ನ್ಯೂಜಿಲೆಂಡ್ ವಿರುದ್ಧ ಸೋತ ಟೀಮ್ ಇಂಡಿಯಾಗೆ ಮೈಕಲ್ ವಾನ್ ಸಲಹೆ!

ಭಾರತ ಹಾಗೂ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಟೀಮ್ ಇಂಡಿಯಾ ಮೊದಲ ಪಂದ್ಯದಲ್ಲಿ ಸೋಲು ಕಂಡಿದ್ದು ನಿರಾಸೆ ಅನುಭವಿಸಿದೆ. ಈ ಮೂಲಕ ನ್ಯೂಜಿಲೆಂಡ್ ವಿರುದ್ಧ ಏಕದಿನ ಸರಣಿಯಲ್ಲಿ ಸೋಲಿನ ಸರಪಳಿ ಮುಂದುವರಿದಿದೆ. ಈ ಹಿಂದೆ 2020ರಲ್ಲಿ ಕಿವೀಸ್‌ಗೆ ಪ್ರವಾಸ ಕೈಗೊಂಡಿದ್ದಾಗ ಆಡಿದ ಮೂರು ಪಂದ್ಯದಲ್ಲಿಯೂ ಟೀಮ್ ಇಂಡಿಯಾ ಸೋಲು ಅನುಭವಿಸಿತ್ತು.
ಟೀಮ್ ಇಂಡಿಯಾ ಏಕದಿನ ಪಂದ್ಯದಲ್ಲಿ ಸೋಲು ಅನುಭವಿಸಿದ ಬಳಿಕ ಇಂಗ್ಲೆಂಡ್ ತಂಡದ ಮಾಜಿ ನಾಯಕ ಮೈಕಲ್ ವಾನ್ ಟೀಮ್ ಇಂಡಿಯಾಗೆ ಪ್ರಮುಖ ಸಲಹೆಯೊಂದನ್ನು ನೀಡಿದ್ದಾರೆ. ಏಕದಿನ ಮಾದರಿಯಲ್ಲಿ ಟೀಮ್ ಇಂಡಿಯಾ ಅಯ್ಕೆಯ ವಿಚಾರವಾಗಿ ಮಾತನಾಡಿರುವ ಮೈಕಲ್ ವಾನ್ ಭಾರತ ತಂಡ ಆಡುವ ಬಳಗದಲ್ಲಿ ಕನಿಷ್ಠ 6 ಆಟಗಾರರು ಇರುವಂತೆ ಆಯ್ಕೆ ನಡೆಸಬೇಕು ಎಂದಿದ್ದಾರೆ.
ನ್ಯೂಜಿಲೆಂಡ್ ವಿರುದ್ಧದ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಐವರು ಬೌಲರ್‌ಗಳೊಂದಿಗೆ ಕಣಕ್ಕಿಳಿದಿತ್ತು. ಈ ನಿರ್ಧಾರ ಟೀಮ್ ಇಂಡಿಯಾ ಪಾಲಿಗೆ ದುಬಾರಿಯಾಗಿ ಪರಿಣಮಿಸಿತು. ಐವರು ಬೌಲರ್‌ಗಳು ಕೂಡ ಹೆಚ್ಚಿನ ಯಶಸ್ಸು ಸಾಧಿಸಲು ಸಾಧ್ಯವಾಗದ ಕಾರಣ ಟೀಮ್ ಇಂಡಿಯಾಗೆ ಈ ಪಂದ್ಯದಲ್ಲಿ ಹಿನ್ನಡೆಯಾಯಿತು. ಈ ಬಗ್ಗೆ ಮಾಜಿ ಕ್ರಿಕೆಟಿಗ ವಾಸಿಂ ಜಾಫರ್ ಕೂಡ ಮಾತನಾಡಿದ್ದು ಐವರಿಗಿಂತ ಹೆಚ್ಚು ಬೌಲರ್‌ಗಳನ್ನು ಬಳಸದೆ ಭಾರತ ತಂಡ ಹಿನ್ನಡೆ ಕಂಡಿತು ಎಂದಿದ್ದಾರೆ.
ವಾಸಿಂ ಜಾಫರ್ ಮಾಡಿರುವ ಟ್ವೀಟ್‌ಗೆ ಪ್ರತಿಕ್ರಿಯೆ ನೀಡಿರುವ ಮೈಕಲ್ ವಾನ್ ಕನಿಷ್ಠ 6 ಅಥವಾ 7 ಬೌಲರ್‌ಗಳನ್ನು ಅವರು ಹೊಂದಿರಬೇಕಾಗುತ್ತದೆ ಎಂದಿದ್ದಾರೆ. "ಅವರು ಹಳೆಯ ಮಾದರಿಯ ಏಕದಿನ ತಂಡವನ್ನು ಹೊಂದಿದ್ದಾರೆ. ಇಗ ನಿಮ್ಮಲ್ಲಿ ಕನಿಷ್ಠ 6-7 ಬೌಲಿಂಗ್ ಆಯ್ಕೆಗಳು ಇರಬೇಕಾಗುತ್ತದೆ" ಎಂದಿದ್ದಾರೆ ಮಾಜಿ ಕ್ರಿಕೆಟಿಗ, ಇಂಗ್ಲೆಂಡ್ ತಂಡದ ಮಾಜಿ ನಾಯಕ ಮೈಕಲ್ ವಾನ್.
