ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ನ್ಯೂಜಿಲೆಂಡ್ ವಿರುದ್ಧದ 2ನೇ ಟೆಸ್ಟ್ ಗೆಲ್ಲಬೇಕೆಂದರೆ ಆತ ಇರಬೇಕು ಎಂದ ದೀಪ್‌ದಾಸ್ ಗುಪ್ತಾ

India vs New Zealand: Mohammed Siraj can replace Ishant Sharma in second test says Deepdas Gupta

ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಮುಗಿದ ಬಳಿಕ ನ್ಯೂಜಿಲೆಂಡ್ ಭಾರತ ಪ್ರವಾಸವನ್ನು ಕೈಗೊಂಡಿದ್ದು 3 ಪಂದ್ಯಗಳ ಟಿ ಟ್ವೆಂಟಿ ಸರಣಿ ಮತ್ತು 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾಗವಹಿಸುತ್ತಿದೆ. ಇತ್ತಂಡಗಳ ನಡುವೆ ಈಗಾಗಲೇ 3 ಪಂದ್ಯಗಳ ಟಿ ಟ್ವೆಂಟಿ ಸರಣಿ ಮುಗಿದಿದ್ದು, ರೋಹಿತ್ ಶರ್ಮಾ ನಾಯಕತ್ವದ ಟೀಂ ಇಂಡಿಯಾ ಟಿಮ್ ಸೌಥಿ ನಾಯಕತ್ವದ ನ್ಯೂಜಿಲೆಂಡ್‌ ವಿರುದ್ಧ 3-0 ಅಂತರದಲ್ಲಿ ಜಯ ಗಳಿಸುವುದರ ಮೂಲಕ ವೈಟ್ ವಾಶ್ ಬಳಿದಿತ್ತು. ಹೀಗೆ ಟಿ ಟ್ವೆಂಟಿ ಸರಣಿಯಲ್ಲಿ ಹೀನಾಯವಾಗಿ ಸೋತ ನ್ಯೂಜಿಲೆಂಡ್ ಟೀಮ್ ಇಂಡಿಯಾ ವಿರುದ್ಧದ 2 ಪಂದ್ಯಗಳ ಟೆಸ್ಟ್ ಸರಣಿಯ ಚೊಚ್ಚಲ ಪಂದ್ಯವನ್ನು ಡ್ರಾ ಮಾಡಿಕೊಂಡಿದೆ.

ಹೌದು, ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ನವೆಂಬರ್ 25ರಿಂದ 29ರವರೆಗೆ ನಡೆಯಿತು. ಈ 5 ದಿನಗಳ ಸತತವಾದ ಹಣಾಹಣಿಯಲ್ಲಿ ಟೀಮ್ ಇಂಡಿಯಾ ನ್ಯೂಜಿಲೆಂಡ್ ವಿರುದ್ಧ ಮೇಲುಗೈ ಸಾಧಿಸುತ್ತಾ ಬಂದರೂ ಸಹ ಅಂತಿಮ ಹಂತದಲ್ಲಿ ಪಂದ್ಯವನ್ನು ಕೈವಶ ಮಾಡಿಕೊಳ್ಳುವಲ್ಲಿ ವಿಫಲವಾಗಿದೆ. ಹೌದು, ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆದ ಪ್ರಥಮ ಟೆಸ್ಟ್ ಡ್ರಾನಲ್ಲಿ ಅಂತ್ಯಗೊಂಡಿದೆ.

ಡೆಲ್ಲಿ ಕ್ಯಾಪಿಟಲ್ಸ್‌ ತಂಡದಲ್ಲಿ ನಾಲ್ವರು ಆಟಗಾರರು ರೀಟೈನ್: ಶ್ರೇಯಸ್ ಅಯ್ಯರ್ ಹೊರಕ್ಕೆ!ಡೆಲ್ಲಿ ಕ್ಯಾಪಿಟಲ್ಸ್‌ ತಂಡದಲ್ಲಿ ನಾಲ್ವರು ಆಟಗಾರರು ರೀಟೈನ್: ಶ್ರೇಯಸ್ ಅಯ್ಯರ್ ಹೊರಕ್ಕೆ!

ಕೊನೆಯ ದಿನದಂದು ನಡೆದ ನ್ಯೂಜಿಲೆಂಡ್ ತಂಡದ ದ್ವಿತೀಯ ಇನ್ನಿಂಗ್ಸ್‌ನಲ್ಲಿ ನ್ಯೂಜಿಲೆಂಡ್‌ ತಂಡದ ಬ್ಯಾಟ್ಸ್‌ಮನ್‌ಗಳ ಮೇಲೆ ಟೀಮ್ ಇಂಡಿಯಾ ಬೌಲರ್‌ಗಳು ಹಿಡಿತ ಸಾಧಿಸಿದರೂ ಸಹ ಅಂತಿಮವಾಗಿ ಎಲ್ಲಾ ವಿಕೆಟ್‍ಗಳನ್ನೂ ಕಬಳಿಸಲು ಆಗದ ಕಾರಣ ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿತು. ನ್ಯೂಜಿಲೆಂಡ್ ಪರ ಚೊಚ್ಚಲ ಪಂದ್ಯವನ್ನಾಡಿದ ರಚಿನ್ ರವೀಂದ್ರ ಅಂತಿಮವಾಗಿ ವಿಕೆಟ್ ಒಪ್ಪಿಸದೇ ನೆಲಕಚ್ಚಿ ನಿಲ್ಲುವ ಮೂಲಕ ಭಾರತದ ಗೆಲುವಿನ ಆಸೆಗೆ ತಣ್ಣೀರು ಎರಚಿ ನ್ಯೂಜಿಲೆಂಡ್ ಯಶಸ್ವಿಯಾಗಿ ಪಂದ್ಯವನ್ನು ಡ್ರಾ ಮಾಡಿಕೊಳ್ಳುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದರು.

ಇತ್ತ ಉತ್ತಮ ಪ್ರದರ್ಶನ ನೀಡಿದರೂ ಸಹ ಭಾರತೀಯ ಬೌಲರ್‌ಗಳು ನ್ಯೂಜಿಲೆಂಡ್ ತಂಡದ ಕೊನೆಯ 1 ವಿಕೆಟ್ ಪಡೆಯಲಾಗದೇ ಇದ್ದ ಕಾರಣದಿಂದ ಈ ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿತು. ಹೀಗಾಗಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ನಡೆಯಲಿರುವ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಬೌಲಿಂಗ್ ವಿಭಾಗಕ್ಕೆ ಬದಲಾವಣೆಯ ಅಗತ್ಯವಿದೆ ಎಂದು ಕೆಲ ಮಾಜಿ ಕ್ರಿಕೆಟಿಗರು ಅಭಿಪ್ರಾಯಪಟ್ಟಿದ್ದಾರೆ.

ಈ ಕುರಿತು ಇದೀಗ ಭಾರತದ ಮಾಜಿ ಕ್ರಿಕೆಟಿಗ ದೀಪ್‌ದಾಸ್ ಗುಪ್ತಾ ಮಾತನಾಡಿದ್ದು ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ಮುಂಬೈನ ವಾಂಖೆಡೆ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿರುವ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಮೊಹಮ್ಮದ್ ಸಿರಾಜ್ ಕಣಕ್ಕಿಳಿಯಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ ಮೊಹಮ್ಮದ್ ಸಿರಾಜ್ ಫಿಟ್ ಆಗಿದ್ದರೆ ಇಶಾಂತ್ ಶರ್ಮಾ ಬದಲು ಕಣಕ್ಕಿಳಿಯಲಿ ಎಂದು ದೀಪ್ ದಾಸ್ ಗುಪ್ತಾ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.

ಅತ್ತ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ಕಾನ್ಪುರದಲ್ಲಿ ನಡೆದ ಪ್ರಥಮ ಟೆಸ್ಟ್ ಪಂದ್ಯದಲ್ಲಿ 22 ಓವರ್ ಬೌಲಿಂಗ್ ಮಾಡಿದ ಇಶಾಂತ್ ಶರ್ಮಾ ಒಂದೇ ಒಂದು ವಿಕೆಟ್ ಕೂಡ ಪಡೆಯಲಾಗದೇ ನೀರಸ ಪ್ರದರ್ಶನವನ್ನು ನೀಡಿ ಮಂಕಾದರು.

Story first published: Tuesday, November 30, 2021, 23:08 [IST]
Other articles published on Nov 30, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X