ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ತಮ್ಮ 10 ವಿಕೆಟ್ ದಾಖಲೆ ಸರಿದೂಗಿಸಿದ ಅಜಾಜ್ ಪಟೇಲ್ ಕುರಿತು ಪ್ರತಿಕ್ರಿಯಿಸಿದ ಕುಂಬ್ಳೆ ಹೇಳಿದ್ದಿಷ್ಟು

India vs New Zealand: Anil Kumble reacts to Ajaz Patels 10 wicket haul achievement
Ajaz Patel ಕ್ರಿಕೆಟ್ ಇತಿಹಾಸದ ಪುಟಗಳನ್ನು ಸೇರಿದ ದಿನ | Oneindia Kannada

ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಮುಗಿದ ಬಳಿಕ ಭಾರತ ಪ್ರವಾಸವನ್ನು ಕೈಗೊಂಡಿರುವ ನ್ಯೂಜಿಲೆಂಡ್ ಟೀಮ್ ಇಂಡಿಯಾ ವಿರುದ್ಧ 3 ಪಂದ್ಯಗಳ ಟಿ ಟ್ವೆಂಟಿ ಸರಣಿ ಮತ್ತು 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಸೆಣಸಾಟ ನಡೆಸುತ್ತಿದೆ. ನ್ಯೂಜಿಲೆಂಡ್ ಕೈಗೊಂಡಿರುವ ಈ ಪ್ರವಾಸ ಮುಕ್ತಾಯದ ಹಂತಕ್ಕೆ ಬಂದು ತಲುಪಿದ್ದು ಈಗಾಗಲೇ ಇತ್ತಂಡಗಳ ನಡುವೆ 3 ಪಂದ್ಯಗಳ ಟಿ ಟ್ವೆಂಟಿ ಸರಣಿ ಮತ್ತು 2 ಪಂದ್ಯಗಳ ಟೆಸ್ಟ್ ಸರಣಿ ಪೈಕಿ ಮೊದಲನೇ ಪಂದ್ಯ ಮುಕ್ತಾಯಗೊಂಡಿದೆ.

ಹೌದು, ನ್ಯೂಜಿಲೆಂಡ್ ಮತ್ತು ಭಾರತ ತಂಡಗಳ ನಡುವೆ ನಡೆದ ಟಿ ಟ್ವೆಂಟಿ ಸರಣಿಯಲ್ಲಿ ನ್ಯೂಜಿಲೆಂಡ್ ಭಾರತ ವಿರುದ್ಧ ಎಲ್ಲಾ ಪಂದ್ಯಗಳಲ್ಲಿಯೂ ಸೋಲುವುದರ ಮೂಲಕ ವೈಟ್ ವಾಷ್ ಮುಖಭಂಗಕ್ಕೆ ಒಳಗಾಯಿತು. ನಂತರ ನಡೆದ ಮೊದಲನೇ ಟೆಸ್ಟ್ ಪಂದ್ಯದಲ್ಲಿ ಸೋಲಿನ ಸುಳಿಯಲ್ಲಿದ್ದ ನ್ಯೂಜಿಲೆಂಡ್ ರಚಿನ್ ರವೀಂದ್ರ ಅವರ ಜವಾಬ್ದಾರಿಯುತ ಬ್ಯಾಟಿಂಗ್ ನೆರವಿನಿಂದ ಪಂದ್ಯವನ್ನು ಡ್ರಾ ಮಾಡಿಕೊಂಡಿತು. ಹೀಗೆ ಮೊದಲನೇ ಪಂದ್ಯವನ್ನು ಡ್ರಾ ಮಾಡಿಕೊಂಡ ನ್ಯೂಜಿಲೆಂಡ್ ಭಾರತ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯವನ್ನು ಜಯಗಳಿಸುವುದರ ಮೂಲಕ ಟೆಸ್ಟ್ ಸರಣಿಯನ್ನು ಕೈವಶ ಮಾಡಿಕೊಳ್ಳುವ ತವಕದಲ್ಲಿದೆ.

SRH ಇಲ್ಲದಿದ್ದರೆ ವಾರ್ನರ್ ಕ್ರಿಕೆಟ್‍ನಲ್ಲಿಯೇ ಇರುತ್ತಿರಲಿಲ್ಲ; SRH ಮಾಡಿದ್ದ ಸಹಾಯ ಬಿಚ್ಚಿಟ್ಟ ಪಠಾಣ್SRH ಇಲ್ಲದಿದ್ದರೆ ವಾರ್ನರ್ ಕ್ರಿಕೆಟ್‍ನಲ್ಲಿಯೇ ಇರುತ್ತಿರಲಿಲ್ಲ; SRH ಮಾಡಿದ್ದ ಸಹಾಯ ಬಿಚ್ಚಿಟ್ಟ ಪಠಾಣ್

ಇನ್ನು ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ ದ್ವಿತೀಯ ಟೆಸ್ಟ್ ಪಂದ್ಯ ಮಳೆಯ ಕಾರಣದಿಂದಾಗಿ ತಡವಾಗಿ ಆರಂಭವಾಯಿತು. ಪಂದ್ಯದಲ್ಲಿ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡುವ ಆಯ್ಕೆ ಮಾಡಿಕೊಂಡರು. ಅದರಂತೆ ಭಾರತ ತಂಡದ ಪರ ಆರಂಭಿಕ ಆಟಗಾರರಾಗಿ ಕಣಕ್ಕಿಳಿದ ಮಯಾಂಕ್ ಅಗರ್ವಾಲ್ ಮತ್ತು ಶುಬ್ ಮನ್ ಗಿಲ್ ಉತ್ತಮ ಆರಂಭವನ್ನು ಕಟ್ಟಿಕೊಟ್ಟರೂ ಸಹ ನ್ಯೂಜಿಲೆಂಡ್ ತಂಡದ ಬೌಲರ್ ಅಜಾಜ್ ಪಟೇಲ್‌ಗೆ ಸಾಲುಸಾಲಾಗಿ ವಿಕೆಟ್ ಒಪ್ಪಿಸುವ ಮೂಲಕ ಭಾರತೀಯ ಬ್ಯಾಟ್ಸ್‌ಮನ್‌ಗಳು ಪೆವಿಲಿಯನ್ ಪರೇಡ್ ನಡೆಸಿದರು.

ಅದರಲ್ಲಿಯೂ ಮಧ್ಯಮ ಕ್ರಮಾಂಕದ ಆಟಗಾರರಾದ ಚೇತೇಶ್ವರ ಪೂಜಾರ ಮತ್ತು ವಿರಾಟ್ ಕೊಹ್ಲಿ ಶೂನ್ಯ ಸುತ್ತುವ ಮೂಲಕ ಅಜಾಜ್ ಪಟೇಲ್ ಅವರಿಗೆ ವಿಕೆಟ್ ಒಪ್ಪಿಸಿದರು. ಹಾಗೂ ಆರಂಭಿಕ ಆಟಗಾರನಾಗಿ ಕಣಕ್ಕಿಳಿದು 150 ರನ್ ಬಾರಿಸುವುದರ ಮೂಲಕ ಭಾರತ ತಂಡಕ್ಕೆ ಆಪದ್ಭಾಂಧವನಾದ ಮಯಾಂಕ್ ಅಗರ್ವಾಲ್ ಕೂಡ ಅಜಾಜ್ ಪಟೇಲ್ ಎಸೆತಕ್ಕೆ ಕ್ಯಾಚ್ ನೀಡಿ ವಿಕೆಟ್ ಒಪ್ಪಿಸಿದರು. ಹೀಗೆ ತಂಡದ ಪ್ರಮುಖ ಆಟಗಾರರು ಸೇರಿದಂತೆ ಎಲ್ಲಾ 10 ಆಟಗಾರರು ಕೂಡ ಅಜಾಜ್ ಪಟೇಲ್ ಅವರಿಗೆ ವಿಕೆಟ್ ಒಪ್ಪಿಸಿದರು.

ಮುಂಬೈ ಟೆಸ್ಟ್: 150 ರನ್ ಗಳಿಸಿ ನಿರ್ಗಮಿಸಿದ ಆಪತ್ಬಾಂಧವ ಮಯಾಂಕ್ ಅಗರ್ವಾಲ್ಮುಂಬೈ ಟೆಸ್ಟ್: 150 ರನ್ ಗಳಿಸಿ ನಿರ್ಗಮಿಸಿದ ಆಪತ್ಬಾಂಧವ ಮಯಾಂಕ್ ಅಗರ್ವಾಲ್

ಈ ಮೂಲಕ ಅಜಾಜ್ ಪಟೇಲ್ 10 ಟೆಸ್ಟ್ ವಿಕೆಟ್ ಗೊಂಚಲು ಪಡೆದ ಜಗತ್ತಿನ ಮೂರನೇ ಆಟಗಾರ ಎಂಬ ದಾಖಲೆಯನ್ನು ಬರೆದರು. ಇನ್ನು ಟೆಸ್ಟ್ ಕ್ರಿಕೆಟ್‍ನಲ್ಲಿ 10 ವಿಕೆಟ್ ಗೊಂಚಲು ಪಡೆದ ಸಾಧನೆಯನ್ನು ಮೊದಲಿಗೆ ಇಂಗ್ಲೆಂಡ್ ತಂಡದ ಬೌಲರ್ ಜಿಮ್ ಲಾಕೆರ್ 1956ರಲ್ಲಿ ನಡೆದಿದ್ದ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಪಂದ್ಯವೊಂದರ ದ್ವಿತೀಯ ಇನ್ನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾ ತಂಡದ ಎಲ್ಲಾ 10 ವಿಕೆಟ್‍ಗಳನ್ನು ಪಡೆಯುವುದರ ಮೂಲಕ ಮಾಡಿದ್ದರು. ಇದಾದ ಬಳಿಕ 1999ರಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ನಡೆದಿದ್ದ ಟೆಸ್ಟ್ ಪಂದ್ಯವೊಂದರ ದ್ವಿತೀಯ ಇನ್ನಿಂಗ್ಸ್‌ನಲ್ಲಿ ಅನಿಲ್ ಕುಂಬ್ಳೆ 10 ವಿಕೆಟ್ ಗೊಂಚಲನ್ನು ಪಡೆಯುವುದರ ಮೂಲಕ ಎರಡನೇ ಬಾರಿಗೆ ಈ ದಾಖಲೆ ಬರೆದಿದ್ದರು. ಹೀಗೆ ನ್ಯೂಜಿಲೆಂಡ್ ವಿರುದ್ಧದ ಈ ಪಂದ್ಯದಲ್ಲಿ ಅಜಾಜ್ ಪಟೇಲ್ ಇದೇ ಸಾಧನೆಯನ್ನು ಮತ್ತೊಮ್ಮೆ ಮಾಡುವುದರ ಮೂಲಕ 22 ವರ್ಷಗಳ ಬಳಿಕ ಅನಿಲ್ ಕುಂಬ್ಳೆ ದಾಖಲೆಯನ್ನು ಸರಿದೂಗಿಸಿಕೊಂಡಿದ್ದಾರೆ.

ಹೀಗೆ ತಮ್ಮ ದಾಖಲೆಯನ್ನು ಬರೋಬ್ಬರಿ 22 ವರ್ಷಗಳ ಬಳಿಕ ಸರಿದೂಗಿಸಿಕೊಂಡ ನ್ಯೂಜಿಲೆಂಡ್ ತಂಡದ ಆಟಗಾರ ಅಜಾಜ್ ಪಟೇಲ್ ಕುರಿತು ಭಾರತದ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಟ್ವಿಟ್ಟರ್ ಮೂಲಕ ಟ್ವೀಟ್ ಮಾಡಿ ಶುಭಾಶಯ ಕೋರಿದ್ದಾರೆ. 10 ವಿಕೆಟ್ ಕ್ಲಬ್‌ಗೆ ಅಜಾಜ್ ಪಟೇಲ್ ಅವರಿಗೆ ಸುಸ್ವಾಗತ ಕೋರಿರುವ ಅನಿಲ್ ಕುಂಬ್ಳೆ ಟೆಸ್ಟ್ ಕ್ರಿಕೆಟ್‍ನಲ್ಲಿ ಈ ದಾಖಲೆ ಮಾಡಲು ವಿಶೇಷವಾದ ಪ್ರಯತ್ನ ನಡೆದಿದೆ ಎಂದು ಶ್ಲಾಘಿಸಿದ್ದಾರೆ. ಹೀಗೆ ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಅಜಾಜ್ ಪಟೇಲ್ ದಾಖಲೆ ಕುರಿತು ಬರೆದುಕೊಂಡಿರುವ ಅನಿಲ್ ಕುಂಬ್ಳೆ ಯುವ ಕ್ರಿಕೆಟಿಗನ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Story first published: Saturday, December 4, 2021, 15:25 [IST]
Other articles published on Dec 4, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X