For Quick Alerts
ALLOW NOTIFICATIONS  
For Daily Alerts
 

ಅಂತರರಾಷ್ಟ್ರೀಯ ಕ್ರಿಕೆಟ್‍ಗೆ ಪದಾರ್ಪಣೆ ಮಾಡಿದ ಹರ್ಷಲ್ ಪಟೇಲ್; ಪ್ರಮುಖ ಬೌಲರ್‌ಗೆ ಕೊಕ್!

India vs New Zealand: Harshal Patel makes team India debut in second t20 against New Zealand

ಕಳೆದೊಂದು ತಿಂಗಳಿನಿಂದ ಯುಎಇ ನೆಲದಲ್ಲಿ ನಡೆಯುತ್ತಿದ್ದ ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಮುಗಿದ ಬೆನ್ನಲ್ಲೇ ಟೂರ್ನಿಯಲ್ಲಿ ರನ್ನರ್ ಅಪ್ ಆಗಿದ್ದ ನ್ಯೂಜಿಲೆಂಡ್ ಭಾರತ ಪ್ರವಾಸವನ್ನು ಕೈಗೊಂಡಿದ್ದು 3 ಪಂದ್ಯಗಳ ಟಿ ಟ್ವೆಂಟಿ ಸರಣಿ ಮತ್ತು 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾಗವಹಿಸುತ್ತಿದೆ.

ಇತ್ತಂಡಗಳ ನಡುವೆ ಮೊದಲಿಗೆ ಟಿ ಟ್ವೆಂಟಿ ಸರಣಿ ಆರಂಭವಾಗಿದ್ದು ನವೆಂಬರ್‌ 17ರಂದು ಜೈಪುರದಲ್ಲಿ ನಡೆದ ಮೊದಲನೇ ಟಿ ಟ್ವೆಂಟಿ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಟೀಂ ಇಂಡಿಯಾ ಜಯವನ್ನು ಗಳಿಸುವುದರ ಮೂಲಕ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆ ಸಾಧಿಸಿದೆ. ಹೀಗೆ ಮೊದಲನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆದ್ದ ನಂತರ ದ್ವಿತೀಯ ಪಂದ್ಯ ಇಂದು ( ನವೆಂಬರ್‌ 19 ) ರಾಂಚಿಯಲ್ಲಿ ನಡೆಯುತ್ತಿದ್ದು ನ್ಯೂಜಿಲೆಂಡ್ ಈ ಪಂದ್ಯದಲ್ಲಿ ಜಯ ಗಳಿಸಿದರೆ ಮಾತ್ರ ಸರಣಿ ಗೆಲ್ಲುವ ಆಸೆಯನ್ನು ಜೀವಂತವಾಗಿರಿಸಿಕೊಳ್ಳಲಿದೆ. ಹೀಗೆ ಭಾರತ ವಿರುದ್ಧದ ದ್ವಿತೀಯ ಟಿ ಟ್ವೆಂಟಿ ಪಂದ್ಯದಲ್ಲಿ ಮಾಡು ಇಲ್ಲವೇ ಮಡಿ ಹೋರಾಟದಲ್ಲಿ ನ್ಯೂಜಿಲೆಂಡ್‌ ಕಣಕ್ಕಿಳಿದಿದೆ.

ಇನ್ನು ನ್ಯೂಜಿಲೆಂಡ್ ವಿರುದ್ಧದ ಈ ದ್ವಿತೀಯ ಟಿ ಟ್ವೆಂಟಿ ಪಂದ್ಯದಲ್ಲಿ ಟೀಮ್ ಇಂಡಿಯಾ ಪುಟ್ಟ ಬದಲಾವಣೆಯೊಂದಿಗೆ ಕಣಕ್ಕಿಳಿದಿದೆ. ಹೌದು, ನ್ಯೂಜಿಲೆಂಡ್ ವಿರುದ್ಧದ ಮೊದಲನೇ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಮೊಹಮ್ಮದ್ ಸಿರಾಜ್ ಬದಲು ಈ ಪಂದ್ಯದಲ್ಲಿ ಹರ್ಷಲ್ ಪಟೇಲ್ ಕಣಕ್ಕಿಳಿದಿದ್ದಾರೆ. ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಹರ್ಷಲ್ ಪಟೇಲ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ನೀಡಿದ್ದ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ಇದೀಗ ಅವರಿಗೆ ಟೀಮ್ ಇಂಡಿಯಾದ ಅಂತಾರಾಷ್ಟ್ರೀಯ ತಂಡದ ಟೋಪಿ ಧರಿಸುವ ಅವಕಾಶವನ್ನು ತಂದುಕೊಟ್ಟಿದೆ.

ಹೌದು, ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ 15 ಪಂದ್ಯಗಳನ್ನಾಡಿದ್ದ ಹರ್ಷಲ್ ಪಟೇಲ್ 32 ವಿಕೆಟ್‍ಗಳನ್ನು ಪಡೆದು ಪರ್ಪಲ್ ಕ್ಯಾಪ್ ವಿಜೇತರಾಗಿ ಹೊರಹೊಮ್ಮಿದ್ದರು. ಇಂದು ರಾಂಚಿಯಲ್ಲಿ ನಡೆಯುತ್ತಿರುವ ನ್ಯೂಜಿಲೆಂಡ್ ವಿರುದ್ಧದ ದ್ವಿತೀಯ ಟಿ ಟ್ವೆಂಟಿ ಪಂದ್ಯ ಆರಂಭವಾಗುವ ಮುನ್ನ ಹರ್ಷಲ್ ಪಟೇಲ್ ಅವರಿಗೆ ಮಾಜಿ ಕ್ರಿಕೆಟಿಗ ಅಜಿತ್ ಅಗರ್ಕರ್ ಅವರು ಟೀಮ್ ಇಂಡಿಯಾ ಆಟಗಾರರ ಉಪಸ್ಥಿತಿಯಲ್ಲಿ ಟೀಮ್ ಇಂಡಿಯಾ ಟೋಪಿಯನ್ನು ನೀಡಿ ಪಂದ್ಯಕ್ಕೆ ಸ್ವಾಗತಿಸಿ ಶುಭ ಕೋರಿದರು. ಹೀಗೆ ಭಾರತ ಅಂತಾರಾಷ್ಟ್ರೀಯ ತಂಡಕ್ಕೆ ಪದಾರ್ಪಣೆ ಮಾಡಿದ ಹರ್ಷಲ್ ಪಟೇಲ್ ಅವರನ್ನು ತಂಡದ ಉಳಿದ ಆಟಗಾರರು ಅಪ್ಪುಗೆ ನೀಡುವುದರ ಮೂಲಕ ಸ್ವಾಗತಿಸಿ ಶುಭ ಕೋರಿದರು.

Story first published: Saturday, November 20, 2021, 9:45 [IST]
Other articles published on Nov 20, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+