Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಭಾರತ vs ನ್ಯೂಜಿಲೆಂಡ್: ನಿರ್ಣಾಯಕ ಟಿ20 ಪಂದ್ಯಕ್ಕೆ ಅಡ್ಡಿಯಾಗಲಿದೆಯಾ ಮಳೆ?

India vs New Zealand, final T20I match: Weather Forecast and preview

ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ಟಿ20 ಸರಣಿಯ ಅಂತಿಮ ಪಂದ್ಯ ಇಂದು ಅಹ್ಮದಾಬಾದ್‌ನಲ್ಲಿ ನಡೆಯಲಿದೆ. ಈ ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ನ್ಯೂಜಿಲೆಂಡ್ ಹಾಘೂ ಭಾರತ ತಮಡಗಳು ತಲಾ ಒಂದೊಂದು ಗೆಲುವು ಸಾಧಿಸಿದ್ದು ಸರಣಿ ಸದ್ಯ ಸಮಬಲದಲ್ಲಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಗೆದ್ದ ತಂಡ ಸರಣಿಯನ್ನು ತನ್ನ ವಶಕ್ಕೆ ಪಡೆಯಲಿದೆ.

ನ್ಯೂಜಿಲೆಂಡ್ ತಂಡ ಏಕದಿನ ಸರಣಿಯನ್ನು ವೈಟ್‌ವಾಶ್ ಮೂಲಕ ಕಳೆದುಕೊಂಡಿರುವ ಕಾರಣ ಈ ಸರಣಿಯನ್ನು ವಶಪಡಿಸಿಕೊಳ್ಳಲು ಉತ್ತಮ ಅವಕಾಶವಿದೆ. ಮೊದಲ ಎರಡು ಪಂದ್ಯಗಲ್ಲಿಯೂ ಸಾಕಷ್ಟು ಪೈಪೋಟಿಯ ಪಂದ್ಯ ನಡೆದಿತ್ತು. ಹೀಗಾಗಿ ಈ ಪಂದ್ಯದಲ್ಲಿ ಗೆದ್ದೇ ಗೆಲ್ಲುವ ಆತ್ಮವಿಶ್ವಾಸದೊಂದಿಗೆ ಸ್ಯಾಂಟ್ನರ್ ಪಡೆ ಕಣಕ್ಕಿಳಿಯಲಿದೆ. ಮತ್ತೊಂದೆಡೆ ಹಾರ್ದಿಕ್ ಪಾಂಡ್ಯ ನೇತೃತ್ವದಲ್ಲಿ ಭಾರತ ಒಂದಾದ ಬಳಿಕ ಮತ್ತೊಂದರಂತೆ ಸರಣಿ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದೆ. ಈ ಅಜೇಯ ಸರಣಿ ಗೆಲುವಿನ ಸರಪಳಿಯನ್ನು ಮುಂದುವರಿಸಲು ನಾಯಕ ಪಾಂಡ್ಯ ಬಯಸುವುದರಲ್ಲಿ ಅನುಮಾನವಿಲ್ಲ.

ಹೇಗಿದೆ ಹವಾಮಾನ ವರದಿ
ಇನ್ನು ಈ ಪಂದ್ಯ ಸಂಜೆ 7 ಗಂಟೆಗೆ ಆರಂಭವಾಗಲಿರುವ ಕಾರಣ ಹವಾಮಾನ ವರದಿ ಮುಖ್ಯವಾಗಲಿದೆ. ಪ್ರಸ್ತುತ ಕ್ರಿಕೆಟ್ ನಡೆಯಲು ಪೂರಕವಾದ ವಾತಾವರಣವಿರಲಿದೆ ಎಂದು ಹವಾಮಾನ ವರದಿ ಹೇಳುತ್ತಿದೆ. ಹೀಗಾಗಿ ಪಂದ್ಯ ಸಂಪೂರ್ಣವಾಗಿ ಆತಂಕವಿಲ್ಲದೆ ನಡೆಯಲಿದೆ. ಆರ್ದ್ರತೆಯು ಶೇಕಡಾ 35-45 ರ ನಡುವೆ ಇರಲಿದ್ದು ಇಬ್ಬನಿ ಬೀಳುವ ಸಾಧ್ಯತೆಯೂ ಇದೆ.

ಪಂದ್ಯದ ಸಮಯ ಹಾಗೂ ನೇರಪ್ರಸಾರದ ಮಾಹಿತಿ: ಇನ್ನು ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವಿನ ಏಕದಿನ ಸರಣಿಯ ಮೂರನೇ ಪಂದ್ಯ ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ. ಸಂಜೆ 7 ಗಂಟೆಗೆ ಪಂದ್ಯ ಆರಂಭವಾಗಲಿದ್ದು 6:30ಕ್ಕೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಸ್ಟಾರ್‌ಸ್ಪೋರ್ಟ್‌ ನೆಟ್‌ವರ್ಕ್‌ ಪಂದ್ಯದ ನೇರಪ್ರಸಾರ ಮಾಡಲಿದ್ದು ಹಾಟ್‌ಸ್ಟಾರ್‌ನಲ್ಲಿಯೂ ನೇರಪ್ರಸಾರ ವೀಕ್ಷಿಸುವ ಅವಕಾಶವಿದೆ.

ಭಾರತ ತಂಡ: ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ನಾಯಕ), ಶುಬ್ಮನ್ ಗಿಲ್, ರಾಹುಲ್ ತ್ರಿಪಾಠಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ವಾಷಿಂಗ್ಟನ್ ಸುಂದರ್, ಶಿವಂ ಮಾವಿ, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್ಶ್ದೀಪ್ ಸಿಂಗ್, ಜಿತೇಶ್ ಶರ್ಮಾ, ಮುಖೇಶ್ ಕುಮಾರ್, ಪೃಥ್ವಿ ಶಾ , ಉಮ್ರಾನ್ ಮಲಿಕ್

ನ್ಯೂಜಿಲೆಂಡ್ ತಂಡ: ಡೆವೊನ್ ಕಾನ್ವೇ (ವಿಕೆಟ್ ಕೀಪರ್), ಮಿಚೆಲ್ ಸ್ಯಾಂಟ್ನರ್ (ನಾಯಕ), ಫಿನ್ ಅಲೆನ್, ಮಾರ್ಕ್ ಚಾಪ್ಮನ್, ಗ್ಲೆನ್ ಫಿಲಿಪ್ಸ್, ಡ್ಯಾರಿಲ್ ಮಿಚೆಲ್, ಮೈಕೆಲ್ ಬ್ರೇಸ್ವೆಲ್, ಇಶ್ ಸೋಧಿ, ಜಾಕೋಬ್ ಡಫಿ, ಲಾಕಿ ಫರ್ಗುಸನ್, ಬ್ಲೇರ್ ಟಿಕ್ನರ್, ಮೈಕೆಲ್ ರಿಪ್ಪನ್, ಡೇನ್ ಕ್ಲೀಯಾ ಶಿಪ್ಲಿ, ಬೆನ್ ಲಿಸ್ಟರ್

Story first published: Wednesday, February 1, 2023, 8:37 [IST]
Other articles published on Feb 1, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+