For Quick Alerts
ALLOW NOTIFICATIONS  
For Daily Alerts
 

ಭಾರತ vs ನ್ಯೂಜಿಲೆಂಡ್‌: ಮೊದಲನೇ ಟಿ20 ಪಂದ್ಯಕ್ಕಾಗಿ ಜೈಪುರಕ್ಕೆ ಬಂದ ದ್ರಾವಿಡ್, ರೋಹಿತ್ ಶರ್ಮಾ

India vs New Zealand: Head coach Rahul Dravid and team india players arrived to Jaipur for first T20

ಸದ್ಯ ಯುಎಇಯಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಮುಕ್ತಾಯದ ಹಂತಕ್ಕೆ ಬಂದು ತಲುಪಿದ್ದು ಫೈನಲ್ ಪಂದ್ಯ ನವೆಂಬರ್ 14ರ ಭಾನುವಾರದಂದು ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ತಂಡಗಳು ಸೆಣೆಸಾಟ ನಡೆಸಲಿವೆ.

ಇನ್ನು ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ವಿರಾಟ್ ಕೊಹ್ಲಿ ನಾಯಕತ್ವದ ಟೀಮ್ ಇಂಡಿಯಾ ಹೇಳಿಕೊಳ್ಳುವಂತಹ ಉತ್ತಮ ಪ್ರದರ್ಶನವನ್ನೇನೂ ನೀಡದೇ ಸೆಮಿಫೈನಲ್ ಹಂತವನ್ನು ಪ್ರವೇಶಿಸುವಲ್ಲಿ ವಿಫಲವಾಗಿ ಲೀಗ್ ಹಂತದಲ್ಲಿಯೇ ಟೂರ್ನಿಯಿಂದ ಹೊರಬಿತ್ತು. ಹೀಗೆ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಕಳಪೆ ಪ್ರದರ್ಶನ ನೀಡಿರುವ ಟೀಂ ಇಂಡಿಯಾ ಇದೇ ತಿಂಗಳ 17ರಿಂದ ಆರಂಭವಾಗಲಿರುವ 3 ಪಂದ್ಯಗಳ ಟಿ ಟ್ವೆಂಟಿ ಸರಣಿ ಮತ್ತು 2 ಪಂದ್ಯಗಳ ಟೆಸ್ಟ್ ಸರಣಿಗಳಲ್ಲಿ ನ್ಯೂಜಿಲೆಂಡ್ ತಂಡದ ವಿರುದ್ಧ ಕಾದಾಟ ನಡೆಸಲಿದೆ.

ಮೊದಲಿಗೆ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ವಿರುದ್ಧ 3 ಪಂದ್ಯಗಳ ಟಿ ಟ್ವೆಂಟಿ ಸರಣಿ ಆರಂಭವಾಗಲಿದ್ದು, ಮೊದಲನೇ ಟಿ ಟ್ವೆಂಟಿ ಪಂದ್ಯ ನವೆಂಬರ್‌ 17ರಂದು ರಾಜಸ್ತಾನದ ಜೈಪುರ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಹೀಗಾಗಿ ಟೀಮ್ ಇಂಡಿಯಾಗೆ ನೂತನ ಕೋಚ್ ಆಗಿ ಆಯ್ಕೆಯಾಗಿರುವ ರಾಹುಲ್ ದ್ರಾವಿಡ್ ಮತ್ತು ನ್ಯೂಜಿಲೆಂಡ್ ವಿರುದ್ಧದ ಟಿ ಟ್ವೆಂಟಿ ಸರಣಿಗೆ ಆಯ್ಕೆಯಾಗಿರುವ ಕೆಲ ಭಾರತೀಯ ಕ್ರಿಕೆಟಿಗರು ಜೈಪುರಕ್ಕೆ ಬಂದಿಳಿದಿದ್ದಾರೆ.

ಇಷ್ಟು ದಿನಗಳ ಕಾಲ ಭಾರತ ಎ ತಂಡ ಮತ್ತು ಭಾರತ ಅಂಡರ್ 19 ತಂಡಗಳಿಗೆ ತರಬೇತುದಾರನಾಗಿ ಕಾರ್ಯನಿರ್ವಹಿಸಿ ದೊಡ್ಡಮಟ್ಟದ ಯಶಸ್ಸು ಸಾಧಿಸಿದ್ದ ರಾಹುಲ್ ದ್ರಾವಿಡ್ ಇದೀಗ ಭಾರತ ಅಂತರ ರಾಷ್ಟ್ರೀಯ ಕ್ರಿಕೆಟ್ ತಂಡದ ಕೋಚ್ ಆಗಿ ಆಯ್ಕೆಯಾದ ನಂತರ ತರಬೇತಿ ನೀಡಲಿರುವ ಮೊದಲನೇ ಸರಣಿ ನ್ಯೂಜಿಲೆಂಡ್ ವಿರುದ್ಧದ ಈ ಟಿ ಟ್ವೆಂಟಿ ಸರಣಿಯಾಗಿದೆ. ಈ ಸರಣಿಯಲ್ಲಿ ಭಾಗವಹಿಸಲು 4 ದಿನಗಳ ಮುಂಚೆಯೇ ಕೋಚ್ ರಾಹುಲ್ ದ್ರಾವಿಡ್, ನಾಯಕ ರೋಹಿತ್ ಶರ್ಮಾ ಸೇರಿದಂತೆ ಇನ್ನೂ ಹಲವಾರು ಆಟಗಾರರು ಜೈಪುರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದು ಇಳಿದಿದ್ದಾರೆ.

ರಾಹುಲ್ ದ್ರಾವಿಡ್ ರೋಹಿತ್ ಶರ್ಮಾ ಹಾಗೂ ಇತರೆ ಆಟಗಾರರು ಜೈಪುರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದು ಇಳಿದಿದ್ದು ಅವರ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಇನ್ನೊಂದೆಡೆ ನ್ಯೂಜಿಲೆಂಡ್ ತಂಡದ ರಾಸ್ ಟೇಲರ್ ಮತ್ತು ಇತರೆ ನ್ಯೂಜಿಲೆಂಡ್ ತಂಡದ ಆಟಗಾರರು ಇದೇ ಜೈಪುರ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನೆಟ್ ಅಭ್ಯಾಸದಲ್ಲಿ ತೊಡಗಿಕೊಂಡಿದ್ದಾರೆ. ಈ ಚಿತ್ರಗಳು ಕೂಡ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಒಟ್ಟಿನಲ್ಲಿ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ನ್ಯೂಜಿಲೆಂಡ್ ವಿರುದ್ಧ ಸೋಲುವುದರ ಮೂಲಕ ಸೆಮಿಫೈನಲ್ ಹಂತವನ್ನು ಪ್ರವೇಶಿಸುವಲ್ಲಿ ವಿಫಲವಾದ ಟೀಮ್ ಇಂಡಿಯಾ ನ್ಯೂಜಿಲೆಂಡ್ ವಿರುದ್ಧದ 3 ಪಂದ್ಯಗಳ ಟಿ ಟ್ವೆಂಟಿ ಸರಣಿಯನ್ನು ಕೈವಶ ಮಾಡಿಕೊಳ್ಳುವುದರ ಮೂಲಕ ತನ್ನ ಸೇಡನ್ನು ತೀರಿಸಿಕೊಳ್ಳಲು ಕಾಯುತ್ತಿದೆ. ಇನ್ನು ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಮುಗಿದ ಬಳಿಕ ನಾಯಕತ್ವದಿಂದ ವಿರಾಟ್ ಕೊಹ್ಲಿ ಕೆಳಗಿಳಿದಿದ್ದು ಈ ನ್ಯೂಜಿಲೆಂಡ್ ವಿರುದ್ಧದ ಟಿ ಟ್ವೆಂಟಿ ಸರಣಿಯಿಂದ ಮುಂಬರುವ ಟಿ ಟ್ವೆಂಟಿ ಸರಣಿಗಳಲ್ಲಿ ಟೀಮ್ ಇಂಡಿಯಾವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದಾರೆ.

ನವೆಂಬರ್ 17ರಿಂದ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ 3 ಪಂದ್ಯಗಳ ಟಿ ಟ್ವೆಂಟಿ ಸರಣಿ ಆರಂಭವಾಗಲಿದೆ. ಈ ಟಿ ಟ್ವೆಂಟಿ ಸರಣಿ ಮುಗಿದ ಕೂಡಲೇ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ 2 ಪಂದ್ಯಗಳ ಟೆಸ್ಟ್ ಸರಣಿ ಆರಂಭವಾಗಲಿದ್ದು, ಮೊದಲನೇ ಟೆಸ್ಟ್ ನವೆಂಬರ್‌ 25ರಿಂದ ನವೆಂಬರ್‌ 29ರವರೆಗೆ ಕಾನ್ಪುರ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ ಹಾಗೂ ದ್ವಿತೀಯ ಟೆಸ್ಟ್ ಪಂದ್ಯ ಡಿಸೆಂಬರ್ 3ರಿಂದ ಡಿಸೆಂಬರ್ 7ರವರೆಗೆ ಮುಂಬೈನ ವಾಂಖೆಡೆ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ.

Story first published: Sunday, November 14, 2021, 19:35 [IST]
Other articles published on Nov 14, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+