Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Ind vs NZ 3rd T20I: ಅಂತಿಮ ಪಂದ್ಯಕ್ಕಿದೆಯಾ ಮಳೆಯ ಆತಂಕ?: ಆಡುವ ಬಳಗ, ಸಮಯ, ನೇರಪ್ರಸಾರದ ಮಾಹಿತಿ

India vs New Zealand 3rd T20I Match probable xi, match time, pitch report and Weather report

ಭಾರತ ಹಾಗೂ ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯ ಅಂತಿಮ ಪಂದ್ಯ ಮಂಗಳವಾರ ನಡೆಯಲಿದೆ. ಮೊದಲ ಪಂದ್ಯ ಮಳೆಗೆ ಆಹುತಿಯಾದ ಬಳಿಕ ಎರಡನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಅಮೋಘ ಪ್ರದರ್ಶನ ನೀಡಿ ಭರ್ಜರಿ ಗೆಲುವು ಸಾಧಿಸಿದೆ. ಸೂರ್ಯಕುಮಾರ್ ಯಾದವ್ ಅವರ ಅಮೋಘ ಪ್ರದರ್ಶನದ ಕಾರಣದಿಂದಾಗಿ ಟೀಮ್ ಇಂಡಿಯಾ ಈ ಸರಣಿಯಲ್ಲಿ ಮೇಲುಗೈ ಸಾಧಿಸಿದ್ದು ಅಂತಿಮ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲುವು ಸಾಧಿಸಿದರೆ ಟಿ20 ಸರಣಿಯನ್ನು ತನ್ನ ವಶಕ್ಕೆ ಪಡೆಯಲಿದೆ.

ಟಿ20 ವಿಶ್ವಕಪ್‌ನ ಸೆಮಿಫೈನಲ್‌ನಲ್ಲಿ ಸೋಲು ಅನುಭವಿಸಿ ಹಿನ್ನಡೆ ಕಂಡ ಟೀಮ್ ಇಂಡಿಯಾ ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ಹಾರ್ದಿಕ್ ಪಾಂಡ್ಯ ನೇತೃತ್ವದಲ್ಲಿ ಯುವ ಆಟಗಾರರ ಪಡೆಯೊಂದಿಗೆ ಕಣಕ್ಕಿಳಿದಿದೆ. ಈ ಸರಣಿಯನ್ನು ವಶಕ್ಕೆ ಪಡೆಯುವ ಮೂಲಕ ಟೀಮ್ ಇಂಡಿಯಾ ಹೊಸ ಆರಂಭದ ನಿರೀಕ್ಷೆಯಲ್ಲಿದೆ. ಹೀಗಾಗಿ ಅಂತಿಮ ಪಂದ್ಯದ ಮೇಲೆ ಕುತೂಹಲ ಹೆಚ್ಚಾಗಿದೆ.

ಪಂದ್ಯದ ಆರಂಭ ಹಾಗೂ ನೇರಪ್ರಸಾರದ ಮಾಹಿತಿ

ಪಂದ್ಯದ ಆರಂಭ ಹಾಗೂ ನೇರಪ್ರಸಾರದ ಮಾಹಿತಿ

ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳು ಮಂಗಳವಾರ ನೇಪಿಯರ್‌ನ ಮೆಕ್‌ಲೀನ್ ಸ್ಟೇಡಿಯಂನಲ್ಲಿ ಮುಖಾಮುಖಿಯಾಗಲಿದೆ. ಈ ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ 12 ಗಂಟೆಗೆ ಆರಂಭವಾಗಲಿದ್ದು ಟಾಸ್ ಪ್ರಕ್ರಿಯೆ 11:30ಕ್ಕೆ ನಡೆಯಲಿದೆ.
ಪಂದ್ಯದ ನೇರಪ್ರಸಾರ: ಇನ್ನು ಈ ಪಂದ್ಯದ ನೇರಪ್ರಸಾರವನ್ನು ಅಮೆಜಾನ್ ಪ್ರೈಮ್ ಮೂಲಕ ವೀಕ್ಷಿಸುವ ಅವಕಾಶವಿದೆ.

ಆಯ್ಕೆಗಾರ ಚೇತನ್ ಶರ್ಮಾ ಅವಧಿಯಲ್ಲಿ ಅವಕಾಶವಂಚಿತರಾದ ಮೂವರು ಪ್ರತಿಭಾವಂತ ಕ್ರಿಕೆಟಿಗರು ಇವರು

ಅಡ್ಡಿಯಾಗಲಿದೆಯಾ ಮಳೆ

ಅಡ್ಡಿಯಾಗಲಿದೆಯಾ ಮಳೆ

ಇನ್ನು ಈ ಸರಣಿಯ ಮೊದಲ ಪಂದ್ಯ ಸಂಪೂರ್ಣವಾಗಿ ಮಳೆಗೆ ಆಹುತಿಯಾದ ಕಾರಣ ಅಭಿಮಾನಿಗಳಿಗೆ ಭಾರೀ ನಿರಾಸೆಯಾಗಿದೆ. ಇನ್ನು ಎರಡನೇ ಪಂದ್ಯಕ್ಕೂ ಮಳೆಯ ಆತಂಕ ಇದ್ದೇ ಇತ್ತು. ಆದರೆ ಪಂದ್ಯದ ಅವಧಿಯಲ್ಲಿ ಮಳೆರಾಯ ಕೃಪೆ ತೋರಿದ ಕಾರಣ ಸಂಪೂರ್ಣ ಪಂದ್ಯಕ್ಕೆ ಅವಕಾಶ ದೊರೆತಿದೆ. ಅಂತಿಮ ಪಂದ್ಯ ನೇಪಿಯರ್‌ನಲ್ಲಿ ನಡೆಯಲಿದ್ದು ಈ ಪಂದ್ಯಕ್ಕೆ ಮಳೆಯ ಆತಂಕ ಇಲ್ಲ ಎನ್ನಲಾಗಿದೆ. ಪಂದ್ಯ ದಿನ ಅಲ್ಪ ಪ್ರಮಾಣದಲ್ಲಿ ಮಳೆ ಸುರಿಯುವ ಮುನ್ಸೂಚನೆಯಿದ್ದರೂ ಪಂದ್ಯದ ಅವಧಿಯಲ್ಲಿ ಮಳೆ ಬಿಡುವುದು ನೀಡಲಿದೆ ಎಂದು ಹವಾಮಾನ ವರದಿ ಹೇಳುತ್ತಿದೆ. ಹೀಗಾಗಿ ನಿರ್ಣಾಯಕ ಪಂದ್ಯವನ್ನು ನಿರಾತಂಕವಾಗಿ ಎದುರು ನೋಡಬಹುದು.

ಪಿಚ್ ರಿಪೋರ್ಟ್ ಹೀಗಿದೆ

ಪಿಚ್ ರಿಪೋರ್ಟ್ ಹೀಗಿದೆ

ನೇಪಿಯರ್‌ನ ಮೆಕ್‌ಲೀಗ್ ಮೈದಾನ ಬ್ಯಾಟ್ಸ್‌ಮನ್‌ಗಳಿಗೆ ಅದ್ಭುತವಾಗಿ ನೆರವು ನೀಡುವ ಕಾರಣ ರನ್ ಮಳೆ ಹರಿದುಬರುವ ನಿರೀಕ್ಷೆಯಿದೆ. ಇಲ್ಲಿ ಆಡಿರುವ ಕಳೆದ ಮೂರು ಪಂದ್ಯಗಳಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ತಂಡದ ಸರಾಸರಿ ಸ್ಕೋರ್ 196. ಇನ್ನು ಇಲ್ಲಿ ವೇಗಿಗಳಿಗೆ ಉತ್ತಮ ನೆರವು ದೊರೆಯಲಿದ್ದು ಕಳೆದ ಮೂರು ಪಂದ್ಯಗಳಲ್ಲಿ 75 ಶೇಕಡಾದಷ್ಟು ವಿಕೆಟ್‌ಗಳನ್ನು ವೇಗಿಗಳೇ ಪಡೆದುಕೊಂಡಿದ್ದಾರೆ. ಇಲ್ಲಿ ಮೊದಲು ಬ್ಯಾಟಿಂಗ್ ನಡೆಸುವುದು ಉತ್ತಮ ಆಯ್ಕೆ ಎನಿಸಲಿದೆ.

ಸಂಭಾವ್ಯ ಆಡುವ ಬಳಗ

ಸಂಭಾವ್ಯ ಆಡುವ ಬಳಗ

ಟೀಮ್ ಇಂಡಿಯಾ: ರಿಷಬ್ ಪಂತ್ (ವಿಕೆಟ್ ಕೀಪರ್), ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ನಾಯಕ), ಶ್ರೇಯಸ್ ಅಯ್ಯರ್, ದೀಪಕ್ ಹೂಡಾ, ಹರ್ಷಲ್ ಪಟೇಲ್/ಅರ್ಷದೀಪ್ ಸಿಂಗ್, ಭುವನೇಶ್ವರ್ ಕುಮಾರ್, ಮೊಹಮ್ಮದ್ ಸಿರಾಜ್, ಯುಜುವೇಂದ್ರ ಚಾಹಲ್ ಮತ್ತು ವಾಷಿಂಗ್ಟನ್ ಸುಂದರ್.

ನ್ಯೂಜಿಲೆಂಡ್: ಡೆವೊನ್ ಕಾನ್ವೇ (ವಿಕೆಟ್ ಕೀಪರ್), ಫಿನ್ ಅಲೆನ್, ಮಾರ್ಕ್ ಚಾಪ್ಮನ್, ಗ್ಲೆನ್ ಫಿಲಿಪ್ಸ್, ಡೇರಿಲ್ ಮಿಚೆಲ್, ಜೇಮ್ಸ್ ನೀಶಮ್, ಮಿಚೆಲ್ ಸ್ಯಾಂಟ್ನರ್, ಆಡಮ್ ಮಿಲ್ನೆ, ಲಾಕಿ ಫರ್ಗುಸನ್, ಟಿಮ್ ಸೌಥಿ (ನಾಯಕ) ಮತ್ತು ಇಶ್ ಸೋಧಿ.

Story first published: Monday, November 21, 2022, 18:01 [IST]
Other articles published on Nov 21, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+