Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ದ್ರಾವಿಡ್‌ಗೆ ಉಸಿರಾಡಲು ಸ್ವಲ್ಪ ಕಾಲಾವಕಾಶ ನೀಡಿ: ಮೊದಲ ಪಂದ್ಯದ ಬಳಿಕ ಆರ್ ಅಶ್ವಿನ್ ಹೇಳಿಕೆ

India vs New Zealand: R Ashwin on new Coach Rahul Dravid, said need to give hime breathing space

ನ್ಯೂಜಿಲೆಂಡ್ ವಿರುದ್ಧದ ದ್ವಿಪಕ್ಷೀಯ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ಐದು ವಿಕೆಟ್‌ಗಳ ಅಂತರದ ರೋಚಕ ಗೆಲುವು ಸಾಧಿಸಿದೆ. ಜೈಪುರದಲ್ಲಿ ನಡೆದ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲುವು ಸಾಧಿಸುವುದರೊಂದಿಗೆ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆ ಸಾಧಿಸಿದೆ. ಈ ಗೆಲುವಿನ ನಂತರ ಟೀಮ್ ಇಂಟಿಯಾದ ಅನುಭವಿ ಆಟಗಾರ ಆರ್ ಅಶ್ವಿನ್ ಮಾತನಾಡಿದ್ದಾರೆ. ಈ ಸಂದರ್ಭದಲ್ಲಿ ಆರ್ ಅಶ್ವಿನ್ ಭಾರತೀಯ ಕ್ರಿಕೆಟ್ ತಂಡದ ಅಭಿಮಾನಿಗಳಲ್ಲಿ ವಿಶೇಷ ಮನವಿಯೊಂದನ್ನು ಮಾಡಿದ್ದಾರೆ.

ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ 166 ರನ್‌ಗಳ ಗುರಿಯನ್ನು ಬೆನ್ನಟ್ಟಿ ಗೆಲುವು ಸಾಧಿಸಿತು. ಈ ಮೂಲಕ ಸರಣಿಯಲ್ಲಿ ಭರ್ಜರಿ ಆರಂಭವನ್ನು ಪಡೆಯುವ ಜೊತೆಗೆ ನೂತನ ನಾಯಕ ರೋಹಿತ್ ಶರ್ಮಾ ಹಾಗೂ ನೂತನ ಕೋಚ್ ರಾಹುಲ್ ದ್ರಾವಿಡ್ ನೇತೃತ್ವದಲ್ಲಿ ಅದ್ಭುತವಾದ ಆರಂಭವನ್ನು ಪಡೆದುಕೊಂಡಿದೆ. ಈ ಸಂದರ್ಭದಲ್ಲಿ ರಾಹುಲ್ ದ್ರಾವಿಡ್ ಅವರ ಕೋಚಿಂಗ್ ಶೈಲಿಯ ಬಗ್ಗೆ ಮಾತನಾಡಿದ ಆರ್ ಅಶ್ವಿನ್ ಅವರ ಕೋಚಿಂಗ್ ಶೈಲಿಯ ಬಗ್ಗೆ ಮಾತನಾಡಲು ಇದು ಬಹಳ ಅವಸರಪಟ್ಟಂತಾಗುತ್ತದೆ. ಆದರೆ ಅವರು ಅಂಡರ್ 19 ಮೂಲಕ ಕೋಚಿಂಗ್ ಹುದ್ದೆಗೆ ಬಲವಾದ ಹೆಜ್ಜೆಯಿಟ್ಟಿದ್ದಾರೆ. ಆದರೆ ಕ್ರಿಕೆಟ್ ಅಭಿಮಾನಿಗಳು ಕೋಚ್ ರಾಹುಲ್ ದ್ರಾವಿಡ್ ಅವರಿಗೆ ಸ್ವಲ್ಪ ಉಸಿರಾಡಲು ಅವಕಾಶವನ್ನು ನೀಡಬೇಕಿದೆ" ಎಂದು ಆರ್ ಅಶ್ವಿನ್ ಮನವಿ ಮಾಡಿದ್ದಾರೆ.

"ರಾಹುಲ್ ದ್ರಾವಿಡ್ ತಯಾರಿ ಹಾಗೂ ಪ್ರಕ್ರಿಯೆಗಳನ್ನು ಅದ್ಭುತವಾಗಿ ನಡೆಸುತ್ತಾರೆ. ಹೆಚ್ಚಿನ ಅವಕಾಶಗಳನ್ನು ಬಿಟ್ಟುಕೊಡುವುದಿಲ್ಲ. ಈ ಮೂಲಕ ಭಾರತೀಯ ಕ್ರಿಕೆಟ್ ತಂಡದ ಡ್ರೆಸ್ಸಿಂಗ್‌ರೂಮ್‌ನಲ್ಲಿ ಮತ್ತೆ ಸಂತೋಷವನ್ನು ಕಾಣಲು ಸಾಧ್ಯವಿದೆ" ಎಂದಿದ್ದಾರೆ ಆರ್ ಅಶ್ವಿನ್. ಆರ್ ಅಶ್ವಿನ್ ಟಿ20 ವಿಶ್ವಕಪ್‌ನಲ್ಲಿ ಅದ್ಭುತವಾದ ಬೌಲಿಂಗ್ ಪ್ರದರ್ಶನ ನೀಡಿದ ಬಳಿಕ ಅದೇ ಫಾರ್ಮ್‌ಅನ್ನು ಕಿವೀಸ್ ವಿರುದ್ಧದ ಸರಣಿಯಲ್ಲಿಯೂ ಮುಂದುವರಿಸಿದ್ದಾರೆ. ನಾಲ್ಕು ಓವರ್‌ಗಳಲ್ಲಿ ಆರ್ ಅಶ್ವಿನ್ 23 ರನ್ ನೀಡಿದ್ದು 2 ವಿಕೆಟ್ ಸಂಪಾದಿಸಿದ್ದಾರೆ. ಅನುಭವಿ ವೇಗಿ ಭುವನೇಶ್ವರ್‌ ಕುಮಾರ್ ಕೂಡ 2 ವಿಕೆಟ್ ಸಂಪಾದಿಸಿದ್ದು ನ್ಯೂಜಿಲೆಂಡ್ ತಂಡವನ್ನು 164 ರನ್‌ಗಳಿಗೆ ಕಟ್ಟಿ ಹಾಕಲು ಸಾಧ್ಯವಾಯಿತು.

ಸುಮ್ನೆ ಕೂತು ಪಂದ್ಯ ನೋಡ್ತಿದ್ದ ಸಿರಾಜ್ ತಲೆಗೆ ರೋಹಿತ್‌ ಹೊಡೆದ ವಿಡಿಯೋ ವೈರಲ್ | Oneindia Kannada

ಕಿವೀಸ್ ಪಡೆಯ ವಿರುದ್ಧದ ಸರಣಿಯ ಮೊದಲ ಪಂದ್ಯದಲ್ಲಿ ಭಾರತದ ಪರವಾಗಿ ಬ್ಯಾಟಿಂಗ್‌ನಲ್ಲಿ ಸೂರ್ಯಕುಮಾರ್ ಯಾದವ್ ಹಾಗೂ ರೋಹಿತ್ ಶರ್ಮಾ ಮಿಂಚಿದ್ದಾರೆ. ಸೂರ್ಯಕುಮಾರ್ 62 ರನ್‌ಗಳನ್ನು ಬಾರಿಸಿದರೆ ರೋಹಿತ್ ಶರ್ಮಾ 48 ರನ್ ಸಿಡಿಸಿದ್ದಾರೆ. ಈ ಪ್ರದರ್ಶನದಿಂದಾಗಿ ಎರಡು ಎಸೆತಗಳು ಬಾಕಿಯಿರುವಂತೆ ರೋಚಕ ಗೆಲುವು ಸಾಧಿಸಿದೆ.

ಟೀಮ್ ಇಂಡಿಯಾ ಪ್ಲೇಯಿಂಗ್ XI: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಿಕೆಟ್ ಕೀಪರ್), ವೆಂಕಟೇಶ್ ಅಯ್ಯರ್, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಭುವನೇಶ್ವರ್ ಕುಮಾರ್, ದೀಪಕ್ ಚಹಾರ್, ಮೊಹಮ್ಮದ್ ಸಿರಾಜ್
ಬೆಂಚ್: ಹರ್ಷಲ್ ಪಟೇಲ್, ಅವೇಶ್ ಖಾನ್, ಯುಜ್ವೇಂದ್ರ ಚಾಹಲ್, ಇಶಾನ್ ಕಿಶನ್, ಋತುರಾಜ್ ಗಾಯಕ್ವಾಡ್

ನ್ಯೂಜಿಲೆಂಡ್: ಮಾರ್ಟಿನ್ ಗಪ್ಟಿಲ್, ಡೇರಿಲ್ ಮಿಚೆಲ್, ಮಾರ್ಕ್ ಚಾಪ್ಮನ್, ಗ್ಲೆನ್ ಫಿಲಿಪ್ಸ್, ಟಿಮ್ ಸೀಫರ್ಟ್ (ವಿಕೆಟ್ ಕೀಪರ್), ರಚಿನ್ ರವೀಂದ್ರ, ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ (ನಾಯಕ), ಟಾಡ್ ಆಸ್ಟಲ್, ಲಾಕಿ ಫರ್ಗುಸನ್, ಟ್ರೆಂಟ್ ಬೌಲ್ಟ್
ಬೆಂಚ್: ಜೇಮ್ಸ್ ನೀಶಮ್, ಇಶ್ ಸೋಧಿ, ಆಡಮ್ ಮಿಲ್ನೆ

Story first published: Thursday, November 18, 2021, 9:45 [IST]
Other articles published on Nov 18, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+