ಇನ್ನು ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾಗೆ 7 ವಿಕೆಟ್‌ಗಳ ಅಂತರದ ಬೃಹತ್ ಸೋಲು ಎದುರಾಗಿದೆ. ಮೊದಲಿಗೆ ಬ್ಯಾಟಿಂಗ್ ಮಾಡಿದ ಟೀಮ್ ಇಂಡಿಯಾ ಶಿಖರ್ ಧವನ್, ಶುಬ್ಮನ್ ಗಿಲ್, ಹಾಗೂ ಶ್ರೇಯಸ್ ಐಯ್ಯರ್ ಅವರ ಅರ್ಧ ಶತಕದ ನೆರವಿನಿಂದ 306 ರನ್‌ಗಳಿಸಿತ್ತು. ಟೀಮ್ ಇಂಡಿಯಾ ಪರವಾಗಿ ಸಂಜು ಸ್ಯಾಮ್ಸನ್ ಹಾಗೂ ವಾಶಿಂಗ್ಟನ್ ಸುಂದರ್ ಕೂಡ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದ್ದರು. ಟೀಮ್ ಇಂಡಿಯಾ ನೀಡಿದ ಬೃಹತ್ ಮೊತ್ತವನ್ನು ಬೆನ್ನಟ್ಟಿದ ನ್ಯೂಜಿಲೆಂಡ್ ಸಾಧಾರಣ ಆರಂಭವನ್ನು ಪಡೆಯಿತು. ಮೊದಲ ಮೂರು ವಿಕೆಟ್‌ಗಳನ್ನು 88 ರನ್‌ಗಳನ್ನು ಗಳಿಸುವಷ್ಟರಲ್ಲಿ ಕಿವೀಸ್ ಪಡೆ ಕಳೆದುಕೊಂಡಿತ್ತು. ಆದರೆ ಬಳಿಕ ಜೊತೆಯಾದ ನಾಯಕ ಕೇನ್ ವಿಲಿಯಮ್ಸನ್ ಹಾಗೂ ಟಾಮ್ ಲ್ಯಾಥಮ್ ಅಜೇಯ ಪ್ರದರ್ಶನ ನೀಡಿದರು. ಟಾಮ್ ಲಾಥಮ್ 145 ರನ್‌ಗಳ ಅಮೋಘ ಪ್ರದರ್ಶನ ನೀಡಿದರೆ ಕೇನ್ ವಿಲಿಯಮ್ಸನ್ 94 ರನ್‌ಗಳಿಸಿದರು. ಈ ಮೂಲಕ 7 ವಿಕೆಟ್‌ಗಳ ಅಂತರದ ಗೆಲುವು ಸಾಧಿಸಿದೆ.
ಜಿಂಬಾಬ್ವೆ ವಿರುದ್ಧ ನಾಯಕತ್ವ ಕಿತ್ತುಕೊಂಡು ಕೆಎಲ್ ರಾಹುಲ್‌ಗೆ ನೀಡಿದ್ದಕ್ಕೆ ಶಿಖರ್ ಧವನ್ ಏನೆಂದರು?
ಇತ್ತಂಡಗಳ ಆಡುವ ಬಳಗ
ನ್ಯೂಜಿಲಂಡ್ ಆಡುವ ಬಳಗ: ಫಿನ್ ಅಲೆನ್, ಡೆವೊನ್ ಕಾನ್ವೇ, ಕೇನ್ ವಿಲಿಯಮ್ಸನ್ (ನಾಯಕ), ಟಾಮ್ ಲ್ಯಾಥಮ್ (ವಿಕೆಟ್ ಕೀಪರ್), ಡೇರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್, ಆಡಮ್ ಮಿಲ್ನೆ, ಮ್ಯಾಟ್ ಹೆನ್ರಿ, ಟಿಮ್ ಸೌಥಿ, ಲಾಕಿ ಫರ್ಗುಸನ್
ಬೆಂಚ್: ಮೈಕೆಲ್ ಬ್ರೇಸ್ವೆಲ್, ಜೇಮ್ಸ್ ನೀಶಮ್
ಟೀಮ್ ಇಂಡಿಯಾ ಆಡುವ ಬಳಗ: ಶಿಖರ್ ಧವನ್ (ನಾಯಕ), ಶುಬ್ಮನ್ ಗಿಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಉಮ್ರಾನ್ ಮಲಿಕ್, ಅರ್ಶ್‌ದೀಪ್ ಸಿಂಗ್, ಯುಜ್ವೇಂದ್ರ ಚಾಹಲ್
ಬೆಂಚ್: ದೀಪಕ್ ಹೂಡಾ, ದೀಪಕ್ ಚಹಾರ್, ಕುಲ್‌ದೀಪ್ ಯಾದವ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications