ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

"ನಂಬಲಸಾಧ್ಯ ಬೌಲಿಂಗ್": ಕಿವೀಸ್ ವಿರುದ್ಧ ಭಾರತದ ಬೌಲರ್‌ಗಳ ಅಬ್ಬರಕ್ಕೆ ಅಭಿಮಾನಿಗಳು ಬೆರಗು!

India vs New Zealand: Netizens praised Indian bowlers after New Zealand allout for 108 in Raipur

ನ್ಯೂಜಿಲೆಂಡ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಅಮೋಘ ಬೌಲಿಂಗ್ ಪ್ರದರ್ಶನ ನೀಡಿ ಮಿಂಚಿದೆ. ರಾಯ್‌ಪುರದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿದ ಟೀಮ್ ಇಂಡಿಯಾ ಪರವಾಗಿ ಭಾರತದ ವೇಗಿಗಳು ಅಕ್ಷರಶಃ ಅಬ್ಬರಿಸಿದ್ದಾರೆ. ಕಿವಿಸ್ ಪಡೆಯ ಆಟಗಾರರು ಈ ದಾಳಿಗೆ ಯಾವುದೇ ಉತ್ತರವಿಲ್ಲದೆ ಫೆವಿಲಿಯನ್‌ನತ್ತ ಹೆಜ್ಜೆ ಹಾಕಿದ್ದಾರೆ.

ನ್ಯೂಜಿಲೆಂಡ ತಂಡಕ್ಕೆ ಭಾರತೀಯ ಬೌಲರ್‌ಗಳು ನೀಡಿದ ಆಘಾತ ಎಷ್ಟು ತೀವ್ರವಾಗಿತ್ತೆಂದರೆ ಕಿವೀಸ್ ತಂಡ ಕೇವಲ 15 ರನ್‌ಗಳಾಗುವಷ್ಟರಲ್ಲಿ ತಂಡದ ಪ್ರಮುಖ 5 ವಿಕೆಟ್‌ಗಳನ್ನು ಕಳೆದುಕೊಂಡಿತ್ತು. ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಹಾರ್ದಿಕ್ ಪಾಂಡ್ಯ ಹಾಗೂ ಶಾರ್ದೂಲ್ ಠಾಕೂರ್ ಆರಂಭದಲ್ಲಿಯೇ ನಾಯಕನ ನಿರ್ಧಾರವನ್ನು ಸಮರ್ಥಿಸಿಕೊಳ್ಳುವಂತಾ ಪ್ರದರ್ಶನ ನೀಡಿದ್ದಾರೆ.

SA20: 25 ಎಸೆತಗಳಲ್ಲಿ 56 ರನ್: ಆರ್​ಸಿಬಿ ಆಟಗಾರನ ಮತ್ತೊಂದು ಸ್ಫೋಟಕ ಇನ್ನಿಂಗ್ಸ್SA20: 25 ಎಸೆತಗಳಲ್ಲಿ 56 ರನ್: ಆರ್​ಸಿಬಿ ಆಟಗಾರನ ಮತ್ತೊಂದು ಸ್ಫೋಟಕ ಇನ್ನಿಂಗ್ಸ್

ಅನಿರೀಕ್ಷಿತ ಆಘಾತಕ್ಕೆ ಒಳಗಾದ ಕಿವೀಸ್ ಅಗ್ರಕ್ರಮಾಂಕ

ಅನಿರೀಕ್ಷಿತ ಆಘಾತಕ್ಕೆ ಒಳಗಾದ ಕಿವೀಸ್ ಅಗ್ರಕ್ರಮಾಂಕ

ಮೊದಲ ಓವರ್‌ನ ಐದನೇ ಎಸೆತದಲ್ಲಿಯೇ ನ್ಯೂಜಿಲೆಂಡ್ ತಂಡಕ್ಕೆ ಅನುಭವಿ ಆಟಗಾರ ಮೊಹಮ್ಮದ್ ಶಮಿ ಆಘಾತ ನೀಡಿದರು. ಫಿನ್ ಅಲೆನ್ ರನ್‌ಗಳಿಸುವ ಮುನ್ನವೇ ಶಮಿಗೆ ಬೌಲ್ಡ್ ಆಗಿ ಫೆವಿಲಿಯನ್‌ಗೆ ನಡೆದರು. ಅದಾದ ಬಳಿಕ ರನ್‌ಗಳಿಸಲು ಪರದಾಡುತ್ತಿದ್ದ ಹೆನ್ರಿ ನಿಕೋಲ್ಸ್ ಅವರನ್ನು ಮೊಹಮ್ಮದ್ ಸಿರಾಜ್ ಔಟ್ ಮಾಡಿದರು. ಅದಾದ ಬಳಿಕ ಡೆರಲ್ ಮಿಚೆಲ್ ಶಮಿ ಪಡೆದ ಅದ್ಭುತ ಕ್ಯಾಚ್‌ಗೆ ಬಲಿಯಾಗಿ ಅವರಿಗೇ ಒಪ್ಪಿಸಿದರು. ಬಳಿಕ ಕಾನ್ವೆ ಹಾರ್ದಿಕ್ ಪಾಂಡ್ಯ ಪಡೆದ ಅದ್ಭುತ ಕ್ಯಾಚ್‌ಗೆ ವಿಕೆಟ್ ಒಪ್ಪಿಸಿದರೆ ನಾಯಕ ಟಾಮ್ ಲಾಥಮ್ ಗಿಲ್‌ಗೆ ಕ್ಯಾಚ್ ನೀಡಿ ನಿರ್ಗಮಿಸಿದರು. ಈ ಸಂದರ್ಭದಲ್ಲಿ ನ್ಯೂಜಿಲೆಂಡ್ ತಂಡ 15 ರನ್‌ಗಳಿಗೆ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಒಳಗಾಗಿತ್ತು.

ಭರ್ಜರಿ ಬೌಲಿಂಗ್ ಪ್ರದರ್ಶನ

ಭರ್ಜರಿ ಬೌಲಿಂಗ್ ಪ್ರದರ್ಶನ

ಆದರೆ ನ್ಯೂಜಿಲೆಂಡ್‌ಗೆ ಮಧ್ಯಮ ಕ್ರಮಾಂಕದ ಆಟಗಾರರಾದ ಗ್ಲೆನ್ ಫಿಲಿಪ್ಸ್, ಮಿಚೆಲ್ ಬ್ರೇಸ್‌ವೆಲ್, ಹಾಗೂ ಸ್ಯಾಂಟ್ನರ್ ಚೇತರಿಕೆಯ ಪ್ರಯತ್ನ ನಡೆಸಿದರೂ ಅದರಿಂದ ಹೆಚ್ಚಿನ ಉಪಯೋಗವಾಗಲಿಲ್ಲ. ಆದರೆ ಈ ಮೂವರ ಬ್ಯಾಟಿಂಗ್‌ನ ಕಾರಣದಿಂದಾಗಿ ನ್ಯೂಜಿಲೆಂಡ್ 100ರ ಗಡಿದಾಟುವಲ್ಲಿ ಯಶಸ್ವಿಯಾಯಿತು. ಅಂತಿವಾಗಿ 108 ರನ್‌ಗಳಿಗೆ ನ್ಯೂಜಿಲೆಂಡ್ ತನ್ನ ಎಲ್ಲಾ ವಿಕೆಟ್ ಕಳೆದುಕೊಂಡು ಭಾರತಕ್ಕೆ ಸುಲಭ ಗುರಿ ನಿಗದಿಪಡಿಸಿತು. ಇನ್ನು ಟೀಮ್ ಇಂಡಿಯಾ ಪರವಾಗಿ ಮೊಹಮ್ಮದ್ ಶಮಿ 3 ವಿಕೆಟ್ ಕಿತ್ತು ಮಿಂಚಿದರೆ ಹಾರ್ದಿಕ್ ಪಾಂಡ್ಯ, ಹಾಗೂ ವಾಶಿಂಗ್ಟನ್ ಸುಂದರ್ ತಲಾ ಎರಡು ವಿಕೆಟ್ ಪಡೆದರು. ಸಿರಾಜ್, ಠಾಕೂರ್, ಹಾಗೂ ಕುಲ್ದೀಪ್ ತಲಾ ಒಂದು ವಿಕೆಟ್ ಪಡೆದುಕೊಂಡಿದ್ದಾರೆ.

ಟ್ವಿಟ್ಟರ್‌ನಲ್ಲಿ ಮೆಚ್ಚುಗೆಯ ಸುರಿಮಳೆ

ಇನ್ನು ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಬೌಲರ್‌ಗಳು ನೀಡಿದ ಈ ಭರ್ಜರಿ ಪ್ರದರ್ಶನಕ್ಕೆ ನೆಟ್ಟಿಗರು ಭಾರೀ ಪ್ರಶಂಸೆ ವ್ಯಕ್ತಪಡಿಸುತ್ತಿದ್ದಾರೆ. ಮಾಜಿ ಕ್ರಿಕೆಟಿಗರು ಹಾಗೂ ಅಭಿಮಾನಿಗಳು ಟ್ವಿಟ್ ಭಾರೀ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಮಾಜಿ ಕ್ರಿಕೆಟಿಗ ಇರ್ಫಾನ್ ಪಠಾಣ್ "ಬೌಲಿಂಗ್ ಕೋಚ್ ಇಂದು ಬಹಳ ಖುಷಿಪಡುತ್ತಾರೆ" ಎಂದು ಟ್ವೀಟ್ ಮಾಡಿದರೆ, ಭಾರತ್ ಆರ್ಮಿ "ನಂಬಲಸಾಧ್ಯವಾದ ಬೌಲಿಂಗ್" ಎಂದು ಭಾರತದ ಬೌಲರ್‌ಗಳ ಪ್ರದರ್ಶನಕ್ಕೆ ಮೆಚ್ಚಿಗೆ ಸೂಚಿಸಿದೆ.

8 ವಿಕೆಟ್‌ಗಳ ಅಂತರದಿಂದ ಪಂದ್ಯ ಗೆದ್ದ ಭಾರತ

8 ವಿಕೆಟ್‌ಗಳ ಅಂತರದಿಂದ ಪಂದ್ಯ ಗೆದ್ದ ಭಾರತ

ಇನ್ನು ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಅಮೋಘ ಪ್ರದರ್ಶನ ನೀಡಿದ್ದು ಬ್ಯಾಟಿಂಗ್‌ನಲ್ಲಿಯೂ ಮಿಂಚಿದೆ. ತಮಡದ ನಾಯಕ ರೋಹಿತ್ ಶರ್ಮಾ ಹಾಗೂ ಶುಬ್ಮನ್ ಗಿಲ್ ಈ ಪಂದ್ಯದಲ್ಲಿ ಮೊದಲ ವಿಕೆಟ್‌ಗೆ 72 ರನ್‌ಗಳ ಜೊತೆಯಾಟವನ್ನಾಡಿದರು. ಬಳಿಕ ರೋಹಿತ್ ಅರ್ಧ ಶತಕ ಗಳಿಸಿ ವಿಎಕಟ್ ಕಳೆದುಕೊಂಡರೆ ಗಿಲ್ ಅಂತಿಮ ಹಂತದವರೆಗೂ ಬ್ಯಾಟಿಂಗ್ ನಡೆಸಿ 40 ರನ್‌ಗಳಸಿದರು. ವಿರಾಟ್ ಕೊಹ್ಲಿ 11 ರನ್‌ಗಳಿಸಿ ವಿಕೆಟ್ ಕಳೆದುಕೊಂಡರೆ ಇಶಾನ್ ಕಿಶನ್ 8 ರನ್‌ಗಳಿಸಿ ಅಜೇಯವಾಗುಳಿದರು. ಈ ಮೂಲಕ ಟೀಮ್ ಇಂಡಿಯಾ 8 ವಿಕೆಟ್‌ಗಳ ಅಂತರದಿಂದ ಬೃಹತ್ ಗೆಲುವು ಸಾಧಿಸಿದ್ದು ಸರಣಿಯನ್ನು ವಶಕ್ಕೆ ಪಡೆದುಕೊಂಡಿದೆ.

Story first published: Saturday, January 21, 2023, 19:57 [IST]
Other articles published on Jan 21, 2023
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X