Ind vs NZ T20I : ಭಾರತ vs ನ್ಯೂಜಿಲೆಂಡ್ ಟಿ20 ಸರಣಿ: ಸರಣಿಯ ವೇಳಾಪಟ್ಟಿ, ಸ್ಕ್ವಾಡ್ ಹಾಗೂ ನೇರಪ್ರಸಾರದ ಮಾಹಿತಿ

ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವಿನ ಏಕದಿನ ಸರಣಿ ಮುಕ್ತಾಯವಾಗಿದ್ದು ಟೀಮ್ ಇಂಡಿಯಾ ವೈಟ್‌ವಾಶ್ ಮೂಲಕ ವಶಕ್ಕೆ ಪಡೆದುಕೊಂಡಿದೆ. ಇದೀಗ ಈ ಎರಡು ತಂಡಗಳು ಟಿ20 ಮಾದರಿಯ ಸರಣಿಯಲ್ಲಿ ಮತ್ತೊಮ್ಮೆ ಮುಖಾಮುಖಿಯಾಗಲು ಸಜ್ಜಾಗಿದ್ದು ಈ ಸರಣಿ ಕೂಡ ಕ್ರಿಕೆಟ್ ಅಭಿಮಾನಿಗಳ ಪಾಲಿಗೆ ಅತ್ಯುನ್ನತ ಮಟ್ಟದ ಮನರಂಜನೆ ನೀಡುವುದರಲ್ಲಿ ಅನುಮಾನವಿಲ್ಲ.

2023ರಲ್ಲಿ ಟೀಮ್ ಇಂಡಿಯಾ ರೋಹಿತ್ ಶರ್ಮಾ ನಾಯಕತ್ವದಲ್ಲಿ ಅದ್ಭುತ ಆರಂಭವನ್ನು ಪಡೆದುಕೊಂಡಿದ್ದು ಸತತ ಎರಡು ಸರಣಿಗಳಲ್ಲಿ ವೈಟ್‌ವಾಶ್ ಮೂಲಕ ಸರಣಿ ವಶಕ್ಕೆ ಪಡೆದುಕೊಂಡಿದೆ. ಇದೀಗ ಟಿ20 ಸರಣಿಯಲ್ಲಿ ಭಾರತ ತಂಡ ಹಾರ್ದಿಕ್ ಪಾಂಡ್ಯ ನೇತೃತ್ವದಲ್ಲಿ ಕಣಕ್ಕಿಳಿಯಲಿದೆ. ಹಾರ್ದಿಕ್ ಪಾಂಡ್ಯ ನೇತೃತ್ವದಲ್ಲಿ ಶ್ರೀಲಂಕಾ ವಿರುದ್ಧದ ಟಿ20 ಸರಣಿಯಲ್ಲಿ ಭಾರತ 2-1 ಅಂತರದಿಂದ ಗೆಲುವು ಸಾಧಿಸಿತ್ತು. ಇದಕ್ಕೂ ಮುನ್ನ ಟೀಮ್ ಇಂಡಿಯಾ ಹಾಗೂ ನ್ಯೂಜಿಲೆಂಡ್ ತಂಡಗಳು ಕಳೆದ ವಿಶ್ವಕಪ್‌ನ ಅಂತ್ಯದ ಬಳಿಕ ಕಿವೀಸ್ ನೆಲದಲ್ಲಿಯೇ ಟಿ20 ಸರಣಿಯಲ್ಲಿ ಮುಖಾಮುಖಿಯಾಗಿತ್ತು. ಹಾರ್ದಿಕ್ ಪಾಂಡ್ಯ ನೇತೃತ್ವದಲ್ಲಿಯೇ ಆಡಿದ್ದ ಆ ಸರಣಿಯನ್ನು ಭಾರತ 1-0 ಅಂತರದಿಂದ ವಶಕ್ಕೆ ಪಡೆದುಕೊಂಡಿದೆ.

IND vs NZ T20 Series: ಟಿ20 ಸರಣಿಯಿಂದ ಹೊರಬಿದ್ದ ಟೀಂ ಇಂಡಿಯಾ ಆರಂಭಿಕ ಬ್ಯಾಟರ್IND vs NZ T20 Series: ಟಿ20 ಸರಣಿಯಿಂದ ಹೊರಬಿದ್ದ ಟೀಂ ಇಂಡಿಯಾ ಆರಂಭಿಕ ಬ್ಯಾಟರ್

ಸ್ಕ್ವಾಡ್‌ಗಳು

ಸ್ಕ್ವಾಡ್‌ಗಳು

ಟೀಮ್ ಇಂಡಿಯಾ: ಹಾರ್ದಿಕ್ ಪಾಂಡ್ಯ (ನಾಯಕ), ಸೂರ್ಯಕುಮಾರ್ ಯಾದವ್ (ಉಪ ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಋತುರಾಜ್ ಗಾಯಕ್ವಾಡ್, ಶುಬ್ಮನ್ ಗಿಲ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್, ಶಿವಂ ಮಾವಿ, ಪೃಥ್ವಿ ಶಾ, ಮುಖೇಶ್ ಕುಮಾರ್

ನ್ಯೂಜಿಲೆಂಡ್: ಮಿಚೆಲ್ ಸ್ಯಾಂಟ್ನರ್ (ನಾಯಕ), ಫಿನ್ ಅಲೆನ್, ಮೈಕೆಲ್ ಬ್ರೇಸ್ವೆಲ್, ಮಾರ್ಕ್ ಚಾಪ್ಮನ್, ಡೆವೊನ್ ಕಾನ್ವೇ, ಡೇನ್ ಕ್ಲೀವರ್, ಜಾಕೋಬ್ ಡಫಿ, ಲಾಕಿ ಫರ್ಗುಸನ್, ಬೆಂಜಮಿನ್ ಲಿಸ್ಟರ್, ಡ್ಯಾರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಮೈಕೆಲ್ ರಿಪ್ಪನ್, ಹೆನ್ರಿ ಶಿಪ್ಲಿ, ಇಶ್ ಸೋಧಿ, ಬ್ಲೇರ್ ಟಿಕ್ನರ್

ಶತಕ ಬಾರಿಸಿದರೂ ಅಪ್ಪನಿಗೆ ಪೂರ್ತಿ ಖುಷಿಯಾಗಿಲ್ಲ: ಆಸಕ್ತಿಕರ ವಿಚಾರ ಹಂಚಿಕೊಂಡ ಶುಭಮನ್ ಗಿಲ್

ಸರಣಿಯ ವೇಳಾಪಟ್ಟಿ

ಸರಣಿಯ ವೇಳಾಪಟ್ಟಿ

ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವಿನ ಟಿ20 ಸರಣಿಯ ಮೊದಲ ಪಂದ್ಯ ಜನವರಿ 27 ಶುಕ್ರವಾರ ನಡೆಯಲಿದ್ದು ರಾಂಚಿಯ ಜೆಎಸ್‌ಸಿಎ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಈ ಪಂದ್ಯ ಆಯೋಜನೆಯಾಗಲಿದೆ. 2ನೇ ಪಂದ್ಯ ಜನವರಿ 29ರಂದು ಲಕ್ನೋದ ಅಟಲ್‌ ಬಿಹಾರಿ ವಾಜಪೇಯಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಇನ್ನು ಈ ಸರಣಿಯ 3ನೇ ಪಂದ್ಯ ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಫೆಬ್ರವರಿ 1ರಂದು ಆಯೋಜನೆಯಾಗಲಿದೆ. ಈ ಎಲ್ಲಾ ಪಂದ್ಯಗಳು ಕೂಡ ಸಂಜೆ 7 ಗಂಟೆಗೆ ಆರಂಭವಾಗಲಿದ್ದು 6:30ಕ್ಕೆ ಟಾಸ್ ಪ್ರಕ್ರಿಯೆ ನಡೆಯಲಿದೆ.

ಈ ಬಾರಿಯ ವಿಶ್ವಕಪ್ ಗೆಲ್ಲೋದು ಇದೇ ತಂಡ: ಮೈಕಲ್ ವಾನ್ ಹೆಸರಿಸಿದ ತಂಡ ಯಾವುದು?

ಪಂದ್ಯದ ನೇರ ಪ್ರಸಾರದ ಮಾಹಿತಿ

ಪಂದ್ಯದ ನೇರ ಪ್ರಸಾರದ ಮಾಹಿತಿ

ಇನ್ನು ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವಿನ ಟಿ20 ಸರಣಿಯ ನೇರಪ್ರಸಾರದ ಹಕ್ಕನ್ನು ಸ್ಟಾರ್‌ಸ್ಪೋರ್ಟ್ಸ್ ನೆಟ್‌ವರ್ಕ್ ಹೊಂದಿದೆ. ಕನ್ನಡ ಸೇರಿದಂತೆ ಸ್ಥಳೀಯ ಭಾಷೆಗಳಲ್ಲಿಯೂ ವೀಕ್ಷಕ ವಿವರಣೆಯಿದೆ. ಇನ್ನು ಡಿಸ್ನಿ-ಹಾಟ್‌ಸ್ಟಾರ್‌ನ ಚಂದಾದಾರರು ಕೂಡ ಈ ಪಂದ್ಯಗಳನ್ನು ವೀಕ್ಷಿಸಲು ಅವಕಾಶವಿದೆ. ಸಂಜೆ 7 ಗಂಟೆಗೆ ಆರಂಭವಾಗಲಿದ್ದು 6:30ಕ್ಕೆ ಟಾಸ್ ಪ್ರಕ್ರಿಯೆ ನಡೆಯಲಿದೆ.

For Quick Alerts
ALLOW NOTIFICATIONS
For Daily Alerts
Story first published: Wednesday, January 25, 2023, 13:07 [IST]
Other articles published on Jan 25, 2023
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X