ಭಾರತ vs ನ್ಯೂಜಿಲ್ಯಾಂಡ್: 3ನೇ ಟಿ20 ಪಂದ್ಯಕ್ಕೆ ಭಾರತದ ಸಂಭಾವ್ಯ ತಂಡ

ಹ್ಯಾಮಿಲ್ಟನ್, ಫೆಬ್ರವರಿ 9: ಆತಿಥೇಯ ನ್ಯೂಜಿಲ್ಯಾಂಡ್ ವಿರುದ್ಧ ದ್ವಿತೀಯ ಟಿ20 ಪಂದ್ಯವನ್ನು ಗೆಲ್ಲುವ ಮೂಲಕ ಸರಣಿಯನ್ನು 1-1ರಿಂದ ಸರಿದೂಗಿಸಿಕೊಂಡಿರುವ ಭಾರತ, ಫೆಬ್ರವರಿ 10ರಂದು ಹ್ಯಾಮಿಲ್ಟನ್‌ನ ಸೆಡ್ಡನ್ ಪಾರ್ಕ್‌ನಲ್ಲಿ ಅಂತಿಮ ಮತ್ತು ನಿರ್ಣಾಯಕ ಪಂದ್ಯವನ್ನಾಡಲಿದೆ. ಈ ಪಂದ್ಯ ಗೆದ್ದು ಸರಣಿ ವಶಪಡಿಸಿಕೊಳ್ಳುವ ಯೋಜನೆ ಭಾರತದ್ದು.
ಆಕ್ಲೆಂಡ್‌ನ ಈಡನ್ ಪಾರ್ಕ್‌ನಲ್ಲಿ ನಡೆದ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ ಅವರ ಬ್ಯಾಟಿಂಗ್ ಬೆಂಬಲ ಮತ್ತು ಕೃನಾಲ್ ಪಾಂಡ್ಯ ಅವರ ಬೌಲಿಂಗ್ ಬಲದಿಂದ ಟೀಮ್ ಇಂಡಿಯಾ ಆತೀಥೇಯರನ್ನು 7 ವಿಕೆಟ್‌ಗಳಿಂದ ಸೋಲಿಸಿತ್ತು. ಅಂತಿಮ ಪಂದ್ಯ ಎರಡೂ ತಂಡಗಳಿಗೂ ಪ್ರತಿಷ್ಠೆಯಾದ್ದರಿಂದ ಕಾದಾಟ ಕುತೂಹಲ ಮೂಡಿಸಿದೆ.
ದ್ವಿತೀಯ ಪಂದ್ಯದಲ್ಲಿ ಭಾರತ ಮೊದಲ ಪಂದ್ಯದಲ್ಲಿ ಆಡಿದ್ದ ಆಟಗಾರರನ್ನೇ ಕಣಕ್ಕಿಳಿಸಿತ್ತು. ಮೊದಲ ಪಂದ್ಯವನ್ನು ಸೋತು ಭಾರತ ಕೊಂಚ ಒತ್ತಡದಲ್ಲಿದ್ದರಿಂದ ಪ್ರಯೋಗ ನಡೆಸುವ ಗೋಜಿಗೆ ಹೋಗಿರಲಿಲ್ಲ. ಹೀಗಾಗಿ ಶುಭ್‌ಮಾನ್ ಗಿಲ್‌ಗೆ ಅವಕಾಶ ಲಭಿಸಿರಲಿಲ್ಲ. ಆದರೆ ಅಂತಿಮ ಪಂದ್ಯದಲ್ಲಿ ಯುವ ಆಟಗಾರ ಶುಭ್‌ಮಾನ್ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ.
3ನೇ ಪಂದ್ಯಕ್ಕೆ ಭಾರತದ ಸಂಭಾವ್ಯ ತಂಡ: ರೋಹಿತ್ ಶರ್ಮಾ, ಶಿಖರ್ ಧವನ್, ಶುಭ್‌ಮಾನ್ ಗಿಲ್, ರಿಷಬ್ ಪಂತ್, ಎಂಎಸ್ ಧೋನಿ, ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ಕೃನಾಲ್ ಪಾಂಡ್ಯ, ಭುವನೇಶ್ವರ ಕುಮಾರ್, ಕುಲದೀಪ್ ಯಾದವ್, ಖಲೀಲ್ ಅಹ್ಮದ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications