ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ vs ನ್ಯೂಜಿಲೆಂಡ್: ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿಯಲಿದ್ದಾರೆ ಯುವ ಆಟಗಾರ ಇಶಾನ್ ಕಿಶನ್

India vs New Zealand: Ishan set to bat in middle-order against New Zealand in 1st ODI

ಭಾರತ ಹಾಗೂ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿ ಬುಧವಾರದಿಂದ ಆರಂಭವಾಗಲಿದ್ದು ಮೊದಲ ಪಂದ್ಯ ಹೈದರಾಬಾದ್‌ನ ರಾಜೀವ್‌ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಯುವ ಆಟಗಾರ ಇಶಾನ್ ಕಿಶನ್ ಕೂಡ ಕಣಕ್ಕಿಳಿಯುವುದು ಖಚಿತವಾಗಿದೆ. ಆದರೆ ಈ ಆರಂಭಿಕನಾಗಿ ಕಣಕ್ಕಿಳಿಯುವ ಬದಲು ಇಶಾನ್ ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿಯುವ ಸಾಧ್ಯತೆ ದಟ್ಟವಾಗಿದೆ.

ನ್ಯೂಜಿಲೆಂಡ್ ವಿರುದ್ಧದ ಸರಣಿಯಿಂದ ಕೆಎಲ್ ರಾಹುಲ್ ವಿವಾಹದ ಕಾರಣದಿಂದಾಗಿ ಹೊರಗುಳಿದಿದ್ದಾರೆ. ಹೀಗಾಗಿ ಈ ಸರಣಿಯಲ್ಲಿ ವಿಕೆಟ್ ಕೀಪರ್ ಬ್ಯಾಟರ್ ಆಗಿ ಇಶಾನ್ ಕಿಶನ್ ಜವಾಬ್ಧಾರಿ ವಹಿಸಲಿದ್ದಾರೆ. ಮತ್ತೊಂದೆಡೆ ಆರಂಭಿಕನಾಗಿ ಅದ್ಭುತ ಪ್ರದರ್ಶನ ನೀಡುತ್ತಿರುವ ಶುಬ್ಮನ್ ಗಿಲ್ ಅವರನ್ನು ಬಸಲಾಯಿಸಲು ನಾಯಕ ರೋಹಿತ್ ಶರ್ಮಾಗೆ ಇಷ್ಟವಿಲ್ಲದ ಕಾರಣ ಇಶಾನ್ ಕಿಶಣ್ ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿಯುವುದು ನಿಶ್ಚಿತ.

IND vs NZ: ನ್ಯೂಜಿಲೆಂಡ್ ವಿರುದ್ಧದ ಪಂದ್ಯಕ್ಕೂ ಮುನ್ನ ಜೂ. ಎನ್‌ಟಿಆರ್ ಭೇಟಿಯಾದ ಟೀಂ ಇಂಡಿಯಾIND vs NZ: ನ್ಯೂಜಿಲೆಂಡ್ ವಿರುದ್ಧದ ಪಂದ್ಯಕ್ಕೂ ಮುನ್ನ ಜೂ. ಎನ್‌ಟಿಆರ್ ಭೇಟಿಯಾದ ಟೀಂ ಇಂಡಿಯಾ

ಇನ್ನು ಶ್ರೀಲಂಕಾ ವಿರುದ್ಧದ ಮೊದಲೆರಡು ಪಂದ್ಯಗಳಲ್ಲಿ ಹೊರಗುಳಿದಿದ್ದ ಸೂರ್ಯಕುಮಾರ್ ಯಾದವ್ ಈ ಸರಣಿಯಲ್ಲಿ ಅವಕಾಶ ಪಡೆಯುವುದರಲ್ಲಿ ಅನುಮಾನವಿಲ್ಲ. ಮಧ್ಯಮ ಕ್ರಮಾಂಕದ ಆಟಗಾರ ಶ್ರೇಯಸ್ ಐಯ್ಯರ್ ಗಾಯದ ಕಾರಣದಿಂದಾಗಿ ತಂಡದಿಂದ ಹೊರಬಿದ್ದಿದ್ದಾರೆ. ಹೀಗಾಗಿ ಸೂರ್ಯಕುಮಾರ್ ಯಾದವ್‌ಗೆ ಮಧ್ಯಮ ಕ್ರಮಾಂಕದ ಜವಾಬ್ಧಾರಿ ದೊರೆಯಲಿದೆ. ಸೂರ್ಯಕುಮಾರ್ ಯಾದವ್ ಹಾಗೂ ಇಶಾನ್ ಕಿಶನ್ ಯಾವ ಕ್ರಮಾಂಕದಲ್ಲಿ ಕಣಕ್ಕಿಳಿಯಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ.

