ಭಾರತ vs ನ್ಯೂಜಿಲೆಂಡ್ ತೃತೀಯ ಟಿ20: ವಿರಾಟ್ ಕೊಹ್ಲಿಯ ಈ ದಾಖಲೆ ಮೇಲೆ ರೋಹಿತ್ ಶರ್ಮಾ ಕಣ್ಣು!

ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ರನ್ನರ್ ಅಪ್ ಆಗಿ ಹೊರಹೊಮ್ಮಿದ ನ್ಯೂಜಿಲೆಂಡ್ ತಂಡ ವಿಶ್ವಕಪ್ ಟೂರ್ನಿ ಮುಗಿದ ಬೆನ್ನಲ್ಲೇ ಭಾರತ ಪ್ರವಾಸವನ್ನು ಕೈಗೊಂಡಿದ್ದು ಟೀಮ್ ಇಂಡಿಯಾ ವಿರುದ್ಧ 3 ಪಂದ್ಯಗಳ ಟಿ ಟ್ವೆಂಟಿ ಸರಣಿ ಮತ್ತು 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಕಣಕ್ಕಿಳಿಯುತ್ತಿದೆ. ಇತ್ತಂಡಗಳ ನಡುವಿನ ಈ ಕಾದಾಟದಲ್ಲಿ ಮೊದಲಿಗೆ ಟಿ ಟ್ವೆಂಟಿ ಸರಣಿ ನಡೆಯುತ್ತಿದೆ.
ಹೌದು, ನವೆಂಬರ್ 17ರಿಂದ ಆರಂಭವಾಗಿರುವ ಇತ್ತಂಡಗಳ ನಡುವಿನ 3 ಪಂದ್ಯಗಳ ಟಿ ಟ್ವೆಂಟಿ ಸರಣಿಯಲ್ಲಿ ಈಗಾಗಲೇ 2 ಪಂದ್ಯಗಳು ಮುಗಿದಿದ್ದು ರೋಹಿತ್ ಶರ್ಮಾ ನಾಯಕತ್ವದ ಟೀಂ ಇಂಡಿಯಾ ಟಿಮ್ ಸೌಥಿ ನಾಯಕತ್ವದ ನ್ಯೂಜಿಲೆಂಡ್ ವಿರುದ್ಧ ಎರಡೂ ಪಂದ್ಯಗಳಲ್ಲಿಯೂ ಗೆದ್ದು ಬೀಗಿದೆ. ಈ ಮೂಲಕ 3 ಪಂದ್ಯಗಳ ಟಿ ಟ್ವೆಂಟಿ ಸರಣಿಯಲ್ಲಿ ಈಗಾಗಲೇ ಟೀಮ್ ಇಂಡಿಯಾ ನ್ಯೂಜಿಲೆಂಡ್ ವಿರುದ್ಧ 2-0 ಅಂತರದಲ್ಲಿ ಮುನ್ನಡೆಯನ್ನು ಸಾಧಿಸುವುದರ ಮೂಲಕ ಸರಣಿಯನ್ನು ವಶಪಡಿಸಿಕೊಂಡಿದೆ.
ಹೌದು, ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ನವೆಂಬರ್ 17ರಂದು ಜೈಪುರದಲ್ಲಿ ನಡೆದ ಮೊದಲ ಟಿ ಟ್ವೆಂಟಿ ಪಂದ್ಯದಲ್ಲಿ ಟೀಮ್ ಇಂಡಿಯಾ 5 ವಿಕೆಟ್‍ಗಳ ಗೆಲುವು ದಾಖಲಿಸುವುದರ ಮೂಲಕ ಟಿ ಟ್ವೆಂಟಿ ಸರಣಿಯಲ್ಲಿ ಶುಭಾರಂಭವನ್ನು ಮಾಡಿತು. ನಂತರ ನವೆಂಬರ್ 19ರಂದು ರಾಂಚಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ ದ್ವಿತೀಯ ಟಿ ಟ್ವೆಂಟಿ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಟೀಮ್ ಇಂಡಿಯಾ 7 ವಿಕೆಟ್‍ಗಳ ಜಯವನ್ನು ಸಾಧಿಸುವ ಮೂಲಕ ಸತತ ಎರಡನೇ ಗೆಲುವು ಪಡೆದುಕೊಂಡಿತು. ಈ ಗೆಲುವಿನ ಮೂಲಕ ನ್ಯೂಜಿಲೆಂಡ್ ವಿರುದ್ಧದ 3 ಪಂದ್ಯಗಳ ಟಿ ಟ್ವೆಂಟಿ ಸರಣಿಯಲ್ಲಿ 2-0 ಅಂತರದಲ್ಲಿ ಮುನ್ನಡೆಯನ್ನು ಸಾಧಿಸಿದ ಟೀಮ್ ಇಂಡಿಯಾ ಸರಣಿಯನ್ನು ಕೂಡಾ ಕೈ ವಶ ಪಡಿಸಿಕೊಂಡಿದೆ.
ಹೀಗೆ 3 ಪಂದ್ಯಗಳ ಟ್ವೆಂಟಿ ಸರಣಿಯಲ್ಲಿ ಟೀಮ್ ಇಂಡಿಯಾ ಈಗಾಗಲೇ ಗೆಲುವು ಸಾಧಿಸಿದ್ದು ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ ತೃತೀಯ ಹಾಗೂ ಅಂತಿಮ ಟಿ ಟ್ವೆಂಟಿ ಪಂದ್ಯ ನವೆಂಬರ್ 21ರ ಭಾನುವಾರದಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿವೆ. ಇನ್ನು ಈ ಪಂದ್ಯದ ಮೂಲಕ ಇತ್ತಂಡಗಳ ಆಟಗಾರರು ಹಲವಾರು ದಾಖಲೆ ಮತ್ತು ಮೈಲಿಗಲ್ಲನ್ನು ಮುಟ್ಟಲಿದ್ದಾರೆ. ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ನಡೆಯಲಿರುವ ತೃತೀಯ ಟಿ ಟ್ವೆಂಟಿ ಪಂದ್ಯದಲ್ಲಿ ಇತ್ತಂಡಗಳ ಆಟಗಾರರು ನಿರ್ಮಿಸಬಹುದಾದ ದಾಖಲೆ ಮತ್ತು ಮೈಲಿಗಲ್ಲುಗಳ ಪಟ್ಟಿ ಈ ಕೆಳಕಂಡಂತಿದೆ..

ಕೊಹ್ಲಿ ದಾಖಲೆ ಮುರಿಯುವತ್ತ ರೋಹಿತ್ ಶರ್ಮಾ ಚಿತ್ತ
ವಿರಾಟ್ ಕೊಹ್ಲಿ ಟಿ ಟ್ವೆಂಟಿ ಕ್ರಿಕೆಟ್ ಇತಿಹಾಸದಲ್ಲಿ ಇದುವರೆಗೂ ಭಾರತದ ಪರ 29 ಇನ್ನಿಂಗ್ಸ್‌ನಲ್ಲಿ 50+ ರನ್ ಬಾರಿಸಿದ್ದಾರೆ. ಹಾಗೂ ರೋಹಿತ್ ಶರ್ಮಾ ಕೂಡ ಟಿ ಟ್ವೆಂಟಿ ಕ್ರಿಕೆಟ್ ಇತಿಹಾಸದಲ್ಲಿ ಭಾರತದ ಪರ 29 ಇನ್ನಿಂಗ್ಸ್‌ನಲ್ಲಿ 50+ ರನ್ ಕಲೆಹಾಕಿದ್ದಾರೆ. ಹೀಗೆ ಟೀಮ್ ಇಂಡಿಯಾ ಪರ ಟಿ ಟ್ವೆಂಟಿ ಪಂದ್ಯಗಳಲ್ಲಿ ಅತಿ ಹೆಚ್ಚು ಬಾರಿ 50ಕ್ಕೂ ಹೆಚ್ಚು ರನ್ ಬಾರಿಸಿರುವ ಆಟಗಾರರ ದಾಖಲೆಯಲ್ಲಿ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಲು ರೋಹಿತ್ ಶರ್ಮಾ ನ್ಯೂಜಿಲೆಂಡ್ ವಿರುದ್ಧ ನಡೆಯಲಿರುವ ತೃತೀಯ ಟಿ ಟ್ವೆಂಟಿ ಪಂದ್ಯದಲ್ಲಿ ಅರ್ಧಶತಕ ಬಾರಿಸಬೇಕಾದ ಅಗತ್ಯವಿದೆ. ಈ ಮೂಲಕ ರೋಹಿತ್ ಶರ್ಮಾ ನೂತನ ದಾಖಲೆಯನ್ನು ನಿರ್ಮಿಸಲಿದ್ದಾರೆ.

ಇತರೆ ಮೈಲಿಗಲ್ಲುಗಳು
ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ಇಂದು ( ನವೆಂಬರ್ 21 ) ಕೋಲ್ಕತಾದ ಈಡನ್ ಗಾರ್ಡನ್ಸ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿರುವ ತೃತೀಯ ಟಿ ಟ್ವೆಂಟಿ ಪಂದ್ಯದಲ್ಲಿ ನಿರ್ಮಾಣವಾಗಬಹುದಾದ ಮೈಲಿಗಲ್ಲುಗಳ ವಿವರ ಈ ಕೆಳಕಂಡಂತಿದೆ..
ಟಿ ಟ್ವೆಂಟಿ ಕ್ರಿಕೆಟ್‍ನಲ್ಲಿ 150 ಸಿಕ್ಸರ್ ಮೈಲಿಗಲ್ಲನ್ನು ಮುಟ್ಟಲು ರೋಹಿತ್ ಶರ್ಮಾ ನ್ಯೂಜಿಲೆಂಡ್ ವಿರುದ್ಧದ ತೃತೀಯ ಟಿ ಟ್ವೆಂಟಿ ಪಂದ್ಯದಲ್ಲಿ 3 ಸಿಕ್ಸರ್ ಬಾರಿಸಬೇಕಾದ ಅಗತ್ಯವಿದೆ.
ಟಿ 20 ಕ್ರಿಕೆಟ್‍ನಲ್ಲಿ 500 ಬೌಂಡರಿ ಮೈಲುಗಲ್ಲನ್ನು ಮುಟ್ಟಲು ಕೆ ಎಲ್ ರಾಹುಲ್ ನ್ಯೂಜಿಲೆಂಡ್ ವಿರುದ್ಧದ ತೃತೀಯ ಟಿ ಟ್ವೆಂಟಿ ಪಂದ್ಯದಲ್ಲಿ 2 ಬೌಂಡರಿ ಬಾರಿಸಬೇಕಾದ ಅಗತ್ಯವಿದೆ.
ಟಿ 20 ಕ್ರಿಕೆಟ್‍ನಲ್ಲಿ ಇಶಾನ್ ಕಿಶನ್ 49 ಕ್ಯಾಚ್ ಹಿಡಿದಿದ್ದು, 50 ಕ್ಯಾಚ್ ಮೈಲುಗಲ್ಲನ್ನು ಮುಟ್ಟಲು ನ್ಯೂಜಿಲೆಂಡ್ ವಿರುದ್ಧದ ಈ ತೃತೀಯ ಟಿ ಟ್ವೆಂಟಿ ಪಂದ್ಯದಲ್ಲಿ ಒಂದು ಕ್ಯಾಚ್ ಪಡೆಯುವ ಅಗತ್ಯವಿದೆ.
ನ್ಯೂಜಿಲೆಂಡ್ ತಂಡದ ಬೌಲರ್ ಆ್ಯಡಮ್ ಮಿಲ್ನೆ 150 ಟಿ ಟ್ವೆಂಟಿ ಕ್ರಿಕೆಟ್ ವಿಕೆಟ್ ಮೈಲಿಗಲ್ಲನ್ನು ಮುಟ್ಟಲು ಭಾರತ ವಿರುದ್ಧದ ತೃತೀಯ ಟಿ ಟ್ವೆಂಟಿ ಪಂದ್ಯದಲ್ಲಿ 1 ವಿಕೆಟ್ ಪಡೆಯಬೇಕಾದ ಅಗತ್ಯವಿದೆ.
ಟಿಮ್ ಸೌಥಿ ಟಿ20 ಕ್ರಿಕೆಟ್‍ನಲ್ಲಿ 99 ಕ್ಯಾಚ್ ಹಿಡಿದಿದ್ದು 100 ಕ್ಯಾಚ್ ಮೈಲಿಗಲ್ಲನ್ನು ಮುಟ್ಟಲು ಭಾರತ ವಿರುದ್ಧದ ತೃತೀಯ ಟಿ ಟ್ವೆಂಟಿ ಪಂದ್ಯದಲ್ಲಿ 1 ಕ್ಯಾಚ್ ಹಿಡಿಯಬೇಕಾದ ಅಗತ್ಯವಿದೆ.

ಭಾರತ vs ನ್ಯೂಜಿಲೆಂಡ್ ಮುಂದಿನ ಪಂದ್ಯಗಳ ವಿವರ
ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ ತೃತೀಯ ಟಿ ಟ್ವೆಂಟಿ ಪಂದ್ಯ ನವೆಂಬರ್ 21ರಂದು ಕೋಲ್ಕತಾದಲ್ಲಿ ನಡೆಯಲಿದ್ದು ಈ ಪಂದ್ಯ ಸಹ ಸಂಜೆ 7 ಗಂಟೆಗೆ ಆರಂಭವಾಗಲಿದೆ.
ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ ಪ್ರಥಮ ಟೆಸ್ಟ್ ಪಂದ್ಯ ನವೆಂಬರ್ 25ರಿಂದ ನವೆಂಬರ್ 29ರವರೆಗೆ ಕಾನ್ಪುರ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ.
ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ ದ್ವಿತೀಯ ಹಾಗೂ ಅಂತಿಮ ಟೆಸ್ಟ್ ಪಂದ್ಯ ಡಿಸೆಂಬರ್ 3ರಿಂದ ಡಿಸೆಂಬರ್ 7ರವರೆಗೆ ಮುಂಬೈನ ವಾಂಖೆಡೆ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications