ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ vs ನ್ಯೂಜಿಲೆಂಡ್: ವಿಶ್ವಕಪ್ ಸೋಲಿಗೆ ವೈಟ್‌ವಾಶ್ ಮಾಡಿ ಸೇಡು ತೀರಿಸಿಕೊಳ್ಳುತ್ತಾ ಟೀಮ್ ಇಂಡಿಯಾ?

India vs New zealand: 3rd T20I, Team India eye on series whitewash against New zealand

ಭಾರತ ಹಾಗೂ ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯ ಅಂತಿಮ ಪಂದ್ಯ ಇಂದು ನಡೆಯಲಿದೆ. ಮೊದಲ ಎರಡು ಪಂದ್ಯಗಳನ್ನು ಭರ್ಜರಿಯಾಗಿ ಗೆದ್ದಿರುವ ಟೀಮ್ ಇಂಡಿಯಾ ಅಂತಿಮ ಪಂದ್ಯದಲಲ್ಇಯೂ ಗೆಲ್ಲುವ ನೆಚ್ಚಿನ ತಂಡವಾಗಿದೆ. ಈ ಪಂದ್ಯದಲ್ಲಿಯೂ ಗೆದ್ದು ಸರಣಿಯನ್ನು ಕ್ಲೀನ್ ಸ್ವೀಪ್ ಮಾಡುವ ಗುರಿ ಹೊಂದಿದೆ ರೋಹಿತ್ ಶರ್ಮಾ ಪಡೆ. ಮತ್ತೊಂದೆಡೆ ವೈಟ್‌ವಾಶ್ ಅವಮಾನವನ್ನು ತಪ್ಪಿಸಿಕೊಳ್ಳಲು ನ್ಯೂಜಿಲೆಂಡ್ ಬಳಗ ಹರಸಾಹಸ ಪಡಲಿದೆ.

ಭಾರತದ ಪರವಾಗಿ ಮೊದಲ ಎರಡು ಪಂದ್ಯಗಳಲ್ಲಿಯೂ ಅಗ್ರ ಕ್ರಮಾಂಕದ ಬ್ಯಾಟರ್‌ಗಳು ಅದ್ಭುತ ಪ್ರದರ್ಶನ ನೀಡಿದ್ದಾರೆ. ಈ ಪ್ರದರ್ಶನ ಕಿವೀಸ್ ವಿರುದ್ಧ ಗೆಲುವಿನಲ್ಲಿ ಮಹತ್ವದ ಪಾತ್ರವಹಿಸಿತು. ಬೌಲಿಂಗ್‌ನಲ್ಲಿಯೂ ಭಾರತದ ದಾಳಿ ಅತ್ಯುತ್ತಮವಾಗಿದ್ದು ಕಿವೀಸ್ ದಾಂಡಿಗರು ದೊಡ್ಡ ಮೊತ್ತ ಗಳಿಸುವ ಸೂಚನೆ ನೀಡದರು ಕೂಡ ತಡೆಯುವಲ್ಲಿ ಯಶಸ್ವಿಯಾಗಿದ್ದರು. ಅದರಲ್ಲೂ ಚೊಚ್ಚಲ ಅಂತಾರಾಷ್ಟ್ರೀಯ ಪಂದ್ಯವನ್ನು ಆಡಿದ್ದ ಹರ್ಷಲ್ ಪಟೇಲ್ ಐಪಿಎಲ್‌ನಲ್ಲಿ ನೀಡಿದ ಅಮೋಘ ಪ್ರದರ್ಶನವನ್ನು ಅಂತಾರಾಷ್ಟ್ರೀಯ ವೇದಿಕೆಯಲ್ಲಿಯೂ ಪ್ರದರ್ಶಿಸುವಲ್ಲಿ ಯಶಸ್ವಿಯಾದರು.

SMAT 2021: ಫೈನಲ್‌ಗೆ ಲಗ್ಗೆಯಿಟ್ಟ ಕರ್ನಾಟಕ, ತಮಿಳುನಾಡು ವಿರುದ್ಧ ಅಂತಿಮ ಫೈಟ್SMAT 2021: ಫೈನಲ್‌ಗೆ ಲಗ್ಗೆಯಿಟ್ಟ ಕರ್ನಾಟಕ, ತಮಿಳುನಾಡು ವಿರುದ್ಧ ಅಂತಿಮ ಫೈಟ್

ಹರ್ಷಲ್ ಪಟೇಲ್ ಚೊಚ್ಚಲ ಪಂದ್ಯದಲ್ಲಿಯೇ ಎರಡು ವಿಕೆಟ್ ಪಡೆಯುವ ಮೂಲಕ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಇನ್ನು ಅನುಭವಿ ಆರ್ ಅಶ್ವಿನ್ ತಮ್ಮ ಅದ್ಭುತ ಪ್ರದರ್ಶನವನ್ನು ಕಳೆದ ಪಂದ್ಯದಲ್ಲಿಯೂ ತೋರಿಸಿದ್ದರು. ಹೀಗಾಗಿ ಭಾರತದ ಬೌಲಿಂಗ್ ವಿಭಾಗದ ಪ್ರದರ್ಶನ ಅತ್ಯುತ್ತಮವಾಗಿದೆ. ಇಂದಿನ ಪಂದ್ಯದಲ್ಲಿಯೂ ಇದೇ ಪ್ರದರ್ಶನ ಮುಂದುವರಿಯುವ ವಿಶ್ವಾಸವಿದೆ.

ಭಾರತ-ನ್ಯೂಜಿಲೆಂಡ್ ಅಂತಿಮ ಟಿ20 ಪಂದ್ಯ: ಸಂಭಾವ್ಯ ಪ್ಲೇಯಿಂಗ್ 11, ಹವಾಮಾನ, ಪಿಚ್‌ ರಿಪೋರ್ಟ್ಭಾರತ-ನ್ಯೂಜಿಲೆಂಡ್ ಅಂತಿಮ ಟಿ20 ಪಂದ್ಯ: ಸಂಭಾವ್ಯ ಪ್ಲೇಯಿಂಗ್ 11, ಹವಾಮಾನ, ಪಿಚ್‌ ರಿಪೋರ್ಟ್

ಇನ್ನು ಈ ಮೂರನೇ ಟಿ20 ಪಂದ್ಯದಲ್ಲಿ ಕೆಲ ಬದಲಾವಣೆಗಳು ಆಗುವ ಸಾಧ್ಯತೆಯೂ ಇದೆ. ಟೀಮ್ ಇಂಡಿಯಾ ಈಗಾಗಲೇ ಸರಣಿಯನ್ನು ಗೆದ್ದಿರುವ ಕಾರಣದಿಂದಾಗಿ ಬದಲಾವಣೆ ಮಾಡಿಕೊಳ್ಳುವ ನಿರೀಕ್ಷೆಯಿದೆ. ಆರಂಭಿಕ ಆಟಗಾರ ಕೆಎಲ್ ರಾಹುಲ್‌ಗೆ ವಿಶ್ರಾಂತಿ ನೀಡಿ ಇಶಾನ್ ಕಿಶನ್‌ಗೆ ಆರಂಭಿಕನಾಗಿ ಅವಕಾಶ ದೊರೆಯುವ ಸಾಧ್ಯತೆಯೂ ಇದೆ. ಅಲ್ಲದೆ ಈ ಸರಣಿಯಲ್ಲಿ ಒಂದೂ ಪಂದ್ಯವನ್ನಾಡದ ಅನುಭವಿ ಯುಜುವೇಂದದ್ರ ಚಾಹಲ್ ಮತ್ತೊಮ್ಮೆ ಆಡುವ ಬಳಗದಲ್ಲಿ ಸ್ಥಾನ ಪಡೆಯುವ ಸಾಧ್ಯತೆಯಿದೆ.

 ನಾನು ಯಾವಾಗಲೂ ನಿಮ್ಮ ನಂ.1 ಫ್ಯಾನ್: ABD ನಿವೃತ್ತಿ ಸುದ್ದಿ ಕೇಳಿ ತೀವ್ರ ನೊಂದುಕೊಂಡ ವಿರಾಟ್ ಕೊಹ್ಲಿ ನಾನು ಯಾವಾಗಲೂ ನಿಮ್ಮ ನಂ.1 ಫ್ಯಾನ್: ABD ನಿವೃತ್ತಿ ಸುದ್ದಿ ಕೇಳಿ ತೀವ್ರ ನೊಂದುಕೊಂಡ ವಿರಾಟ್ ಕೊಹ್ಲಿ

ಭಾರತ ಸಂಪೂರ್ಣ ಸ್ಕ್ವಾಡ್ : ರೋಹಿತ್ ಶರ್ಮಾ (ನಾಯಕ), ರಿಷಭ್ ಪಂತ್ (ವಿಕೆಟ್ ಕೀಪರ್), ಕೆಎಲ್ ರಾಹುಲ್, ವೆಂಕಟೇಶ್ ಅಯ್ಯರ್, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಭುವನೇಶ್ವರ್ ಕುಮಾರ್, ದೀಪಕ್ ಚಾಹರ್, ಹರ್ಷಲ್ ಪಟೇಲ್, ಯುಜ್ವೇಂದ್ರ ಚಾಹಲ್, ಅವೇಶ್ ಖಾನ್, ಇಶಾನ್ ಕಿಶನ್ , ಮೊಹಮ್ಮದ್ ಸಿರಾಜ್, ರುತುರಾಜ್ ಗಾಯಕವಾಡ

ನ್ಯೂಜಿಲೆಂಡ್ ಸಂಪೂರ್ಣ ಸ್ಕ್ವಾಡ್: ಟಿಮ್ ಸೀಫರ್ಟ್ (ವಿಕೆಟ್ ಕೀಪರ್), ಟಿಮ್ ಸೌಥಿ (ನಾಯಕ), ಮಾರ್ಟಿನ್ ಗಪ್ಟಿಲ್, ಡೇರಿಲ್ ಮಿಚೆಲ್, ಮಾರ್ಕ್ ಚಾಪ್ಮನ್, ಗ್ಲೆನ್ ಫಿಲಿಪ್ಸ್, ಜೇಮ್ಸ್ ನೀಶಮ್, ಮಿಚೆಲ್ ಸ್ಯಾಂಟ್ನರ್, ಆಡಮ್ ಮಿಲ್ನೆ, ಇಶ್ ಸೋಧಿ, ಟ್ರೆಂಟ್ ಬೌಲ್ಟ್, ಟಾಡ್ ಆಸ್ಟಲ್, ಲಾಕಿ ಫರ್ಗುಸನ್, ರಾಚಿನ್ ರವೀಂದ್ರ

Story first published: Sunday, November 21, 2021, 10:20 [IST]
Other articles published on Nov 21, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X