ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವಿನ ಏಕದಿನ ಸರಣಿಯ ಅಂತಿಮ ಪಂದ್ಯ ಇಂದು ನಡೆಯಲಿದ್ದು ಟೀಮ್ ಇಂಡಿಯಾ ಹಾಗೂ ನ್ಯೂಜಿಲೆಂಡ್ ತಂಡಗಳು ಈ ಪಂದ್ಯಕ್ಕೆ ಸಜ್ಜಾಗಿದೆ. ಈ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ಟಾಸ್ ಗೆದ್ದಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಟೀಮ್ ಇಂಡಿಯಾಗೆ ಆರಂಭದಲ್ಲಿ ಬ್ಯಾಟಿಂಗ್ ನಡೆಸುವ ಸವಾಲು ಸ್ವೀಕರಿಸಿದೆ.
ಇನ್ನು ಭಾರತ ತಂಡ ಈ ಪಂದ್ಯದಲ್ಲಿ ಯಾವುದೇ ಬದಲಾವಣೆಯಿಲ್ಲದೆ ಕಣಕ್ಕಿಇಳಿಯುತ್ತಿದೆ. ಹೀಗಾಗಿ ಸಂಜು ಸ್ಯಾಮ್ಸನ್‌ಗೆ ನ್ಯೂಜಿಲಂಡ್‌ನಲ್ಲಿ ಅಂತಿಮ ಪಂದ್ಯದಲ್ಲಿಯೂ ಆಡುವ ಅವಕಾಶ ದೊರೆಯದೆ ನಿರಾಸೆ ಅನುಭವಿಸಿದ್ದಾರೆ. ನ್ಯೂಜಿಲೆಂಡ್ ತಂಡದಲ್ಲಿ ಒಂದು ಬದಲಾವಣೆ ಮಾಡಿಕೊಳ್ಳಲಾಗಿದ್ದು ಬ್ರಾಸ್‌ವೆಲ್ ಬದಲಿಗೆ ಆಡಮ್ ಮಿಲ್ನೆ ಆಡುವ ಬಳಗದಲ್ಲಿ ಕಾಣಿಸಿಕೊಂಡಿದ್ದಾರೆ.
Live ಸ್ಕೋರ್‌ಕಾರ್ಡ್ ಹೀಗಿದೆ:
ಈ ಸರಣಿಯಲ್ಲಿ ಮೊದಲ ಪಂದ್ಯ ಮಾತ್ರವೇ ಸಂಪೂರ್ಣವಾಗಿ ಸಾಗಿದ್ದು ಟೀಮ್ ಇಂಡಿಯಾ ಈ ಪಂದ್ಯದಲ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದ್ದರೂ ಸೋಲು ಅನುಭವಿಸಿತ್ತು. ಬೌಲಿಂಗ್ ವಿಭಾಗ ನಿರೀಕ್ಷಿತ ಪ್ರದರ್ಶನ ನೀಡದ ಕಾರಣ ಟೀಮ್ ಇಂಡಿಯಾ ಸೋಲು ಕಂಡಿತ್ತು. ಬಳಿಕ ಎರಡನೇ ಪಂದ್ಯ ಸಂಪೂರ್ಣವಾಗಿ ಮಳೆಗೆ ಆಹುತಿಯಾದ ಕಾರಣ ಫಲಿತಾಂಶವಿಲ್ಲದೆ ರದ್ದಾಗಿತ್ತು. ಹೀಗಾಗಿ ಅಂತಿಮ ಪಂದ್ಯದಲ್ಲಿ ಧವನ್ ನೇತೃತ್ವದ ಟೀಮ್ ಇಂಡಿಯಾ ಪಡೆಗೆ ಸರಣಿಯನ್ನು ಸಮಬಲಗೊಳಿಸುವ ಅವಕಾಶ ಮಾತ್ರವೇ ಇದೆ.
ನ್ಯೂಜಿಲೆಂಡ್ ಆಡುವ ಬಳಗ: ಫಿನ್ ಅಲೆನ್, ಡೆವೊನ್ ಕಾನ್ವೇ, ಕೇನ್ ವಿಲಿಯಮ್ಸನ್ (ನಾಯಕ), ಡೇರಿಲ್ ಮಿಚೆಲ್, ಟಾಮ್ ಲ್ಯಾಥಮ್ (ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್, ಆಡಮ್ ಮಿಲ್ನೆ, ಮ್ಯಾಟ್ ಹೆನ್ರಿ, ಟಿಮ್ ಸೌಥಿ, ಲಾಕಿ ಫರ್ಗುಸನ್
ಬೆಂಚ್: ಮೈಕೆಲ್ ಬ್ರೇಸ್ವೆಲ್, ಜೇಮ್ಸ್ ನೀಶಮ್
ಟೀಮ್ ಇಂಡಿಯಾ ಆಡುವ ಬಳಗ: ಶಿಖರ್ ಧವನ್ (ನಾಯಕ), ಶುಬ್ಮನ್ ಗಿಲ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ವಾಷಿಂಗ್ಟನ್ ಸುಂದರ್, ದೀಪಕ್ ಚಹಾರ್, ಉಮ್ರಾನ್ ಮಲಿಕ್, ಅರ್ಶ್‌ದೀಪ್ ಸಿಂಗ್, ಯುಜ್ವೇಂದ್ರ ಚಹಾಲ್
ಬೆಂಚ್: ಸಂಜು ಸ್ಯಾಮ್ಸನ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್