿಸಿ ತಂಡದ ಮೊತ್ತ ಹೆಚ್ಚಲು ಕಾರಣವಾದರು. 38 ಎಸೆತಗಳಲ್ಲಿ 54 ರನ್‌ ಗಳಿಸಿ ಹಾರ್ದಿಕ್ ವಿಕೆಟ್ ಕಳೆದುಕೊಂಡರು. ಇವರಿಗೆ ಶಾರ್ದೂಲ್ ಠಾಕೂರ್ ಅದ್ಭುತವಾಗಿ ಸಾಥ್ ನೀಡಿದ್ದಾರೆ.

ಡೆವೋನ್ ಕಾನ್ವೆ ಏಕಾಂಗಿ ಹೋರಾಟ

ಡೆವೋನ್ ಕಾನ್ವೆ ಏಕಾಂಗಿ ಹೋರಾಟ

ಇನ್ನು ಟೀಮ್ ಇಂಡಿಯಾ ನೀಡಿದ ಬೃಹತ್ ಗುರಿ ಬೆನ್ನಟ್ಟಲು ಕಣಕ್ಕಿಳಿದ ನ್ಯೂಜಿಲೆಂಡ್ ತಂಡ ಇನ್ನಿಂಗ್ಸ್‌ನ ಎರಡನೇ ಎಸೆತದಲ್ಲಿಯೇ ಆರಂಭಿಕ ಆಟಗಾರ ಫಿನ್ ಅಲೆನ್ ವಿಕೆಟ್ ಕಳೆದುಕೊಳ್ಳುವ ಮೂಲಕ ಆಘಾತಕ್ಕೆ ಒಳಗಾಯಿತು. ಆದರೆ 2ನೇ ವಿಕೆಟ್‌ಗೆ ಹೆನ್ರಿ ನಿಕೋಲ್ಸ್ ಹಾಗೂ ಡೆವೋನ್ ಕಾನ್ವೆ 106 ರನ್‌ಗಳ ಭರ್ಜರಿ ಜೊತೆಯಾಟ ನೀಡುವ ಮೂಲಕ ಚೇತರಿಕೆ ನೀಡಿದರು. ಬಳಿಕ ಡೆರೆಲ್ ಮಿಚೆಲ್ ಜೊತೆಗೆ ಕೂಡ ಕಾನ್ವೆ 78 ರನ್‌ಗಳ ಜೊತೆಯಾಟ ನೀಡಿದಾಗ ಟೀಮ್ ಇಂಡಿಯಾಗೆ ಈ ಪಂದ್ಯ ಕಠಿಣವಾಗಲಿದೆ ಎಂಬುದು ಸ್ಪಷ್ಟವಾಗಿತ್ತು. ಆದರೆ ಬಳಿಕ ನ್ಯೂಜಿಲೆಂಡ್ ತಂಡದ ಒಂದೊಂದೇ ವಿಕೆಟ್‌ಗಳು ಉರುಳಲು ಆರಂಭವಾಯಿತು. ಕಾನ್ವೆ ಕ್ರೀಸ್‌ನಲ್ಲಿ ಇದ್ದಷ್ಟು ಕಾಲ ಭಾರತ ತಂಡಕ್ಕೆ ಸವಾಲೊಡ್ಡುವಲ್ಲಿ ಯಶಸ್ವಿಯಾದರು. ಆದರೆ ಮತ್ತೊಂದು ತುದಿಯಲ್ಲಿ ಇತರ ಬ್ಯಾಟರ್‌ಗಳು ಕ್ರೀಸ್‌ನಲ್ಲಿ ನೆಲೆಯೂರಲು ವಿಫಲವಾದ ಕಾರಣ ಟೀಮ್ ಇಂಡಿಯಾ ಮೇಲುಗೈ ಸಾಧಿಸುತ್ತಾ ಸಾಗಿತ್ತು. ಕಾನ್ವೆ ಭರ್ಜರಿ 138 ರನ್ ಗಳಿಸಿ ವಿಕೆಟ್ ಕಳೆದುಕೊಳ್ಳುವ ಮೂಲಕ ನ್ಯೂಜಿಲೆಂಡ್ ತಂಡ ಹೋರಾಟವನ್ನು ಕೈಚೆಲ್ಲಿತು. ಅಂತಿಮವಾಗಿ ನ್ಯೂಜಿಲೆಂಡ್ 295 ರನ್‌ಗಳಿಗೆ ತನ್ನ ಎಲ್ಲಾ ವಿಕೆಟ್ ಕಳೆದುಕೊಂಡು ಶರಣಾಗಿದೆ.

ಇತ್ತಂಡಗಳ ಆಡುವ ಬಳಗ

ಇತ್ತಂಡಗಳ ಆಡುವ ಬಳಗ

ಭಾರತ: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಉಮ್ರಾನ್ ಮಲಿಕ್

ನ್ಯೂಜಿಲೆಂಡ್: ಫಿನ್ ಅಲೆನ್, ಡೆವೊನ್ ಕಾನ್ವೇ, ಹೆನ್ರಿ ನಿಕೋಲ್ಸ್, ಡೇರಿಲ್ ಮಿಚೆಲ್, ಟಾಮ್ ಲ್ಯಾಥಮ್ (ವಿಕೆಟ್ ಕೀಪರ್/ನಾಯಕ), ಗ್ಲೆನ್ ಫಿಲಿಪ್ಸ್, ಮೈಕೆಲ್ ಬ್ರೇಸ್‌ವೆಲ್, ಮಿಚೆಲ್ ಸ್ಯಾಂಟ್ನರ್, ಲಾಕಿ ಫರ್ಗುಸನ್, ಜಾಕೋಬ್ ಡಫ್ಫಿ, ಬ್ಲೇರ್ ಟಿಕ್ನರ್

Story first published: Tuesday, January 24, 2023, 21:08 [IST]
Other articles published on Jan 24, 2023
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X