ಮಾರ್ಚ್ 9 ರ ಭಾನುವಾರದಂದು ಐಸಿಸಿ ಚಾಂಪಿಯನ್ಸ್ ಟ್ರೋಫಿ 2025 ರ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಲಿವೆ. ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿರುವ ರೋಚಕ ಫೈನಲ್ ಪಂದ್ಯಕ್ಕೆ ಸಿದ್ಧತೆಗಳು ಭರದಿಂದ ಸಾಗುತ್ತಿವೆ. ಈ ಬಹುನಿರೀಕ್ಷಿತ ಪಂದ್ಯಕ್ಕಾಗಿ ಎರಡೂ ದೇಶಗಳ ಅಭಿಮಾನಿಗಳಲ್ಲಿ ಕಾಯುತ್ತಿದ್ದಾರೆ. ಫೈನಲ್ ಪಂದ್ಯದ ಎಲ್ಲಾ ಟಿಕೆಟ್‌ಗಳು ಕೇವಲ 40 ನಿಮಿಷಗಳಲ್ಲಿ ಮಾರಾಟವಾಗಿವೆ.
ಭಾರತ ಮತ್ತು ನ್ಯೂಜಿಲೆಂಡ್ ಫೈನಲ್ ಪಂದ್ಯದ ಎಲ್ಲಾ ಟಿಕೆಟ್‌ಗಳು ಮಾರಾಟವಾಗಿವೆ. ಸುಮಾರು 25000 ಆಸನ ಸಾಮರ್ಥ್ಯವನ್ನು ಹೊಂದಿರುವ ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣವು ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯಕ್ಕಾಗಿ ಸಂಪೂರ್ಣವಾಗಿ ತುಂಬಿರಲಿದೆ. ಕ್ರಿಕೆಟ್ ಅಭಿಮಾನಿಗಳು ಫೈನಲ್ ಪಂದ್ಯಕ್ಕಾಗಿ ಈಗಾಗಲೇ ಎಲ್ಲಾ 25000 ಟಿಕೆಟ್‌ಗಳನ್ನು ಖರೀದಿಸಿದ್ದಾರೆ.

ಚಾಂಪಿಯನ್ಸ್ ಟ್ರೋಫಿ 2025ರ ಫೈನಲ್ ಪಂದ್ಯವನ್ನು ಕ್ರೀಡಾಂಗಣದಿಂದ ವೀಕ್ಷಿಸಲು ಎರಡೂ ದೇಶಗಳ ಅಭಿಮಾನಿಗಳು ಟಿಕೆಟ್ ಖರೀದಿಸಲು ಎಷ್ಟು ಹಣವನ್ನು ಖರ್ಚು ಮಾಡಿದ್ದಾರೆ? ಹಾಗು ಫೈನಲ್ ಪಂದ್ಯದ ಅತ್ಯಂತ ದುಬಾರಿ ಟಿಕೆಟ್ ಎಷ್ಟು ಬೆಲೆಗೆ ಮಾರಾಟವಾಯಿತು? ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.
ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿರುವ ಭಾರತ-ನ್ಯೂಜಿಲೆಂಡ್ ಫೈನಲ್ ಪಂದ್ಯಕ್ಕಾಗಿ ಕ್ರಿಕೆಟ್ ಅಭಿಮಾನಿಗಳು ಹೆಚ್ಚಿನ ಬೆಲೆಗೆ ಟಿಕೆಟ್‌ಗಳನ್ನು ಖರೀದಿಸಿದ್ದಾರೆ. ಸಾಮಾನ್ಯ ಪ್ರವೇಶ ಟಿಕೆಟ್ ಶುಲ್ಕಕ್ಕಾಗಿ ಕ್ರಿಕೆಟ್ ಅಭಿಮಾನಿಗಳು 250 ದಿರ್ಹಮ್‌ಗಳನ್ನು ಪಾವತಿಸಿದ್ದಾರೆ. ಅಂದರೆ ಭಾರತೀಯ ರೂಪಾಯಿಗಳಲ್ಲಿ 6,000 ರೂ. ಇನ್ನೂ ಕ್ರಿಕೆಟ್ ಅಭಿಮಾನಿಗಳು ವಿಶೇಷ ಸ್ಕೈ ಬಾಕ್ಸ್‌ಗಾಗಿ 12,000 ದಿರ್ಹಮ್‌ಗಳು ಅಂದರೆ 2,83,871 ಲಕ್ಷ ರೂ.ಗಳನ್ನು ಪಾವತಿಸಿ ಅತ್ಯಂತ ದುಬಾರಿ ಟಿಕೆಟ್ ಅನ್ನು ಖರೀದಿಸಿದ್ದಾರೆ.
ಸಾಮಾನ್ಯ ಪ್ರವೇಶ (15000 ಸೀಟುಗಳು): 6000 ರಿಂದ 11828 ರೂ.ಗಳು
ಪ್ರೀಮಿಯಂ ಮತ್ತು ಪೆವಿಲಿಯನ್ ವಿಭಾಗ (5000 ಸೀಟುಗಳು): 11828 ರಿಂದ 28387 ರೂ.ಗಳು
ವಿಶೇಷ ಸ್ಕೈ ಬಾಕ್ಸ್ (1700 ಸೀಟುಗಳು): 47311 ರಿಂದ 283871 ರೂ.ಗಳು
ವರದಿಗಳ ಪ್ರಕಾರ, ಭಾರತ ಮತ್ತು ನ್ಯೂಜಿಲೆಂಡ್ ಚಾಂಪಿಯನ್ಸ್ ಟ್ರೋಫಿ 2025 ರ ಫೈನಲ್ ಪಂದ್ಯಕ್ಕಾಗಿ ದುಬೈ ಕ್ರೀಡಾಂಗಣದ ಗೇಟ್‌ಗಳು ಸ್ಥಳೀಯ ಕಾಲಮಾನ ಪ್ರಕಾರ ಬೆಳಿಗ್ಗೆ 10 ಗಂಟೆಗೆ ತೆರೆಯಿವೆ. ಬಹುನಿರೀಕ್ಷಿತ ಫೈನಲ್ ಪಂದ್ಯ ಸ್ಥಳೀಯ ಸಮಯ ಮಧ್ಯಾಹ್ನ 1:00 ಗಂಟೆಗೆ ಮತ್ತು ಭಾರತೀಯ ಕಾಲಮಾನ ಮಧ್ಯಾಹ್ನ 2:30 ಕ್ಕೆ ಆರಂಭವಾಗಲಿದೆ. ಚಾಂಪಿಯನ್ಸ್ ಟ್ರೋಫಿ ಮೇಲೆ ಉಭಯ ತಂಡಗಳ ಚಿತ್ತ ನೆಟ್ಟಿದ್ದು, ಕಠಿಣ ಪೈಪೋಟಿ ಏರ್ಪಟಿದೆ.