For Quick Alerts
ALLOW NOTIFICATIONS  
For Daily Alerts
 

ಭಾರತ ವಿರುದ್ಧದ ಪ್ರಥಮ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯಬಹುದಾದ ಬಲಿಷ್ಠ ನ್ಯೂಜಿಲೆಂಡ್‌ ತಂಡ

India vs New Zealand: New Zealands strongest probable playing XI for the first test

ಕಳೆದೊಂದು ತಿಂಗಳಿನಿಂದ ನಡೆಯುತ್ತಿದ್ದ ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯದ ವಿರುದ್ಧ ಸೋಲುವುದರ ಮೂಲಕ ಕೇನ್ ವಿಲಿಯಮ್ಸನ್ ನಾಯಕತ್ವದ ನ್ಯೂಜಿಲೆಂಡ್ ತಂಡ ರನ್ನರ್ ಅಪ್ ಆಗಿ ಟೂರ್ನಿಯಿಂದ ಹೊರ ಹೊಮ್ಮಿತು. ಹೀಗೆ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ರನ್ನರ್ ಅಪ್ ಆದ ನಂತರ ಭಾರತ ಪ್ರವಾಸವನ್ನು ಕೈಗೊಂಡಿರುವ ನ್ಯೂಜಿಲೆಂಡ್ ಟೀಮ್ ಇಂಡಿಯಾ ವಿರುದ್ಧ 3 ಪಂದ್ಯಗಳ ಟಿ ಟ್ವೆಂಟಿ ಸರಣಿ ಮತ್ತು 2 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡುತ್ತಿದೆ. ಇತ್ತಂಡಗಳ ನಡುವಿನ ಟಿ ಟ್ವೆಂಟಿ ಸರಣಿ ಈಗಾಗಲೇ ಮುಗಿದಿದ್ದು ಎಲ್ಲ 3 ಪಂದ್ಯಗಳನ್ನು ಗೆಲ್ಲುವ ಮೂಲಕ ನ್ಯೂಜಿಲೆಂಡ್ ವಿರುದ್ಧ ಭಾರತ ವೈಟ್ ವಾಶ್ ಸಾಧನೆ ಮಾಡಿದೆ.

ಇನ್ನು ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಸೋಲುವುದರ ಮೂಲಕ ತನ್ನ ಚೊಚ್ಚಲ ವಿಶ್ವಕಪ್ ಟ್ರೋಫಿ ಎತ್ತಿ ಹಿಡಿಯುವ ಕನಸನ್ನು ನನಸು ಮಾಡಿಕೊಳ್ಳಲಾಗದೇ ರನ್ನರ್ ಅಪ್ ಆಗಿ ಹೊರಹೊಮ್ಮಿದ ನ್ಯೂಜಿಲೆಂಡ್ ತಂಡ ಟೂರ್ನಿ ಮುಗಿದ ಬೆನ್ನಲ್ಲೇ ಭಾರತ ಪ್ರವಾಸವನ್ನು ಕೈಗೊಂಡಿತು. ಮೊದಲಿಗೆ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ನಡೆದ 3 ಪಂದ್ಯಗಳ ಟಿ ಟ್ವೆಂಟಿ ಸರಣಿಗೆ ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಅಲಭ್ಯರಾದ ಕಾರಣ ಸರಣಿಯಲ್ಲಿ ತಂಡವನ್ನು ನ್ಯೂಜಿಲೆಂಡ್ ತಂಡದ ಪ್ರಮುಖ ಬೌಲರ್ ಟಿಮ್ ಸೌಥಿ ಮುನ್ನಡೆಸಿದರು.

ಆದರೆ ರೋಹಿತ್ ಶರ್ಮಾ ನಾಯಕತ್ವದ ಟೀಮ್ ಇಂಡಿಯಾ ಎದುರು ಯಾವುದೇ ಪಂದ್ಯದಲ್ಲಿಯೂ ಗೆಲ್ಲಲಾಗದ ನ್ಯೂಜಿಲೆಂಡ್ ಸರಣಿ ಸೋಲು ಅನುಭವಿಸುವುದರ ಮೂಲಕ ಟೀಮ್ ಇಂಡಿಯಾಗೆ ಟಿ ಟ್ವೆಂಟಿ ಸರಣಿಯನ್ನು ಬಿಟ್ಟುಕೊಟ್ಟಿದೆ. ಇನ್ನು ಟಿ ಟ್ವೆಂಟಿ ಸರಣಿಯಲ್ಲಿ ಭಾರತದ ಎದುರು ಸೋಲನುಭವಿಸಿರುವ ನ್ಯೂಜಿಲೆಂಡ್ ತಂಡವನ್ನು ಮುಂಬರುವ 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಕೇನ್ ವಿಲಿಯಮ್ಸನ್ ಮುನ್ನಡೆಸಲಿದ್ದು ಸರಣಿ ಗೆಲ್ಲುವತ್ತ ಚಿತ್ತ ನೆಟ್ಟಿದೆ.

ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ ಪ್ರಥಮ ಟೆಸ್ಟ್ ಪಂದ್ಯ ನವೆಂಬರ್‌ 25ರಿಂದ ಆರಂಭವಾಗಲಿದ್ದು ಕಾನ್ಪುರದಲ್ಲಿ ನಡೆಯಲಿದೆ. ಈ ಟೆಸ್ಟ್ ಸರಣಿಯಿಂದ ಟೀಮ್ ಇಂಡಿಯಾದ ಪ್ರಮುಖ ಆಟಗಾರರಾದ ರೋಹಿತ್ ಶರ್ಮಾ, ರಿಷಭ್ ಪಂತ್, ಶಾರ್ದೂಲ್ ಠಾಕೂರ್ ಹಾಗೂ ಜಸ್ಪ್ರೀತ್ ಬುಮ್ರಾ ವಿಶ್ರಾಂತಿಗೆಂದು ಹೊರಗುಳಿದಿದ್ದು, ಇತ್ತೀಚೆಗಷ್ಟೇ ಗಾಯದ ಸಮಸ್ಯೆಗೊಳಗಾಗಿರುವ ಕೆಎಲ್ ರಾಹುಲ್ ಕೂಡ ಸರಣಿಯಿಂದ ಹೊರ ಬಿದ್ದಿದ್ದಾರೆ ಹಾಗೂ ಆತನ ಬದಲಾಗಿ ಸೂರ್ಯಕುಮಾರ್ ಯಾದವ್ ಅವರಿಗೆ ತಂಡದಲ್ಲಿ ಸ್ಥಾನ ನೀಡಲಾಗಿದೆ. ಅಷ್ಟೇ ಅಲ್ಲದೆ ನ್ಯೂಜಿಲೆಂಡ್ ವಿರುದ್ಧದ ಪ್ರಥಮ ಟೆಸ್ಟ್ ಪಂದ್ಯದಿಂದ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಹೊರಗುಳಿದಿರುವ ಕಾರಣ ಅಜಿಂಕ್ಯಾ ರಹಾನೆ ತಂಡವನ್ನು ಮುನ್ನಡೆಸಲಿದ್ದಾರೆ.

ಇತ್ತ ನ್ಯೂಜಿಲೆಂಡ್ ತಂಡದಲ್ಲಿ ಪ್ರಮುಖ ಬದಲಾವಣೆಗಳೇನು ಆಗಿಲ್ಲ ಹಾಗೂ ಕೇನ್ ವಿಲಿಯಮ್ಸನ್ ನಾಯಕತ್ವದಲ್ಲಿ ತಂಡ ಬಲಿಷ್ಠವಾಗಿ ತೋರುತ್ತಿದೆ. ಟಿ ಟ್ವೆಂಟಿ ಸರಣಿಯಲ್ಲಿ ಎಲ್ಲಾ ಪಂದ್ಯಗಳನ್ನು ಸೋತು ಮುಖಭಂಗ ಅನುಭವಿಸಿದ್ದರ ಪ್ರತೀಕಾರವನ್ನು ಟೆಸ್ಟ್ ಸರಣಿ ಗೆಲ್ಲುವ ಮೂಲಕ ತೀರಿಸಿಕೊಳ್ಳುವ ತವಕದಲ್ಲಿದೆ ನ್ಯೂಜಿಲೆಂಡ್ ತಂಡ. ಹೀಗೆ ಕಾನ್ಪುರದಲ್ಲಿ ಭಾರತ ವಿರುದ್ಧ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯಲಿರುವ ಬಲಿಷ್ಠ ನ್ಯೂಜಿಲೆಂಡ್ ಸಂಭಾವ್ಯ ತಂಡ ಈ ಕೆಳಕಂಡಂತಿದೆ.

ಟಾಮ್ ಬ್ಲಂಡೆಲ್, ಡೆವೊನ್ ಕಾನ್ವೇ, ಕೇನ್ ವಿಲಿಯಮ್ಸನ್ (ನಾಯಕ), ರಾಸ್ ಟೇಲರ್, ಟಾಮ್ ಲ್ಯಾಥಮ್ , ರಚಿನ್ ರವೀಂದ್ರ, ಅಜಾಜ್ ಪಟೇಲ್, ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ, ನೀಲ್ ವ್ಯಾಗ್ನರ್, ಕೈಲ್ ಜೇಮಿಸನ್.

Story first published: Thursday, November 25, 2021, 10:08 [IST]
Other articles published on Nov 25, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+