ಇನ್ನು ಶ್ರೇಯಸ್ ಐಯ್ಯರ್ ಗಾಯಗೊಂಡು ತಂಡದಿಂದ ಹೊರಬಿದ್ದ ಕಾರಣ ರಜತ್ ಪಾಟಿದಾರ್ ಈ ಸರಣಿಯಲ್ಲಿ ಅವಕಾಶ ಪಡೆದುಕೊಂಡಿದ್ದಾರೆ. ಆದರೆ ಅವರಿಗೆ ಮೊದಲ ಪಂದ್ಯದಲ್ಲಿ ಅವಕಾಶ ದಪರೆಯುವ ಸಾಧ್ಯತೆಗಳು ಇಲ್ಲ.ಇನ್ನು ವಿಕೆಟ್ ಕೀಪರ್ ಬ್ಯಾಟರ್ ಆಗಿ ಸ್ಥಾನವನ್ನು ಗಿಟ್ಟಿಸಿಕೊಂಡಿರುವ ಕೆಎಸ್ ಭರತ್ ಕೂಡ ಈ ಪಂದ್ಯದಲ್ಲಿ ಬೆಂಚ್ ಕಾಯಬೇಕಾಗುವುದು ನಿಶ್ಚಿತ.

Rishabh Pant : ಆದಷ್ಟು ಬೇಗನೆ ಮೈದಾನಕ್ಕೆ ಬರುತ್ತೇನೆ : ಅಪಘಾತದ ಬಳಿಕ ಮೊದಲ ಬಾರಿ ರಿಷಬ್ ಪಂತ್ ಟ್ವೀಟ್Rishabh Pant : ಆದಷ್ಟು ಬೇಗನೆ ಮೈದಾನಕ್ಕೆ ಬರುತ್ತೇನೆ : ಅಪಘಾತದ ಬಳಿಕ ಮೊದಲ ಬಾರಿ ರಿಷಬ್ ಪಂತ್ ಟ್ವೀಟ್

ಇನ್ನು ಈ ಸರಣಿಯಲ್ಲಿ ನ್ಯೂಜಿಲೆಂಡ್ ತಂಡ ಕೇನ್ ವಿಲಿಯಮ್ಸನ್, ಟಿಮ್ ಸೌಥಿ ಮತ್ತು ಟ್ರೆಂಟ್ ಬೌಲ್ಟ್ ಅವರಂತಹ ಆಟಗಾರರು ಇಲ್ಲದೆಯೇ ಕಣಕ್ಕಿಳಿಯಲಿದೆ. ಲ್ಯಾಥಮ್ ಈ ಸರಣಿಯಲ್ಲಿ ಕಿವೀಸ್ ಪಡೆಯನ್ನು ಮುನ್ನಡೆಸಲಿದ್ದು ಲೆಗ್ ಸ್ಪಿನ್ನರ್ ಇಶ್ ಸೋಧಿ ಒಂದು ಮೊದಲ ಪಂದ್ಯಕ್ಕೆ ಅಲಭ್ಯವಾಗಲಿದ್ದಾರೆ ಎಂದು ಲ್ಯಾಥಮ್ ಮಾಹಿತಿ ನೀಡಿದ್ದಾರೆ.

ನ್ಯೂಜಿಲೆಂಡ್ ಸ್ಕ್ವಾಡ್ ಹೀಗಿದೆ: ಟಾಮ್ ಲ್ಯಾಥಮ್ (ನಾಯಕ & ವಿಕೆಟ್ ಕೀಪರ್), ಫಿನ್ ಅಲೆನ್, ಡೆವೊನ್ ಕಾನ್ವೇ, ಹೆನ್ರಿ ನಿಕೋಲ್ಸ್, ಡೇರಿಲ್ ಮಿಚೆಲ್, ಮೈಕೆಲ್ ಬ್ರೇಸ್ವೆಲ್, ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್, ಇಶ್ ಸೋಧಿ, ಲಾಕ್ ಫರ್ಗುಸನ್, ಬ್ಲೇರ್ ಟಿಕ್ನರ್, ಜಾಕೋಬ್ ಡಫಿ, ಡೌಗ್ ಬ್ರೇಸ್‌ವೆಲ್, ಮಾರ್ಕ್ ಚಾಪ್‌ಮನ್, ಹೆನ್ರಿ ಶಿಪ್ಲಿ

IND vs NZ: ಇದೀಗ ರಿಕಿ ಪಾಂಟಿಂಗ್, ವೀರೇಂದ್ರ ಸೆಹ್ವಾಗ್ ದಾಖಲೆ ಮೇಲೆ ಕಣ್ಣಿಟ್ಟ ವಿರಾಟ್ ಕೊಹ್ಲಿ
ಟೀಮ್ ಇಂಡಿಯಾ ಸ್ಕ್ವಾಡ್ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಸ್ ಭರತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ವಾಷಿಂಗ್ಟನ್ ಸುಂದರ್, ಶಹಬಾಜ್ ಅಹ್ಮದ್, ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್

Story first published: Tuesday, January 17, 2023, 23:15 [IST]
Other articles published on Jan 17, 2023
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X