ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ vs ನ್ಯೂಜಿಲೆಂಡ್: ಎರಡನೇ ಪಂದ್ಯದ ಪ್ಲೇಯಿಂಗ್ XI ಬಗ್ಗೆ ರಹಾನೆ ಹೇಳಿದ್ದಿಷ್ಟು!

India vs New Zealand: Ajinkya Rahane on Team India playing XI for 2nd test

ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವಿನ ಟೆಸ್ಟ್ ಸರಣಿಯ ಮೊದಲ ಪಂದ್ಯ ಡ್ರಾದಲ್ಲಿ ಅಂತ್ಯವಾಗಿದೆ. ರೋಚಕವಾಗಿ ನಡೆದ ಈ ಸೆಣೆಸಾಟದಲ್ಲಿ ಭಾರತ ಗೆಲುವು ಸಾಧಿಸಲು ಕೊನೇಯ ಹಂತದಲ್ಲಿ ವಿಫಲವಾಯಿತು. ಇದೀಗ ಎರಡನೇ ಪಂದ್ಯದತ್ತ ಎಲ್ಲರ ಚಿತ್ತ ನೆಟ್ಟಿದೆ. ಡಿಸೆಂಬರ್ 3ರಿಂದ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಈ ಸರಣಿಯ ಎರಡನೇ ಹಾಗೂ ಅಂತಿಮ ಪಂದ್ಯ ನಡೆಯಲಿದೆ.

ಈ ಪಂದ್ಯಕ್ಕೆ ಟೀಮ್ ಇಂಡಿಯಾಗೆ ನಾಯಕ ವಿರಾಟ್ ಕೊಹ್ಲಿ ಮರಳಲಿದ್ದು ನಾಯಕತ್ವದ ಜವಾಬ್ಧಾರಿ ವಹಿಸಿಕೊಳ್ಳಲಿದ್ದಾರೆ. ಅಲ್ಲದೆ ಶ್ರೇಯಸ್ ಐಯ್ಯರ್ ಅದ್ಭುತ ಫಾರ್ಮ್‌ನಲ್ಲಿರುವ ಕಾರಣದಿಂದಾಗಿ ಆಡುವ ಬಳಗದಿಂದ ಹೊರಗಿಡುವ ಸಾಧ್ಯತೆ ಬಹಳ ಕಡಿಮೆಯಿದೆ. ಈ ವಿಚಾರವಾಗಿ ಹಂಗಾಮಿ ನಾಯಕ ಅಜಿಂಕ್ಯಾ ರಹಾನೆ ಬಳಿ ಪ್ರಶ್ನೆ ಎದುರಾಯಿತು. ಇದಕ್ಕೆ ರಹಾನೆ ಟೀಮ್ ಇಂಡಿಯಾ ಮ್ಯಾನೇಜ್‌ಮೆಂಟ್ ಕಡೆಗೆ ಬೊಟ್ಟು ಮಾಡಿದ್ದಾರೆ.

5ನೇ ದಿನವೂ ವಿಕೆಟ್ ಕೀಪಿಂಗ್‌ಗೆ ಕಣಕ್ಕಿಳಿಯದ ವೃದ್ದಿಮಾನ್ ಸಾಹ: ಕೆ.ಎಸ್‌ ಭರತ್‌ ಕಣಕ್ಕೆ5ನೇ ದಿನವೂ ವಿಕೆಟ್ ಕೀಪಿಂಗ್‌ಗೆ ಕಣಕ್ಕಿಳಿಯದ ವೃದ್ದಿಮಾನ್ ಸಾಹ: ಕೆ.ಎಸ್‌ ಭರತ್‌ ಕಣಕ್ಕೆ

ಪಂದ್ಯದ ಮುಕ್ತಾಯದ ನಂತರ ಮಾತನಾಡಿದ ಅಜಂಕ್ಯಾ ರಹಾನೆ ಟೀಮ್ ಇಂಡಿಯಾ ಕಾನ್ಪುರ ಪಂದ್ಯವನ್ನು ಗೆಲ್ಲು ಬೇಕಾದ ಎಲ್ಲಾ ಪ್ರಯತ್ನವನ್ನು ಕೂಡ ನಡೆಸಿತು. ಆಟಗಾರರು ಸಾಧ್ಯವಿರುವ ಎಲ್ಲಾ ಪ್ರಯತ್ನವನ್ನು ಮಾಡಿದ್ದಾರೆ. ಇದಕ್ಕಿಂತ ಹೆಚ್ಚಿನದನ್ನು ಮಾಡಲು ಸಾಧ್ಯವಿರಲಿಲ್ಲ ಎಂದು ಅಜಿಂಕ್ಯಾ ರಹಾನೆ ತಮಡದ ಆಟಗಾರರ ಪ್ರದರ್ಶನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. "ಇದು ಕ್ರಿಕೆಟ್‌ನ ಅತ್ಯುತ್ತಮವಾದ ಪಂದ್ಯವಾಗಿತ್ತು, ಅವರಿಂದ ಅದ್ಭುತವಾದ ಪ್ರದರ್ಶನ ಬಂದಿತ್ತು. ಮೊದಲ ಸೆಶನ್‌ನ ನಂತರ ನಾವು ಕೂಡ ಅದ್ಭುತವಾಗಿ ಪಂದ್ಯವನ್ನು ಹಿಡಿತಕ್ಕೆ ಪಡೆದುಕೊಂಡಿದ್ದೆವು" ಎಂದಿದ್ದಾರೆ ಅಜಿಂಕ್ಯಾ ರಹಾನೆ.

ಇನ್ನು ಈ ಸಂದರ್ಬದಲ್ಲಿ ಕಳಪೆ ಫಾರ್ಮ್‌ನಿಂದಾಗಿ ಟೀಕೆಗೆ ಒಳಗಾಗಿರುವ ಅಜಿಂಕ್ಯಾ ರಹಾನೆ ತಮಡದ ಯುವ ಆಟಗಾರ ಶ್ರೇಯಸ್ ಐಯ್ಯರ್ ನೀಡಿದ ಅಮೋಘ ಪ್ರದರ್ಶನದ ಬಗ್ಗೆ ಪ್ರಶಂಸೆಯ ಮಾತುಗಳನ್ನು ಆಡಿದ್ದಾರೆ. ಆದರೆ ಮುಂದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಆಡುವ ಬಳಗದಲ್ಲಿ ಸ್ಥಾನ ಪಡೆದುಕೊಂಡಾಗ ಅವರಿಗೆ ಸ್ಥಾನ ಬಿಟ್ಟುಕೊಡುವ ಆಟಗಾರ ಯಾರು ಎಂಬುದಕ್ಕೆ ಉತ್ತರಿಸಲು ನಿರಾಕರಿಸಿದ್ದಾರೆ.

"ಶ್ರೇಯಸ್ ಐಯ್ಯರ್ ನೀಡಿದ ಪ್ರದರ್ಶನಕ್ಕೆ ನಾನು ನಿಜಕ್ಕೂ ಸಂತೋಷಗೊಂಡಿದ್ದೇನೆ. ಆತ ಟೆಸ್ಟ್‌ಗೆ ಪದಾರ್ಪಣೆ ಮಾಡಲು ಸುದೀರ್ಘ ಕಾಲದಿಂದ ಕಾಯುತ್ತಿದ್ದರು. ಆತ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ನೀಡಿದ ಅದ್ಭುತವಾದ ಪ್ರದರ್ಶನದಂತೆಯೇ ಇಲ್ಲಿಯೂ ತಮ್ಮ ಆಟವನ್ನು ಮುಂದುವರಿಸಿದ್ದಾರೆ. ಮುಂದಿನ ಪಂದ್ಯಕ್ಕೆ ವಿರಾಟ್ ಕೊಹ್ಲಿ ಮರಳಲಿದ್ದಾರೆ. ಈ ಸಂದರ್ಭದಲ್ಲಿ ತಂಡದ ಮ್ಯಾನೇಜ್‌ಮೆಂಟ್ ಆಡುವ ಬಳಗದ ಬಗ್ಗೆ ನಿರ್ಧಾರವನ್ನು ತೆಗೆದುಕೊಳ್ಳಲಿದೆ" ಎಂದಿದ್ದಾರೆ ಅಜಿಂಕ್ಯಾ ರಹಾನೆ.

ಬಹುಕಾಲದ ಗೆಳತಿ ಜೊತೆಗೆ, ಟೀಂ ಇಂಡಿಯಾ ಬೌಲರ್ ಶಾರ್ದೂಲ್ ಠಾಕೂರ್ ನಿಶ್ಚಿತಾರ್ಥಬಹುಕಾಲದ ಗೆಳತಿ ಜೊತೆಗೆ, ಟೀಂ ಇಂಡಿಯಾ ಬೌಲರ್ ಶಾರ್ದೂಲ್ ಠಾಕೂರ್ ನಿಶ್ಚಿತಾರ್ಥ

ಕಾನ್ಪುರ ಟೆಸ್ಟ್‌ನಲ್ಲಿ ಟೀಮ್ ಇಂಡಿಯಾದ ಆಡುವ ಬಳಗ: ಶುಬ್ಮನ್ ಗಿಲ್, ಮಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ(ನಾಯಕ), ಶ್ರೇಯಸ್ ಅಯ್ಯರ್, ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ರವಿಚಂದ್ರನ್ ಅಶ್ವಿನ್, ಇಶಾಂತ್ ಶರ್ಮಾ, ಉಮೇಶ್ ಯಾದವ್
ಬೆಂಚ್: ಪ್ರಸಿದ್ಧ್ ಕೃಷ್ಣ, ಸೂರ್ಯಕುಮಾರ್ ಯಾದವ್, ಜಯಂತ್ ಯಾದವ್, ಮೊಹಮ್ಮದ್ ಸಿರಾಜ್, ಶ್ರೀಕರ್ ಭರತ್

ನ್ಯೂಜಿಲೆಂಡ್ ಆಡುವ ಬಳಗ: ಟಾಮ್ ಲ್ಯಾಥಮ್, ವಿಲ್ ಯಂಗ್, ಕೇನ್ ವಿಲಿಯಮ್ಸನ್ (ನಾಯಕ), ರಾಸ್ ಟೇಲರ್, ಹೆನ್ರಿ ನಿಕೋಲ್ಸ್, ಟಾಮ್ ಬ್ಲಂಡೆಲ್ (ವಿಕೆಟ್ ಕೀಪರ್), ರಚಿನ್ ರವೀಂದ್ರ, ಕೈಲ್ ಜೇಮಿಸನ್, ಟಿಮ್ ಸೌಥಿ, ಅಜಾಜ್ ಪಟೇಲ್, ವಿಲಿಯಂ ಸೊಮರ್ವಿಲ್ಲೆ
ಬೆಂಚ್: ಮಿಚೆಲ್ ಸ್ಯಾಂಟ್ನರ್, ನೀಲ್ ವ್ಯಾಗ್ನರ್, ಗ್ಲೆನ್ ಫಿಲಿಪ್ಸ್, ಡೇರಿಲ್ ಮಿಚೆಲ್

BCCI ಗೆ ಕ್ಯಾರೇ ಎನ್ನದ ಪಾಂಡ್ಯ ಮುಂದಿನ ಕ್ರಿಕೆಟ್ ಭವಿಷ್ಯ?? | Oneindia Kannada

Story first published: Tuesday, November 30, 2021, 10:25 [IST]
Other articles published on Nov 30, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X