IND vs NZ: ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ; ಸರ್ಫರಾಜ್ ಖಾನ್‌ಗೆ ಅವಕಾಶ
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿದೆ. ಬೆಂಗಳೂರು ಟೆಸ್ಟ್‌ನ ಮೊದಲ ದಿನ ಭಾರೀ ಮಳೆಯಿಂದಾಗಿ ಟಾಸ್ ಇಲ್ಲದೇ ರದ್ದಾಗಿತ್ತು.
ಈಗ ಎರಡನೇ ದಿನದಂದು ಭಾರತದ ನಾಯಕ ರೋಹಿತ್ ಶರ್ಮಾ ಅವರು ಟಾಸ್ ಗೆದ್ದು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ. ಹೀಗಾಗಿ ಟಾಮ್ ಲ್ಯಾಥಮ್ ಅವರು ಮುನ್ನಡೆಸುತ್ತಿರುವ ನ್ಯೂಜಿಲೆಂಡ್ ತಂಡ ಬೌಲಿಂಗ್ ಮಾಡಲಿದೆ.

ಬೆಂಗಳೂರು ಟೆಸ್ಟ್‌ನ ಮೊದಲ ದಿನ ಭಾರೀ ಮಳೆಯಿಂದಾಗಿ ಟಾಸ್ ಇಲ್ಲದೇ ರದ್ದಾಗಿದೆ. ಎರಡನೇ ದಿನವೂ ಶೇ.41ರಷ್ಟು ಮಳೆಯಾಗುವ ಸಾಧ್ಯತೆ ಇದೆ. ಎರಡನೇ ದಿನದ ಆಟ ಬೆಂಗಳೂರಿನಲ್ಲಿ ಆರಂಭವಾಗಲಿದೆ ಎಂಬ ನಿರೀಕ್ಷೆ ಅಭಿಮಾನಿಗಳದ್ದು. ಆರಂಭಿಕ ಬ್ಯಾಟರ್ ಶುಭಮನ್ ಗಿಲ್ ಕುತ್ತಿಗೆ ನೋವಿನ ಕಾರಣ ಮೊದಲ ಟೆಸ್ಟ್‌ನಿಂದ ದೂರ ಉಳಿದಿದ್ದಾರೆ. ಶುಭಮನ್ ಗಿಲ್ ಅನುಪಸ್ಥಿತಿಯಲ್ಲಿ ವಿರಾಟ್ ಕೊಹ್ಲಿಗೆ 3ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಜವಾಬ್ದಾರಿ ನೀಡಲಾಗಿದೆ. ಇದಲ್ಲದೆ, ಗಿಲ್ ಬದಲಿಗೆ ಬಾಂಗ್ಲಾದೇಶ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಅವಕಾಶ ವಂಚಿತನಾಗಿದ್ದ ಸ್ಪೋಟಕ ಬ್ಯಾಟರ್ ಸರ್ಫರಾಜ್ ಖಾನ್ ಅವರಿಗೆ ಹನ್ನೊಂದರಲ್ಲಿಅವಕಾಶ ನೀಡಲಾಗಿದೆ.
ದಾಖಲೆಯತ್ತ ಟೀಮ್ ಇಂಡಿಯಾ
ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯನ್ನು ಗೆಲ್ಲುವಲ್ಲಿ ಭಾರತ ಯಶಸ್ವಿಯಾದರೆ, ರೋಹಿತ್ ಪಡೆ ಹೆಸರಿನಲ್ಲಿ ಬೃಹತ್ ದಾಖಲೆ ದಾಖಲಾಗುತ್ತದೆ. ಇದು ತವರಿನಲ್ಲಿ ಭಾರತಕ್ಕೆ ಸತತ 19ನೇ ಟೆಸ್ಟ್ ಸರಣಿ ಜಯವಾಗಲಿದೆ. ತವರಿನಲ್ಲಿ ಸತತ 19 ಟೆಸ್ಟ್ ಸರಣಿಗಳನ್ನು ಗೆಲ್ಲಲು ವಿಶ್ವದ ಯಾವುದೇ ತಂಡಕ್ಕೆ ಸಾಧ್ಯವಾಗಿಲ್ಲ.
ಟೀಮ್ ಇಂಡಿಯಾ 12 ವರ್ಷಗಳಿಂದ ತವರಿನಲ್ಲಿ ಯಾವುದೇ ಟೆಸ್ಟ್ ಸರಣಿಯನ್ನು ಕಳೆದುಕೊಂಡಿಲ್ಲ. 2012ರಲ್ಲಿ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿ ಸೋಲಿನ ನಂತರ ತವರಿನಲ್ಲಿ ಭಾರತ ಒಂದೇ ಒಂದು ಸರಣಿಯನ್ನು ಕಳೆದುಕೊಂಡಿಲ್ಲ. ತವರಿನಲ್ಲಿ ಕಳೆದ 53 ಟೆಸ್ಟ್ ಪಂದ್ಯಗಳಲ್ಲಿ ಭಾರತ ಕೇವಲ 4 ಪಂದ್ಯಗಳಲ್ಲಿ ಮಾತ್ರ ಸೋತಿದೆ. ಟೀಮ್ ಇಂಡಿಯಾ 2012 ರಿಂದ ತವರಿನಲ್ಲಿ ಬರೋಬ್ಬರಿ 42 ಟೆಸ್ಟ್ ಪಂದ್ಯಗಳನ್ನು ಗೆದ್ದು ಪ್ರಾಬಲ್ಯ ಸಾಧಿಸಿದೆ. ಇದಲ್ಲದೆ, 7 ಟೆಸ್ಟ್ ಪಂದ್ಯಗಳು ಡ್ರಾದಲ್ಲಿ ಅಂತ್ಯಗೊಂಡಿವೆ.
ಉಭಯ ತಂಡಗಳ ಪ್ಲೇಯಿಂಗ್-11
ಭಾರತ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸರ್ಫರಾಜ್ ಖಾನ್, ರಿಷಬ್ ಪಂತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.
ನ್ಯೂಜಿಲೆಂಡ್: ಟಾಮ್ ಲ್ಯಾಥಮ್ (ನಾಯಕ), ಡೆವೊನ್ ಕಾನ್ವೇ, ವಿಲ್ ಯಂಗ್, ರಚಿನ್ ರವೀಂದ್ರ, ಡೇರಿಲ್ ಮಿಚೆಲ್, ಟಾಮ್ ಬ್ಲಂಡೆಲ್ (ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಮ್ಯಾಟ್ ಹೆನ್ರಿ, ಟಿಮ್ ಸೌಥಿ, ಅಜಾಜ್ ಪಟೇಲ್, ವಿಲಿಯಂ ಒರೂರ್ಕೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications