ಭಾರತ vs ನ್ಯೂಜಿಲೆಂಡ್: ಅಂತಿಮ ಟಿ20 ಪಂದ್ಯದ ಟಾಸ್ ವರದಿ, ಆಡುವ ಬಳಗ, ಲೈವ್ ಸ್ಕೋರ್

ಇತ್ತೀಚೆಗಷ್ಟೇ ಅಂತ್ಯಗೊಂಡ ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋತು ರನ್ನರ್ ಅಪ್ ಆಗಿ ಟೂರ್ನಿಯಿಂದ ಹೊರ ಹೊಮ್ಮಿದ ನ್ಯೂಜಿಲೆಂಡ್ ತಂಡ ಟೂರ್ನಿ ಮುಗಿದ ಬೆನ್ನಲ್ಲೇ ಭಾರತ ಪ್ರವಾಸವನ್ನು ಕೈಗೊಂಡಿದ್ದು ಟೀಮ್ ಇಂಡಿಯಾ ವಿರುದ್ಧ 3 ಪಂದ್ಯಗಳ ಟಿ ಟ್ವೆಂಟಿ ಸರಣಿ ಮತ್ತು 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾಗವಹಿಸುತ್ತಿದೆ.
ಮೊದಲಿಗೆ ಇತ್ತಂಡಗಳ ನಡುವಿನ ಟಿ ಟ್ವೆಂಟಿ ಸರಣಿ ಆರಂಭವಾಗಿದ್ದು ಈಗಾಗಲೇ ಮೊದಲೆರಡು ಪಂದ್ಯಗಳಲ್ಲಿ ನ್ಯೂಜಿಲೆಂಡ್ ವಿರುದ್ಧ ಟೀಂ ಇಂಡಿಯಾ ಜಯ ಸಾಧಿಸುವುದರ ಮೂಲಕ ಸರಣಿಯಲ್ಲಿ 2-0 ಅಂತರದಲ್ಲಿ ಮುನ್ನಡೆ ಸಾಧಿಸಿದ್ದು, ಸರಣಿಯನ್ನೂ ಕೈವಶ ಮಾಡಿಕೊಂಡಿದೆ. ಹೀಗೆ 3 ಪಂದ್ಯಗಳ ಟ್ವೆಂಟಿ ಸರಣಿಯಲ್ಲಿ ಟೀಮ್ ಇಂಡಿಯಾ ಈಗಾಗಲೇ ಗೆಲುವು ಸಾಧಿಸಿದ್ದು ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ ತೃತೀಯ ಹಾಗೂ ಅಂತಿಮ ಟಿ ಟ್ವೆಂಟಿ ಪಂದ್ಯ ನವೆಂಬರ್ 21ರ ಭಾನುವಾರದಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ.
ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಇಂದಿನ ಪಂದ್ಯದಲ್ಲಿ ಟಾಸ್ ಗೆದ್ದಿರುವ ರೋಹಿತ್ ಶರ್ಮಾ ನ್ಯೂಜಿಲೆಂಡ್ ವಿರುದ್ಧ ನಡೆದ ಮೊದಲನೇ ಮತ್ತು ದ್ವಿತೀಯ ಟಿ ಟ್ವೆಂಟಿ ಪಂದ್ಯಗಳಲ್ಲಿಯೂ ಕೂಡ ಟಾಸ್ ಗೆದ್ದಿದ್ದರು. ಆದರೆ ಮೊದಲೆರಡು ಪಂದ್ಯಗಳಲ್ಲಿ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದ ರೋಹಿತ್ ಶರ್ಮಾ ಇಂದು ನಡೆಯುತ್ತಿರುವ ತೃತೀಯ ಟಿ ಟ್ವೆಂಟಿ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಇನ್ನು ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆಯುತ್ತಿರುವ ತೃತೀಯ ಟಿ ಟ್ವೆಂಟಿ ಪಂದ್ಯದಲ್ಲಿ ಭಾರತ ತಂಡದ ಆರಂಭಿಕ ಆಟಗಾರ ಕೆಎಲ್ ರಾಹುಲ್ ಮತ್ತು ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಈ ಆಟಗಾರರ ಬದಲಾಗಿ ಇಶಾನ್ ಕಿಶನ್ ಮತ್ತು ಯುಜ್ವೇಂದ್ರ ಚಾಹಲ್ ಅವರಿಗೆ ಆಡುವ ಬಳಗದಲ್ಲಿ ಅವಕಾಶ ನೀಡಲಾಗಿದೆ.
ಭಾರತ ಆಡುವ ಬಳಗ: ರೋಹಿತ್ ಶರ್ಮಾ ( ನಾಯಕ ), ಇಶಾನ್ ಕಿಶನ್ (ವಿಕೆಟ್ ಕೀಪರ್), ವೆಂಕಟೇಶ್ ಅಯ್ಯರ್, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್, ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ದೀಪಕ್ ಚಹಾರ್, ಹರ್ಷಲ್ ಪಟೇಲ್ ಮತ್ತು ಯುಜ್ವೇಂದ್ರ ಚಹಾಲ್
ನ್ಯೂಜಿಲೆಂಡ್ ಆಡುವ ಬಳಗ: ಮಾರ್ಟಿನ್ ಗಪ್ಟಿಲ್, ಡೇರಿಲ್ ಮಿಚೆಲ್, ಮಾರ್ಕ್ ಚಾಪ್ಮನ್, ಗ್ಲೆನ್ ಫಿಲಿಪ್ಸ್, ಟಿಮ್ ಸೀಫರ್ಟ್ (ವಿಕೆಟ್ ಕೀಪರ್), ಜೇಮ್ಸ್ ನೀಶಮ್, ಮಿಚೆಲ್ ಸ್ಯಾಂಟ್ನರ್ (ನಾಯಕ), ಆಡಮ್ ಮಿಲ್ನೆ, ಲಾಕಿ ಫರ್ಗುಸನ್, ಇಶ್ ಸೋಧಿ, ಟ್ರೆಂಟ್ ಬೌಲ್ಟ್
ಭಾರತ vs ನ್ಯೂಜಿಲೆಂಡ್ ನಡುವಿನ ತೃತೀಯ ಟಿ20 ಪಂದ್ಯದ ಲೈವ್ ಸ್ಕೋರ್ ಇಲ್ಲಿದೆ:
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications