ಭಾರತ vs ನ್ಯೂಜಿಲೆಂಡ್ ಅಂತಿಮ ಟಿ20: ರೋಹಿತ್ ಅರ್ಧಶತಕ, ನ್ಯೂಜಿಲೆಂಡ್‌ಗೆ 185 ರನ್‌ಗಳ ಗುರಿ

ನವೆಂಬರ್ 14ರಂದು ಅಂತ್ಯಗೊಂಡ ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋತು ರನ್ನರ್ ಅಪ್ ಆಗಿ ಟೂರ್ನಿಯಿಂದ ಹೊರ ಹೊಮ್ಮಿದ ನ್ಯೂಜಿಲೆಂಡ್ ತಂಡ ಟೂರ್ನಿ ಮುಗಿದ ಬೆನ್ನಲ್ಲೇ ಭಾರತ ಪ್ರವಾಸವನ್ನು ಕೈಗೊಂಡಿದ್ದು ಟೀಮ್ ಇಂಡಿಯಾ ವಿರುದ್ಧ 3 ಪಂದ್ಯಗಳ ಟಿ ಟ್ವೆಂಟಿ ಸರಣಿ ಮತ್ತು 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾಗವಹಿಸುತ್ತಿದೆ.
ಇತ್ತಂಡಗಳ ನಡುವೆ ಮೊದಲಿಗೆ ಟಿ ಟ್ವೆಂಟಿ ಸರಣಿ ಆರಂಭವಾಗಿದ್ದು ಈಗಾಗಲೇ ಮೊದಲೆರಡು ಪಂದ್ಯಗಳು ಮುಗಿದಿವೆ. ಈ ಮೊದಲೆರಡು ಪಂದ್ಯಗಳಲ್ಲಿ ನ್ಯೂಜಿಲೆಂಡ್ ವಿರುದ್ಧ ರೋಹಿತ್ ಶರ್ಮಾ ನಾಯಕತ್ವದ ಟೀಮ್ ಇಂಡಿಯಾ ಜಯ ಸಾಧಿಸಿದ್ದು 2-0 ಅಂತರದಲ್ಲಿ ಸರಣಿಯಲ್ಲಿ ಮುನ್ನಡೆಯನ್ನು ಸಾಧಿಸಿದೆ. ಹೀಗೆ ಮುನ್ನಡೆ ಸಾಧಿಸುವ ಮೂಲಕ ಸರಣಿಯನ್ನು ಕೈವಶ ಮಾಡಿಕೊಂಡಿರುವ ಟೀಮ್ ಇಂಡಿಯಾ ಇದೀಗ ನ್ಯೂಜಿಲೆಂಡ್ ವಿರುದ್ಧದ ತೃತೀಯ ಟಿ ಟ್ವೆಂಟಿ ಪಂದ್ಯದಲ್ಲಿ ಸೆಣಸಾಡುತ್ತಿದ್ದು, ಈ ಪಂದ್ಯ ಕೋಲ್ಕತಾದ ಈಡನ್ ಗಾರ್ಡನ್ಸ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ.
ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ದುಕೊಂಡರು. ಹೀಗೆ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆರಂಭಿಸಿದ ಟೀಂ ಇಂಡಿಯಾ ಪರ ಆರಂಭಿಕ ಆಟಗಾರರಾದ ನಾಯಕ ರೋಹಿತ್ ಶರ್ಮಾ ಮತ್ತು ಇಶಾನ್ ಕಿಶನ್ ಉತ್ತಮ ಆರಂಭವನ್ನು ಮಾಡಿದರು. ರೋಹಿತ್ ಶರ್ಮಾ 31 ಎಸೆತಗಳಲ್ಲಿ 56 ರನ್ ಕಲೆಹಾಕಿದರೆ ಇಶಾನ್ ಕಿಶನ್ 21 ಎಸೆತಗಳಲ್ಲಿ 29 ರನ್ ಕಲೆ ಹಾಕಿದರು. ನಂತರ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಸೂರ್ಯಕುಮಾರ್ ಯಾದವ್ 4 ಎಸೆತಗಳಲ್ಲಿ ಶೂನ್ಯ ಸುತ್ತಿ ಪೆವಿಲಿಯನ್ ಸೇರಿಕೊಂಡರೆ, ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರಿಷಭ್ ಪಂತ್ 4 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ನಂತರ ಶ್ರೇಯಸ್ ಅಯ್ಯರ್ 25 ರನ್ ಗಳಿಸಿ ಔಟ್ ಆದರೆ ವೆಂಕಟೇಶ ಅಯ್ಯರ್ 20 ರನ್ ಕಲೆ ಹಾಕಿದರು. ಇನ್ನುಳಿದಂತೆ ಹರ್ಷಲ್ ಪಟೇಲ್ 18 ರನ್, ಅಕ್ಷರ್ ಪಟೇಲ್ ಅಜೇಯ 2 ರನ್ ಮತ್ತು ಕೊನೆಯಲ್ಲಿ ಹೊಡಿ ಬಡಿ ಆಟವಾಡಿದ ದೀಪಕ್ ಚಹರ್ 8 ಎಸೆತಗಳಲ್ಲಿ ಅಜೇಯ 21 ರನ್ ಚಚ್ಚಿದರು.
ಇನ್ನು ನ್ಯೂಜಿಲೆಂಡ್ ತಂಡದ ಪರ ಮಿಚೆಲ್ ಸ್ಯಾಂಟ್ನರ್ 4 ಓವರ್ ಬೌಲಿಂಗ್ ಮಾಡಿ 27 ರನ್ ನೀಡಿ 3 ವಿಕೆಟ್ ಪಡೆಯುವುದರ ಮೂಲಕ ಮಿಂಚಿದರೆ, ಟ್ರೆಂಟ್ ಬೌಲ್ಟ್, ಲಾಕಿ ಫರ್ಗ್ಯುಸನ್ ಮತ್ತು ಇಶ್ ಸೋಧಿ ತಲಾ 1 ವಿಕೆಟ್ ಪಡೆದರು.
ಹೀಗೆ ಟೀಮ್ ಇಂಡಿಯಾ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 184 ರನ್ ಕಲೆ ಹಾಕುವುದರ ಮೂಲಕ ಎದುರಾಳಿ ನ್ಯೂಜಿಲೆಂಡ್ ತಂಡಕ್ಕೆ ಗೆಲ್ಲಲು 185 ರನ್‌ಗಳ ಪೈಪೋಟಿಯುತ ಗುರಿಯನ್ನು ನೀಡಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications