Champions Trophy: ಟಾಸ್ ಗೆದ್ದ ನ್ಯೂಜಿಲೆಂಡ್ ಬೌಲಿಂಗ್ ಆಯ್ಕೆ; ಭಾರತದ ಪರ ವರುಣ್ ಕಣಕ್ಕೆ
ಐಸಿಸಿ 2025ರ ಚಾಂಪಿಯನ್ಸ್ ಟ್ರೋಫಿಯ ಅಂತಿಮ ಗುಂಪು ಹಂತದ ಪಂದ್ಯ ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಆರಂಭವಾಗಿದೆ. ದುಬೈ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ಉಭಯ ತಂಡಗಳ ನಡುವೆ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಮೊದಲು ಟಾಸ್ ಗೆದ್ದ ನ್ಯೂಜಿಲೆಂಡ್ ತಂಡದ ನಾಯಕ ಮಿಚೆಲ್ ಸ್ಯಾಂಟ್ನರ್ ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಹೀಗಾಗಿ ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ.
ನ್ಯೂಜಿಲೆಂಡ್ ತಂಡ ಆಡುವ ಹನ್ನೊಂದರ ಬಳಗದಲ್ಲಿ ಒಂದು ಬದಲಾವಣೆ ಮಾಡಿದೆ. ಡೆವೊನ್ ಕಾನ್ವೇ ಈ ಪಂದ್ಯದಲ್ಲಿ ಆಡುತ್ತಿಲ್ಲ. ಅವರ ಬದಲಿಗೆ ಡೇರಿಲ್ ಮಿಚೆಲ್‌ಗೆ ಅವಕಾಶ ಸಿಕ್ಕಿದೆ. ಮತ್ತೊಂದೆಡೆ, ಟೀಮ್ ಇಂಡಿಯಾ ಕೂಡ ಒಂದು ಬದಲಾವಣೆ ಮಾಡಿದೆ. ಹರ್ಷಿತ್ ರಾಣಾ ಅವರನ್ನು ಪ್ಲೇಯಿಂಗ್-11 ರಿಂದ ಕೈಬಿಡಲಾಗಿದೆ. ಅವರ ಸ್ಥಾನದಲ್ಲಿ ಸ್ಪಿನ್ನರ್ ವರುಣ್ ಚಕ್ರವರ್ತಿ ಪಂದ್ಯ ಆಡುತ್ತಿದ್ದಾರೆ.

ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಈಗಾಗಲೇ ಎ ಗುಂಪಿನಿಂದ ಸೆಮಿಫೈನಲ್‌ಗೆ ತಮ್ಮ ಸ್ಥಾನವನ್ನು ಖಚಿತಪಡಿಸಿಕೊಂಡಿವೆ. ಆತಿಥೇಯ ಪಾಕಿಸ್ತಾನ ಮತ್ತು ಬಾಂಗ್ಲಾದೇಶ ಎ ಗುಂಪಿನಿಂದ ಹೊರಬಿದ್ದಿವೆ. ಮತ್ತೊಂದೆಡೆ, ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ತಂಡಗಳು ಬಿ ಗುಂಪಿನಲ್ಲಿ ತಮ್ಮ ಪ್ರಾಬಲ್ಯವನ್ನು ಕಾಯ್ದುಕೊಂಡು ಸೆಮಿಫೈನಲ್ ತಲುಪಿವೆ. ಇಂಗ್ಲೆಂಡ್ ಮತ್ತು ಅಫ್ಘಾನಿಸ್ತಾನ ತಂಡಗಳು ಸೋತು ಹೊರಬೀಳಬೇಕಾಯಿತು.
ಭಾರತ ಮತ್ತು ನ್ಯೂಜಿಲೆಂಡ್ ಎರಡೂ ತಂಡಗಳು ಈಗಾಗಲೇ ಸೆಮಿಫೈನಲ್‌ಗೆ ತಲುಪಿವೆ. ಆದರೆ ಈ ಪಂದ್ಯದಲ್ಲಿ ಗೆದ್ದ ತಂಡವು ಎ ಗುಂಪಿನಲ್ಲಿ ಅಗ್ರ ಸ್ಥಾನ ಪಡೆಯಲಿದೆ. ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾವನ್ನು ಎದುರಿಸಲಿದೆ. ಆದರೆ ಸೋತ ತಂಡವು ಸೆಮಿಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾವನ್ನು ಎದುರಿಸಲಿದೆ.
ಉಭಯ ತಂಡಗಳ ಪ್ಲೇಯಿಂಗ್-11
ಭಾರತ: ರೋಹಿತ್ ಶರ್ಮಾ(ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಅಕ್ಸರ್ ಪಟೇಲ್, ಕೆಎಲ್ ರಾಹುಲ್(ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಕುಲದೀಪ್ ಯಾದವ್, ವರುಣ್ ಚಕ್ರವರ್ತಿ.
ನ್ಯೂಜಿಲೆಂಡ್: ವಿಲ್ ಯಂಗ್, ರಾಚಿನ್ ರವೀಂದ್ರ, ಕೇನ್ ವಿಲಿಯಮ್ಸನ್, ಡ್ಯಾರಿಲ್ ಮಿಚೆಲ್, ಟಾಮ್ ಲಾಥಮ್(ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಮೈಕೆಲ್ ಬ್ರೇಸ್‌ವೆಲ್, ಮಿಚೆಲ್ ಸ್ಯಾಂಟ್ನರ್(ವಿಕೆಟ್ ಕೀಪರ್), ಮ್ಯಾಟ್ ಹೆನ್ರಿ, ಕೈಲ್ ಜೇಮಿಸನ್, ವಿಲಿಯಂ ಒರೂರ್ಕೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications