ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ vs ನ್ಯೂಜಿಲೆಂಡ್: ರಾಂಚಿ ಪಿಚ್ ಬಗ್ಗೆ ಅಚ್ಚರಿ ವ್ಯಕ್ತಪಡಿಸಿದ ಭಾರತದ ನಾಯಕ ಹಾರ್ದಿಕ್ ಪಾಂಡ್ಯ

India vs New Zealand: Indian skipper said after defeat 1st T20I Ranchi pitch surprised us

ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಸೋಲು ಅನುಭವಿಸಿದೆ. ರಾಂಚಿಯಲ್ಲಿ ನಡೆದ ಪಂದ್ಯದಲ್ಲಿ ಬ್ಯಾಟಿಂಗ್‌ನಲ್ಲಿ ಹಿನ್ನಡೆ ಅನುಭವಿಸಿದ ಭಾರತ ತಂಡದ ಪರವಾಗಿ ಸೂರ್ಯಕುಮಾರ್ ಯಾದವ್ ಹಾಗೂ ಅಂತಿಮ ಹಂತದಲ್ಲಿ ವಾಶಿಂಗ್ಟನ್ ಸುಂದರ್ ಹೋರಾಟದ ಪ್ರದರ್ಶನ ನೀಡಿದರಾದರೂ 21 ರನ್‌ಗಳ ಅಂತರದ ಸೋಲು ಕಂಡಿದೆ ಭಾರತ. ಈ ಸೋಲಿನ ಬಳಿಕ ಮಾತನಾಡಿರುವ ಟೀಮ್ ಇಂಡಿಯಾ ನಾಯಕ ಹಾರ್ದಿಕ್ ಪಾಂಡ್ಯ ರಾಂಚಿ ಪಿಚ್‌ ಬಗ್ಗೆ ಅಚ್ಚರಿ ವ್ಯಕ್ತಪಡಿಸಿದರು.

ನ್ಯೂಜಿಲೆಂಡ್ ನೀಡಿದ 177 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಭಾರತ ತಂಡಕ್ಕೆ ಆರಂಭಿಕ ಆಘಾತ ಉಂಟಾಯಿತು. ತಂಡದ ಅಗ್ರ ಕ್ರಮಾಂಕದ ಮೂವರು ಆಟಗಾರರು ಕೇವಲ 15 ರನ್‌ಗಳಾಗುವಷ್ಟರಲ್ಲಿ ವಿಕೆಟ್ ಕಳೆದುಕೊಂಡಿದ್ದರು. ಆದರೆ ಬಳಿಕ ನಾಯಕ ಹಾರ್ದಿಕ್ ಪಾಂಡ್ಯ ಹಾಗೂ ಸೂರ್ಯಕುಮಾರ್ ಯಾದವ್ ಚೇತರಿಕೆ ನೀಡುವ ಪ್ರಯತ್ನ ನಡೆಸಿದರು. ಆದರೆ ಈ ಜೊಡಿ ಬೇರ್ಪಟ್ಟ ಬಳಿಕ ಕಿವೀಸ್ ಪಡೆ ಮತ್ತೆ ಮೇಲುಗೈ ಪಡೆದುಕೊಂಡಿತು. ನಂತರ ಈ ಜೋಡಿ ಬೇರ್ಪಟ್ಟ ಬಳಿಕ ವಾಶಿಂಗ್ಟನ್ ಸುಂದರ್ ಅದ್ಭುತ ಬ್ಯಾಟಿಂಗ್ ನಡೆಸಿ ಹೋರಾಟ ನಡೆಸಿದರಾದರೂ ಅದು ಭಾರತಕ್ಕೆ ಸಾಕಾಗಲಿಲ್ಲ. ಅಂತಿಮವಾಗಿ ಟೀಮ್ ಇಂಡಿಯಾ 21 ರನ್‌ಗಳ ಅಂತರದ ಸೋಲು ಅನುಭವಿಸಿದೆ.

Axar Patel Marriage: ಚಿತ್ರಗಳು: ಮೇಹಾ ಪಟೇಲ್ ಕೈಹಿಡಿದ ಭಾರತೀಯ ಕ್ರಿಕೆಟಿಗ ಅಕ್ಷರ್ ಪಟೇಲ್Axar Patel Marriage: ಚಿತ್ರಗಳು: ಮೇಹಾ ಪಟೇಲ್ ಕೈಹಿಡಿದ ಭಾರತೀಯ ಕ್ರಿಕೆಟಿಗ ಅಕ್ಷರ್ ಪಟೇಲ್

ಪಂದ್ಯದ ಬಳಿಕ ಮಾತನಾಡಿದ ಹಾರ್ದಿಕ್ ಪಾಂಡ್ಯ "ಈ ಪಿಚ್ ಹೀಗೆ ವರ್ತಿಸಬಹುದು ಎಂದು ಯಾರು ಕೂಡ ಊಹಿಸಲು ಸಾಧ್ಯವಿಲ್ಲ. ಎರಡು ತಂಡಗಳಿಗೂ ಇದರಿಂದಾಗಿ ಅಚ್ಚರಿಯಾಗಿದೆ. ಆದರೆ ಇಂಥಾ ಪರಿಸ್ಥಿಗಳಲ್ಲಿ ನಾವು ಉತ್ತಮವಾಗಿ ಆಡಬೇಕು. ಹಳೆಯ ಚೆಂಡಿಗಿಂತಲೂ ಹೊಸ ಚೆಂಡು ಇಲ್ಲಿ ಬಹಳ ತಿರುವು ಪಡೆಯುತ್ತಿತ್ತು" ಎಂದಿದ್ದಾರೆ.

ನ್ಯೂಜಿಲೆಂಡ್ ಆಡುವ ಬಳಗ: ಫಿನ್ ಅಲೆನ್, ಡೆವೊನ್ ಕಾನ್ವೇ(ವಿಕೆಟ್ ಕೀಪರ್), ಮಾರ್ಕ್ ಚಾಪ್ಮನ್, ಡೇರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್ (ನಾಯಕ), ಮೈಕೆಲ್ ಬ್ರೇಸ್ವೆಲ್, ಜಾಕೋಬ್ ಡಫಿ, ಇಶ್ ಸೋಧಿ, ಲಾಕಿ ಫರ್ಗುಸನ್, ಬ್ಲೇರ್ ಟಿಕ್ನರ್

ಭಾರತ ಆಡುವ ಬಳಗ: ಇಶಾನ್ ಕಿಶನ್(ವಿಕೆಟ್ ಕೀಪರ್), ಶುಬ್ಮನ್ ಗಿಲ್, ರಾಹುಲ್ ತ್ರಿಪಾಠಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ(ನಾಯಕ), ದೀಪಕ್ ಹೂಡಾ, ವಾಷಿಂಗ್ಟನ್ ಸುಂದರ್, ಶಿವಂ ಮಾವಿ, ಕುಲದೀಪ್ ಯಾದವ್, ಉಮ್ರಾನ್ ಮಲಿಕ್, ಅರ್ಷದೀಪ್ ಸಿಂಗ್

Story first published: Friday, January 27, 2023, 23:56 [IST]
Other articles published on Jan 27, 2023
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X