
ನಾಯಕ ನೀಡಿದ ಕಾರಣ
ಟಾಸ್ ಪ್ರಕ್ರಿಯೆ ಸಂದರ್ಭದಲ್ಲಿ ಮಾತನಾಡಿದ ನಾಯಕ ರೋಹಿತ್ ಶರ್ಮಾ, ಒಇಚ್ ಅದ್ಭುತವಾಗಿ ಕಾಣಿಸುತ್ತಿದ್ದು ಪಿಚ್‌ನ ಲಾಭವನ್ನು ಬಳಸಿಕೊಳ್ಳಲು ಬಯಸುತ್ತೇವೆ ಎಂದಿದ್ದಾರೆ. ಅಲ್ಲದೆ ತಂಡದಲ್ಲಿ ಕೆಲ ವಿಭಾಗಗಳಲ್ಲಿ ಇನ್ನು ಕೂಡ ಸಾಕಷ್ಟು ಪ್ರಗತಿ ಸಾಧಿಸಬೇಕಿದ್ದು ಈ ಪಂದ್ಯವನ್ನು ಅದಕ್ಕೆ ದೊರೆತ ಅವಕಾಶವನ್ನಾಗಿ ಬಳಸಿಕೊಳ್ಳುತ್ತೇವೆ ಎಂದಿದ್ದಾರೆ. ಈ ಸಂದರ್ಭದಲ್ಲಿ ಮೊಹಮ್ಮದ್ ಶಮಿ ಹಾಗೂ ಮೊಹಮ್ಮದ್ ಸಿರಾಜ್‌ಗೆ ವಿಶ್ರಾಂತಿ ನೀಡಿ ಅವರ ಸ್ಥಾನದಲ್ಲಿ ಉಮ್ರಾನ್ ಮಲಿಕ್ ಹಾಗೂ ಯುಜುವೇಂದ್ರ ಚಾಹಲ್‌ಗೆ ಅವಕಾಶ ನೀಡಲಾಗಿದೆ ಎಂದಿದ್ದಾರೆ ರೋಹಿತ್ ಶರ್ಮಾ.

ರೋಹಿತ್ ಹೇಳಿದ್ದಿಷ್ಟು
ಟಾಸ್ ಸೋತು ಮೊದಲಿಗೆ ಬ್ಯಾಟಿಂಗ್ ನಡೆಸುವ ಸವಾಲು ಸ್ವೀಕರಿಸಿದ ಬಳಿಕ ರೋಹಿತ್ ಶರ್ಮಾ, "ನಮ್ಮ ಆಯ್ಕೆ ಕೂಡ ಮೊದಲಿಗೆ ಬ್ಯಾಟಿಂಗ್ ನಡೆಸುವುದೇ ಆಗಿತ್ತು. ತಂಡವಾಗಿ ನಾವು ಉತ್ತಮವಾಗಿ ಆಡುವುದನ್ನು ಬಯಸುತ್ತೇವೆ. ಪ್ರತಿಬಾರಿಯೂ ನಾವು ಇಲ್ಲಿ ಬಂದಾಗ ಉತ್ತಮವಾಗಿ ರನ್ ಗಳಿಸಿದ್ದೇವೆ. ಹೊಸ ಆಟಗಾರರಿಗೆ ಆಡಲು ಅವಕಾಶವನ್ನು ನೀಡುವುದು ಬಹಳ ಮುಖ್ಯವಾಗಿದೆ, ಅವರು ಯಾವ ರೀತಿ ಆಡುತ್ತಾರೆ ಎಂಬುದು ಕೂಡ ಮುಖ್ಯವಾಗುತ್ತದೆ" ಎಂದಿದ್ದಾರೆ

ಇತ್ತಂಡಗಳ ಆಡುವ ಬಳಗ
ಭಾರತ: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಉಮ್ರಾನ್ ಮಲಿಕ್
ನ್ಯೂಜಿಲೆಂಡ್: ಫಿನ್ ಅಲೆನ್, ಡೆವೊನ್ ಕಾನ್ವೇ, ಹೆನ್ರಿ ನಿಕೋಲ್ಸ್, ಡೇರಿಲ್ ಮಿಚೆಲ್, ಟಾಮ್ ಲ್ಯಾಥಮ್ (ವಿಕೆಟ್ ಕೀಪರ್/ನಾಯಕ), ಗ್ಲೆನ್ ಫಿಲಿಪ್ಸ್, ಮೈಕೆಲ್ ಬ್ರೇಸ್‌ವೆಲ್, ಮಿಚೆಲ್ ಸ್ಯಾಂಟ್ನರ್, ಲಾಕಿ ಫರ್ಗುಸನ್, ಜಾಕೋಬ್ ಡಫ್ಫಿ, ಬ್ಲೇರ್ ಟಿಕ್ನರ್