IND vs NZ 4th T20I: ಟಾಸ್ ಗೆದ್ದ ಸೂರ್ಯ ಪಡೆ ಬೌಲಿಂಗ್ ಆಯ್ಕೆ
ವಿಶಾಖಪಟ್ಟಣಂ: ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ನಾಲ್ಕನೇ ಟಿ20 ಪಂದ್ಯ ಬುಧವಾರ ನಡೆಯುತ್ತಿದೆ. ಈ ಪಂದ್ಯದಲ್ಲಿ ಗೆಲುವು ಸಾಧಿಸಿ, ಕ್ಲೀನ್ ಸಾಧಿಸುವ ಕನಸಿಗೆ ಹತ್ತಿರವಾಗು ಇರಾದೆಯನ್ನು ಹೊಂದಿದೆ. ನಾಲ್ಕನೇ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ಟೂರ್ನಿಯಲ್ಲಿ ಸತತ ಮೂರು ಪಂದ್ಯಗಳನ್ನು ಗೆದ್ದಿರುವ ಟೀಮ್ ಇಂಡಿಯಾ ಈಗಾಗಲೇ ಸರಣಿಯನ್ನು ವಶಕ್ಕೆ ಪಡೆದುಕೊಂಡಿದೆ. ಟಿ20 ವಿಶ್ವಕಪ್‌ಗೂ ಮುನ್ನ ಟೀಮ್ ಇಂಡಿಯಾ ತಯಾರಿ ನಡೆಸಲ ಈ ಸರಣಿ ಮಹತ್ವದಾಗಿದೆ. ಈ ಪಂದ್ಯದಲ್ಲಿ ಸೂರ್ಯ ಪಡೆ ಒಂದು ಬದಲಾವಣೆಯೊಂದಿಗೆ ಕಣಕ್ಕೆ ಇಳಿಯಲಿದೆ. ಮಧ್ಯಮ ಕ್ರಮಾಂಕದ ಸ್ಟಾರ್ ಆಟಗಾರ ಇಶಾನ್ ಕಿಶನ್ ಅವರಿಗೆ ವಿಶ್ರಾಂತಿ ನೀಡಲಾಗಿದ್ದು, ಇವರ ಬದಲಿಗೆ ಅರ್ಷದೀಪ್ ಸಿಂಗ್ ಅವರಿಗೆ ಅವಕಾಶ ನೀಡಲಾಗಿದೆ.

ನ್ಯೂಜಿಲೆಂಡ್ ತಂಡ ಸಹ ಒಂದು ಬದಲಾವಣೆಯೊಂದಿಗೆ ಕಣಕ್ಕೆ ಇಳಿಯಲಿದೆ. ಈ ಪಂದ್ಯದಲ್ಲಿ ಜಯ ಸಾಧಿಸಿ ಅಬ್ಬರಿಸುವ ಇರಾದೆಯನ್ನು ನ್ಯೂಜಿಲೆಂಡ್ ಹೊಂದಿದೆ. ಇನ್ನು ಮಹತ್ವದ ಪಂದ್ಯಕ್ಕಾಗಿ ನ್ಯೂಜಿಲೆಂಡ್ ಕೈಲ್ ಜೇಮಿಸನ್ ಅವರಿಗೆ ವಿಶ್ರಾಂತಿ ನೀಡಿದೆ. ಅಲ್ಲದೆ ಜಾಕ್ ಫೌಲ್ಕ್ಸ್ ಅವರಿಗೆ ಅವಕಾಶ ನೀಡಲಾಗಿದೆ.
ಭಾರತ ತಂಡ: ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ರಿಂಕು ಸಿಂಗ್, ಹರ್ಷಿತ್ ರಾಣಾ, ಕುಲದೀಪ್ ಯಾದವ್, ಅರ್ಷದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ, ರವಿ ಬಿಷ್ಣೋಯ್.
ನ್ಯೂಜಿಲೆಂಡ್ ತಂಡ: ಟಿಮ್ ಸೀಫರ್ಟ್ (ವಿಕೆಟ್ ಕೀಪರ್), ಡೆವೊನ್ ಕಾನ್ವೇ, ರಚಿನ್ ರವೀಂದ್ರ, ಗ್ಲೆನ್ ಫಿಲಿಪ್ಸ್, ಡ್ಯಾರಿಲ್ ಮಿಚೆಲ್, ಮಾರ್ಕ್ ಚಾಪ್ಮನ್, ಮಿಚೆಲ್ ಸ್ಯಾಂಟ್ನರ್ (ನಾಯಕ), ಜಾಕ್ ಫೌಲ್ಕ್ಸ್, ಮ್ಯಾಟ್ ಹೆನ್ರಿ, ಜೇಕ್ಕಬ್ ಡಫಿ, ಇಶ್ ಸೋಧಿ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications