ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಕೆಎಲ್ ರಾಹುಲ್‌ ಅಲಭ್ಯತೆ ಕುರಿತು ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ ಎಂದ ಅಜಿಂಕ್ಯಾ ರಹಾನೆ

India vs New Zealand: Ajinkya Rahane talked about KL Rahul’s absence in the Test squad

ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋಲುವುದರ ಮೂಲಕ ರನ್ನರ್ ಅಪ್ ಆಗಿ ಹೊರಹೊಮ್ಮಿದ ನ್ಯೂಜಿಲೆಂಡ್ ಭಾರತ ಪ್ರವಾಸವನ್ನು ಕೈಗೊಂಡಿದ್ದು ಈಗಾಗಲೇ 3 ಪಂದ್ಯಗಳ ಟಿ ಟ್ವೆಂಟಿ ಸರಣಿಯನ್ನು ಆಡಿ ಮುಗಿಸಿದೆ. ಹೌದು, ಟಿ ಟ್ವೆಂಟಿ ಸರಣಿ ಮತ್ತು ಟೆಸ್ಟ್ ಸರಣಿಗಳನ್ನು ಆಡಲು ನ್ಯೂಜಿಲೆಂಡ್ ಭಾರತ ಪ್ರವಾಸವನ್ನು ಕೈಗೊಂಡಿದ್ದು ಇತ್ತಂಡಗಳ ನಡುವೆ ನಡೆದ 3 ಪಂದ್ಯಗಳ ಟಿ ಟ್ವೆಂಟಿ ಸರಣಿಯಲ್ಲಿ ನ್ಯೂಜಿಲೆಂಡ್ ವಿರುದ್ಧ ಟೀಮ್ ಇಂಡಿಯಾ ಎಲ್ಲ 3 ಪಂದ್ಯಗಳಲ್ಲಿ ಜಯ ಸಾಧಿಸುವುದರ ಮೂಲಕ ವೈಟ್ ವಾಷ್ ಸಾಧನೆ ಮಾಡಿದೆ.

ನ್ಯೂಜಿಲೆಂಡ್‌ ವಿರುದ್ಧದ ಪ್ರಥಮ ಟೆಸ್ಟ್‌ನಿಂದ ವಿಶ್ರಾಂತಿ ಪಡೆದಿದ್ದರೂ ಅಭ್ಯಾಸ ಆರಂಭಿಸಿದ ಕೊಹ್ಲಿ!ನ್ಯೂಜಿಲೆಂಡ್‌ ವಿರುದ್ಧದ ಪ್ರಥಮ ಟೆಸ್ಟ್‌ನಿಂದ ವಿಶ್ರಾಂತಿ ಪಡೆದಿದ್ದರೂ ಅಭ್ಯಾಸ ಆರಂಭಿಸಿದ ಕೊಹ್ಲಿ!

ಹೀಗೆ ನ್ಯೂಜಿಲೆಂಡ್ ವಿರುದ್ಧದ ಟಿ ಟ್ವೆಂಟಿ ಸರಣಿಯನ್ನು ವೈಟ್ ವಾಷ್ ಮಾಡುವ ಮೂಲಕ ಟಿ ಟ್ವೆಂಟಿ ವಿಶ್ವಕಪ್ ಸೋಲಿನ ಸೇಡನ್ನು ತೀರಿಸಿಕೊಂಡ ಟೀಮ್ ಇಂಡಿಯಾ ಇದೀಗ ನ್ಯೂಜಿಲೆಂಡ್ ವಿರುದ್ಧ ಆರಂಭವಾಗಲಿರುವ ಟೆಸ್ಟ್ ಸರಣಿಯಲ್ಲಿ ಕೂಡ ವೈಟ್ ವಾಶ್ ಬಳಿಯುವ ಮೂಲಕ ಇದೇ ವರ್ಷ ನಡೆದಿದ್ದ ಪ್ರತಿಷ್ಠಿತ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಸೋತಿದ್ದರ ಸೇಡನ್ನು ತೀರಿಸಿಕೊಳ್ಳುವ ತವಕದಲ್ಲಿದೆ. ಇನ್ನು ನವೆಂಬರ್ 25ರಿಂದ ಕಾನ್ಪುರ ಕ್ರಿಕೆಟ್ ಕ್ರೀಡಾಂಗಣದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ ಮೊದಲ ಟೆಸ್ಟ್ ಪಂದ್ಯ ಆರಂಭವಾಗಲಿದ್ದು ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ಅಜಿಂಕ್ಯಾ ರಹಾನೆ ಟೀಮ್ ಇಂಡಿಯಾವನ್ನು ನಾಯಕನಾಗಿ ಮುನ್ನಡೆಸಲಿದ್ದಾರೆ.

ಟೆಸ್ಟ್‌ನಿಂದ ವಿಶ್ರಾಂತಿಗೆಂದು ಹೊರಗುಳಿದ ರೋಹಿತ್ ಮತ್ತು ಕೊಹ್ಲಿ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗಟೆಸ್ಟ್‌ನಿಂದ ವಿಶ್ರಾಂತಿಗೆಂದು ಹೊರಗುಳಿದ ರೋಹಿತ್ ಮತ್ತು ಕೊಹ್ಲಿ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ

ಈ ಹಿಂದೆ ಆಸ್ಟ್ರೇಲಿಯಾ ಪ್ರವಾಸವನ್ನು ಕೈಗೊಂಡಿದ್ದಾಗ ವೈಯಕ್ತಿಕ ಕಾರಣಗಳಿಂದ ವಿರಾಟ್ ಕೊಹ್ಲಿ ತವರಿಗೆ ಮರಳಿದ ಸಂದರ್ಭದಲ್ಲಿ ನಾಯಕತ್ವವನ್ನು ವಹಿಸಿಕೊಂಡು ಆಸ್ಟ್ರೇಲಿಯ ನೆಲದಲ್ಲಿಯೇ ಆಸ್ಟ್ರೇಲಿಯಾ ತಂಡಕ್ಕೆ ಸರಣಿ ಸೋಲುಣಿಸುವುದರ ಮೂಲಕ ಅಜಿಂಕ್ಯ ರಹಾನೆ ಸಾಧನೆ ಮಾಡಿದ್ದರು. ಇದೀಗ ಮತ್ತೊಮ್ಮೆ ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ಟೀಮ್ ಇಂಡಿಯಾವನ್ನು ಅಜಿಂಕ್ಯ ರಹಾನೆ ಮುನ್ನಡೆಸಲಿದ್ದು ಮತ್ತೊಮ್ಮೆ ಸರಣಿ ಗೆಲುವು ಸಾಧಿಸುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ. ಹೀಗೆ ನಾಯಕತ್ವವನ್ನು ವಹಿಸಿಕೊಳ್ಳಲಿರುವ ಅಜಿಂಕ್ಯ ರಹಾನೆ ನ್ಯೂಜಿಲೆಂಡ್ ವಿರುದ್ಧದ ಪ್ರಥಮ ಟೆಸ್ಟ್ ಆರಂಭಕ್ಕೂ ಮುನ್ನ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದು ಕೆಎಲ್ ರಾಹುಲ್ ಅಲಭ್ಯತೆ ಕುರಿತು ಈ ಕೆಳಕಂಡಂತೆ ಹೇಳಿಕೆ ನೀಡಿದ್ದಾರೆ.

ಕೆಎಲ್ ರಾಹುಲ್ ಅಲಭ್ಯತೆ ಕುರಿತು ಚಿಂತಿಸುವ ಅಗತ್ಯವಿಲ್ಲ

ಕೆಎಲ್ ರಾಹುಲ್ ಅಲಭ್ಯತೆ ಕುರಿತು ಚಿಂತಿಸುವ ಅಗತ್ಯವಿಲ್ಲ

ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿ ಆರಂಭಕ್ಕೂ ಮುನ್ನ ತೊಡೆಯ ನೋವಿನಿಂದ ಬಳಲುತ್ತಿರುವ ಕೆಎಲ್ ರಾಹುಲ್ ಟೂರ್ನಿಯಿಂದ ಹೊರಬಿದ್ದಿದ್ದರು. ಹೀಗಾಗಿ ಕೆಎಲ್ ರಾಹುಲ್ ಆಡುತ್ತಿದ್ದ ಆರಂಭಿಕ ಕ್ರಮಾಂಕದಲ್ಲಿ ಯಾರು ಕಣಕ್ಕಿಳಿಯಲಿದ್ದಾರೆ ಎನ್ನುವ ವಿಷಯದ ಕುರಿತು ಚರ್ಚೆಗಳು ಜೋರಾಗಿದ್ದವು. ಈ ಕುರಿತಾಗಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಜಿಂಕ್ಯ ರಹಾನೆ "ಕೆ ಎಲ್ ರಾಹುಲ್ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯಿಂದ ಹೊರಗುಳಿದದ್ದು ನಿಜಕ್ಕೂ ದೊಡ್ಡ ಆಘಾತ. ಆತ ಉತ್ತಮ ಫಾರ್ಮ್‌ನಲ್ಲಿದ್ದ, ಇಂಗ್ಲೆಂಡ್ ನೆಲದಲ್ಲಿ ನಡೆದ ಟೆಸ್ಟ್ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದ, ಖಂಡಿತವಾಗಿಯೂ ನಾವು ಆತನನ್ನು ಮಿಸ್ ಮಾಡಿಕೊಳ್ಳುತ್ತಿದ್ದೇವೆ. ಆದರೆ ಕೆಎಲ್ ರಾಹುಲ್ ಸ್ಥಾನವನ್ನು ತುಂಬಬಲ್ಲ ಆಟಗಾರರು ತಂಡದಲ್ಲಿದ್ದಾರೆ. ಈ ಹಿಂದೆ ನಡೆದ ಟೆಸ್ಟ್ ಪಂದ್ಯಗಳಲ್ಲಿ ತಂಡದ ಆಟಗಾರರು ಉತ್ತಮ ಪ್ರದರ್ಶನ ನೀಡಿದ್ದಾರೆ. ಹೀಗಾಗಿ ಕೆಎಲ್ ರಾಹುಲ್ ಸ್ಥಾನದ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ" ಎಂದು ಹೇಳಿಕೆ ನೀಡಿದ್ದಾರೆ.

ರೋಹಿತ್ ಮತ್ತು ಕೆಎಲ್ ರಾಹುಲ್ ಅಲಭ್ಯತೆಯಲ್ಲಿ ಆರಂಭಿಕರಾಗಿ ಕಣಕ್ಕಿಳಿಯಲಿದೆ ಈ ಜೋಡಿ

ರೋಹಿತ್ ಮತ್ತು ಕೆಎಲ್ ರಾಹುಲ್ ಅಲಭ್ಯತೆಯಲ್ಲಿ ಆರಂಭಿಕರಾಗಿ ಕಣಕ್ಕಿಳಿಯಲಿದೆ ಈ ಜೋಡಿ

ಕೆಎಲ್ ರಾಹುಲ್ ಗಾಯದ ಸಮಸ್ಯೆಯ ಕಾರಣದಿಂದ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದರೆ, ರೋಹಿತ್ ಶರ್ಮಾ ವಿಶ್ರಾಂತಿ ಕಾರಣದಿಂದಾಗಿ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದಾರೆ. ಹೀಗಾಗಿ ಕೆಎಲ್ ರಾಹುಲ್ ಮತ್ತು ರೋಹಿತ್ ಶರ್ಮಾ ನಿರ್ವಹಿಸುತ್ತಿದ್ದ ಆರಂಭಿಕರ ಪಾತ್ರವನ್ನು ಮಯಾಂಕ್ ಅಗರ್ವಾಲ್ ಮತ್ತು ಶುಬ್ ಮನ್ ಗಿಲ್ ನಿರ್ವಹಿಸುವ ಸಾಧ್ಯತೆಗಳಿವೆ.

ನ್ಯೂಜಿಲೆಂಡ್‌ ವಿರುದ್ಧದ ಪ್ರಥಮ ಟೆಸ್ಟ್‌ಗೆ ಭಾರತ ತಂಡ

ನ್ಯೂಜಿಲೆಂಡ್‌ ವಿರುದ್ಧದ ಪ್ರಥಮ ಟೆಸ್ಟ್‌ಗೆ ಭಾರತ ತಂಡ

ಅಜಿಂಕ್ಯ ರಹಾನೆ (ನಾಯಕ), ಮಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ (ಉಪನಾಯಕ), ಶುಭಮನ್ ಗಿಲ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ವೃದ್ಧಿಮಾನ್ ಸಹಾ (ವಿಕೆಟ್-ಕೀಪರ್), ಕೆಎಸ್ ಭರತ್ (ವಿಕೆಟ್-ಕೀಪರ್), ರವೀಂದ್ರ ಜಡೇಜಾ, ಆರ್. ಅಶ್ವಿನ್, ಆರ್. ಪಟೇಲ್, ಜಯಂತ್ ಯಾದವ್, ಇಶಾಂತ್ ಶರ್ಮಾ, ಉಮೇಶ್ ಯಾದವ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.

Story first published: Wednesday, November 24, 2021, 21:31 [IST]
Other articles published on Nov 24, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X