ಭಾರತ vs ನ್ಯೂಜಿಲೆಂಡ್ ಟಿ20 ಸರಣಿ: 3 ಪಂದ್ಯಗಳಿಗೂ ಮೂವರು ಬೇರೆ ಬೇರೆ ನಾಯಕರು!

ಇತ್ತೀಚೆಗಷ್ಟೇ ಮುಕ್ತಾಯಗೊಂಡ ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ವಿರಾಟ್ ಕೊಹ್ಲಿ ನಾಯಕತ್ವದ ಟೀಂ ಇಂಡಿಯಾ ಹೇಳಿಕೊಳ್ಳುವಂತಹ ಉತ್ತಮ ಪ್ರದರ್ಶನವನ್ನು ನೀಡುವಲ್ಲಿ ವಿಫಲವಾಗಿ ಸೆಮಿಫೈನಲ್ ಪ್ರವೇಶಿಸಲಾಗದೇ ಲೀಗ್ ಹಂತದಲ್ಲಿಯೇ ಟೂರ್ನಿಯಿಂದ ಹೊರಬಿತ್ತು. ಹೌದು, ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಸೂಪರ್ 12 ಹಂತದಲ್ಲಿಯೇ ತನ್ನ ಮೊದಲೆರಡು ಪಂದ್ಯಗಳಲ್ಲಿ ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ವಿರುದ್ಧ ಸೋತ ಟೀಂ ಇಂಡಿಯಾ ಸೆಮಿಫೈನಲ್ ಪ್ರವೇಶಿಸುವ ಅರ್ಹತೆಯನ್ನು ಕಳೆದುಕೊಂಡು ಲೀಗ್ ಹಂತದಲ್ಲಿಯೇ ಹೊರಬಿತ್ತು.
ಹೀಗೆ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಸೆಮಿಫೈನಲ್ ಪ್ರವೇಶಿಸಲಾಗದ ಲೀಗ್ ಹಂತದಲ್ಲಿಯೇ ಟೂರ್ನಿಯಿಂದ ಹೊರಬಿದ್ದ ಟೀಮ್ ಇಂಡಿಯಾ ಇದೀಗ ನ್ಯೂಜಿಲೆಂಡ್ ವಿರುದ್ಧದ 3 ಪಂದ್ಯಗಳ ಟಿ ಟ್ವೆಂಟಿ ಸರಣಿ ಮತ್ತು 2 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲು ಸಜ್ಜಾಗಿದೆ. ಇನ್ನು ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಉತ್ತಮ ಪ್ರದರ್ಶನವನ್ನು ನೀಡುವುದರ ಮೂಲಕ ಫೈನಲ್ ಹಂತದವರೆಗೂ ತಲುಪಿದ್ದ ಕೇನ್ ವಿಲಿಯಮ್ಸನ್ ನಾಯಕತ್ವದ ನ್ಯೂಜಿಲೆಂಡ್ ತಂಡ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋಲುವುದರ ಮೂಲಕ ತನ್ನ ಚೊಚ್ಚಲ ವಿಶ್ವಕಪ್ ಟ್ರೋಫಿ ಗೆಲ್ಲುವ ಕನಸನ್ನು ನನಸು ಮಾಡಿಕೊಳ್ಳಲು ಆಗದೆ ಟೂರ್ನಿಯಿಂದ ಹೊರಬಿತ್ತು.
ಹೀಗೆ ಟ್ರೋಫಿ ಗೆಲ್ಲುವ ರೇಸ್‌ನಲ್ಲಿ ಅಂತಿಮ ಹಂತದಲ್ಲಿ ಹೊರಬಿದ್ದ ನ್ಯೂಜಿಲೆಂಡ್ ಇದೀಗ ಭಾರತಕ್ಕೆ ಬಂದಿಳಿದಿದ್ದು ಟೀಮ್ ಇಂಡಿಯಾ ವಿರುದ್ಧ ಆರಂಭವಾಗಲಿರುವ ಟಿ ಟ್ವೆಂಟಿ ಸರಣಿಗಾಗಿ ಅಭ್ಯಾಸವನ್ನು ನಡೆಸಿದೆ. ಹೌದು, ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ನವೆಂಬರ್ 17ರ ಬುಧವಾರದಂದು ಜೈಪುರ ಕ್ರಿಕೆಟ್ ಕ್ರೀಡಾಂಗಣದಲ್ಲಿ ನ್ಯೂಜಿಲೆಂಡ್ ಮತ್ತು ಭಾರತ ತಂಡಗಳ ನಡುವಿನ ಚೊಚ್ಚಲ ಟಿ ಟ್ವೆಂಟಿ ಪಂದ್ಯ ನಡೆಯಲಿದ್ದು ಈಗಾಗಲೇ ಇತ್ತಂಡಗಳ ಆಟಗಾರರು ಜೈಪುರ ಕ್ರೀಡಾಂಗಣವನ್ನು ತಲುಪಿ ಅಭ್ಯಾಸಗಳಲ್ಲಿ ನಿರತರಾಗಿದ್ದಾರೆ. ವಿಶ್ರಾಂತಿ ತೆಗೆದುಕೊಳ್ಳುವ ಕಾರಣದಿಂದಾಗಿ ಕೇನ್ ವಿಲಿಯಮ್ಸನ್ ಭಾರತ ವಿರುದ್ಧದ ಈ ಟಿ ಟ್ವೆಂಟಿ ಸರಣಿಯಿಂದ ಹಿಂದೆ ಸರಿದಿದ್ದು ನ್ಯೂಜಿಲೆಂಡ್ ತಂಡವನ್ನು ಯಾರು ಮುನ್ನಡೆಸಲಿದ್ದಾರೆ ಎಂಬ ಪ್ರಶ್ನೆ ಎದ್ದಿತ್ತು. ಆ ಪ್ರಶ್ನೆ ಕುರಿತಾಗಿ ಉತ್ತರ ಲಭಿಸಿದ್ದರೂ ಸಹ ಕ್ರಿಕೆಟ್ ವೀಕ್ಷಕರು ಆಶ್ಚರ್ಯಕ್ಕೊಳಗಾಗಿದ್ದಾರೆ. ಈ ರೀತಿ ಆಶ್ಚರ್ಯ ಉಂಟಾಗಲು ಕಾರಣ ನ್ಯೂಜಿಲೆಂಡ್ ಕ್ರಿಕೆಟ್ ತಂಡ ಈ ಕೆಳಕಂಡಂತೆ ತೆಗೆದುಕೊಂಡಿರುವ ನಾಯಕನ ಬದಲಾವಣೆಯ ನಿರ್ಧಾರ.

ಮೊದಲ ಪಂದ್ಯಕ್ಕೆ ಟಿಮ್ ಸೌಥಿ, ದ್ವಿತೀಯ ಪಂದ್ಯಕ್ಕೆ ಟ್ರೆಂಟ್ ಬೌಲ್ಟ್ ನಾಯಕ
ಕೇನ್ ವಿಲಿಯಮ್ಸನ್ ಭಾರತ ವಿರುದ್ಧದ ಟಿ ಟ್ವೆಂಟಿ ಸರಣಿಯಿಂದ ಸಂಪೂರ್ಣವಾಗಿ ಹೊರಗುಳಿದಿರುವ ಕಾರಣ ತಂಡದ ಇತರ ಆಟಗಾರರು ನಾಯಕತ್ವವನ್ನು ವಹಿಸಿಕೊಳ್ಳಲಿದ್ದಾರೆ. ಆದರೆ ನ್ಯೂಜಿಲೆಂಡ್ ಕ್ರಿಕೆಟ್ ಭಾರತ ವಿರುದ್ಧದ 3 ಪಂದ್ಯಗಳಿಗೂ 3 ಪ್ರತ್ಯೇಕ ನಾಯಕರನ್ನು ಕಣಕ್ಕಿಳಿಸಲಿದೆ ಎಂಬ ಸುದ್ದಿ ಇದೀಗ ಹೊರಬಿದ್ದಿದ್ದು, ಜೈಪುರದಲ್ಲಿ ನಡೆಯಲಿರುವ ಮೊದಲನೇ ಟಿ ಟ್ವೆಂಟಿ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡದ ನಾಯಕನಾಗಿ ಟಿಮ್ ಸೌಥಿ ಕಣಕ್ಕಿಳಿಯಲಿದ್ದರೆ, ದ್ವಿತೀಯ ಟಿ ಟ್ವೆಂಟಿ ಪಂದ್ಯದಲ್ಲಿ ಮಿಚೆಲ್ ಸ್ಯಾಂಟ್ನರ್ ಅಥವಾ ಟ್ರೆಂಟ್ ಬೌಲ್ಟ್ ನ್ಯೂಜಿಲೆಂಡ್ ತಂಡದ ನಾಯಕತ್ವವನ್ನು ವಹಿಸಿಕೊಳ್ಳಲಿದ್ದಾರೆ. ಹಾಗೂ ತೃತೀಯ ಟಿ ಟ್ವೆಂಟಿ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡದ ನಾಯಕತ್ವವನ್ನು ಯಾರು ವಹಿಸಿಕೊಳ್ಳಲಿದ್ದಾರೆ ಎಂಬುದು ಶೀಘ್ರದಲ್ಲಿಯೇ ಹೊರಬೀಳಲಿದೆ.

ನ್ಯೂಜಿಲೆಂಡ್ ತಂಡದ ಈ ನಿರ್ಧಾರದ ಹಿಂದಿದೆ ಕಾರಣ
ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ ಟಿ ಟ್ವೆಂಟಿ ಸರಣಿ 21ರಂದು ನಡೆಯಲಿರುವ ತೃತೀಯ ಟಿ ಟ್ವೆಂಟಿ ಪಂದ್ಯದ ಮೂಲಕ ಮುಕ್ತಾಯಗೊಳ್ಳಲಿದೆ. ಇದಾದ ಬೆನ್ನಲ್ಲೇ 25ರಿಂದ ಕಾನ್ಪುರದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಪ್ರಥಮ ಟೆಸ್ಟ್ ಪಂದ್ಯ ಆರಂಭವಾಗಲಿದ್ದು, ಈ ಟೆಸ್ಟ್ ಪಂದ್ಯಕ್ಕೆ ಆಟಗಾರರು ತಯಾರಿರಬೇಕೆಂಬ ಕಾರಣದಿಂದ ನ್ಯೂಜಿಲೆಂಡ್ ಈ ರೀತಿ ಪದೇ ಪದೇ ನಾಯಕನ ಬದಲಾವಣೆ ಮಾಡುವ ನಿರ್ಧಾರವನ್ನು ಕೈಗೆತ್ತಿಕೊಂಡಿದೆ. ಹೀಗೆ ಮೂರೂ ಪಂದ್ಯಕ್ಕೂ ಪ್ರತ್ಯೇಕ ಆಟಗಾರರನ್ನು ನಾಯಕನಾಗಿ ನೇಮಿಸುವುದರಿಂದ ಆಟಗಾರರಿಗೆ ವಿಶ್ರಾಂತಿ ನೀಡಲು ಅನುಕೂಲವಾಗಲಿದೆ ಎಂಬ ಕಾರಣದಿಂದ ನ್ಯೂಜಿಲೆಂಡ್ ಈ ರೀತಿಯ ನಿರ್ಧಾರವನ್ನು ತೆಗೆದುಕೊಂಡಿದೆ.

ಟಿ ಟ್ವೆಂಟಿ ವಿಶ್ವಕಪ್ ಬೆನ್ನಲ್ಲೇ ಸರಣಿ ಆರಂಭವಾದದ್ದು ಈ ಬೆಳವಣಿಗೆಗೆ ಕಾರಣ
ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಮುಗಿದ ಬೆನ್ನಲ್ಲೇ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಶುರುವಾಯಿತು ಮತ್ತು ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಮುಗಿಯುತ್ತಿದ್ದಂತೆ ಇದೀಗ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ ಸರಣಿಗಳು ಆರಂಭವಾಗುತ್ತಿವೆ. ಹೀಗಾಗಿ ಈ ತಂಡಗಳ ಆಟಗಾರರು ಹಲವಾರು ತಿಂಗಳುಗಳಿಂದ ಸತತವಾಗಿ ಕ್ರಿಕೆಟ್ ಆಡುತ್ತಿದ್ದು ವಿಶ್ರಾಂತಿಯ ಅಗತ್ಯತೆ ಹೆಚ್ಚಾಗಿದೆ. ಹೀಗಾಗಿ ಸರಣಿಗಳ ಬಳಿಕ ಸರಣಿಗಳನ್ನು ಆಯೋಜಿಸುತ್ತಿರುವುದು ಈ ರೀತಿಯ ಬೆಳವಣಿಗೆಗೆ ಕಾರಣ ಎನ್ನಬಹುದು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications